ಭಾರತದ ಮಹಿಳೆಯರು ಕ್ರೀಡಾ ಲೋಕದಲ್ಲೂ ಸಾಕಷ್ಟು ಸಾಧನೆ ಮಾಡಿದ್ದಾರೆ. ಭಾರತೀಯ ಮಹಿಳಾ ಆಟಗಾರ್ತಿಯರು ವಿವಿಧ ಕ್ರೀಡೆಗಳಲ್ಲಿ ದೇಶಕ್ಕೆ ಪ್ರಶಸ್ತಿಗಳನ್ನು ತಂದಿದ್ದಾರೆ. ಅದು ಬಾಕ್ಸಿಂಗ್ ಅಥವಾ ವೇಟ್ ಲಿಫ್ಟಿಂಗ್ ಅಥವಾ ಅಥ್ಲೆಟಿಕ್ಸ್ ಆಗಿರಲಿ. ಭಾರತದ ಮಹಿಳೆಯರು ಪ್ರತಿ ಪಂದ್ಯದಲ್ಲೂ ಮುಂದಿದ್ದಾರೆ. ಇದಕ್ಕಾಗಿ ಬಹುಮಾನವನ್ನೂ ಪಡೆದಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದರ ಫಲವಾಗಿ ಹಲವಾರು ಮಹಿಳಾ ಆಟಗಾರ್ತಿಯರಿಗೆ ಭದ್ರತಾ ಪಡೆ ಸೇರುವ ಅವಕಾಶ ಸಿಕ್ಕಿತು. ಭದ್ರತಾ ಪಡೆಗೆ ಸೇರ್ಪಡೆಯಾದ ಅಂತಹ ಕೆಲವು ಭಾರತೀಯ …
Read More »ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ
ನವದೆಹಲಿ : ದೇಶಾದ್ಯಂತ ಇಂದು 73ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮ ಮನೆಮಾಡಿದೆ. 1949ರ ನವೆಂಬರ್ 26ರಂದು ರಚಿಸಲಾದ ದೇಶದ ಸಂವಿಧಾನವನ್ನು 1950ರ ಜನವರಿ 26ರಂದು ಅಂಗೀಕರಿಸಲಾಯಿತು. ಈ ದಿನವನ್ನು ದೇಶದ ಗಣರಾಜ್ಯೋತ್ಸವ ಎಂದು ಆಚರಿಸಲಾಗುತ್ತದೆ. ಭಾರತದ ಗಣರಾಜ್ಯೋತ್ಸವವು ಕೇವಲ ಆಚರಣೆಯಾಗಿರದೆ, ಅದು ದೇಶದ ರಾಜತಾಂತ್ರಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ಈ ಬಾರಿ ಮಹಾಮಾರಿ ಕೊರೊನಾ ನಡುವೆಯೂ ಗಣತಂತ್ರ ದಿನದ ಆಚರಣೆಗೆ ಇಡೀ ದೇಶ ಸನ್ನದ್ಧವಾಗಿದೆ. ಈ ದಿನದ ಇಂದು ಭಾರತೀಯ ಸೇನಾ ಪಡೆಗಳು ಮತ್ತು …
Read More »ಪ್ರಧಾನಿ ಮೋದಿ ಭದ್ರತಾ ಲೋಪ; ಸೋಮವಾರ ‘ಸುಪ್ರೀಂ’ ಆದೇಶ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್ ಸೋಮವಾರ ಸಂಪೂರ್ಣ ಮಾಹಿತಿ ಆಧರಿಸಿ ಆದೇಶ ನೀಡುವುದಾಗಿ ತಿಳಿಸಿ ತೀರ್ಪನ್ನ ಕಾಯ್ದಿರಿಸಿದೆ. ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಹೈಕೋರ್ಟ್ ರಿಜಿಸ್ಟರ್ ಜನರಲ್ ನೇಮಿಸಿ ಆದೇಶ ಹೊರಡಿಸಿದೆ. ಸದ್ಯಕ್ಕೆ ಯಾವುದೇ ಕ್ರಮ ಬೇಡ ರಿಜಿಸ್ಟರ್ ಜನರಲ್ ಆಫ್ ಪಂಜಾಬ್ & ಹರಿಯಾಣ ಹೈಕೋರ್ಟ್ ನೇಮಕ ಮಾಡಿ ಆದೇಶ ಹೊರಡಿಸಿದೆ. ಇವರಿಗೆ …
Read More »ಭಾರತದಲ್ಲಿ ಒಂದೇ ದಿನ 13,154 ಮಂದಿಗೆ ಕೊರೊನಾವೈರಸ್!
