Breaking News

ನವದೆಹಲಿ

ಆಸ್ಪತ್ರೆಗೆ ಕರೆದೊಯ್ದಿದ್ದ ಪೇದೆಯ ಹೆಸರನ್ನೇ ಮಗುವಿಗಿಟ್ಟ ತಾಯಿ………

ನವದೆಹಲಿ: ಲಾಕ್‍ಡೌನ್ ಸಮಯದಲ್ಲಿ ದೆಹಲಿ ಪೊಲೀಸರು ಅನೇಕ ಮಾನವೀಯ ಕೆಲಸಗಳಿಂದ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದೇಶದ ವಿವಿಧೆಡೆ ಪೊಲೀಸರು ಅನೇಕ ಬಡವರ ಹಸಿವು ನೀಗಿಸಿದ್ದಾರೆ, ಮಹಿಳೆಯರು, ರೋಗಿಗಳಿಗೆ ಅಗತ್ಯ ವಸ್ತು, ಔಷಧಿ ತಲುಪಿಸುವ ಕೆಲಸ ಮಾಡಿದ್ದಾರೆ. ಅಂಥೆ ಲಾಕ್‍ಡೌನ್ ಸಮಯದಲ್ಲಿ ದೆಹಲಿಯ ಪೊಲೀಸ್ ಪೇದೆ ದಯಾವೀರ್ ಸಿಂಗ್ ಅವರು ಗರ್ಭಿಣಿಯನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ದಯಾವೀರ್ ಸಿಂಗ್ …

Read More »

ಕೊರೋನಾ ಸೋಂಕು ನಿಯಂತ್ರಣಕ್ಕೆ ಗ್ರಾಮಗಳು ತೆಗೆದುಕೊಂಡ ಕ್ರಮಗಳು ಅನೇಕರಿಗೆ ಮಾದರಿಯಾಗಿವೆ: ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ಸೋಂಕು ನಿಯಂತ್ರಣಕ್ಕೆ ಗ್ರಾಮಗಳು ತೆಗೆದುಕೊಂಡ ಕ್ರಮಗಳು ಅನೇಕರಿಗೆ ಮಾದರಿಯಾಗಿವೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಸರಪಂಚರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೊರೋನಾ ವೈರಸ್​ ನಿಯಂತ್ರಣಕ್ಕೆ ಸಾಕಷ್ಟು ಗ್ರಾಮಗಳು ಸ್ವಯಂ ನಿರ್ಬಂಧ ಹೇರಿಕೊಂಡಿವೆ. ಹಳ್ಳಿಗರಿಂದ ಸಾಕಷ್ಟು ಜನರು ಸ್ಫೂರ್ತಿ ಪಡೆದುಕೊಂಡಿದ್ದಾರೆ ಎಂದರು. ಮೊದಲು ಗ್ರಾಮ ಪಂಚಾಯ್ತಿಯಲ್ಲಿ ಸರಿಯಾದ ಇಂಟರ್​ನೆಟ್​ ಸೌಲಭ್ಯ ಇರುತ್ತಿರಲಿಲ್ಲ. ಆದರೆ, ಇಂದು ಲಕ್ಷಾಂತರ ಪಂಚಾಯತಿಗಳಲ್ಲಿ ವೇಗದ ಇಂಟರ್​ನೆಟ್​ ಇದೆ. ದೇಶದ ಅನೇಕ …

Read More »

ರಂಜಾನ್ ಮಾಸಾಚರಣೆ ಪಾಲಿಸಬೇಕಾದ ಮಾರ್ಗಸೂಚಿ…….

ಮಸೀದಿಯ ಸಿಬ್ಬಂದಿಗಳು ಯಾವುದೇ ತರಹದ ಧ್ವನಿವರ್ಧಕಗಳನ್ನು ಮಸೀದಿಯಲ್ಲಿ ಐದು ಹೊತ್ತಿನ ಪ್ರಾರ್ಥನೆ(ನಮಾಜ್) ಯನ್ನು ಶುಕ್ರವಾರ (ನಮಾಜ್) ಪ್ರಾರ್ಥನೆ ಸಹ ಒಳಗೊಂಡಂತೆ ಮತ್ತು ತರ್ಹಾವಿ (ನಮಾಜ್) ಪ್ರಾರ್ಥನೆಗೆ ಬಳಸಲು ನಿರ್ಬಂಧಿಸಲಾಗಿದೆ. ಬೆಂಗಳೂರು: ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಮಾಸ ಪ್ರಾರಂಭವಾಗಲಿದ್ದು, ಮೇ 3ರವರೆಗೆ ಅನ್ವಯವಾಗುವಂತೆ ಸರ್ಕಾರದ ಮಾರ್ಗದರ್ಶನಗಳನ್ನು ಮುಂದುವರೆಸುತ್ತಾ ದಾವಣಗೆರೆ ಜಿಲ್ಲೆಯಾದ್ಯಂತ ಬರುವ ಎಲ್ಲಾ ಮಸೀದಿ, ದರ್ಗಾಗಳಲ್ಲಿ ದೈನಂದಿನ ಮತ್ತು ರಂಜಾನ್ ಮಾಸದ ಸಾಮೂಹಿಕ ಪ್ರಾರ್ಥನೆಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ …

