ಬಳ್ಳಾರಿ: ಕೋವಿಡ್ ಸೋಂಕು ಮತ್ತು ಬಹು ಅಂಗಾಂಗ ವೈಫಲ್ಯದಿಂದ ಆದೋನಿ ಮೂಲದ ವ್ಯಕ್ತಿಯೊಬ್ಬರು ಸೋಮವಾರ ಬೆಳಗಿನ ಜಾವ ಮೃತಪಟ್ಟರು. ವಿಮ್ಸ್‌ಗೆ ದಾಖಲಾಗಿದ್ದ ಅವರನ್ನು, ಸೋಂಕು ದೃಢಪಟ್ಟ ಬಳಿಕ ಜೂನ್ 17 ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅನಿಯಂತ್ರಿತ ಮಧುಮೇಹ, ಸೋಂಕು ತಗುಲಿದೆ ಎಂಬ ಆಘಾತ ಹಾಗೂ ಅಂಗಾಂಗ ವೈಫ್ಯಲ್ಯಕ್ಕೆ ಒಳಗಾಗಿದ್ದ ಅವರಿಗೆ ವೆಂಟಿಲೇಟರ್ ಸೌಕರ್ಯದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು …
Read More »ಜಿಂದಾಲ್ ಕಾರ್ಖಾನೆಯಲ್ಲಿ ಕೊರೊನಾ ರಣಕೇಕೆ – ಸೋಂಕು ತಡೆಗೆ ಸಪ್ತ ಸೂತ್ರ………
ಬಳ್ಳಾರಿ: ಜಿಂದಾಲ್ ಉಕ್ಕು ಕಾರ್ಖಾನೆ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗ್ತಿದೆ. ಜಿಂದಾಲ್‍ನಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಗ್ರಾಮಗಳಲ್ಲೂ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಜಿಂದಾಲ್ ಕಾರ್ಖಾನೆ ಹೋದ್ರೆ 5,000 ರೂ. ದಂಡ ವಿಧಿಸೋದಾಗಿ ಡಂಗೂರ ಸಾರಿ ಎಚ್ಚರಿಸಲಾಗುತ್ತಿದೆ. ಆದರೆ ಜಿಂದಾಲ್ ಅಧಿಕಾರಿಗಳು ಮಾತ್ರ ಕೆಲಸಕ್ಕೆ ಬರೆದಿದ್ರೆ ಚೆನ್ನಾಗಿ ಇರಲ್ಲಾ ಎಂದು ಆವಾಜ್ ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಬುಧವಾರ ಒಂದೇ ದಿನ ಜಿಂದಾಲ್ ವ್ಯಾಪ್ತಿಯಲ್ಲೇ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. …
Read More »ಗಣಿನಾಡಿನಲ್ಲಿ ಕೋವಿಡ್-19 ಗೆದ್ದ ಕೊರೊನಾ ವಾರಿಯರ್ ಸೇರಿ ಮೂವರು ಡಿಸ್ಚಾರ್ಜ್
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಮಹಾಮಾರಿ ಕೊರೊನಾ ಸೋಂಕಿನಿಂದ ಗುಣಮುಖರಾದ ಮೂವರನ್ನು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರ ಸಮಕ್ಷಮದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದ ಆ ಮೂವರನ್ನ ಚಪ್ಪಾಳೆ ತಟ್ಟುವ ಮೂಲಕ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಆತ್ಮೀಯವಾಗಿ ಬಿಡುಗಡೆಗೊಳಿಸಿದರು. ಜಿಲ್ಲಾಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 34 ವರ್ಷದ ಪುರುಷ, ರೋಗಿ ಸಂಖ್ಯೆ-2308 ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. 44 ವರ್ಷದ, ರೋಗಿ ಸಂಖ್ಯೆ-2781 ಮಥುರಾದಿಂದ …
Read More »ಮಂಗಳಮುಖಿಯರು ಚಿತ್ರಾನ್ನ ತಯಾರಿಸಿಕೊಂಡು ಅನಾಥರು ಹಾಗೂ ನಿರ್ಗತಿಕರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಬಳ್ಳಾರಿ: ಕೊರೊನಾ ವೈರಸ್ ಎಫೆಕ್ಟ್ ನಿಂದ ಇಡೀ ದೇಶವೇ ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಗಣಿನಗರಿ ಬಳ್ಳಾರಿಯಲ್ಲಿ ಮಂಗಳಮುಖಿಯರು ಚಿತ್ರಾನ್ನ ತಯಾರಿಸಿಕೊಂಡು ಅನಾಥರು ಹಾಗೂ ನಿರ್ಗತಿಕರಿಗೆ ಹಂಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ನಾಲ್ಕನೇಯ ವಾರ್ಡಿನ ಮಾಜಿ ಸದಸ್ಯೆ ಪರ್ವೀನ್ ಬಾನು ನೇತೃತ್ವದಲ್ಲಿ ಮಂಗಳಮುಖಿಯರು ಸೇರಿ ಈ ಕೆಲಸ ಮಾಡುತ್ತಿದ್ದಾರೆ. ಪಾದಾಚಾರಿ ರಸ್ತೆ, ಬಸ್ ಹಾಗೂ ರೈಲ್ವೇ ನಿಲ್ದಾಣ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ರಾತ್ರಿ ವೇಳೆಯಲ್ಲಿ ಹಸಿವಿನಿಂದ ಮಲಗಿಕೊಂಡಿದ್ದ …
Read More »
Laxmi News 24×7