Breaking News
Home / ನವದೆಹಲಿ (page 4)

ನವದೆಹಲಿ

ನರೇಗಾ ಹಣಕ್ಕೆ ಪಂಚ ನಿಯಮ ಕಡ್ಡಾಯವಾಗಿ ಪಾಲಿಸಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ

ಹೊಸದಿಲ್ಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಅಡಿ ಹಣ ಬಿಡುಗಡೆ ಮಾಡ ಬೇಕೇ? ಹಾಗಿದ್ದರೆ ಐದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಹೀಗೆಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಎಲ್ಲ ರಾಜ್ಯ ಸರಕಾರಗಳಿಗೆ ಪತ್ರ ರವಾನೆಯಾಗಿದೆ.   ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರು ಕೇಂದ್ರ ಮನರೇಗಾ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಇತ್ತೀಚೆಗೆ ಆರೋಪಿಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ಆಗಿದೆ. ಮನರೇಗಾ ಅಡಿಯಲ್ಲಿ ರಾಜ್ಯಗಳಿಗೆ …

Read More »

ಬಾವಿಗೆ ಬೇಕಾದ್ರೂ ಬೀಳುವೆ; ಕಾಂಗ್ರೆಸ್‌ ಸೇರಲ್ಲ: ನಿತಿನ್‌ ಗಡ್ಕರಿ

ನವದೆಹಲಿ: ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ, ಅಂದು ಕಾಂಗ್ರೆಸ್‌ನಲ್ಲಿ ಸಚಿವರಾಗಿದ್ದ ಶ್ರೀಕಾಂತ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದರು. ಆದರೆ ನಾನು, “ಬೇಕಾದರೆ ಬಾವಿಗೆ ಬೀಳುತ್ತೇನೆ. ನಿಮ್ಮ ಪಕ್ಷ ಸೇರುವುದಿಲ್ಲ, ನನಗೆ ನಿಮ್ಮ ಪಕ್ಷದ ಸಿದ್ಧಾಂತ ಇಷ್ಟವಿಲ್ಲ’ ಎಂದಿದ್ದೆ ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.   ನಾಗ್ಪುರದಲ್ಲಿ ನಡೆದ ಉದ್ಯಮಿಗಳ ಸಭೆಯಲ್ಲಿ ಅವರು ಹಳೆಯ ದಿನಗಳ ಈ ನೆನಪನ್ನು ಹಂಚಿಕೊಂಡಿದ್ದಾರೆ. ಇದೇ ವೇಳೆ, ಅಗತ್ಯವಿದ್ದಾಗ ಒಬ್ಬರನ್ನು …

Read More »

ಪಿಜಿಯಲ್ಲಿ ಕುಡಿದ ಮತ್ತಿನಲ್ಲಿ ಹುಡುಗಿಯರ ಮೇಲೆ ಸೆಕ್ಯೂರಿಟಿ ಗಾರ್ಡ್ ನ ʼಲೈಂಗಿಕ ದೌರ್ಜನ್ಯʼ

ನವದೆಹಲಿ: ಕರೋಲ್ ಬಾಗ್ ಪ್ರದೇಶದ ಪಿಜಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕುಡಿದ ಮತ್ತಿನಲ್ಲಿ ಬಾಲಕಿಯರಿಗೆ ಕಿರುಕುಳ ನೀಡಿದ ಮತ್ತು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ರಾಷ್ಟ್ರ ರಾಜಧಾನಿಯಿಂದ ವರದಿಯಾಗಿದೆ. ಆಗಸ್ಟ್ 13 ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಘಟನೆಯ ನಂತರ ಸಂತ್ರಸ್ತೆ ಮರುದಿನ ಪಿಜಿ ಖಾಲಿ ಮಾಡಿದ್ದಾಳೆ. ವೀಡಿಯೋದಲ್ಲಿ ಭದ್ರತಾ ಸಿಬ್ಬಂದಿ ಮದ್ಯದ ಅಮಲಿನಲ್ಲಿ ಕಾರಿಡಾರ್‌ಗೆ ಧಾವಿಸುತ್ತಿದ್ದ ಹುಡುಗಿಯರನ್ನು ಎಳೆದುಕೊಂಡು …

Read More »

