ಬಾಗಲಕೋಟೆ: ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣದ ಹಿನ್ನೆಲೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಚೈತ್ರಾ ಕುಂದಾಪುರ ಅವರಿಗೆ ಸೇರಿದ ಕಾರು ಪತ್ತೆಯಾಗಿದೆ. ಈ ಪ್ರಕರಣ ಮುಧೋಳ ಪಟ್ಟಣದವರೆಗೆ ವ್ಯಾಪಿಸಿದ್ದು ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅರ್ ಬಿ ತಿಮ್ಮಾಪುರ ಹೇಳಿದ್ದಾರೆ. ಬಾಗಲಕೋಟೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಟಿಕೆಟ್ ಡೀಲ್ನಲ್ಲಿ ದೊಡ್ಡ ಜಾಲವೇ ಇರಬಹುದು ಎಂಬ ಭಾವನೆ ನನ್ನದು. ಕುಂದಾಪುರ ಎಲ್ಲಿ, ಮುಧೋಳ ಎಲ್ಲಿ, ಪೊಲೀಸ್ ಇಲಾಖೆ …
Read More »ಹಳೆ ಸಂಸತ್ ಭವನಕ್ಕೆ ಗುಡ್ ಬೈ: ಲೋಕಸಭಾ, ರಾಜ್ಯಸಭಾ ಸದಸ್ಯರ ಗ್ರೂಪ್ ಫೋಟೋ
ನವದೆಹಲಿ: ಹಳೆ ಸಂಸತ್ ಭವನದಿಂದ ಕಲಾಪಗಳು ಹೊಸ ಸಂಸತ್ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಮುನ್ನ ಇಂದು (ಮಂಗಳವಾರ) ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಒಟ್ಟಾಗಿ ಫೋಟೋ ತೆಗೆಸಿಕೊಂಡರು. ಉಪರಾಷ್ಟ್ರಪತಿ, ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರ ಎರಡೂ ಬದಿಗಳಲ್ಲಿ ನಿಂತು ಸದಸ್ಯರು ಫೋಟೋಗೆ ಪೋಸ್ ಕೊಟ್ಟರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, …
Read More »ಯುನೆಸ್ಕೋ ವಿಶ್ವಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಹೊಯ್ಸಳರ ದೇವಾಲಯ: ಪಿಎಂ ಮೋದಿ, ಸಿಎಂ ಸಿದ್ದರಾಮಯ್ಯ ಹರ್ಷ
ಬೆಂಗಳೂರು: ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ)ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರುನಾಡಿನ ಪ್ರಸಿದ್ಧ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆಗೊಂಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ. ವಿಶ್ವಮಟ್ಟದ ಮೂಲಸೌಲಭ್ಯ, ಸುರಕ್ಷತೆ ಒದಗಿಸಲು ಬದ್ಧ: ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ಇದು ಖುಷಿ, ಹೆಮ್ಮೆಯ ಸಂಗತಿ. ನಾಡಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಶ್ವಮಟ್ಟದ …
Read More »ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಆರೋಪಿಗಳ ಬ್ಯಾಂಕ್ ಖಾತೆ ಸ್ಥಗಿತ, ಕಾರು ಜಪ್ತಿ
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಹಂತ-ಹಂತವಾಗಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿಗಳ ಆಸ್ತಿ ಶೋಧ ಪ್ರಕ್ರಿಯೆಯನ್ನು ಸಿಸಿಬಿ ಪೊಲೀಸರು ಮುಂದುವರಿಸಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆಯಲ್ಲಿದ್ದ ಠೇವಣಿ ಹಾಗೂ ಕಾರು ಜಪ್ತಿ ಮಾಡಲಾಗಿದೆ. ಶನಿವಾರ, 81 ಲಕ್ಷ ನಗದು ಜಪ್ತಿ ಮಾಡಲಾಗಿದ್ದು, ನಂತರ ಆರೋಪಿಗಳ ಎಫ್.ಡಿ ಖಾತೆಯಲ್ಲಿ ಒಟ್ಟು 1.08 ಕೋಟಿ ಠೇವಣಿ ಪತ್ತೆಯಾಗಿದೆ. ಬ್ಯಾಂಕ್‌ಗಳ ಮೂಲಕ ಠೇವಣಿಗಳ ವ್ಯವಹಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಸಿಬಿ …
Read More »ಮೂವರು ಡಿಸಿಎಂ ಬೇಡಿಕೆಗೆ ಮುಖ್ಯಮಂತ್ರಿಯೇ ಉತ್ತರ ಕೊಡಬೇಕು, :D.C.M.
