Breaking News

ರಾಜಕೀಯ

ನಮ್ಮ ಧರ್ಮವನ್ನು ಪ್ರೀತಿಸೋಣ ಅನ್ಯ ಧರ್ಮವನ್ನು ಗೌರವಿಸೋಣ ; ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ        ಮೂಡಲಗಿ: ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.      ಶುಕ್ರವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ …

Read More »

ವರ್ಷದ ಕೊನೆಯ ಚಂದ್ರಗ್ರಹಣ: ಭಕ್ತರಿಗೆ ಎಂದಿನಂತೆ ದರ್ಶನ ನೀಡಲಿರುವ ಮಲೆ ಮಾದಪ್ಪ

ಚಾಮರಾಜನಗರ: ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ನಡೆಯಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಚಂದ್ರಗ್ರಹಣ ಮಧ್ಯರಾತ್ರಿ 1:5 ಗಂಟೆಗೆ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ. ಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜೆಯ ಸಮಯ ಬದಲಾಗಿದ್ದು, ಕೆಲವು ದೇವಾಲಯಗಳನ್ನು ಬೇಗನೆ ಬಂದ್‌ ಮಾಡಿದರೆ, ಮತ್ತೆ ಕೆಲವೆಡೆ ಗ್ರಹಣ ಕಾಲದಲ್ಲಿ ಭಕ್ತರಿಗೆ ವಿಶೇಷಪೂಜೆ, ಪುನಸ್ಕಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತ್ತೊಂದೆಡೆ, ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ದರ್ಶನದಲ್ಲಿ …

Read More »

ಚಿಕ್ಕಮಗಳೂರು: ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್​​ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು: ಇಲ್ಲಿನ ಬಾಬಾ ಬುಡನ್​​ಗಿರಿ ದರ್ಗಾ ಶಾಖಾದ್ರಿ ಅವರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿ ತಲಾ ಒಂದು ಚಿರತೆ ಹಾಗೂ ಜಿಂಕೆ ಚರ್ಮ ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಈ …

Read More »

ಮಲೆನಾಡಲ್ಲಿ ಹುಲಿ ಉಗುರು, ಚರ್ಮ ಇರುವುದು ಸಾಮಾನ್ಯ, ಇದನ್ನು ಸರ್ಕಾರ ಇಲ್ಲಿಗೆ ಅಂತ್ಯ ಮಾಡಲಿ: ಎಂ ಪಿ ಕುಮಾರಸ್ವಾಮಿ

ಬೆಂಗಳೂರು : ಪಶ್ಚಿಮ ಘಟ್ಟದ ಎಲ್ಲಾ ಮನೆಗಳಲ್ಲಿ ಹುಲಿ ಉಗುರು, ಪ್ರಾಣಿಗಳ ಚರ್ಮ, ಕೊಂಬು ಇರೋದು ಸಾಮಾನ್ಯ. ಈಗ ಅವರನ್ನು ವಿಲನ್ ಮಾಡುವುದಕ್ಕೆ ಹೊರಟಿರುವುದು ತಪ್ಪು ಎಂದು ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೂರು ನಾಲ್ಕು ದಿನದಿಂದ ಹುಲಿ ಉಗುರು ವಿಚಾರ ಚರ್ಚೆಯಾಗ್ತಿದೆ. ನಾನು ಮಲೆನಾಡಿನವನಾಗಿದ್ದೇನೆ. ಮಾನವ ಆದಿಕಾಲದಿಂದ ಬೇಟೆ ಮಾಡಿ ಬದುಕಿದ್ದ. 25 ವರ್ಷಗಳಿಂದ ಯಾವುದೇ ಶಿಕಾರಿ ಮಾಡುತ್ತಿಲ್ಲ. ಕಾನೂನು ಪ್ರಕಾರ …

Read More »

