Breaking News

ಮೂಡಲಗಿ

ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಾನೂನು ಪಾಲನೆ ಎಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಬೆಳಗಾವಿ: ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಕಾನೂನು ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಬಾರ್ ಅಸೋಸಿಯೇಷನ್ ವತಿಯಿಂದ ಕೋರ್ಟ್ ಸಭಾಂಗಣದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, …

Read More »

ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಹೆಬ್ಬಾಳಕರ್

ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆ ಮೇಲೆ ಕೆಲಸ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್ 7 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವರು ಬೆಳಗಾವಿ: ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎನ್ನುವ ಪರಿಕಲ್ಪನೆಯ ಮೇಲೆ ಕೆಲಸ ಮಾಡುತ್ತಿದ್ದೇನೆ. ಹಾಗಾಗಿಯೇ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಚಿತ್ರಣ ವರ್ಷದಿಂದ ವರ್ಷಕ್ಕೆ ಸಾಕಷ್ಟು ಬದಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

Read More »

ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಅಧಿವೇಶನದಲ್ಲಿ ಸಂಸದ ಈರಣ್ಣ ಕಡಾಡಿ ಆಗ್ರಹ.

ಮೂಡಲಗಿ: ನಕಲಿ ವೈದ್ಯರು ಮತ್ತು ತರಬೇತಿ ಪಡೆಯದ ವೈದ್ಯಕೀಯ ವೃತ್ತಿಪರರು ಯಾವುದೇ ಅರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕಾರಣ ಅವರ ಜೀವಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಆಗ್ರಹಿಸಿದರು. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದ ಶ್ರೀ ಹನುಮಾನ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …

Read More »

ಒಂದು ತಿಂಗಳ ಹಸುಗೂಸು, ಬಾಣಂತಿ ಸೇರಿ ಮನೆಯವರನ್ನೆಲ್ಲಾ ಹೊರಗೆ ಹಾಕಿರುವ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ, ಕುಟುಂಬವೊಂದರ ಮನೆ ಜಪ್ತಿ ಮಾಡಿದೆ.

ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳು ಮುಂದುವರೆದಿದ್ದು, ಬೆಳಗಾವಿಗೂ ತಟ್ಟಿದೆ. ಒಂದು ತಿಂಗಳ ಹಸುಗೂಸು, ಬಾಣಂತಿ ಸೇರಿ ಮನೆಯವರನ್ನೆಲ್ಲಾ ಹೊರಗೆ ಹಾಕಿದ್ದಲ್ಲದೇ, ವಾಸಿಸುವ ಮನೆ ಗೋಡೆ ಮೇಲೆ ಹರಾಜಿದೆ ಎಂದು ಬರೆದಿರುವುದಾಗಿ ಮೈಕ್ರೋ ಫೈನಾನ್ಸ್​​​ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬ ಅಳಲು ತೋಡಿಕೊಂಡಿದೆ. ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಗಣಪತಿ ರಾಮಚಂದ್ರ ಲೋಹಾರ್ ಎಂಬುವರ ಮನೆ ಜಪ್ತಿ ಪಡಿಸಿಕೊಳ್ಳಲಾಗಿದೆ. ಬಾಣಂತಿ, ಹಸುಗೂಸು ಅಂತಾನೂ …

Read More »

ಹುಕ್ಕೇರಿ ಮಠ ಜಾತ್ರೆಯಲ್ಲಿ ಭಕ್ತರಿಗಾಗಿ ಖಡಕ್​ ರೊಟ್ಟಿ, ಗೋದಿ ಹುಗ್ಗಿ,

ಹಾವೇರಿ : ಏಲಕ್ಕಿ ಕಂಪಿನ ನಗರಿ ಹಾವೇರಿಗೆ ಎರಡನೇಯ ಕಲ್ಯಾಣ ಎಂಬ ಹೆಸರು ಸಹ ಇದೆ. ಇದಕ್ಕೆ ಕಾರಣ ಬಸವಣ್ಣನವರ ಕಲ್ಯಾಣದಲ್ಲಿ 64 ಮಠಗಳಿದ್ದರೆ, ಹಾವೇರಿ ನಗರದಲ್ಲಿ 63 ಮಠಗಳಿವೆ. ಈ ಮಠಗಳಲ್ಲಿ ಪ್ರಮುಖವಾದ ಹುಕ್ಕೇರಿಮಠದ ಜಾತ್ರೆ ಆರಂಭವಾಗಿದೆ. ಈ ಜಾತ್ರೆ ಆರಂಭದೊಂದಿಗೆ ಉತ್ತರ ಕರ್ನಾಟಕದ ಜಾತ್ರೆಗಳು ಆರಂಭವಾಗುತ್ತವೆ. ಈ ಮಠದ ಜಾತ್ರೆಗೆ ಜಾತ್ರೆಗಳ ಆರಂಭಿಕ ಜಾತ್ರೆ ಎಂದು ಸಹ ಕರೆಯಲಾಗುತ್ತದೆ. ಐದು ದಿನಗಳ ಕಾಲ ಈ ಮಠದಲ್ಲಿ ಸಾಂಸ್ಕೃತಿಕ, ಧಾರ್ಮಿಕ …