Read More »

ಕೊರೊನಾ ವಿರುದ್ಧ 26 ಗಂಟೆ ಹೋರಾಡಿ ಪ್ರಾಣಬಿಟ್ಟ 6 ತಿಂಗಳ ಕಂದಮ್ಮ…

ಚಂಡೀಗಢ: ಮಹಾಮಾರಿ ಕೊರೊನಾ ವಿರುದ್ಧ 26 ಗಂಟೆಗಳ ಹೋರಾಡಿ 6 ತಿಂಗಳ ಕಂದಮ್ಮವೊಂದು ಮೃತಪಟ್ಟ ಮನಕಲಕುವ ಘಟನೆ ಇಂದು ಚಂಡೀಗಢದಲ್ಲಿ ನಡೆದಿದೆ. ಹೃದಯ ರಂಧ್ರದ ಚಿಕಿತ್ಸೆಗಾಗಿ 6 ತಿಂಗಳ ಹೆಣ್ಣು ಮಗುವನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಸೋಂಕ ತಗುಲಿರುವುದು ದೃಢಪಡುತ್ತಿದ್ದಂತೆ ಅಂದ್ರೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೋವಿಡ್-19 ವಾರ್ಡಿಗೆ ದಾಖಲಿಸಲಾಗಿತ್ತು. ರಾತ್ರಿಯಿಂದಲೇ ಮಗುವನ್ನು ವೆಂಟಿಲೇಟರ್ ಮತ್ತು ಗ್ಲೂಕೋಸ್‍ನಲ್ಲಿ ಇಡಲಾಗಿತ್ತು. ಆದರೆ ಸೋಂಕು ತೀವ್ರವಾಗಿ ಏರಿಕೆ …

Read More »

ಏ. 27ರಂದು ಮತ್ತೆ ಮುಖ್ಯಮಂತ್ರಿಗಳ ಜೊತೆ ಮೋದಿ ವಿಡಿಯೋ ಕಾನ್ಫರೆನ್ಸ್

ನವದೆಹಲಿ: ಏಪ್ರಿಲ್ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೂರನೇ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುವಿಕೆ ಹಾಗೂ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‍ಡೌನ್ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮೋದಿ ಅವರು ಚರ್ಚೆ ಮಾಡಲಿದ್ದಾರೆ. ಈ ಹಿಂದೆ ಲಾಕ್‍ಡೌನ್ ಹಾಗೂ ಕೊರೊನಾ ವೈರಸ್ ಹರಡುವಿಕೆ ತಡೆಯ ವಿಚಾರವಾಗಿ ಎರಡು ಬಾರಿ ಮೋದಿ ಅವರು ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ …

Read More »

ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ರೆ 7 ವರ್ಷ ಜೈಲು……..

ನವದೆಹಲಿ: ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಆಗಲಿದೆ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಇಲ್ಲಿಯವರೆಗಿದ್ದ 6 ತಿಂಗಳ ಶಿಕ್ಷೆಯ ಪ್ರಮಾಣವನ್ನು 7 ವರ್ಷಕ್ಕೆ ಏರಿಸಿದೆ. ದೇಶದ ಹಲವೆಡೆ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಈ ವಾರದಲ್ಲಿ ಬೆಂಗಳೂರಿನ ಪಾದರಾಯನಪುರ, ಮೈಸೂರಿನಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು. …

Read More »

ಇಂದು ಭೂಮಿ ದಿನ : ಕೊರೊನಾ ಹೋರಾಟಗಾರರಿಗೆ ಪ್ರಧಾನಿ ಕೃತಜ್ಞತೆ

ನವದೆಹಲಿ, ಏ.22- ಇಂದು ಭೂಮಿ ದಿನ. ಈ ಸಂದರ್ಭದಲ್ಲಿ ಭೂಮಿ ತಾಯಿಯ ರಕ್ಷಣೆಗಾಗಿ ನಾವೆಲ್ಲರೂ ಪಣ ತೊಟ್ಟು ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗೋಣ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ಭೂಮಂಡಲವು ಹೆಚ್ಚು ಶುದ್ಧವಾಗಿ, ಆರೋಗ್ಯಕರವಾಗಿ ಮತ್ತು ಮತ್ತಷ್ಟು ಸಮೃದ್ಧವಾಗಿರಬೇಕು. ಇದಕ್ಕಾಗಿ ನಾವೆಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಇದಕ್ಕಾಗಿ ದೃಢಸಂಕಲ್ಪ ಮಾಡೋಣ ಎಂದು ಮೋದಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಇಂಟರ್‍ನ್ಯಾಷನಲ್ ಅರ್ಥ್ …

