ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದ ಬಳಿ ಟೆಂಪೋ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ 30 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಯಳ್ಳೂರ ಕೆಎಲ್ಇ ಚಾರಿಟೇಬಲ್ ಆಸ್ಪತ್ರೆ ಮತ್ತು ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಎಲ್ಲರೂ ಹುದಲಿ ಗ್ರಾಮದವರಾಗಿದ್ದು, ಗರ್ಲಗುಂಜಿಗೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
Read More »1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಕಾಮಗಾರಿಗೆ ಗುದ್ದಲಿ ಪೂಜೆ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು 1.89 ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ(ಹಂತ-4)ಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ನಾಗನೂರ ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು …
Read More »ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ 9.60 ಕೋಟಿ ರೂ.: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಾರ್ವಜನಿಕರ ಸುಗಮ ಸಂಚಾರಕ್ಕೆ ತುಕ್ಕಾನಟ್ಟಿಯಿಂದ ಕಲ್ಲೋಳಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ಎರಡು ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದರು. ಗುರುವಾರದಂದು ಲೋಕೋಪಯೋಗಿ ಇಲಾಖೆಯಿಂದ 9.60 ಕೋಟಿ ರೂ. ವೆಚ್ಚದ ತುಕ್ಕಾನಟ್ಟಿ-ಕಲ್ಲೋಳಿ ರಸ್ತೆ ಸುಧಾರಣೆಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಅಭಿವೃದ್ಧಿಯಿಂದ ಕಲ್ಲೋಳಿಯಿಂದ ಸಂಚರಿಸುವ ತುಕ್ಕಾನಟ್ಟಿ ಮತ್ತು ರಾಯಬಾಗ ತಾಲೂಕಿನ ಗ್ರಾಮಗಳಿಗೆ …
Read More »ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು- ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*: ಜಾತಿ, ಧರ್ಮ, ಮೇಲು, ಕೀಳು ಭಾವನೆಗಳು ತೊರೆದು ಕರ್ನಾಟಕವು ಸೌಹಾರ್ದತೆಗೆ ಹೆಸರುವಾಸಿಯಾದ ಹೆಮ್ಮೆಯ ನಾಡು ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ತಾಲ್ಲೂಕು ರಾಜ್ಯೋತ್ಸವ ಸಮಿತಿಯಿಂದ ಗುರುವಾರ ಆಚರಿಸಿದ 67ನೇ ಕರ್ನಾಟಕ ರಾಜ್ಯೋತ್ಸವದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ನಾಡಿನ ಪ್ರತಿಯೊಬ್ಬರೂ ಕನ್ನಡ ಭಾಷೆ, ನಾಡು, ನುಡಿಯ ಬಗ್ಗೆ ಅಭಿಮಾನ ಗೌರವವನ್ನು ಹೊಂದಿರಬೇಕು ಎಂದರು. ಮೂಡಲಗಿಯ ರಾಜ್ಯೋತ್ಸವದ …
Read More »ಕಲ್ಲೋಳಿಯಲ್ಲಿ ಬಂಡಿಗಣಿ ಮಠದ ಸದ್ಬಕ್ತರ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕರ್ನಾಟಕವಲ್ಲದೇ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅಸಂಖ್ಯೆ ಭಕ್ತರಿಗೆ ಅನ್ನಪ್ರಸಾದ ಮಾಡುತ್ತಿರುವ ಬಂಡಿಗಣಿಯ ದಾಸೋಹ ಚಕ್ರವರ್ತಿ ದಾನೇಶ್ವರ ಮಹಾರಾಜರ ಕಾರ್ಯ ಶ್ಲಾಘನೀಯವಾದದ್ದು ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಂಡಿಗಣಿ ಮಹಾರಾಜರ ಭಕ್ತರು ಹಮ್ಮಿಕೊಂಡ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಧಾರ್ಮಿಕ-ಶೈಕ್ಷಣಿಕ ಕ್ಷೇತ್ರಗಳಲ್ಲಿ ಕೈಗೊಳ್ಳುತ್ತಿರುವ ಶ್ರೀಗಳ ಕಾರ್ಯಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಕಳೆದ ಹಲವಾರು …
Read More »ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು. ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂಘಟನೆಗಳ ಕಾರ್ಯಕರ್ತರಿಗೆ ಕನ್ನಡ ಬಾವುಟಗಳನ್ನು ವಿತರಿಸಿದರು. …
Read More »ನುಡಿದಂತೆ ನಡೆದ ಹೆಮ್ಮೆಯ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರದಂದು ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ ಪೂಜೆ ಸಲ್ಲಿಸುವ ಮೂಲಕ ಸಾರ್ವಜನಿಕರು ಹಾಗೂ ರೈತರಿಗೆ ನೀಡಿದ ವಾಗ್ದಾನದಂತೆ ನಡೆದುಕೊಂಡಿರುವದಾಗಿ ಅವರು ಹೇಳಿದರು. …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ
ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಗೋಕಾಕ : ಹಿರೇನಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸ್ಕೌಟ್ಸ್, ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಶಾಲಾ ಸುಧಾರಣಾ ಸಮಿತಿಯವರು ಉಪಸ್ಥಿತರಿದ್ದರು.
Read More »ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಗಳೊಂದಿಗೆ ಮಂಗಳವಾರ ರಾತ್ರಿ …
Read More »೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*
ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …
Read More »