ನವದೆಹಲಿ, ಡಿಸೆಂಬರ್ 30: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದೊಂದು ತಿಂಗಳಿನಲ್ಲೇ ಮೊದಲ ಬಾರಿಗೆ ಒಂದೇ ದಿನದಲ್ಲಿ 10,000ಕ್ಕೂ ಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಇದರ ಮಧ್ಯೆ ಓಮಿಕ್ರಾನ್ ರೂಪಾಂತರ ಸೋಂಕಿತರ ಸಂಖ್ಯೆಯು 961ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 13,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಒಂದೇ ದಿನದಲ್ಲಿ 268 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ …
Read More »11 ತಿಂಗಳಲ್ಲಿ ರಸ್ತೆ ಅಪಘಾತಕ್ಕೆ 198 ಮಂದಿ ಸಾವು, 461 ಮಂದಿಗೆ ಗಾಯ
ಹಾವೇರಿ: ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ನವೆಂಬರ್ ತಿಂಗಳವರೆಗೆ ರಸ್ತೆ ಅಪಘಾತದಲ್ಲಿ 198 ಜನ ಅಸುನೀಗಿದ್ದಾರೆ. 461 ಮಂದಿ ಗಂಭೀರವಾಗಿ ಗಾಯಗೊಂಡರೆ, 677 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ. ರಸ್ತೆ ಅಪಘಾತಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ 7 ಅಪಘಾತ ವಲಯಗಳನ್ನು ಗುರುತಿಸಿದೆ. ಅದರಲ್ಲಿ 3 ಅಪಘಾತ ವಲಯಗಳು ಸಿಎಂ …
Read More »ಸಾರಿಗೆ ಸಂಸ್ಥೆ ಸುಧಾರಿಸಿ ಆದಾಯ ಹೆಚ್ಚಳಕ್ಕೆ ತೀರ್ಮಾನ: ಬಿ. ಶ್ರೀರಾಮುಲು
ಬೆಳಗಾವಿ: ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಸುಧಾರಿಸಿ ಆದಾಯ ಹೆಚ್ಚಿಸಲು ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ವಿಧಾನಸಭೆಯಲ್ಲಿ ಬುಧವಾರ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ೪ ವರ್ಷಗಳಿಂದ ಸಾರಿಗೆ ಪ್ರಯಾಣ ದರ ಏರಿಕೆ ಮಾಡಿಲ್ಲ. ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಇದನ್ನು ಸುಧಾರಿಸಲು ನಿವೃತ್ತ ಐ.ಎ.ಎಸ್. ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿಯನ್ನು ಮುಖ್ಯಮಂತ್ರಿಗಳು ರಚಿಸಿದ್ದಾರೆ ಎಂದರು. ಈ …
Read More »ಡಿಕೆಶಿ ಬಗ್ಗೆ ಮುಂದಿನ ದಿನಗಳಲ್ಲಿ ನಾನು ದೊಡ್ಡ ಬಾಂಬ್ ಸಿಡಿಸಬಹುದು,
ಬೆಳಗಾವಿ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ (MLA ramesh jarkiholi) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ …
