Breaking News

ನವದೆಹಲಿ

ಜನರು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ- ಧೋನಿ ನಿವೃತ್ತಿ ಎಂದವ್ರಿಗೆ ಸಾಕ್ಷಿ ತಿರುಗೇಟು

ನವದೆಹಲಿ: ಜನರು ಮಾನಸಿಕವಾಗಿ ಅಸ್ಥಿರವಾಗಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ಎಂ.ಎಸ್ ಧೋನಿ ಅವರ ನಿವೃತ್ತಿಯ ಬಗ್ಗೆ ಮಾತನಾಡಿರುವರ ವಿರುದ್ಧ ಪತ್ನಿ ಸಾಕ್ಷಿ ಧೋನಿ ಕಿಡಿಕಾರಿದ್ದಾರೆ. ಇತ್ತೀಚೆಗೆ ಭಾರತದ ಕ್ರಿಕೆಟ್ ಅಂಗಳದಲ್ಲಿ ಮಾಜಿ ನಾಯಕ ಎಂ.ಎಸ್ ಧೋನಿ ಅವರ ನಿವೃತ್ತಿ ಬಗ್ಗೆ ಸಖತ್ ಚರ್ಚೆಯಾಗುತ್ತಿದೆ. ಧೋನಿ ಅವರು ಮತ್ತೆ ಟೀಂ ಇಂಡಿಯಾಗೆ ವಾಪಸ್ ಆಗುವುದಿಲ್ಲ ಎಂದು ಹೇಳಲಾಗುತ್ತಿದೆ. 2019ರ ವಿಶ್ವಕಪ್ ಸೆಮಿಫೈನಲ್ ಪಂದ್ಯವನ್ನು ಬಿಟ್ಟರೇ ಧೋನಿ ಮತ್ತೆ ಯಾವ ಪಂದ್ಯವನ್ನು ಆಡಿಲ್ಲ. …

Read More »

ಲಾಕ್‍ಡೌನ್ 5.Oಗೆ ತಯಾರಿ- ಇಂದು ರಾಜ್ಯ ಸರ್ಕಾರದ ಅಧಿಕಾರಿಗಳ ಜೊತೆ ಮಹತ್ವದ ಸಭೆ

ನವದೆಹಲಿ: ನಾಲ್ಕನೇ ಹಂತದ ಲಾಕ್‍ಡೌನ್ ಮುಕ್ತಾಯಕ್ಕೆ ಇನ್ನು 4 ದಿನಗಳು ಮಾತ್ರ ಬಾಕಿ ಉಳಿದುಕೊಂಡಿದೆ. ಈ ನಡುವೆ ಮೇ 31 ಬಳಿಕ ಮುಂದೇನು ಅನ್ನೊ ಲೆಕ್ಕಾಚಾರದಲ್ಲಿರುವ ಕೇಂದ್ರ ಸರ್ಕಾರ ಮತ್ತೆರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡುವ ಲೆಕ್ಕಾಚಾರದಲ್ಲಿದೆಯಂತೆ. ಜೂನ್ 1ರಿಂದ 14ರ ವರೆಗೂ ಎರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ ಆಗಲಿದ್ದು ಮೇ 31ರ ‘ಮನ್ ಕೀ ಬಾತ್’ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು …

Read More »

ಕೊರೊನಾ ಲಾಕ್‍ಡೌನ್ ದೇಶದ ಆರ್ಥಿಕತೆಗೆ 30 ಲಕ್ಷ ಕೋಟಿ ರೂ. ನಷ್ಟ- ಎಸ್‍ಬಿಐ………

ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದಾಗಿ ಈವರೆಗೂ ಭಾರತದ ಆರ್ಥಿಕತೆಗೆ 30 ಲಕ್ಷ ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‍ಬಿಐ) ಸಂಶೋಧನಾ ವರದಿಯ ಪ್ರಕಾರ, ರಾಷ್ಟ್ರೀಯ ಅಂಕಿ ಅಂಶಗಳ ಸಂಘಟನೆ (ಎನ್‍ಎಸ್‍ಒ) ಮೇ 29 ರಂದು ನಾಲ್ಕನೇ ತ್ರೈಮಾಸಿಕದ ಜಿಡಿಪಿ ಬೆಳವಣಿಗೆಯ ವರದಿ ಬಿಡುಗಡೆಗೊಳಿಸಲಿದೆ. ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 4.7ರಷ್ಟಿತ್ತು. ಆದರೆ ಕೊರೊನಾ ಹೊಡೆತದಿಂದ ಜಿಡಿಪಿ ಮತ್ತೆ ಕುಸಿತ ಕಾಣಲಿದೆ ಎನ್ನಲಾಗುತ್ತಿದೆ. ಕೊರೊನಾ ಲಾಕ್‍ಡೌನ್‍ನಿಂದ …

Read More »

ಕೊರೋನಾ ಪೀಡಿತ ರಾಷ್ಟ್ರಗಳ ಪೈಕಿ ವಿಶ್ವದಲ್ಲಿ 10ನೇ ಸ್ಥಾನಕ್ಕೇರಿದ ಭಾರತ..!