₹20ಗಾಗಿ ಕೋರ್ಟ್‌ ಮೆಟ್ಟಿಲೇರಿದ್ದ ವಕೀಲ: 22 ವರ್ಷಗಳ ಹೋರಾಟದ ಬಳಿಕ ದೊರೆತ ಜಯ

ನವದೆಹಲಿ: ಭಾರತೀಯ ರೈಲ್ವೆಯು ₹20 ಹೆಚ್ಚುವರಿ ಶುಲ್ಕ ವಿಧಿಸಿದೆ ಎಂದು ಆರೋಪಿಸಿ ಕೋರ್ಟ್‌ ಮೆಟ್ಟಿಲೇರಿದ್ದ ವಕೀಲರೊಬ್ಬರು 22 ವರ್ಷಗಳ ಕಾನೂನು ಹೋರಾಟದ ಬಳಿಕ ಪ್ರಕರಣದಲ್ಲಿ ಜಯ ಸಾಧಿಸಿದ್ದಾರೆ. 1999ರಲ್ಲಿ ತಾರಾನಾಥ ಚತುರ್ವೇದಿ ಅವರು ಮಥುರಾದಿಂದ ಮೊರಾದಾಬಾದ್‌ಗೆ ಎರಡು ಟಿಕೆಟ್‌ ಪಡೆದಿದ್ದರು. ₹70 ಬದಲಾಗಿ ₹90 ಶುಲ್ಕ ಪಡೆಯಲಾಗಿತ್ತು. ರಸೀದಿ ನೀಡಿದರೂ ಅಧಿಕಾರಿಗಳು ಹೆಚ್ಚುವರಿ ಶುಲ್ಕ ವಾಪಸ್‌ ನೀಡಿರಲಿಲ್ಲ. ಹೀಗಾಗಿ ತಾರಾನಾಥ್ ಕೋರ್ಟ್‌ ಮೆಟ್ಟಿಲೇರಿದ್ದರು. ಪ್ರಕರಣವನ್ನು ಮಥುರಾ ಗ್ರಾಹಕ ನ್ಯಾಯಾಲಯವು ಎರಡು …

Read More »

ಮೋದಿ ವಿರುದ್ಧ ಯೋಗಿ ಬಂಡಾಯ: ಆಮ್‌ ಆದ್ಮಿ ಪಕ್ಷದ ನಾಯಕರು ನೀಡಿದ ಕಾರಣವೇನು?

ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷವು, ‘ಬಿಜೆಪಿಯ ಉನ್ನತ ನಾಯಕತ್ವದ ವಿರುದ್ಧ ಯೋಗಿ ಆದಿತ್ಯನಾಥ್‌ ದಂಗೆ ಎದ್ದಂತಿದೆ’ ಎಂದು ಹೇಳಿದೆ. ‌ ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ‘ಉಚಿತ ಕೊಡುಗೆಗಳನ್ನು ನೀಡುವ ಸಂಸ್ಕೃತಿ ದೇಶದ ಅಭಿವೃದ್ಧಿಗೆ ಅಪಾಯಕಾರಿ’ ಎಂದು ಹೇಳಿದ್ದರು. …

Read More »

17 ವರ್ಷ ಮೇಲ್ಪಟ್ಟವರೂ Voter IDಗೆ ಅರ್ಜಿ ಸಲ್ಲಿಸಬಹುದು – ಚುನಾವಣಾ ಆಯೋಗ

ನವದೆಹಲಿ: ಇನ್ಮುಂದೆ 17 ವರ್ಷ ಮೇಲ್ಪಟ್ಟ ಯುವ ಜನರೂ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಚಿತವಾಗಿಯೇ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಭಾರತದ ಚುನಾವಣಾ ಆಯೋಗ ಹೇಳಿದೆ. ದೇಶದ ಕಾನೂನಿನ ಪ್ರಕಾರ ಪ್ರತಿಯೊಬ್ಬ ಪ್ರಜೆಗೂ 18 ವರ್ಷ ತುಂಬಿದ ಬಳಿಕ ಮತದಾನದ ಹಕ್ಕು ನೀಡಲಾಗಿದೆ. ಆದರೆ ಈಗ 17 ವರ್ಷದವರು ಕೂಡ ತಮ್ಮ ಹೆಸರನ್ನು ನೋಂದಾಯಿಸಲು ಮತದಾನದ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಯುವ ಜನರು …

Read More »