ವಿಶ್ವವಿದ್ಯಾಲಯಗಳು ಡಿಜಿಟಲ್ ಸಾಕ್ಷರತೆಯ ಅಭಿವೃದ್ಧಿಗೆ ಒತ್ತು ನೀಡಲಿ: ರಾಜ್ಯಪಾಲ ಗೆಹ್ಲೋಟ್

ಬೆಳಗಾವಿ: ”ವಿಶ್ವವಿದ್ಯಾಲಯಗಳು ಗ್ರಾಮಗಳ ಮಟ್ಟದಲ್ಲಿಯೂ ಡಿಜಿಟಲ್ ಸಾಕ್ಷರತೆ ಅಭಿವೃದ್ದಿಗಾಗಿ ಆದ್ಯತೆ ನೀಡಬೇಕಿದೆ. ಇದರೊಂದಿಗೆ, ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯ ಚಟುವಟಿಕೆಗಳನ್ನೂ ಕೈಗೊಳ್ಳಬೇಕಿದೆ” ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಲಹೆ ನೀಡಿದ್ದಾರೆ. ಇಲ್ಲಿನ ತಾಂತ್ರಿಕ‌ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆದ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ದಕ್ಷಿಣ ವಲಯ ಕುಲಪತಿಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿ ಅವರು ಭಾಷಣ ಮಾಡಿದರು. ”ಭಾರತದ ಪ್ರಮುಖ ಉನ್ನತ ಶಿಕ್ಷಣ ಸಂಘಟನೆಗಳಲ್ಲಿ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ …

Read More »

ಗ್ರೂಪ್ ಸಿ ಹುದ್ದೆಗಳಿಗೆ ನವೆಂಬರ್ 4, 5 ರಂದು ಪರೀಕ್ಷೆ: ಕೆಪಿಎಸ್​​ಸಿ

ಬೆಂಗಳೂರು: ಕೆಪಿಎಸ್​​ಸಿ ಅಧಿಸೂಚಿಸಲಾದ ಗ್ರೂಪ್ ‘ಸಿ’ ಹುದ್ದೆಗಳಿಗೆ ನ.4 ಮತ್ತು 5 ರಂದು ಕನ್ನಡ ಭಾಷಾ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಅಭ್ಯರ್ಥಿಗಳ ಹಾಲ್ ​ಟಿಕೆಟ್​ಗಳು ಈಗಾಗಲೇ ಆಯೋಗದ ವೆಬ್​ಸೈಟ್​ನಲ್ಲಿ ಲಭ್ಯ ಇವೆ. ಲೆಕ್ಕ ಸಹಾಯಕರು ಮತ್ತು ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಒಂದೇ ಪರೀಕ್ಷೆ ಇರಲಿದೆ ಎಂದು ಕೆಪಿಎಸ್​ಸಿ ತಿಳಿಸಿದೆ. ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯು ಸಚಿವ ಪ್ರಿಯಾಂಕ ಖರ್ಗೆಗೆ ಪತ್ರ ಬರೆದು, ಕರ್ನಾಟಕ ರಾಜ್ಯ ಲೆಕ್ಕ …

Read More »

ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ನವಿಲು ಗರಿಗೆ ವಿನಾಯಿತಿ ಇದೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: 1972ರ ಸೆಕ್ಷನ್ 43ರ ಅಡಿ ನವಿಲು ಗರಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ನವಿಲು ಗರಿಗಳಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ರಫ್ತು ಮಾಡುವುದನ್ನು ಭಾರತ ಸರ್ಕಾರ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದಗಳಲ್ಲಿ ಅಂತಾರಾಷ್ಟ್ರೀಯ ವ್ಯಾಪಾರದ ಸಮಾವೇಶ – ಸಿಐಟಿಇಎಸ್ ನಿಷೇಧಿಸಿದೆ. ಆದರೆ ನೈಸರ್ಗಿಕವಾಗಿ ನವಿಲುಗಳಿಂದ ಉದುರಿದ ಗರಿಗಳನ್ನು ಸಂಗ್ರಹಿಸುವುದು ಮತ್ತು ದೇಶದೊಳಗೆ ಮಾರಾಟ ಮಾಡುವುದು ಕಾನೂನುಬಾಹಿರವಲ್ಲ. ಆದರೆ, ನವಿಲುಗಳಿಗೆ ಹಿಂಸೆ ನೀಡಿ ಗರಿ ಕಿತ್ತರೆ ಅದು …

Read More »

