Breaking News
Home / ನವದೆಹಲಿ (page 41)

ನವದೆಹಲಿ

ನಾದಿನಿ ಮನೆಗೆ ಹೋಗಿದ್ದಕ್ಕೆ ಗರ್ಭಿಣಿ ಪತ್ನಿಯನ್ನೇ ಕೊಂದ

ನವದೆಹಲಿ: ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನು ಭೇಟಿಯಾಗಲು ಹೋಗಿದ್ದ ಗರ್ಭಿಣಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹೇಮಲತಾ (30) ಮೃತ ಮಹಿಳೆ. ಆರೋಪಿ ವಿಜಯ್ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ಘಟನೆ ದಕ್ಷಿಣಪುರಿಯಲ್ಲಿರುವ ಅಂಬೇಡ್ಕರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ಮಧ್ಯರಾತ್ರಿ ಸುಮಾರು 12.30ಕ್ಕೆ ಆರೋಪಿ ವಿಜಯ್ ಪೊಲೀಸ್ ಠಾಣೆಗೆ ಹೋಗಿ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದೇನೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾನೆ. ತಕ್ಷಣ …

Read More »

ಭಾರತದಲ್ಲಿ ಕಿಲ್ಲರ್ ಕೊರೊನಾಗೆ 2,415 ಮಂದಿ ಬಲಿ – 74 ಸಾವಿರ ಗಡಿದಾಟಿತ ಸೋಂಕಿತರ ಸಂಖ್ಯೆ

ನವದೆಹಲಿ: ವಿಶ್ವವ್ಯಾಪಿ ಹರಡಿರುವ ಕಿಲ್ಲರ್ ಕೊರೊನಾ ವೈರಸ್‍ಗೆ ಭಾರತದಲ್ಲಿ ಬರೋಬ್ಬರಿ 2,415 ಮಂದಿ ಬಲಿಯಾಗಿದ್ದಾರೆ. ಈವರೆಗೆ 74,292 ಮಂದಿ ಸೋಂಕಿಗೆ ತುತ್ತಾಗಿದ್ದು, 24,453 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ. ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತದಲ್ಲಿ ಮಾರ್ಚ್ 24ರಿಂದ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಮೇ 17 ರಂದು ಮುಗಿಯಬೇಕಿದ್ದ ಲಾಕ್‍ಡೌನ್ ಅವಧಿಯನ್ನು ವಿಸ್ತರಿಸುವ ಸಾಧ್ಯತೆ ಇದೆ. ಲಾಕ್‍ಡೌನ್ 4.0 ಈವರೆಗೆ ಇದ್ದ ಲಾಕ್‍ಡೌನ್ ನಿಯಮಗಳಿಗಿಂತ ಭಿನ್ನವಾಗಿರಲಿದೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಈವರೆಗೆ …

Read More »

20 ಲಕ್ಷ ಕೋಟಿ ರೂ. ಮೊತ್ತದ ಪ್ಯಾಕೇಜ್ ನ್ನು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಘೋಷಿಸಲಾಗಿದೆ.: ಪ್ರಧಾನಿ ನರೇಂದ್ರ ಮೋದಿ

ಲಘು ಉದ್ಯೋಗ ಸೇರಿದಂತೆ ಎಲ್ಲ ವಲಯಗಳಿಗೂ ಅನ್ವಯವಾಗುವ ಮೆಘಾ ಆರ್ಥಿಕ ಪ್ಯಾಕೇಜ್ ಒಂದನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಒಟ್ಟಾರೆ 20 ಲಕ್ಷ ಕೋಟಿ ರೂ. ಮೊತ್ತದ ಪ್ಯಾಕೇಜ್ ನ್ನು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಘೋಷಿಸಲಾಗಿದೆ. ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಡೀ ವಿಶ್ವವೇ ಭಾರತದೆಡೆಗೆ ನೋಡುತ್ತಿರುವ ಈ ಸಂದರ್ಭದಲ್ಲಿ, ಭಾರತದ ಭವಿಷ್ಯ ಬದಲಾದರೆ ವಿಶ್ವದ ಭವಿಷ್ಯ ಬದಲಾಗಲಿದೆ ಎನ್ನುವ ಸತ್ಯದ ಹಿನ್ನೆಲೆಯಲ್ಲಿ ಇಂತಹ ಪ್ಯಾಕೇಜ್ ಘೋಷಿಸಲಾಗುತ್ತಿದೆ ಎಂದಿದ್ದಾರೆ. ಬಡವರು, …

Read More »

15 ವಿಶೇಷ ರೈಲುಗಳ ಸಂಚಾರ ಆರಂಭ, 45,533 ರೈಲ್ವೆ ಟಿಕೆಟ್ ಬುಕ್ ……….