Read More »

ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮೂಡಲಗಿ (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ): ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಪ್ರೊ. ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ಅಕ್ಕಿ ಮಾತನಾಡಿ, ಯಾವುದೇ ಒಂದು ಭಾಷೆಯ ಅಳಿವು-ಉಳಿವಿನ ಮೂಲ ಸಮಸ್ಯೆ ಶಿಕ್ಷಣ ಮಾಧ್ಯಮದಲ್ಲಿಯೇ ಇರುತ್ತದೆ. ಇಂಗ್ಲಿಷ್ ಭಾಷೆಗೆ ಈಗಾಗಲೇ ಜಗತ್ತಿನ ಬಹಳಷ್ಟು ಭಾಷೆಗಳು …

Read More »

ಮೂಡಲಗಿ: ಅಕ್ಷರ ಜಾತ್ರೆಗೆ ಭರದ ಸಿದ್ಧತೆ

ಮೂಡಲಗಿ: ಇಲ್ಲಿನ ಆರ್‌ಡಿಎಸ್‌ ಸಂಸ್ಥೆಯ ಮೈದಾನದಲ್ಲಿ ನ. 23 ಮತ್ತು 24ರಂದು ಜರುಗಲಿರುವ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ದತೆ ಭರದಿಂದ ಸಾಗಿದೆ. ಸಮ್ಮೇಳನಾಧ್ಯಕ್ಷರ ನೇತೃತ್ವದಲ್ಲಿ ಭುವನೇಶ್ವರಿಯ ಮೆರವಣಿಗೆಯು ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಕಲ್ಮೇಶ್ವರ ವೃತ್ತದ ಮೂಲಕ, ಆರ್‌ಡಿಎಸ್‌ ಕಾಲೇಜು ವರೆಗಿನ ರಸ್ತೆ ದುರಸ್ತಿ ಕಾಮಗಾರಿ ಭರದಿಂದ ಸಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಲುವಾಗಿ ಪುರಸಭೆಯ ವಿವಿಧ ಅನುದಾನದ …

Read More »

ಮಕ್ಕಳಿಗೆ ‘ರಾಷ್ಟ್ರಪ್ರೇಮ’ದ ಪಾಠ

ಮೂಡಲಗಿ: ತಾಲ್ಲೂಕಿನ ಯಾದವಾಡದ ಸುಧೀಂದ್ರ ಇಟ್ನಾಳ ಭಾರತೀಯ ಸೇನೆಯಲ್ಲಿ 34 ವರ್ಷ ಸೇವೆ ಸಲ್ಲಿಸಿ, ಬ್ರಿಗೇಡಿಯರ್‌ ಆಗಿ ನಿವೃತ್ತಿ ಹೊಂದಿದ್ದಾರೆ. ಆದರೆ, ನಿವೃತ್ತಿ ನಂತರ ಮನೆಯಲ್ಲಿ ಕೈಕಟ್ಟಿ ಕುಳಿತಿಲ್ಲ. ಬದಲಿಗೆ ಸ್ವಯಂ ಪ್ರೇರಣೆಯಿಂದ ಶಾಲೆ-ಕಾಲೇಜುಗಳಿಗೆ ಹೋಗಿ, ಶಿಕ್ಷಕರು ಹಾಗೂ  ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ. ರಾಷ್ಟ್ರಾಭಿಮಾನ ಮತ್ತು ಬದುಕಿನಲ್ಲಿ ಶಿಸ್ತು ಮೂಡಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಇದಕ್ಕಾಗಿ ಯಾವುದೇ ಶುಲ್ಕ ಪಡೆಯುತ್ತಿಲ್ಲ. ನಿಸ್ವಾರ್ಥ ಮನೋಭಾವದಿಂದ ಉಚಿತವಾಗಿ ಇಂಥದ್ದೊಂದು ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.  ಕರ್ನಾಟಕ ಮಾತ್ರವಲ್ಲದೆ; …

Read More »

ಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ:ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಮಾದರಿಯನ್ನಾಗಿ ಮಾಡುವ ಸಂಕಲ್ಪ ಮಾಡುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪಪಂ ನೂತನ ಆಧ್ಯಕ್ಷ- ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು. ಕಲ್ಲೊಳ್ಳಿ ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಂಚಾಯತಿ ಕಮೀಟಿಯವರು ಶ್ರಮಿಸುವಂತೆ …

Read More »