Breaking News

ರಾಜಕೀಯ

ಪೋಷಕರ ಒಪ್ಪಿಗೆ ಇಲ್ಲದೆ ಆಗುವ ಪ್ರೇಮ ವಿವಾಹಗಳನ್ನು ಸರ್ಕಾರ ನಿಷೇಧಿಸಬೇಕು……..

ಕಲಬುರಗಿ: ಪೋಷಕರ ಒಪ್ಪಿಗೆ ಇಲ್ಲದೆ ಆಗುವ ಪ್ರೇಮ ವಿವಾಹಗಳನ್ನು ಸರ್ಕಾರ ನಿಷೇಧಿಸಬೇಕು ಎಂದು ಇಲ್ಲಿನ ಕಮಲಾಪುರ ತಾಲೂಕಿನ ಡೊಂಗರಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಾಂತಕುಮಾರ ಕೆ. ಮೂಲಗೆ ಹಾಗೂ ಸದಸ್ಯರು ಸಭೆ ನಡೆಸಿ ಠರಾವು ಪಾಸ್ ಮಾಡಿದ್ದಾರೆ. ಅಕ್ಟೋಬರ್ 10 ರಂದು ಶಾಂತಕುಮಾರ್ ಮೂಲಗೆ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಸಭೆ ನಡೆದಿತ್ತು. ವಿಶೇಷವಾಗಿ, ಪ್ರೇಮ ವಿವಾಹಗಳ ಬಗ್ಗೆ ಚರ್ಚಿಸಲೆಂದೇ ಈ ಸಭೆ ಕರೆಯಲಾಗಿತ್ತು. ಶಾಂತಕುಮಾರ ಕೆ. ಮೂಲಗೆ ಮಾತನಾಡಿ, “ನಮ್ಮ …

Read More »

ನಗರಸಭೆ ಆಯುಕ್ತರ ಕುರ್ಚಿಗಾಗಿ ಬಾಗಲಕೋಟೆ ನಗರದಲ್ಲಿ ಗೊಂದಲ 2ರು ಒಂದೇ ಚೇಂಬರ್​ನಲ್ಲಿ ಕುಳಿತು ಆಡಳಿತ

ಬಾಗಲಕೋಟೆ : ನಗರಸಭೆ ಆಯುಕ್ತರ ಕುರ್ಚಿಗಾಗಿ ಬಾಗಲಕೋಟೆ ನಗರದಲ್ಲಿ ಗೊಂದಲ ಮುಂದುವರೆದಿದೆ. ಇತ್ತೀಚೆಗಷ್ಟೇ ಆರೋಗ್ಯ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳು ಗೊಂದಲ ಮಾಡಿಕೊಂಡಿದ್ದರು. ಅದು ಮಾಸುವ ಮುಂಚೆ ಈಗ ನಗರಸಭೆ ಆಯುಕ್ತರ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ಮಧ್ಯೆ ಪೈಪೋಟಿ ನಡೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಹಿಂದಿನ ಆಯುಕ್ತ ಹಾಗೂ ಹಾಲಿ ಆಯುಕ್ತರ ಮಧ್ಯೆ ಕುರ್ಚಿಗಾಗಿ ಸ್ಪರ್ಧೆ ಏರ್ಪಟ್ಟಿದ್ದು, ಒಂದೇ ಚೇಂಬರ್​ನಲ್ಲಿ ಕುಳಿತ ಇಬ್ಬರೂ ಆಯುಕ್ತರು, ಆಡಳಿತ ನಡೆಸಲು ಮುಂದಾಗಿದ್ದಾರೆ. …

Read More »

ರೈತರ ಜಮೀನಿನಲ್ಲಿ ಕೆರೆ ನಿರ್ಮಿಸಿ 14 ವರ್ಷಗಳೇ ಕಳೆದಿವೆ. ಭೂಮಿ ಕೊಟ್ಟ ರೈತರಿಗೆ ಪರಿಹಾರ ಸಿಕ್ಕಿಲ್ಲ. ಕೆರೆಯಲ್ಲಿ ಮುಳುಗಿ ಪ್ರಾಣ ಬಿಡುವ ಎಚ್ಚರಿಕೆ!

