Breaking News

ನವದೆಹಲಿ

ಕೇಂದ್ರದಿಂದ ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ : ಕೇಂದ್ರ ಹಣಕಾಸು ಸಚಿವಾಲಯದಿಂದ 136 ಕೋಟಿ ರೂ. ಬಿಡುಗಡೆ

ನವದೆಹಲಿ : ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೇಂದ್ರ ಹಣಕಾಸು ಸಚಿವಾಲಯ 6ನೇ ಕಂತಿನಲ್ಲಿ 135.92 ಕೋಟಿ ರೂ. ಅನುದಾನವನ್ನು ರಾಜ್ಯಕ್ಕೆ ನೀಡಿದೆ.   ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಒಟ್ಟು 9,871 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಸಂವಿಧಾನದ 27 ನೇ ವಿಧಿಯ ಅನುಸಾರ 15 ನೇ ಹಣಕಾಸು ಆಯೋಗದ ಶಿಫಾರಸಿನಂತೆ 2021-22 ನೇ ಸಾಲಿನ ಆರನೇ ಕಂತಿನ ಪಿಆರ್ ಡಿಪಿ ಅನುದಾನವನ್ನು …

Read More »

ಮೈಸೂರಲ್ಲಿ ಗ್ಯಾಂಗ್​ ರೇಪ್​: ನಮ್ಮಲ್ಲೊಬ್ಬನಿಗೆ ಲೈಂಗಿಕ ಚಟವಿತ್ತು. ಬೆಚ್ಚಿಬೀಳಿಸುತ್ತೆ ಆರೋಪಿಗಳ ಮಾತು

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು ಎರಡು ವರ್ಷದಿಂದಲೂ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವ ಜೋಡಿಗಳನ್ನು ಪೀಡಿಸಿದ್ದು ಮಾತ್ರವಲ್ಲ, ಅವರ ಬಳಿ ಸಿಕ್ಕಿದ್ದನ್ನೆಲ್ಲ ದೋಚುತ್ತಿದ್ದಾರೆ. ಬಂಧಿತ ಐವರು ಆರೋಪಿಗಳಲ್ಲಿ ಒಬ್ಬನಿಗೆ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಚಟವಿತ್ತು. ಒಬ್ಬ ಮಹಿಳೆಯರ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರೆ, ಇನ್ನುಳಿದವರು ಚಿನ್ನಾಭರಣ ಮತ್ತು ಹಣಕ್ಕೆ ಆಸೆ ಬೀಳುತ್ತಿದ್ದರು ಎಂಬ ಅಂಶ ತನಿಖೆಯಲ್ಲಿ ಬಯಲಾಗಿದೆ. ಕೃತ್ಯ ಎಸಗಿರುವುದಾಗಿ ಆರೋಪಿಗಳೆಲ್ಲರೂ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ. ವಯಸ್ಸಿನ ವ್ಯತ್ಯಾಸವನ್ನೇ …

Read More »

ರೈತ ಹೋರಾಟಕ್ಕೆ 9 ತಿಂಗಳು; ಸಿಂಘು ಗಡಿಯಲ್ಲಿ ಎರಡು ದಿನಗಳ ರೈತ ಸಮಾವೇಶ

ನವದೆಹಲಿ: ಕೇಂದ್ರ ಸರ್ಕಾರದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಸಿಂಘು ಗಡಿ ಭಾಗದಲ್ಲಿ ರೈತರು ಹೋರಾಟ ಆರಂಭಿಸಿ ಒಂಬತ್ತು ತಿಂಗಳು ಪೂರ್ಣಗೊಂಡಿದ್ದು, ಇದರ ಅಂಗವಾಗಿ ವಿವಿಧ ರೈತ ಸಂಘಟನೆಗಳು ಪ್ರತಿಭಟನಾ ಸ್ಥಳದಲ್ಲೇ ಗುರುವಾರದಿಂದ ಎರಡು ದಿನಗಳ ಕಾಲ ‘ರಾಷ್ಟ್ರೀಯ ಸಮಾವೇಶ’ವನ್ನು ಹಮ್ಮಿಕೊಂಡಿವೆ. ಈ ಸಮಾವೇಶದಲ್ಲಿ ಮಹಿಳೆ, ರೈತರು, ಯುವ ಹಾಗೂ ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ 1500 ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ …

Read More »

ಸೆಪ್ಟೆಂಬರ್‌ನಲ್ಲಿ ದಿನವೂ 5 ಲಕ್ಷ ಜನರಿಗೆ ಲಸಿಕೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಹೇಳಿದರು. ರಾಜಭವನದಲ್ಲಿ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಹಾಗೂ ಗೀವ್‌ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವ್ಯಾಕ್ಸಿನೇಟ್‌ ಇಂಡಿಯಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಪ್ರತಿ ದಿನ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕೇಂದ್ರ …

Read More »

ಜಾತಿ ಆಧಾರಿತ ಜನಗಣತಿ ಮಾಡಲೇಬೇಕು: ನಿತೀಶ್ ಕುಮಾರ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಳೆ ದೆಹಲಿಗೆ ಭೇಟಿ ನೀಡಲಿದ್ದು ಜಾತಿ ಆಧಾರಿತ ಜನಗಣತಿಗೆ ಒತ್ತಾಯಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಅವರು 10 ಸದಸ್ಯರ ನಿಯೋಗವನ್ನು ಮುನ್ನಡೆಸಲಿದ್ದಾರೆ. ಇದರಲ್ಲಿ ಬಿಜೆಪಿ ಸೇರಿದೆ, ಈ ಹಿಂದೆ ಬಿಜೆಪಿ ಜನಗಣತಿಯಲ್ಲಿ ಆಸಕ್ತಿ ಹೊಂದಿರಲಿಲ್ಲ. ಕೆಲವರು ಈಗಾಗಲೇ ದೆಹಲಿಯನ್ನು ತಲುಪಿದ್ದಾರೆ ಮತ್ತು ಕೆಲವರು ನನ್ನೊಂದಿಗೆ ಹೋಗುತ್ತಾರೆ. ನಾಳೆ ನಾವು 11 ಗಂಟೆಗೆ ಭೇಟಿಯಾಗುತ್ತೇವೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. ಪ್ರತಿಯೊಬ್ಬರ …

