ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷವು, ‘ಬಿಜೆಪಿಯ ಉನ್ನತ ನಾಯಕತ್ವದ ವಿರುದ್ಧ ಯೋಗಿ ಆದಿತ್ಯನಾಥ್ ದಂಗೆ ಎದ್ದಂತಿದೆ’ ಎಂದು ಹೇಳಿದೆ. ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ‘ಉಚಿತ ಕೊಡುಗೆಗಳನ್ನು ನೀಡುವ ಸಂಸ್ಕೃತಿ ದೇಶದ ಅಭಿವೃದ್ಧಿಗೆ ಅಪಾಯಕಾರಿ’ ಎಂದು ಹೇಳಿದ್ದರು. …
Read More »17 ವರ್ಷ ಮೇಲ್ಪಟ್ಟವರೂ Voter IDಗೆ ಅರ್ಜಿ ಸಲ್ಲಿಸಬಹುದು – ಚುನಾವಣಾ ಆಯೋಗ
ನವದೆಹಲಿ: ಇನ್ಮುಂದೆ 17 ವರ್ಷ ಮೇಲ್ಪಟ್ಟ ಯುವ ಜನರೂ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಮುಂಚಿತವಾಗಿಯೇ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದು ಎಂದು ಭಾರತದ ಚುನಾವಣಾ ಆಯೋಗ ಹೇಳಿದೆ. ದೇಶದ ಕಾನೂನಿನ ಪ್ರಕಾರ ಪ್ರತಿಯೊಬ್ಬ ಪ್ರಜೆಗೂ 18 ವರ್ಷ ತುಂಬಿದ ಬಳಿಕ ಮತದಾನದ ಹಕ್ಕು ನೀಡಲಾಗಿದೆ. ಆದರೆ ಈಗ 17 ವರ್ಷದವರು ಕೂಡ ತಮ್ಮ ಹೆಸರನ್ನು ನೋಂದಾಯಿಸಲು ಮತದಾನದ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಯುವ ಜನರು …
Read More »ನವದೆಹಲಿ: ಭ್ರಷ್ಟ ಸಚಿವರಿಗೆ ಕೇಜ್ರಿವಾಲ್ ಬೆಂಬಲ ನೀಡುತ್ತಿದ್ದಾರೆ ಎಂದ ಅನುರಾಗ್ ಠಾಕೂರ್
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಭ್ರಷ್ಟ ಸಚಿವರನ್ನು ಪೋಷಿಸುತ್ತಿದ್ದಾರೆ ಎಂದು ಆರೋಪಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಕೇಜ್ರಿವಾಲ್ ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ಹಕ್ಕಿಲ್ಲ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಅವರ ಭ್ರಷ್ಟ ಸಚಿವರು ಕೂಡ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದರು. ಕೇಜ್ರಿವಾಲ್ ಸರ್ಕಾರವು ಮದ್ಯ ಮಾಫಿಯಾಕ್ಕೆ ಲಾಭಗಳನ್ನು ನೀಡುತ್ತಿದೆ ಎಂದು ಆರೋಪಿಸಿದ ಅನುರಾಗ್ ಠಾಕೂರ್, ಈ ಪ್ರಕರಣದಲ್ಲಿ ಬಿಜೆಪಿ …
Read More »ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣವಚನ ಸ್ವೀಕಾರ
ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರು ಸೋಮವಾರ (ಜುಲೈ 25) ಪ್ರಮಾಣವಚನ ಸ್ವೀಕರಿಸಿದರು. ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ .ವಿ.ರಮಣ ಅವರು ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯ ಗಾಂಧಿ ಹಾಜರಿದ್ದರು. 21 …
Read More »ಇ.ಡಿ. ತೆಕ್ಕೆಯಲ್ಲಿ ಅತ್ತೆ: ರಾಜಕೀಯಕ್ಕೆ ಅಳಿಯನ ಎಂಟ್ರಿ? ಸೋನಿಯಾ ಕುಟುಂಬದಿಂದ ಬಂತೊಂದು ಸುದ್ದಿ.