ಬೆಳಗಾವಿ: ಊರಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿತ್ತು.‌ ನೀರಿನ ಬವಣೆ ನೀಗಿಸಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಗ್ರಾಮದ ರೈತರ ಜಮೀನಿನಲ್ಲಿ ಕೆರೆ ನಿರ್ಮಿಸಿ 14 ವರ್ಷಗಳೇ ಕಳೆದಿವೆ. ಆದರೆ, ಈವರೆಗೂ ಭೂಮಿ ಕೊಟ್ಟ ರೈತರಿಗೆ ಪರಿಹಾರ ಸಿಕ್ಕಿಲ್ಲ. ಇದರಿಂದ ಆಕ್ರೋಶಗೊಂಡ ಸಂತ್ರಸ್ಥರು ಪರಿಹಾರ ಕೊಡದಿದ್ದರೆ, ಇದೇ ಕೆರೆಯಲ್ಲಿ ಮುಳುಗಿ ಜೀವ ಬಿಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಹಾಗಾದರೆ ಯಾವ ಊರು? ಏನಿವರ ವ್ಯಥೆ? ಸಚಿವರ ತವರು ಕ್ಷೇತ್ರ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ …

Read More »

ಕಾಂಗ್ರೆಸ್​ನ ಎಟಿಎಂ ಕಲೆಕ್ಷನ್ ಮಾಡೆಲ್ ಪ್ರದರ್ಶಿಸಿ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ: ಅಶ್ವತ್ಥನಾರಾಯಣ

ಬೆಂಗಳೂರು: ”ಅಮಾಯಕ, ಪ್ರಾಮಾಣಿಕ ಗುತ್ತಿಗೆದಾರರ ಹಣ ಲೂಟಿ ಮಾಡಿ, ಐದು ರಾಜ್ಯಗಳ ಚುನಾವಣೆಗೆ ಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಎಟಿಎಂ ಕಲೆಕ್ಷನ್ ಮಾಡೆಲ್ ಪ್ರದರ್ಶನ ಮಾಡಿ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ” ಎಂದು ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ. ಮಲ್ಲೇಶ್ವರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಲೂಟಿಕೋರರು ಸೇರಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ, ಬೆಂಗಳೂರು …

Read More »

ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ಸ್​​​​​ನ ಮತ್ತೊಂದು ಶಾಖೆ ಉದ್ಘಾಟನೆ

ಹಾವೇರಿ: ಕರ್ನಾಟಕದಲ್ಲಿ ಮಾರ್ಗದರ್ಶಿ ಚಿಟ್ಸ್​​​​​ನ ಮತ್ತೊಂದು ಶಾಖೆ ಉದ್ಘಾಟನೆಗೊಂಡಿದೆ. ರಾಜ್ಯದಲ್ಲಿ ಇದು 23ನೇ ಶಾಖೆಯಾಗಿದ್ದು, ದೇಶಾದ್ಯಂತ 110ನೇ ಶಾಖೆಯಾಗಿದೆ. ಮಾರ್ಗದರ್ಶಿ ಚಿಟ್ಸ್ (ಕರ್ನಾಟಕ) ಪ್ರೈವೇಟ್​ ಲಿಮಿಟೆಡ್​ ನಿರ್ದೇಶಕ ಪಿ ಲಕ್ಷಣರಾವ್, ಈ ಶಾಖೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಚಂದಾದಾರರು ಭಾಗವಹಿಸಿದ್ದರು. ಇಲ್ಲಿನ ಪಿಬಿ ರೋಡ್​ನಲ್ಲಿರುವ ಜಿಜಿ ಮಾಗಾವಿ ಚೇಂಬರ್ಸ್​ ಕಾಂಪ್ಲೆಕ್ಸ್​ನ ಎರಡನೇ ಮಹಡಿಯಲ್ಲಿ ಮಾರ್ಗದರ್ಶಿ ಚಿಟ್ಸ್​ನ ಶಾಖೆ ಆರಂಭವಾಗಿದೆ. ನೂತನ ಶಾಖೆಯ ಮೂಲಕ ಹಾವೇರಿ ಜಿಲ್ಲೆಯ ಜನರು …

Read More »

ರಾಜ್ಯದಲ್ಲಿ ”ಶಿವಕುಮಾರ್ ಬ್ಯಾಂಕ್ ಆಫ್ ಇಂಡಿಯಾ” ಬ್ರಾಂಚ್​ ಒಪನ್​ ಆಗಿದೆ: ಬಿ.ವೈ ವಿಜಯೇಂದ್ರ

ಬೆಂಗಳೂರು: ದೇಶದಲ್ಲಿ ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ಇದೆ. ಆದರೆ, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನವರು ‘ಶಿವಕುಮಾರ್ ಬ್ಯಾಂಕ್ ಆಫ್ ಇಂಡಿಯಾ’ ಎಂಬ ಬ್ರಾಂಚ್​ ಒಪನ್​ ಮಾಡಿದ್ದಾರೆ. ರಾಜ್ಯದಲ್ಲಿ ಹಣ ವಸೂಲಿ ಮಾಡಿ ಬೇರೆ ಬೇರೆ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ. ಪಂಚ ರಾಜ್ಯ ಮತ್ತು ಲೋಕಸಭೆ ಚುನಾವಣೆಗೆ ಈ ರೀತಿ ಹಣ ಸಂಗ್ರಹಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಐಟಿ ರೇಡ್​ನಲ್ಲಿ ಸಿಕ್ಕ ಹಣ ಎಸ್​ಎಸ್​ಟಿ ಟ್ಯಾಕ್ಸ್​​ಗೆ ಸೇರಿದ್ದು”:H.D.K.