ನವದೆಹಲಿ, ಮೇ 12- ಲಾಕ್‍ಡೌನ್ ಸಂಕಷ್ಟದಲ್ಲಿರುವ ಜನರ ಅನುಕೂಲಕ್ಕಾಗಿ ಇಂದಿನಿಂದ ದೇಶದ ವಿವಿಧ ಭಾಗಗಳಿಗೆ 15 ವಿಶೇಷ ರೈಲುಗಳ ಸಂಚಾರ ಆರಂಭವಾಗಿದೆ. ನಿನ್ನೆ ಸಂಜೆ 6 ಗಂಟೆಯಿಂದ ರೈಲ್ವೆ ಟಿಕೆಟ್ ಬುಕ್ಕಿಂಗ್ ಆರಂಭವಾಗಿದ್ದು, ಇಂದು ಬೆಳಗ್ಗೆವರೆಗೆ 80 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಂಡಿದ್ದಾರೆ. 16.15 ಕೋಟಿ ರೂ. ಮೌಲ್ಯದ 45,533 ರೈಲ್ವೆ ಟಿಕೆಟ್‍ಗಳು ಬುಕ್ಕಿಂಗ್ ಆಗಿವೆ ಎಂದು ಭಾರತೀಯ ರೈಲ್ವೆ ಪ್ರಕಟಣೆ ತಿಳಿಸಿದೆ. ಐದು ವಿಶೇಷ ರೈಲುಗಳಲ್ಲಿ …

Read More »

ಏರ್ ಲಿಫ್ಟ್ 2.0- 31 ದೇಶಗಳಿಂದ 149 ವಿಮಾನಗಳ ಮೂಲಕ ತಾಯ್ನಾಡಿಗೆ ಭಾರತೀಯರು

ನವದೆಹಲಿ: ಮೊದಲ ಹಂತದ ವಂದೇ ಭಾರತ್ ಮಿಷನ್ ಅಂತ್ಯವಾಗುತ್ತಿರುವ ಬೆನ್ನಲೆ ಎರಡನೇ ಹಂತದಲ್ಲಿ ಮತ್ತೊಂದು ಬೃಹತ್ ಕಾರ್ಯಚರಣೆಗೆ ಕೇಂದ್ರ ಸರ್ಕಾರ ಸಿದ್ದತೆ ಮಾಡಿಕೊಂಡಿದೆ. ಮೇ 16ರಿಂದ ಎರಡನೇ ಹಂತದ ಕಾರ್ಯಚರಣೆಗೆ ಮೋದಿ ಸರ್ಕಾರ ಹಸಿರು ನಿಶಾನೆ ತೋರಲಿದೆ. ಮೇ 16ರಿಂದ 22ರವರೆಗೆ ಎರಡನೇ ಹಂತದಲ್ಲಿ ವಂದೇ ಭಾರತ್ ಮಿಷನ್ ಆರಂಭವಾಗಲಿದ್ದು, ಏಳು ದಿನಗಳಲ್ಲಿ 31 ದೇಶಗಳಿಂದ ಭಾರತದ ಹದಿನೈದು ನಗರಗಳಿಗೆ 149 ವಿಶೇಷ ವಿಮಾನಗಳಲ್ಲಿ ಮತ್ತಷ್ಟು ಅನಿವಾಸಿ ಭಾರತೀಯರು ತಾಯ್ನಾಡಿಗೆ …

Read More »

ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ.

HomeNational News ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿ ಪ್ರಧಾನಿ ಮೋದಿ ಮಾತು ಲಾಕ್ ಡೌನ್ ಮುಗಿಯುತ್ತಾ? ಮುಂದುವರೆಯುತ್ತಾ? By Pragativahini On May 12, 2020 Share ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಇಡೀ ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ. ಈ ಬಗ್ಗೆ ಪ್ರಧಾನಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ಇಂದು ರಾತ್ರಿ 8 ಗಂಟೆಗೆ …

Read More »

ಮೇ 17ರ ಬಳಿಕ ಸಿಗುತ್ತಾ ಬಿಗ್ ರಿಲೀಫ್?