Read More »ಸಂಪುಟದ ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರ ಸೇರ್ಪಡೆ: ಯತ್ನಾಳ ಹೇಳಿಕೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿನ ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹೊಸಬರನ್ನು ತೆಗೆದುಕೊಳ್ಳಲಾಗುವುದು ಎಂಬುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆ ಪಕ್ಷದಲ್ಲಿ ಚರ್ಚೆಗೆ ಕಾರಣವಾಗಿದೆ. ಡಿಸೆಂಬರ್ 10 ರ ಬಳಿಕ ಸಂಪುಟ ಪುನರ್‌ರಚನೆ ಆಗಲಿದೆ ಎಂದು ಯತ್ನಾಳ ಗುರುವಾರ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಹೇಳಿದ್ದರು. ಆದರೆ, ಬಿಜೆಪಿಯಲ್ಲಿನ ಉನ್ನತ ಮೂಲಗಳ ಪ್ರಕಾರ, ತಕ್ಷಣಕ್ಕೆ ಯಾವುದೇ ಬದಲಾವಣೆಗಳು ಇಲ್ಲ. ಜನವರಿ ಬಳಿಕ ಕೆಲವರನ್ನು ಕೈಬಿಟ್ಟು …
Read More »ಒಮಿಕ್ರಾನ್ಗೆ ಇಂದು ತಜ್ಞರ ಜೊತೆಗೂಡಿ CM ಮಂತ್ರ; ರಾಜ್ಯದಲ್ಲಿ ಜಾರಿಯಾಗುತ್ತಾ ಟಫ್ ರೂಲ್ಸ್..?
ನವದೆಹಲಿ: ಆ ವೈರಿ ವೈರಸ್ ಭಾರತಕ್ಕೆ ಬರುತ್ತಾ? ಬರಬಹುದಾ? ಒಂದು ವೇಳೆ ಬಂದ್ರೆ ಮುಂದೇನು? ಅಂತಾ ಕಾಡಿದ್ದ ಪ್ರಶ್ನೆಗಳ ಗೊಂದಲಿಗೆ ಒಂದು ಉತ್ತರವಂತೂ ಸಿಕ್ಕಿದೆ. ಇಡೀ ಭಾರತದಲ್ಲೇ ಮೊದಲ ಬಾರಿಗೆ ಒಮಿಕ್ರಾನ್ ಕಾಣಿಸಿಕೊಂಡಿದೆ. ಬೆಂಗಳೂರಿನ ಏರ್ಪೋರ್ಟ್ ಗೇಟ್ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟ, ಒಮಿಕ್ರಾನ್ ಓಡಿಸಲು ಸಿಎಂ ಬೊಮ್ಮಾಯಿ ಇಂದು ಮಹತ್ವದ ಮೀಟಿಂಗ್ ಫಿಕ್ಸ್ ಮಾಡಿದ್ದಾರೆ. ಇಬ್ಬರು ವ್ಯಕ್ತಿಗಳಲ್ಲಿ ರಹಸ್ಯವಾಗಿ ಅಡಗಿ ಕೂತು ಸೌತ್ ಆಫ್ರಿಕಾದಿಂದ ಸದ್ದಿಲ್ಲದೇ ವಿಮಾನದ ಮೂಲಕ …
Read More »ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ 4 ಸಾವಿರಕ್ಕೂ ಅಧಿಕ ಮತಗಳಿವೆ. ಅವುಗಳನ್ನು ಹಿಡಿದಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಇದರ ನಡುವೆ ಹೊಸ ಹೊಸ ಬಸ್ಗಳಲ್ಲಿ ಚಮಕ್ ಚಮಕ್ ಲೈಟು ಹಚ್ಚಿಕೊಂಡು ಬರುತ್ತಿದ್ದಾರೆ. ಹೊಸ ಬಸ್ಗಳು ಜಾತ್ರೆ ಮಾಡಿಕೊಂಡು ಹೋಗುತ್ತಾರೆ, ಹಳೆ ಬಸ್ಗಳೇ ರೆಗ್ಯುಲರಾಗಿ ಇರುತ್ತವೆ. ಇದರಿಂದ ಮತದಾರಿಗೆ ತಿಳುವಳಿಕೆ ನೀಡಲು ಎರಡನೇ ಬಾರಿ ಅಥಣಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ …
Read More »