ಮೈಸೂರು: ಬೆಂಗಳೂರಿನ ಐಟಿ ರೇಡ್​ನಲ್ಲಿ ಸಿಕ್ಕ ಹಣ ಎಸ್​ಎಸ್​ಟಿ (ಡಿ ಕೆ.ಶಿವಕುಮಾರ್, ಸುರೇಶ್ ಟ್ಯಾಕ್ಸ್) ಟ್ಯಾಕ್ಸ್​​ಗೆ ಸೇರಿದ್ದಾಗಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ಕಲೆಕ್ಷನ್ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇಂದು ಕುಟುಂಬ ಸಮೇತ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ‘ರಾಜ್ಯದಲ್ಲಿ ಕೃಷಿ …

Read More »

ಲಂಡನ್​ನಲ್ಲಿ ಬಸವೇಶ್ವರ ಪ್ರತಿಮೆಗೆ ಯು.ಟಿ.ಖಾದರ್​, ಬಸವರಾಜ ಹೊರಟ್ಟಿ ನಮನ

ಲಂಡನ್​: ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಅವರು ಲಂಡನ್​ಗೆ ಭೇಟಿ ನೀಡಿದ್ದು, ಭಾನುವಾರ ಲ್ಯಾಂಬೆತ್ ನಗರದ ಥೇಮ್ಸ್ ನದಿ ದಂಡೆ ಮೇಲಿರುವ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.   ಲ್ಯಾಂಬೆತ್‌ನ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಅವರು ಖಾದರ್ ಹಾಗೂ ಹೊರಟ್ಟಿ ಅವರನ್ನು ಸ್ವಾಗತಿಸಿದರು. ಖಾದರ್​ ಬಸವಣ್ಣನವರ ಪ್ರತಿಮೆಗೆ ವಿಭೂತಿ ಹಚ್ಚಿದರು. ಈ ಸಂದರ್ಭದಲ್ಲಿ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ …

Read More »

4 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ: ವಿದೇಶದಿಂದ ಬರುತ್ತಿದ್ದಂತೆಯೇ ಬಂಧನ

ಮಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ದೇಶಕ್ಕೆ ಬರುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ನಗರದ ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ ಆರೋಪಿ ಎಂಬುದಾಗಿ ತಿಳಿದು ಬಂದಿದೆ.   ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಈತ ಭಾಗಿಯಾಗಿದ್ದನು. ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತ ಕಳೆದ 4 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ, …

Read More »

‘ಬರ’ ಸಿಡಿಲು: ಬೆಳೆ ಸಂರಕ್ಷಣೆಗೆ ಟ್ಯಾಂಕರ್‌ ನೀರಿನ ಮೊರೆ ಹೋದ ರೈತರು

ಕೊಪ್ಪಳ: ಕೊಪ್ಪಳ ಜಿಲ್ಲೆಯಾದ್ಯಂತ ಸಕಾಲಕ್ಕೆ ಮಳೆಯಾಗದೇ ಬರ ತಾಂಡವವಾಡುತ್ತಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಅಲ್ಪಸ್ವಲ್ಪ ತೇವಾಂಶದಿಂದ ಜೀವ ಹಿಡಿದುಕೊಂಡಿದ್ದ ಬೆಳೆಗಳು ಒಣಗುತ್ತಿವೆ. ಅಳಿದುಳಿದಿರುವ ಈ ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಮಾಡುತ್ತಿದ್ದಾರೆ. ಟ್ಯಾಂಕರ್ ಮೂಲಕ ನೀರು: ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ, ಯರೇಹಂಚಿನಾಳ, ಸೊಂಪುರ ಸೇರಿದಂತೆ ವಿವಿಧ ಗ್ರಾಮದಲ್ಲಿ ರೈತರು ಬೆಳೆ ಸಂರಕ್ಷಿಸಲು ಟ್ಯಾಂಕರ್‌ ನೀರಿನ ಮೊರೆ ಹೋಗುತ್ತಿದ್ದಾರೆ. ಟ್ಯಾಂಕರ್ ಮೂಲಕ ನೀರುಣಿಸುವುದು ಸರಳ ಕೆಲಸವಲ್ಲ. ಹೀಗಿದ್ದರೂ ಇರುವ ಒಂದಿಷ್ಟು ಬೆಳೆಯನ್ನಾದರೂ ಉಳಿಸಿಕೊಳ್ಳೋಣ ಎಂದು …

Read More »