Breaking News

ಮಂಗಳೂರು

ಗ್ಯಾಸ್ ಸಿಲಿಂಡ‌ರ್ ಲೀಕ್ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ(ನ4) ರಾತ್ರಿ ನಡೆದಿದೆ. ಗ್ಯಾಸ್ ಸಿಲಿಂಡ‌ರ್ ಲೀಕ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್‌ ಸಿಲಿಂಡರ್‌ ಲೀಕ್ ಆಗಿ …

Read More »

ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಅತಿಶಿ

ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ನಿಗದಿಯಾಗಿದೆ. ಶನಿವಾರ ಸಂಜೆ 4.30ಕ್ಕೆ ಅವರು ದೆಹಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಐವರು ಆಮ್ ಆದ್ಮಿ ಶಾಸಕರು ಕೂಡ ಅತಿಶಿ ಅವರ ಜೊತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  

Read More »

ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: ಇಬ್ಬರಿಗೆ 20 ವರ್ಷ ಶಿಕ್ಷೆ ವಿಧಿಸಿ ಮಂಗಳೂರು ಕೋರ್ಟ್‌ ಆದೇಶ

ಮಂಗಳೂರು : ಅಪ್ರಾಪ್ತ ವಯಸ್ಕ ಬಾಲಕಿಯನ್ನು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪುಸಲಾಯಿಸಿ ಅಪಹರಣ ಮಾಡಿ ಅತ್ಯಾಚಾರಗೈದಿರುವ ಇಬ್ಬರು ಅಪರಾಧಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎಫ್‌ಟಿಎಸ್‌ಸಿ-2 ನ್ಯಾಯಾಲಯವು 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಕಾವಳಗದ್ದೆಯ ಸಚಿನ್ ಸಂತೋಷ್ ನಾಯ್ಕ (22) ಮತ್ತು ಹಟ್ಟಿಕೆರೆಯ ಪ್ರವೀಣ್ ಜಯಪಾಲ್ ನಾಯ್ಕ (33) ಶಿಕ್ಷೆಗೊಳಗಾದವರು. ಪ್ರಕರಣದ ವಿವರ: 2022ರ ಏಪ್ರಿಲ್​ 12ರ ಮಧ್ಯಾಹ್ನ 12.45ಕ್ಕೆ ಪಿಯುಸಿ …

Read More »

Social Media ಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌: ಮಂಗಳೂರು ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ

ಮಂಗಳೂರು: ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿರುವುದು ಕಂಡು ಬಂದಿದ್ದು ಇಂತಹ ಪೋಸ್ಟ್‌ಗಳನ್ನು ಹಾಕುವ ಅಥವಾ ಫಾರ್ವರ್ಡ್‌ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಎಚ್ಚರಿಕೆ ನೀಡಿದ್ದಾರೆ. ಜಾತಿ, ಧರ್ಮ ಮತ್ತು ಪ್ರದೇಶ ಆಧಾರಿತವಾಗಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಮತ್ತು ವೈಯಕ್ತಿಕ …

Read More »

ಕಾನೂನು ನಿಯಮದಂತೆ ಟೋಲ್‌ ತೆರವು: ನಳಿನ್‌ ಕುಮಾರ್‌ ಕಟೀಲು

ಮಂಗಳೂರು: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಎಲ್ಲರಿಗೂ ಅವಕಾಶವಿದ್ದು, ನಮ್ಮದೇನು ಅಭ್ಯಂತರವಿಲ್ಲ. ಕಾನೂನು ನಿಯಮದಡಿ ನಾವು ಟೋಲ್‌ ತೆರವು ಮಾಡುತ್ತೇವೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ. ಮಾಧ್ಯಮದವರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಸರಕಾರ ಆಡಳಿತದಲ್ಲಿದ್ದಾಗ ಟೋಲ್‌ಗೇಟ್‌ ತೆರವು ಮಾಡದವರು ಈಗ ಹೋರಾಟ ಮಾಡುತ್ತಿರುವುದು ರಾಜಕೀಯ ನಾಟಕ. ಆಸ್ಕರ್‌ ಫೆರ್ನಾಂಡಿಸ್‌ ಕೇಂದ್ರ ಸಚಿವರಾಗಿದ್ದ ವೇಳೆ ಅವರು ಏಕೆ ಮನವಿ ನೀಡಲಿಲ್ಲ ಎಂದು ಪ್ರಶ್ನಿಸಿದರು.   ತೂಗು ಸೇತುವೆಗಳ ಪರಿಶೀಲನೆ …