Read More »

ಜ್ಯೂಮ್ ಪರ್ಯಾಯವಾಗಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಿದರೆ ಕೇಂದ್ರ ಸರ್ಕಾರದಿಂದ  ಒಂದು ಕೋಟಿ

ಹೊಸದಿಲ್ಲಿ: ಜ್ಯೂಮ್ ಪರ್ಯಾಯವಾಗಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಿದರೆ ಕೇಂದ್ರ ಸರ್ಕಾರದಿಂದ  ಒಂದು ಕೋಟಿ ಮೊತ್ತದ ಬಹುಮಾನ ನೀಡಲು ಘೋಷಿಸಿದೆ. ಲಾಕ್​​ಡೌನ್​​ ಅವಧಿಯಲ್ಲಿ ಮನೆಯಲ್ಲಿ ಕುಳಿತು ಕಾಲ ಕಳೆಯುತ್ತಿರೋ ಜನರು, ಹೆಚ್ಚಾಗಿ ಜ್ಯೂಮ್ ಆ್ಯಪ್ ಅನ್ನು ಹೆಚ್ಚಾಗಿ ಬಳಸೋಕೆ ಶುರು ಮಾಡಿದ್ದರು. ವರ್ಕ್ ಫ್ರಮ್ ಹೋಮ್ ಮಾಡುವ ಪ್ರತಿಷ್ಟಿತ ಕಂಪನಿಗಳ ಸಿಬ್ಬಂದಿ, ಉದ್ಯಮಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಜೂಮ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ವಿಡಿಯೋ ಕಾನ್ಪರೆನ್ಸ್​  ಬಳಕೆ ಮಾಡ್ತಿದ್ರು. ಈ ಜ್ಯೂಮ್ …

Read More »

ಭಾರತದಲ್ಲಿ ಕೊರೋನಾಗೆ ಕಳೆದ 24 ಗಂಟೆಯಲ್ಲಿ 50 ಮಂದಿ ಸಾವು..! 20,000 ಸೋಂಕಿತರು

ನವದೆಹಲಿ/ಮುಂಬೈ,ಏ.22-ವೈದ್ಯರು ಮತ್ತು ಆರೋಗ್ಯರಕ್ಷಕರ ನಿರಂತರ ಹೋರಾಟದ ನಡುವೆಯೂ ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಮುಂದೇನು ಎಂಬ ಆತಂಕ 135 ಕೋಟಿ ಭಾರತೀಯರಲ್ಲಿ ಮನೆ ಮಾಡಿದೆ. ಭಾರತದಲ್ಲಿ ಮೃತರ ಸಂಖ್ಯೆ 650ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 20,000ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ. ಕೇಂದ್ರ ಆರೋಗ್ಯ ಸಚಿವಾಲಯದ ನಿನ್ನೆ ಮಧ್ಯರಾತ್ರಿವರೆಗಿನ ಅಧಿಕೃತ ವರದಿ …

Read More »

BIG BREAKING : ಭಾರತದಲ್ಲೂ ಮೇ.3ಕ್ಕೆ ಮುಗಿಯಲ್ಲ ಲಾಕ್‍ಡೌನ್‍..!

ನವದೆಹಲಿ, ಏ.22- ವಿಶ್ವಾದ್ಯಂತ ಕಾಡಿರುವ ಕೊರೊನಾ ಸೋಂಕನ್ನು ಹಿಮ್ಮೆಟ್ಟಿರುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ರಾಷ್ಟ್ರಗಳಲ್ಲಿ ಲಾಕ್‍ಡೌನ್‍ಅನ್ನು ಜೂನ್‍ವರೆಗೂ ಮುಂದುವರಿಸಲಾಗಿದೆ. ಇದರ ನಡುವೆ ಭಾರತದಲ್ಲೂ ಮೇ 3ರ ನಂತರ ಮತ್ತೆ ಇದೇ ಪರಿಸ್ಥಿತಿ ಮುಂದುವರಿಯಲಿದೆಯೇ ಎಂಬ ಚರ್ಚೆ ಶುರುವಾಗಿದೆ. ಅಮೆರಿಕ, ಸ್ಪೇನ್, ಇಟಲಿ, ಫ್ರಾನ್ಸ್, ರಷ್ಯಾ ಸೇರಿದಂತೆ ಮುಂದುವರಿದ ರಾಷ್ಟ್ರಗಳು ಕೊರೊನಾ ಹತೋಟಿಗೆ ತರಲು ಲಾಕ್‍ಡೌನ್‍ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಮುಂಬರುವ ಮೇ ಅಂತ್ಯದವರೆಗೆ ಯಾವುದೇ ರೀತಿಯಲ್ಲೂ ಸೋಂಕು ಹರಡದಂತೆ ಮುನ್ನೆಚ್ಚರಿಕೆ …

Read More »