ನವದೆಹಲಿ/ಮುಂಬೈ, ಮೇ 24-ಭಾರತದಲ್ಲಿ ವಿನಾಶಕಾರಿ ಕೊರೊನಾ ವೈರಸ್ ಮತ್ತಷ್ಟು ತೀವ್ರ ಸ್ವರೂಪದಲ್ಲಿ ಸೋಟಗೊಂಡಿದೆ. ಸಾಂಕ್ರಾಮಿಕ ರೋಗದ ಪಾಸಿಟಿವ್ ಪ್ರಕರಣ ಆಘಾತಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ. ಅಲ್ಲದೇ ವಿಶ್ವದಲ್ಲೇ ಅತಿ ಹೆಚ್ಚು ಸೋಂಕು ಮತ್ತು ಸಾವುಗಳು ಸಂಭವಿಸಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 10ನೇ ಸ್ಥಾನಕ್ಕೇರಿರುವುದು ಚಿಂತಾಜನಕ ಸಂಗತಿ. ನಿನ್ನೆ ಒಂದೇ ದಿನ ಅಂದರೆ 24 ತಾಸುಗಳ ಅವಯಲ್ಲಿ 6,767 (ನಿನ್ನೆ 6,654, ಮೊನ್ನೆ 6,088 ಕೇಸ್) ಜನರಿಗೆ ಸೋಂಕು ದೃಢಪಟ್ಟಿದ್ದು. ಇದು ಸಾಂಕ್ರಾಮಿಕ …

Read More »

ಆರ್‌ಬಿಐನಿಂದ ಗುಡ್‍ನ್ಯೂಸ್ – ಆ.31ರವರೆಗೂ ಇಎಂಐ ವಿನಾಯಿತಿ………..

ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದ ಇಡೀ ದೇಶವೇ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸಾಲದ ಮೇಲಿನ ಬಡ್ಡಿ ದರವನ್ನು ಇಳಿಕೆ ಮಾಡುವ ಮೂಲಕ ಸಿಹಿ ಸುದ್ದಿ ನೀಡಿದೆ. ಇಂದು ಆರ್‌ಬಿಐ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ ನಡೆಸಿ, ಸಾಲದ ಮೇಲಿನ ಕಂತು ಕುಟ್ಟುವ ಅವಧಿ ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡಿರುವುದಾಗಿ ಘೋಷಣೆ ಮಾಡಿದ್ದಾರೆ. ಎಲ್ಲಾ ರೀತಿಯ ಸಾಲದ ಇಎಂಐ ಕಟ್ಟಲು …

Read More »

ಭಾರತಕ್ಕೆ ಕೊರೊನಾ-ಅಂಫನ್ ಕಂಟಕ : ಸಚಿವರ ಜತೆ ಪ್ರಧಾನಿ ಚರ್ಚೆ…..

ನವದೆಹಲಿ, ಮೇ 20- ದೇಶಾದ್ಯಂತ ಕೊರೊನಾ ವೈರಸ್ ಸೋಂಕು ಮತ್ತು ಸಾವು ಪ್ರಕರಣ ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಮತ್ತೊಂದೆಡೆ ಕೆಲವು ರಾಜ್ಯಗಳ ಮೇಲೆ ಅಂಫನ್ ಚಂಡಮಾರುತ ಅಪ್ಪಳಿಸುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಬೆಳಗ್ಗೆ ದೆಹಲಿಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಕೋವಿಡ್-19 ವೈರಸ್‍ನ್ನು ಪರಿಣಾಮಕಾರಿಯಾಗಿ ನಿಗ್ರಹಿಸುವುದು ಮತ್ತು ಸೂಪರ್ ಸೈಕ್ಲೋನ್‍ನಿಂದ ಉಂಟಾಗಬಹುದಾದ ಹಾನಿಯನ್ನು ತಡೆಗಟ್ಟುವ ಸಂಬಂಧ ಪ್ರಧಾನಿ ಸಂಪುಟ ಸಹೋದ್ಯೋಗಿಗಳೊಂದಿಗೆ ಸಭೆ …

Read More »

48 ಸಾವಿರದ ಗಡಿಯತ್ತ ಚಿನ್ನ………ತೆರಿಗೆ ಶೇ.12.5 ಹಾಗೂ ಶೇ.3ರಷ್ಟು ಜಿಎಸ್‍ಟಿ ಸಹ ಸೇರಿದೆ.