ಟಗರು ಪಲ್ಯ’ ಸಿನಿಮಾ ರಿಲೀಸ್​: ಮಗಳು ಅಮೃತಾ ಜೊತೆ ಸ್ಟೆಪ್​ ಹಾಕಿದ ನೆನಪಿರಲಿ ಪ್ರೇಮ್​

ಟಗರು ಪಲ್ಯ’ ಸಿನಿಮಾ ರಿಲೀಸ್ ಡಾಲಿ ಧನಂಜಯ್‌ ನಿರ್ಮಾಣದ ಗ್ರಾಮೀಣ ಸೊಗಡಿನ ಕಥೆ ಹೊಂದಿರುವ ‘ಟಗರು ಪಲ್ಯ’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ. ಹೆಚ್ಚಿನ ಥಿಯೇಟರ್​ಗಳು ಹೌಸ್​ ಫುಲ್​ ಆಗಿದೆ. ಚಿತ್ರ ವೀಕ್ಷಿಸಿದ ಸಿನಿಪ್ರೇಮಿಗಳಿಂದ ಕಥೆಗೆ ಮೆಚ್ಚುಗೆ ಸಿಕ್ಕಿದ್ದು, ಈ ವರ್ಷದ ಕನ್ನಡದ ಹಿಟ್​ ಸಿನಿಮಾಗಳ ಸಾಲಿನಲ್ಲಿ ‘ಟಗರು ಪಲ್ಯ’ವೂ ಒಂದು ಅಂತಿದ್ದಾರೆ. ಇಂದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವೀರೇಶ್​ ಚಿತ್ರಮಂದಿರದಲ್ಲಿ ‘ಟಗರು ಪಲ್ಯ’ ಹೌಸ್​ಫುಲ್​ ಪ್ರದರ್ಶನ ಕಂಡಿದೆ. …

Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು: ಹುಲಿ ಉಗುರಿನ ಮಾದರಿ ಪೆಂಡೆಂಟ್ ವಶಕ್ಕೆ

ಬೆಳಗಾವಿ/ಹುಬ್ಬಳ್ಳಿ: ಹುಲಿ ಉಗುರಿನ ಮಾದರಿ ಪೆಂಡೆಂಟ್ ಧರಿಸಿದ್ದ ತಮ್ಮ ಪುತ್ರನ ಫೋಟೋ ವೈರಲ್ ಆದ ಹಿನ್ನೆಲೆಯಲ್ಲಿ ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಿವಾಸಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪೆಂಡೆಂಟ್ ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಕುವೆಂಪು ನಗರದಲ್ಲಿ ಇರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸಕ್ಕೆ ಡಿಎಫ್‌ಓ ಶಂಕರ ಕಲ್ಲೋಳಿಕರ್ ಎಸಿಎಫ್ ಸುರೇಶ ತೇಲಿ ನೇತೃತ್ವದ ತಂಡ ತೆರಳಿ ಪರಿಶೀಲನೆ ನಡೆಸಿತು. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್, ಮೃಣಾಲ್ ಹೆಬ್ಬಾಳ್ಕರ್ …

Read More »

ಶಾಸಕ ಲಕ್ಷ್ಮಣ್ ಸವದಿ ಪುತ್ರನ ಕೊರಳಿನಲ್ಲೂ ಹುಲಿ ಉಗುರು ಹೋಲುವಂತಹ ಲಾಕೆಟ್

ಚಿಕ್ಕೋಡಿ (ಬೆಳಗಾವಿ): ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಧರಿಸಿದ್ದ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಹಲವು ಪ್ರಭಾವಿಗಳ ಮನೆಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪೆಂಡೆಂಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಮಾಜಿ ಡಿಸಿಎಂ ಹಾಗೂ ಅಥಣಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಶಾಸಕ ಲಕ್ಷ್ಮಣ್ ಸವದಿ ಪುತ್ರನ ಕೊರಳಿನಲ್ಲೂ ಹುಲಿ ಉಗುರು ಹೋಲುವಂತಹ ಲಾಕೆಟ್​ ಅನ್ನು ಹಾಕಿಕೊಂಡಿರುವ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮದುವೆ ಸಂದರ್ಭದಲ್ಲಿ ಹುಲಿ ಉಗುರಿನ ರೀತಿ ಇರುವ …

Read More »