ನವದೆಹಲಿ: ಭ್ರಷ್ಟ ಸಚಿವರಿಗೆ ಕೇಜ್ರಿವಾಲ್ ಬೆಂಬಲ ನೀಡುತ್ತಿದ್ದಾರೆ ಎಂದ ಅನುರಾಗ್ ಠಾಕೂರ್

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಭ್ರಷ್ಟ ಸಚಿವರನ್ನು ಪೋಷಿಸುತ್ತಿದ್ದಾರೆ ಎಂದು ಆರೋಪಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಕೇಜ್ರಿವಾಲ್ ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಅವರ ಭ್ರಷ್ಟ ಸಚಿವರು ಕೂಡ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದರು. ಕೇಜ್ರಿವಾಲ್ ಸರ್ಕಾರವು ಮದ್ಯ ಮಾಫಿಯಾಕ್ಕೆ ಲಾಭಗಳನ್ನು ನೀಡುತ್ತಿದೆ ಎಂದು ಆರೋಪಿಸಿದ ಅನುರಾಗ್ ಠಾಕೂರ್, ಈ ಪ್ರಕರಣದಲ್ಲಿ ಬಿಜೆಪಿ …

Read More »

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರು ಸೋಮವಾರ (ಜುಲೈ 25) ಪ್ರಮಾಣವಚನ ಸ್ವೀಕರಿಸಿದರು.   ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ .ವಿ.ರಮಣ ಅವರು ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿ ಹಾಜರಿದ್ದರು. 21 …

Read More »

ಇ.ಡಿ. ತೆಕ್ಕೆಯಲ್ಲಿ ಅತ್ತೆ: ರಾಜಕೀಯಕ್ಕೆ ಅಳಿಯನ ಎಂಟ್ರಿ? ಸೋನಿಯಾ ಕುಟುಂಬದಿಂದ ಬಂತೊಂದು ಸುದ್ದಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್​ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಇದಾಗಲೇ ವಿಚಾರಣೆಗೆ ಒಳಪಡಿಸಿದೆ. ರಾಹುಲ್​ ಗಾಂಧಿ ಇದಾಗಲೇ ಕೆಲವು ಬಾರಿ ವಿಚಾರಣೆ ಎದುರಿಸುದ್ದರೆ, ಸೋನಿಯಾ ಅವರನ್ನು ನಿನ್ನೆ (ಗುರುವಾರ) ವಿಚಾರಣೆ ಮಾಡಲಾಗಿದೆ. ತಮ್ಮ ಅತ್ತೆಯನ್ನು ಇ.ಡಿ. ವಿಚಾರಣೆಗೆ ಒಳಪಡಿಸಿರುವುದಕ್ಕೆ ಕಿಡಿ ಕಾರಿರುವ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅಗತ್ಯ ಉಂಟಾದರೆ …

Read More »

ಆಹಾರ ಧಾನ್ಯಕ್ಕೆ GST ಇಲ್ಲ: ದೇಶಾದ್ಯಂತ ಭಾರಿ ವಿರೋಧದ ಬೆನ್ನಲ್ಲೇ ಕೇಂದ್ರದ ಸ್ಪಷ್ಟನೆ

ನವದೆಹಲಿ: ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ ಲಸ್ಸಿ ಧಾನ್ಯಗಳು, ಅಕ್ಕಿ, ಅವಲಕ್ಕಿ, ಮಂಡಕ್ಕಿ ಮೇಲೆ ಶೇಕಡ 5 ರಷ್ಟು ಜಿಎಸ್‌ಟಿ ವಿಧಿಸಿರುವುದಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ದೇಶಾದ್ಯಂತ ಜನಾಕ್ರೋಶ ವ್ಯಕ್ತವಾಗುತ್ತಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 25 ಕೆಜಿಗಿಂತ ಕೆಳಗಿನ ಪ್ಯಾಕ್ ಗಳಿಗೆ ಮಾತ್ರ ಜಿಎಸ್‌ಟಿ ವಿಧಿಸಲಾಗುತ್ತದೆ. 25 ಕೆಜಿ ಮೇಲ್ಪಟ್ಟ ಧಾನ್ಯ ವಸ್ತುಗಳಿಗೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಪ್ಯಾಕ್ ಮಾಡಿದ ಆಹಾರ ಧಾನ್ಯಗಳು, 25 …

Read More »