ಬಳ್ಳಾರಿ: ಬಳ್ಳಾರಿ ವಿಭಾಗದ ಅರಣ್ಯ ಅಧಿಕಾರಿಯೊಬ್ಬರು ರಾಜ್ಯ ಅರಣ್ಯ ಇಲಾಖೆಗೆ ಮುಜುಗರ ಉಂಟು ಮಾಡುವಂತೆ ಮಾಡಿದ್ದು, ತಾನು ಬಳ್ಳಾರಿ ಸಂಚಾರಿ ಪೋಲೀಸರಂತೆ ಪೋಸು ಕೊಟ್ಟು, ವಾಹನ ಸವಾರರಿಂದ ಹಣ ವಸೂಲಿ ಮಾಡಿದ್ದಕ್ಕೆ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್ ಅಧಿಕಾರಿಯ ಬಗ್ಗೆ ಅನುಮಾನಗೊಂಡ ಸಾರ್ವಜನಿಕರು, ಆರೋಪಿ ಉಪ ವಲಯ ಅರಣ್ಯಾಧಿಕಾರಿಯನ್ನು ಹಿಡಿದ ಥಳಿಸಿದ ಘಟನೆ ಸೋಮವಾರ ಬಳ್ಳಾರಿ ನಗರದಲ್ಲಿ ವರದಿಯಾಗಿದೆ. ಆರೋಪಿ ಅಧಿಕಾರಿ ಭಾನುವಾರ ‘ಡ್ಯೂಟಿ’ಯಲ್ಲಿದ್ದು, ಹಲವು ವಾಹನ …
Read More »ವಿಮ್ಸ್ ಆಸ್ಪತ್ರೆ ದುರಂತ: ಮೃತ ಮೂವರು ರೋಗಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬಳ್ಳಾರಿ/ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸಾವನ್ನಪ್ಪಿರುವ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸರ್ಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಕೆ.ಆರ್.ವೃತ್ತದ ಯುವಿಸಿಇಯಲ್ಲಿ ಆಯೋಜಿಸಿದ್ದ ವಿಶ್ವೇಶ್ವರಯ್ಯ ಇಂಜಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಲೋಕಾರ್ಪಣೆ ಹಾಗೂ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನೋತ್ಸವದ ನಿಮಿತ್ತ ನಡೆದ ಅಭಿಯಂತರರ ದಿನಾಚರಣೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. …
Read More »ಸಣ್ಣ ಖರ್ಗೆಯವರೇ, ನಾಲಿಗೆ ಮೇಲೆ ಹಿಡಿತವಿರಲಿ: ಸಚಿವ ಶ್ರೀರಾಮುಲು ಎಚ್ಚರಿಕೆ
ಬಳ್ಳಾರಿ: ಮಹಿಳೆಯರ ಬಗ್ಗೆ ಮಾತನಾಡುವಾಗ ಸಣ್ಣ ಖರ್ಗೆಯವರಿಗೆ ನಾಲಿಗೆ ಮೇಲೆ ಹಿಡಿತವಿರಲಿ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಎಚ್ಚರಿಸಿದರು. ನಗರದ ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿ ಹರ್ ಘರ್ ತ್ರಿವರ್ಣಾ ನಿಮಿತ್ತ 150 ಅಡಿ ಎತ್ತರದ ಧ್ವಜಸ್ತಂಭಕ್ಕೆ ಧ್ವಜಾರೋಹ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ತಂದೆ ಮಲ್ಲಿಕಾರ್ಜುನ ಖರ್ಗೆಯವರಂತೆ ಸಣ್ಣ ಖರ್ಗೆ ಪ್ರಿಯಾಂಕ್ ಖರ್ಗೆಯವರು ಸಹ ಸಂಸ್ಕಾರವಂತರು ಅಂದುಕೊಂಡು ಸದನದಲ್ಲಿ ಮಾತನಾಡುವಾಗ ಸಣ್ಣ ಖರ್ಗೆ ಎಂದು ಉಲ್ಲೇಖ ಮಾಡುತ್ತಿದ್ದೆ. …