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಇದಾಗಲೇ ವಿಚಾರಣೆಗೆ ಒಳಪಡಿಸಿದೆ. ರಾಹುಲ್ ಗಾಂಧಿ ಇದಾಗಲೇ ಕೆಲವು ಬಾರಿ ವಿಚಾರಣೆ ಎದುರಿಸುದ್ದರೆ, ಸೋನಿಯಾ ಅವರನ್ನು ನಿನ್ನೆ (ಗುರುವಾರ) ವಿಚಾರಣೆ ಮಾಡಲಾಗಿದೆ. ತಮ್ಮ ಅತ್ತೆಯನ್ನು ಇ.ಡಿ. ವಿಚಾರಣೆಗೆ ಒಳಪಡಿಸಿರುವುದಕ್ಕೆ ಕಿಡಿ ಕಾರಿರುವ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅಗತ್ಯ ಉಂಟಾದರೆ …
Read More »ಆಹಾರ ಧಾನ್ಯಕ್ಕೆ GST ಇಲ್ಲ: ದೇಶಾದ್ಯಂತ ಭಾರಿ ವಿರೋಧದ ಬೆನ್ನಲ್ಲೇ ಕೇಂದ್ರದ ಸ್ಪಷ್ಟನೆ
ನವದೆಹಲಿ: ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ ಲಸ್ಸಿ ಧಾನ್ಯಗಳು, ಅಕ್ಕಿ, ಅವಲಕ್ಕಿ, ಮಂಡಕ್ಕಿ ಮೇಲೆ ಶೇಕಡ 5 ರಷ್ಟು ಜಿಎಸ್‌ಟಿ ವಿಧಿಸಿರುವುದಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ದೇಶಾದ್ಯಂತ ಜನಾಕ್ರೋಶ ವ್ಯಕ್ತವಾಗುತ್ತಲೇ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. 25 ಕೆಜಿಗಿಂತ ಕೆಳಗಿನ ಪ್ಯಾಕ್ ಗಳಿಗೆ ಮಾತ್ರ ಜಿಎಸ್‌ಟಿ ವಿಧಿಸಲಾಗುತ್ತದೆ. 25 ಕೆಜಿ ಮೇಲ್ಪಟ್ಟ ಧಾನ್ಯ ವಸ್ತುಗಳಿಗೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಪ್ಯಾಕ್ ಮಾಡಿದ ಆಹಾರ ಧಾನ್ಯಗಳು, 25 …
Read More »ಸರ್ವಪಕ್ಷ ಸಭೆಗೆ ಪ್ರಧಾನಿ ಗೈರು : ಜೈರಾಮ್ ರಮೇಶ್ ಗೆ ಸಚಿವ ಜೋಶಿ ತಿರುಗೇಟು
ನವದೆಹಲಿ: ಸರ್ವಪಕ್ಷ ಸಭೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆದಿದ್ದು, ಪ್ರಧಾನಿ ಯಾಕೆ ಸಭೆಗೆ ಹಾಜರಾಗಿಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಿರುಗೇಟು ನೀಡಿದ್ದು,ಇಂದು ಸಭೆಗೆ ಪ್ರಧಾನಿ ಹಾಜರಾಗಿಲ್ಲ ಎಂದು ಕಾಂಗ್ರೆಸ್‌ನ ಜೈರಾಮ್ ರಮೇಶ್ ವಿಷಯ ಪ್ರಸ್ತಾಪಿಸಿದ್ದಾರೆ. 2014ಕ್ಕಿಂತ ಮೊದಲು ಪ್ರಧಾನಿ ಸರ್ವಪಕ್ಷ ಸಭೆಗೆ ಹಾಜರಾಗುತ್ತಿರಲಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಮನಮೋಹನ್ …
Read More »ಜೂನ್ 9ರ ವರೆಗೆ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ED ಕಸ್ಟಡಿಗೆ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಅರೆಸ್ಟ್ ಆಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ನನ್ನು ಜಾರಿ ನಿರ್ದೇಶನಾಲಯವು ಜೂನ್ 9ರ ವರೆಗೆ ಕಸ್ಟಡಿಗೆ ಪಡೆದುಕೊಂಡಿದೆ. ಜೈನ್ ಅವರನ್ನು ರೋಸ್ ರೆವೆನ್ಯೂ ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಗಿತ್ತು. ಜೈನ್ ಪರವಾಗಿ ಹಿರಿಯ ವಕೀಲ ಎನ್.ಹರಿಹರನ್ ಅವರು ವಾದ ಮಂಡಿಸಿದರು. ಕೇಂದ್ರೀಯ ಸಂಸ್ಥೆಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಹಿನ್ನೆಲೆ ಏನು?: ಏಪ್ರಿಲ್ ತಿಂಗಳಲ್ಲಿ ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ …
Read More »ದುಬಾರಿಯಾಗಲಿವೆ ಎಲ್ಲಾ ಮೊಬೈಲ್ ರೀಚಾರ್ಜ್ ಪ್ಲಾನ್‌ಗಳು
ನವದೆಹಲಿ, ಮೇ 24: ಕಳೆದ ವರ್ಷವಷ್ಟೇ ಶೇ. 25ರವರೆಗೂ ರೀಚಾರ್ಜ್ ಪ್ಲಾನ್ ದರಗಳನ್ನು ಏರಿಸಿದ್ದ ಟೆಲಿಕಾಂ ಆಪರೇಟರ್‌ಗಳು ಈಗ ಒಂದೇ ವರ್ಷದ ಅಂತರದಲ್ಲಿ ಮತ್ತೊಮ್ಮೆ ಭಾರೀ ಏರಿಕೆಗೆ ಮುಂದಾಗುತ್ತಿವೆ. ಮುಂದಿನ ದಿನಗಳಲ್ಲಿ ಮೊಬೈಲ್ ರೀಚಾರ್ಜ್ ಪ್ಲಾನ್‌ಗಳು ಶೇ. 10-12ರಷ್ಟು ದುಬಾರಿಯಾಗಲಿವೆ. ನವೆಂಬರ್‌ನಲ್ಲಿ ಬರಲಿರುವ ದೀಪಾವಳಿ ಹಬ್ಬದಷ್ಟರಲ್ಲಿ ತಮ್ಮ ಪ್ರೀಪೇಯ್ಡ್ ದರಗಳನ್ನು ಏರಿಸಲು ಭಾರ್ತಿ ಏರ್ಟೆಲ್, ರಿಲಾಯನ್ಸ್ ಜಿಯೋ ಮತ್ತು ವೊಡಫೋನ್ ಐಡಿಯಾ ಸಂಸ್ಥೆಗಳು ನಿರ್ಧರಿಸಿವೆ. 2021ರ ನವೆಂಬರ್ ತಿಂಗಳಲ್ಲೇ ಈ …
Read More »ಮಳೆ ಬಂದಾಗ ಈ ಸಮಸ್ಯೆ ಆಗಿದೆ. ಈ ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ.
ಬೆಂಗಳೂರು: ವಾರ್ಡ್ ನಂ.160 ರಾಜರಾಜೇಶ್ವರಿ ನಗರದಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ಬೆಂಗಳೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ನಡುವೆ ರಾಜಕಾಲುವೆಗಳ ಒತ್ತುವರಿ ಮಾಡಿಕೊಂಡಿರುವುದರಿಂದಾಗಿ ಮಳೆ ಬಂದಾಗ ಈ ಸಮಸ್ಯೆ ಆಗಿದೆ. ಈ ಸಮಸ್ಯೆ ಬಗೆಹರಿಸದಿದ್ರೇ ಮತ್ತೆ ನಾನು ಚುನಾವಣೆಗೆ ನಿಲ್ಲಲ್ಲ. ನಾನು ನನ್ನ ಮತದಾರರಿಗೆ ಭರವಸೆ ಕೊಡ್ತೀನಿ ಎಂದು ಸಚಿವ ಮುನಿರತ್ನ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮಳೆ ಜಾಸ್ತಿಯಾದಾಗ ತಗ್ಗು ಪ್ರದೇಶಗಳಿಗೆ ನೀರು ಬರುತ್ತೆ. …
Read More »
Laxmi News 24×7