ನವದೆಹಲಿ: ಕೊರೊನಾ ವೈರಸ್ ಹಿನ್ನೆಲೆ ಆರ್ಥಿಕತೆ ಬುಡಮೇಲಾಗಿದ್ದು, ಇದರ ಪರಿಣಾಮ ಚಿನ್ನದ ಮೇಲೂ ಬೀರಿದೆ. ಹೀಗಾಗಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 47,740 ರೂ. ತಲುಪಿದ್ದು, ಬೆಳ್ಳಿ ಪ್ರತಿ ಕೆಜಿಗೆ 48,190 ರೂ.ಗೆ ಏರಿಕೆಯಾಗಿದೆ. ಮಲ್ಟಿ ಕಮಾಡಿಟಿ ಎಕ್ಸ್ ಚೇಂಜ್(ಎಂಸಿಎಕ್ಸ್)ನಲ್ಲಿ ಸೋಮವಾರದ ಚಿನ್ನದ ಬೆಲೆ 47,740 ರೂ. ಗಡಿ ದಾಟಿದ್ದು, ಶುಕ್ರವಾರದಿಂದ ಈವರೆಗೆ ಕೇವಲ ಮೂರು ದಿನಗಳಲ್ಲಿ 10 ರೂ.ಹೆಚ್ಚಾಗಿದೆ. ಇಂದು ಪ್ರತಿ 10 ಗ್ರಾಂ. 22 ಕ್ಯಾರೆಟ್ ಚಿನ್ನದ …

Read More »

ಭಾರತದಲ್ಲಿ ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆ – 24 ಗಂಟೆಯಲ್ಲಿ 5,242 ಹೊಸ ಪ್ರಕರಣ ಪತ್ತೆ

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆಯಾಗಿದೆ. 3,029 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. 24 ಗಂಟೆಯಲ್ಲಿ 5,242 ಹೊಸ ಪ್ರಕರಣಗಳು ಹಾಗೂ 157 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈವರೆಗೆ ಭಾರತದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು 36,824 ಮಂದಿ ಗುಣಮುಖರಾಗಿದ್ದಾರೆ. 56,316 ಸೋಂಕಿತರು ಇನ್ನೂ ಕೊರೊನಾದಿಂದ ಬಳಲುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ …

Read More »

ಮೇ 31ರವರೆಗೆ ಲಾಕ್‍ಡೌನ್ ವಿಸ್ತರಣೆ,, ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಮೇ 31ರವರೆಗೆ ಲಾಕ್‍ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಹೊಸ ಲಾಕ್‍ಡೌನ್ ಆರಂಭವಾಗಲಿದೆ. ಮೂರನೇ ಹಂತದ ಲಾಕ್‍ಡೌನ್ ಇಂದು ಅಂತ್ಯವಾಗಲಿದೆ. ಇಡೀ ದೇಶದಾದ್ಯಂತ ಎರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಲಿದ್ದು, ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಹೊಸ ಲಾಕ್‍ಡೌನ್ ಹೊಸ ರೀತಿಯಲ್ಲಿ ಇರಲಿದೆ ಅಂತ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದು, ಕೇಂದ್ರ ಸರ್ಕಾರದ ಲೆಕ್ಕಾಚಾರ ಹೇಗಿರಲಿದೆ ಅನ್ನೋದು …

Read More »

ಭಾರತದಲ್ಲಿ ಕೊರೋನಾ ರೌದ್ರಾವತಾರ : 24 ಗಂಟೆಗಳಲ್ಲಿ 5,000 ಮಂದಿಗೆ ಪಾಸಿಟಿವ್..!

ನವದೆಹಲಿ/ಮುಂಬೈ, ಮೇ 17-ವಿನಾಶಕಾರಿ ಕೊರೊನಾ ಆಕ್ರಮಣದ ತೀವ್ರತೆ ದೇಶದಲ್ಲಿ ಆಘಾತಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ. ಹೆಮ್ಮಾರಿ ನಿಗ್ರಹಕ್ಕಾಗಿ ಜಾರಿಯಲ್ಲಿರುವ ಮೂರನೇ ಹಂತದ ಲಾಕ್‍ಡೌನ್ ಅವಧಿ ಇಂದು ಮಧ್ಯರಾತ್ರಿ ಪೂರ್ಣಗೊಳ್ಳಲಿದ್ದು, ನಾಳೆಯಿಂದ ಹೊಸ ಸ್ವರೂಪದಲ್ಲಿ ವಿಸ್ತರಣೆಯಾಗಲಿದೆ. ದೀರ್ಘಾವಧಿ ಲಾಕ್‍ಡೌನ್ ಮತ್ತು ಕಠಿಣ ನಿರ್ಬಂಧಗಳ ಅವಧಿಯಲ್ಲಿ ನಿಯಂತ್ರಣಕ್ಕೆ ಬರದಿರುವ ವೈರಸ್ ಅನ್‍ಲಾಕ್ ವೇಳೆ ತನ್ನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸುವ ಆತಂಕವೂ ಇದೆ. ಕಿಲ್ಲರ್ ವೈರಸ್ ಆರ್ಭಟ ಲಾಕ್‍ಡೌನ್ ಸಡಿಲಿಕೆ ನಂತರ ದಿನೇ ದಿನೇ ವ್ಯಾಪಕವಾಗುತ್ತಿರುವುದು …

Read More »