Read More »ಬಳ್ಳಾರಿ ಪಾಲಿಕೆಯಲ್ಲಿ ಹೈಡ್ರಾಮಾ: ಕಮಿಷನರ್ಗೆ ಕನ್ನಡದಲ್ಲೇ ಮಾತಾಡಿ ಮೇಡಂ ಎಂದು ಪಾಲಿಕೆ ಸದಸ್ಯರಿಂದ ತರಾಟೆ
ಬಳ್ಳಾರಿ: ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಆಯೋಜಿಸಲಾಗಿದ್ದ ಸಭೆಯಲ್ಲಿ ತಡವಾಗಿ ಬಂದು ಕನ್ನಡ ಬಳಸದ ಪಾಲಿಕೆ ಆಯಕ್ತೆಯನ್ನು ಸದಸ್ಯರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಸಭೆಗೆ ಮೇಯರ್ ಮೊದಲು ಬಂದು ಆಯುಕ್ತರಿಗಾಗಿ ಕಾದರೂ ಅವರ ಪತ್ತೆಯೇ ಇರಲಿಲ್ಲ, ಇದರಿಂದ ಅಸಮಾಧಾನಗೊಂಡ ಸದಸ್ಯರು ತಡವಾಗಿ ಬಂದ ಪ್ರೀತಿ ಗೆಹ್ಲೋಟ್ ಅವರ ವಿರುದ್ಧ ಅಸಮಾಧಾನ ಹೊರಹಾಕಿದರು. ಇದೇ ವೇಳೆ ಕಾದು ಸುಸ್ತಾದ ಮೇಯರ್ ರಾಜೇಶ್ವರಿ ಅವರು ಕೆಲಕಾಲ ಹೊರಹೋಗಿದ್ದರು, ಈ ವೇಳೆಯೇ ಬಂದ …
Read More »ವರನಟ ಡಾ.ರಾಜ್ ಕುಮಾರ್’ ಕಂಚಿನ ಪುತ್ಥಳಿ ಕಳ್ಳತನ
ಬೆಂಗಳೂರು: ನಗರದ ಪಾರ್ಕ್ ನಲ್ಲಿ ನಿರ್ಮಿಸಿದ್ದಂತ ವರನಟ ಡಾ.ರಾಜ್ ಕುಮಾರ್ ( Dr Rajkumar ) ಅವರ ಕಂಚಿನ ಪುತ್ಥಳಿಯನ್ನೇ ( Statue ) ಕಳ್ಳರು ಕದ್ದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದಂತ ಪೊಲೀಸರು ಇಬ್ಬರು ಶಂಕಿತರನ್ನು ಕೂಡ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಗರದ ಲುಂಬಿನಿ ಗಾರ್ಡನ್ ನಲ್ಲಿದ್ದಿ ಪ್ರತಿಷ್ಠಾಪಿಸಿದ್ದಂತ ವರನಟ ನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಕಳ್ಳರು ಕದ್ದಿರೋದು ತಡವಾಗಿ …
Read More »ಡಿಕೆಶಿ ಬಗ್ಗೆ ಮುಂದಿನ ದಿನಗಳಲ್ಲಿ ನಾನು ದೊಡ್ಡ ಬಾಂಬ್ ಸಿಡಿಸಬಹುದು,
ಬೆಳಗಾವಿ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ (MLA ramesh jarkiholi) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ …
Read More »ಆರ್‌ಟಿಐ ಕಾರ್ಯಕರ್ತ ಶ್ರೀಧರ್ ಹತ್ಯೆ
ಹರಪನಹಳ್ಳಿ: ಪಟ್ಟಣದ ಆರ್‌ಟಿಐ ಕಾರ್ಯಕರ್ತ ಟಿ.ಶ್ರೀಧರ್ (38) ಅವರನ್ನು ಗುರುವಾರ ಸಂಜೆ ಮಾರಕಾಸ್ತ್ರಗಳೊಂದಿಗೆ ಬಂದ ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿ, ಪರಾರಿಯಾಗಿದೆ. ಎಡಿಬಿ ಕಾಲೇಜಿನ ಆವರಣದ ಸೈಕಲ್ ಪಾರ್ಕಿಂಗ್ ಸ್ಥಳದಲ್ಲಿ ತಾತ್ಕಾಲಿಕವಾಗಿ ತೆರೆದಿದ್ದ ಕ್ಯಾಂಟೀನ್ ಹಿಂಭಾಗದಲ್ಲಿ ಶ್ರೀಧರ್ ಕುರ್ಚಿಯ ಮೇಲೆ ಕುಳಿತಿದ್ದಾಗ ಸಂಜೆ ವೇಳೆಯಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದ ನಾಲ್ವರು ದುಷ್ಕರ್ಮಿಗಳು, ತಲೆ, ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆದು ಪರಾರಿಯಾದರು. ಕ್ಯಾಂಟೀನ್ ಒಳಗಡೆ ಟೀ ಮಾಡುತ್ತಿದ್ದವ ತಕ್ಷಣವೇ ಠಾಣೆಗೆ ಮಾಹಿತಿ ನೀಡಿದರು. …
Read More »ಮಗು ಹೆಣ್ಣಾಗಿದ್ದಕ್ಕೆ ದೇವಾಲಯದಲ್ಲೇ ಬಿಟ್ಟು ನಡೆದ ಪೋಷಕರು
ಬಳ್ಳಾರಿ: ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ. ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಶಿಶುವನ್ನು ಬಿಟ್ಟು ಹೋಗಿದ್ದಾರೆ. ನವಜಾತ ಶಿಶು ಹೆಣ್ಣು ಮಗು ಆದ ಕಾರಣ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ …
Read More »”ಜನರ ಆಕ್ರೋಶದಿಂದ ಮೋದಿ ಭಸ್ಮಾಸುರನಂತೆ ನಾಶ”: ಉಗ್ರಪ್ಪ ಕಿಡಿ
ಬಳ್ಳಾರಿ, ಜೂ.13: ಕೊರೊನಾದ ಈ ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ವಾಗ್ದಾಳಿ ನಡೆಸಿದ್ದು, ”ಜನರಿಗೆ ಇಷ್ಟೆಲ್ಲ ಅನ್ಯಾಯ ಮಾಡುವ ಪ್ರಧಾನಿ ನರೇಂದ್ರ ಮೋದಿ ಭಸ್ಮಾಸುರನಂತೆ ಸುಟ್ಟು ನಾಶವಾಗುತ್ತಾರೆ” ಎಂದು ಕಿಡಿಕಾರಿದ್ದಾರೆ. ದೇಶದಲ್ಲಿ ಕಳೆದ ಹಲವು ದಿನಗಳಿಂದ ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗುತ್ತಿದ್ದು, ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ದರ 100ರ ಗಡಿ ದಾಟಿದೆ. …
Read More »ಲಸಿಕೆ ಹಾಕಿಸಿಕೊಂಡರೆ ಪುರುಷತ್ವ ಹೋಗುತ್ತದೆ’:ಆರೋಗ್ಯ ಸಿಬ್ಬಂದಿಗಳ ಜತೆ ಗ್ರಾಮಸ್ಥರ ವಾಗ್ವಾದ
ಬಳ್ಳಾರಿ : ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು ವಾಗ್ವಾದ ಮಾಡಿರುವ ಘಟನೆ ಸಂಡೂರು ತಾಲೂಕಿನ ಹಳೆದರೋಜಿ, ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಲಸಿಕೆಯನ್ನು ಹಾಕಿಸಿಕೊಳ್ಳಿ ಎಂದ ಆರೋಗ್ಯ ಸಿಬ್ಬಂದಿಗಳೊಂದಿಗೆ ಗ್ರಾಮಸ್ಥರು, ವ್ಯಾಕ್ಸಿನ್ ಹಾಕಿಸಿಕೊಂಡರೆ ನಮ್ಮ ಪುರುಷತ್ವ ಹೋಗುತ್ತದೆ, ಜ್ವರ ಬರುತ್ತದೆ, ಕೈ ಕಾಲು ಸ್ವಾದೀನ ಕಳೆದುಕೊಳುತ್ತದೆ ಎಂದು ವಾಗ್ವಾದ ಮಾಡಿದ್ದಾರೆ. ನಮಗೆ ಏನಾದರು ಆಗಲಿ ಪರವಾಗಿಲ್ಲ. ನೀವು ನಮ್ಮನ್ನು ಬಂದು ಕರೆಯಬೇಡಿ. ನಾವು ಸತ್ತರು ನಡೆಯುತ್ತೆ …
Read More »
Laxmi News 24×7