ನವದೆಹಲಿ/ಬೆಂಗಳೂರು: ಲಾಕ್ ಡೌನ್ ವಿಸ್ತರಣೆ, ವಿನಾಯ್ತಿ ಸಂಬಂಧ ಸೋಮವಾರ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ದೀರ್ಘಕಾಲದ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಅಭಿಪ್ರಾಯ ಪಡೆದಿರುವ ಪ್ರಧಾನಿ ಮೋದಿ, ಕೇಂದ್ರ ಆರೋಗ್ಯ ಇಲಾಖೆಯ ಟಾಸ್ಕ್ ಫೋರ್ಸ್, ನೀತಿ ಆಯೋಗ ಸೇರಿ ಹಲವು ಟಾಸ್ಕ್ ಫೋರ್ಸ್ ಗಳ ಅಭಿಪ್ರಾಯ ಸಂಗ್ರಹಿಸಿ ಒಂದೆರಡು ದಿನಗಳಲ್ಲಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ. ಲಾಕ್ ಡೌನ್ ನಿಯಮಗಳನ್ನು ಕಂಟೈನ್ಮೆಂಟ್ ಝೋನ್ ಗಳಿಗೆ ಸೀಮಿತಗೊಳಿಸಿ ಲಾಕ್ ಡೌನ್ ನಿಂದ ವಿನಾಯ್ತಿ ನೀಡುವಂತೆ …

Read More »

ಸಿಎಂಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಅಂತ್ಯ:ಪ್ರಧಾನಿ ಮೋದಿ

ನವದೆಹಲಿ: ಸಿಎಂಗಳ ಜೊತೆಗಿನ ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ ಅಂತ್ಯವಾಗಿದ್ದು, ಕೊರೊನಾ ವಿರುದ್ಧದ ಯುದ್ಧದಲ್ಲಿ ಲಾಕ್‍ಡೌನ್ ಒಂದು ವೆಪನ್ ಅಷ್ಟೇ, ಅದನ್ನ ಜಾಸ್ತಿ ದಿನ ಬಳಸಲು ಆಗಲ್ಲ ಎಂಬ ಮಾತನ್ನು ಪ್ರಧಾನಿಗಳು ಹೇಳಿದ್ದಾರೆ.ಈಗಾಗಲೇ ಸಾಮಾಜಿಕ ಅಂತರವನ್ನು ಹೇಳಿಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಹೊಸ ತಂತ್ರಜ್ಞಾನದ ಮೊರೆ ಹೋಗಬೇಕಾಗುತ್ತದೆ. ಮೊದಲ ಮಹಾಯುದ್ಧ, ಎರಡನೇ ಮಹಾಯುದ್ಧದ ಬಳಿಕ ಸಾಕಷ್ಟು ತಂತ್ರಜ್ಞಾನ ಬಂತು. ಕೊರೊನಾದಿಂದ ತಂತ್ರಜ್ಞಾನ ಬೇರೆ ರೀತಿ ಅಭಿವೃದ್ಧಿ ಆಗುತ್ತೆ. ಹಾಗಾಗಿ ಹೊಸ ಹೊಸ ಟೆಕ್ನಿಕ್ …

Read More »

ಫೇಸ್ ಶೀಲ್ಡ್ ತೆಗೆದು ಕೊರೊನಾ ರೋಗಿಯ ಜೀವ ಉಳಿಸಿದ ವೈದ್ಯ………

ನವದೆಹಲಿ: ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ರೋಗಿಗಳ ಜೀವ ಉಳಿಸಲು ವೈದ್ಯರು ಹಗಲಿರುಳು ಎನ್ನದೇ ಕರ್ತವ್ಯ ನಿಷ್ಠ ಮೆರೆಯುತ್ತಿದ್ದಾರೆ. ಇದೀಗ ಏಮ್ಸ್ ವೈದ್ಯರೊಬ್ಬರು ತಮ್ಮ ರಕ್ಷಣೆಗೆ ಹಾಕಿಕೊಂಡಿದ್ದ ಫೇಸ್ ಶೀಲ್ಡ್ ತೆಗೆದು ಕೋವಿಡ್-19 ರೋಗಿಯ ಜೀವ ಉಳಿಸುವ ಮೂಲಕ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟಿರುವ ಘಟನೆ ನಡೆದಿದೆ. ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ವೈದ್ಯ ಝಹೀದ್ ಅಬ್ದುಲ್ ಮಜೀದ್ ತಮ್ಮ ಫೇಸ್ ಶೀಲ್ಡ್ ತೆಗೆದು ಕೊರೊನಾ ರೋಗಿಯ ಜೀವ …

Read More »

ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು………..

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 87 ವರ್ಷದ ಮನಮೋಹನ್ ಸಿಂಗ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.ಪಂಜಾಬ್ ವಿಶ್ವವಿದ್ಯಾಲಯ, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣ ಪಡೆದ ಮನಮೋಹನ್ ಸಿಂಗ್ ಪ್ರಧಾನಿಯಾಗುವ ಮೊದಲು ಅರ್ಥಶಾಸ್ತ್ರಜ್ಞರಾಗಿ ಕೆಲಸ ಮಾಡಿದ್ದರು. ಅವರು ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಸರ್ಕಾರದಲ್ಲಿ ವಿತ್ತ ಸಚಿವರಾಗಿದ್ದರು. ಬಳಿಕ ಅಂದ್ರೆ …

Read More »