Read More »

ಫಾಝಿಲ್‌ ಕೊಲೆ ಪ್ರಕರಣ: ಆರೋಪಿಗಳು 14 ದಿನ ಪೊಲೀಸ್‌ ಕಸ್ಟಡಿಗೆ

ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಮಹಮ್ಮದ್‌ ಫಾಝಿಲ್‌ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳನ್ನು ನ್ಯಾಯಾಲಯವು 14 ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳಾದ ಸುಹಾಸ್‌ ಶೆಟ್ಟಿ, ಮೋಹನ್‌, ಅಭಿಷೇಕ್‌, ಶ್ರೀನಿವಾಸ್‌, ದೀಕ್ಷಿತ್‌ ಮತ್ತು ಗಿರಿಧರ್‌ನನ್ನು ನ್ಯಾಯಾಲಯವು ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಮೊದಲು ಬಂಧಿಸಲ್ಪಟ್ಟ ಕಾರು ಮಾಲಕ ಅಜಿತ್‌ ಕ್ರಾಸ್ತಾನನ್ನು ಈ …

Read More »

ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ: ಕೃತ್ಯಕ್ಕೆ ಬಳಸಿದ ಕಾರು ಮಾಲಕ ಪೊಲೀಸ್ ವಶಕ್ಕೆ

ಮಂಗಳೂರು: ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸುರತ್ಕಲ್ ನ ಫಾಝಿಲ್ ಕೊಲೆ ಪ್ರಕರಣದಲ್ಲಿ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗುರುವಾರ ರಾತ್ರಿ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಂಗಳಪೇಟೆ ನಿವಾಸಿ 23 ವರ್ಷದ ಫಾಝಿಲ್ ನ ಮೇಲೆ ಮಾರಕಾಸ್ತ್ರಗಳಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು.   ಇದೀಗ ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪದಡಿ ಕಾರು ಮಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 16 …

Read More »

ಕೋಮು ಉದ್ವಿಗ್ನತೆ : ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

ಮಂಗಳೂರು : ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ. ಪ್ರವೀಣ್ ನೆಟ್ಟಾರು‌ ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದು , ಜಿಲ್ಲೆಯಲ್ಲಿ …

Read More »

ಮಂಗಳೂರಿನಲ್ಲಿ ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರುತ್ತಿದ್ದ 12 ವಿದ್ಯಾರ್ಥಿಗಳ ಬಂಧನ

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ. ಆರೋಪಿಗಳ ಪೈಕಿ 9 ಮಂದಿ ವಿದ್ಯಾರ್ಥಿಗಳು ಯೇನೆಪೋಯ …

Read More »

ಮುದ್ದಾದ 3 ಮಕ್ಕಳನ್ನು ಬಾವಿಗೆ ತಳ್ಳಿ ಪತ್ನಿಯೊಂದಿಗೆ ಆತ್ಮಹತ್ಯೆ ಯತ್ನಿಸಿದ ತಂದೆ- ಮಕ್ಕಳು ಸಾವು

ಮಂಗಳೂರು: ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಮಾತಿದೆ. ಈ ಮಾತು ಮಂಗಳೂರಿನಲ್ಲಿ ನಡೆದಿರೋ ಮನಕಲಕುವ ಘಟನೆಗೆ ಹೇಳಿ ಮಾಡಿಸಿದಂತಿದೆ. ಗಂಡ-ಹೆಂಡತಿಯ ಮಧ್ಯೆ ನಡೆದ ಜಗಳದಿಂದ ಮುದ್ದಾದ ಮಕ್ಕಳು ಪ್ರಾಣಬಿಟ್ಟಿವೆ. ಹೆತ್ತಪ್ಪನೇ ತನ್ನ ಕೈಯ್ಯಾರೆ ಮಕ್ಕಳನ್ನ ಸಾವಿನ ಕೂಪಕ್ಕೆ ತಳ್ಳಿದ್ದಾನೆ. ಕೌಟುಂಬಿಕ ಸಮಸ್ಯೆಗೆ ಅಮಾಯಕ ಮಕ್ಕಳು ಬಲಿ ಮೂವರು ಮಕ್ಕಳನ್ನ ಬಾವಿಗೆ ತಳ್ಳಿ ಕೊಂದ ತಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದು ಹೋಗಿದೆ. ಹೆತ್ತ ತಂದೆಯೇ …

Read More »