Read More »

ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಚಾಲನೆ

ಬೆಂಗಳೂರು : ಬಿಬಿಎಂಪಿ ಹಮ್ಮಿಕೊಂಡಿರುವ ‘ಪಾಲಿಕೆ ವೈದ್ಯರು ನಿಮ್ಮ ಮನೆಯ ಬಾಗಿಲಿಗೆ’ ಅಭಿಯಾನಕ್ಕೆ ಗೋವಿಂದರಾಜ ನಗರದ ಕಾವೇರಿಪುರ ವಾರ್ಡ್‍ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಶ್ರೀ ವಿ ಸೋಮಣ್ಣ ಅವರು, ಈ ಕಾರ್ಯಕ್ರಮದಡಿಯಲ್ಲಿ ವೈದ್ಯರು ಪ್ರತಿ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಮಾಹಿತಿ ಸಂಗ್ರಹಿಸಲಿದ್ದಾರೆ. ಅಲ್ಲದೇ, ಕೋವಿಡ್ ಸೋಂಕಿನ ನಿಯಂತ್ರಣದ ಬಗ್ಗೆ ಸಲಹೆ ನೀಡಲಿದ್ದಾರೆ. ಪ್ರತಿ …

Read More »

ರಾಹುಲ್ ಗಾಂಧಿ ಬಳಿಕ ಮತ್ತೆ ನಾಲ್ವರು ಕಾಂಗ್ರೆಸ್ ನಾಯಕರ ಟ್ವಿಟರ್ ಖಾತೆ ಲಾಕ್!

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಳಿಕ ಮತ್ತೆ ನಾಲ್ವರು ಕಾಂಗ್ರೆಸ್ ನಾಯಕರ ಟ್ವೀಟರ್ ಖಾತೆ ಲಾಕ್ ಮಾಡಲಾಗಿದೆ.   ರಾಹುಲ್ ಗಾಂಧಿ ಅವರ ಟ್ವಿಟರ್ ಲಾಕ್ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ನ ರಣದೀಪ್ ಸುರ್ಜೇವಾಲಾ, ಅಜಯ್ ಮಾಕೆನ್, ಸುಶ್ಮಿತಾ ದೇವ್ ಮತ್ತು ಮಾಣಿಕ್ ಕಮ್ ಠಾಗೋರ್ ಅವರ ಖಾತೆಗಳನ್ನು ‘ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದೆ’ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.   ಆಗಸ್ಟ್ 4 ರಂದು ಮಾಡಿದ ಟ್ವೀಟ್ …

Read More »

ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಿಸಲು ಮನವಿ

ನವದೆಹಲಿ : ಕೋಲಾರ ಜಿಲ್ಲೆ ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಯಲ್ಲಿ ಬಳಕೆಯಾಗದೆ ಇರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ ( ಇಂಡಸ್ಟ್ರಿಯಲ್ ಟೌನ್‍ಶಿಪ್) ಪ್ರಾರಂಭಿಸಲು ಅನುಮತಿ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಮನವಿ …

Read More »

ಬಿಜೆಪಿ ಸರ್ಕಾರ ಇನ್ನೂ ಭದ್ರವಾಗಿಲ್ಲ ದ್ವೇಷದ ರಾಜಕಾರಣ ಮಾಡುತ್ತಿದೆ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಕಿಡಿಕಾರಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಳು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಾವುದೇ ಹೊಸ ಯೋಜನೆ ಮಾಡಿಲ್ಲ. ಅವರ ಸಾಧನೆ ಶೂನ್ಯವಾಗಿದೆ. ನಮ್ಮ ಸರ್ಕಾರವಿದ್ದಾಗಿನ ಯೋಜನೆಗಳ ಹೆಸರು ಹಾಗೂ ಪ್ಲೇಟ್ ಬದಲಾವಣೆ ಮಾಡುವ ಮೂಲಕ ಅದು ನನ್ನ ಸಾಧನೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. …

Read More »

ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನ ಪರಿಗಣನೆಯ ಹಂತದಲ್ಲಿದೆ: ಸಂಸ್ಕೃತಿ ಖಾತೆ ಸಚಿವ

ನವದೆಹಲಿ: ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾವ ಪರಿಗಣನೆಯಲ್ಲಿದೆ ಎಂದು ಸಂಸ್ಕೃತಿ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್‌ಮೇಘ್ವಾಲ್‌ ಲೋಕಸಭೆಗೆ ತಿಳಿಸಿದರು. ಲೋಕಸಭೆಯಲ್ಲಿ ಸೋಮವಾರ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿಯವರ ಪೂರಕ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಾಠಿ ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡುವ ಕುರಿತು ಚರ್ಚಿಸಲು 8 ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು. ‘ಇಲ್ಲಿಯವರೆಗೆ ತಮಿಳು, ತೆಲುಗು, ಸಂಸ್ಕೃತ, ಕನ್ನಡ, ಮಲಯಾಳ ಮತ್ತು ಒಡಿಯಾ ಭಾಷೆಗಳಿಗೆ …

Read More »