ಬೆಂಗಳೂರು : ಸಚಿವ ಕೆ ಎನ್ ರಾಜಣ್ಣ ಹೇಳಿರುವಂತೆ ಮೂವರು ಡಿಸಿಎಂ ಬೇಡಿಕೆ ಸಂಬಂಧ ಮುಖ್ಯಮಂತ್ರಿಗಳೇ ಇದಕ್ಕೆಲ್ಲಾ ಉತ್ತರ ಕೊಡಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ ಎನ್ ರಾಜಣ್ಣ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಬಹಳ ಸಂತೋಷ. ಎಲ್ಲರ ಮನಸ್ಸಿಗೂ ಸಮಾಧಾನ. ನನ್ನನ್ನು ಡಿಸಿಎಂ ಆಗಿ ನೇಮಕ ಮಾಡಿರುವುದು ಮುಖ್ಯಮಂತ್ರಿಗಳು ಮತ್ತು ಗವರ್ನರ್. ಇದಕ್ಕೆಲ್ಲಾ ಮುಖ್ಯಮಂತ್ರಿಗಳೇ …
Read More »ಹಣದ ಆಸೆಗೆ ಮಾಲೀಕನನ್ನೇ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿರಸಿ(ಉತ್ತರ ಕನ್ನಡ): ಹಣದ ಆಸೆಗಾಗಿ ಕೆಲಸ ನೀಡಿದ ಮಾಲೀಕನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ಶಿರಸಿಯ ಬನವಾಸಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ನಡೆದ 48 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯ ಶವ ಶಿರಸಿಯ ವಡ್ಡಿನಕೊಪ್ಪ ಅರಣ್ಯ ಭಾಗದಲ್ಲಿ ಪತ್ತೆಯಾಗಿತ್ತು. ಕೊಲೆ ಎಂದು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ನಂತರ ತನಿಖೆ ಕೈಗೊಂಡ ಬನವಾಸಿ ಠಾಣೆ ಪೊಲೀಸರು ಕೊಲೆಯಾದ ವ್ಯಕ್ತಿಯ ಗುರುತು ಪತ್ತೆ …
Read More »ಸತತ 26 ಗಂಟೆಗಳ ಕಾಲ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ದಾಖಲೆ ಬರೆದ ಗರ್ಭಿಣಿ
ಹೊಸಕೋಟೆ (ಬೆಂಗಳೂರು): 7 ತಿಂಗಳ ಗರ್ಭಿಣಿ ಸತತ 26 ಗಂಟೆ ಸ್ಯಾಕ್ಸೋಫೋನ್ ನುಡಿಸಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಮಾಡಿ ವಿಶೇಷ ಮನ್ನಣೆ ತನ್ನದಾಗಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಆವಲಹಳ್ಳಿ ನಿವಾಸಿ ಸುಬ್ಬಲಕ್ಷ್ಮೀ ಈ ಸಾಧಕಿ. ಕಳೆದ ಪೆಬ್ರವರಿಯಲ್ಲಿ ಇವರು ಆವಲಹಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 26 ಗಂಟೆ 23 ನಿಮಿಷ ಸ್ಯಾಕ್ಸೊಫೋನ್ ನುಡಿಸಿದ್ದಾರೆ. ಇಷ್ಟು ಸಮಯ ನಿರಂತರವಾಗಿ ಸ್ಯಾಕ್ಸೊಪೋನ್ ನುಡಿಸಿದ ಮೊದಲ ಮಹಿಳೆ ಅನ್ನೋ ಹೆಗ್ಗಳಿಕೆಯೂ ಇವರದ್ದಾಗಿದೆ. ಇದೀಗ ಅಪರೂಪದ …
Read More »ತಾಕತ್ತಿದ್ದರೆ ಸಿದ್ದರಾಮಯ್ಯಮೂವರು ಡಿಸಿಎಂಗಳನ್ನು ಮಾಡಲಿ: ಎನ್ ರವಿಕುಮಾರ್
ಬೆಂಗಳೂರು: ಬರ, ಕಾವೇರಿ ವಿಷಯಾಂತರಕ್ಕೆ ಮೂರು ಡಿಸಿಎಂ ಹುದ್ದೆ ಚರ್ಚೆ ಹರಿಬಿಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಮೂವರು ಡಿಸಿಎಂಗಳನ್ನು ಮಾಡಲಿ. ನಾವು ಮೂವರನ್ನು ಡಿಸಿಎಂ ಮಾಡಿದ್ದೆವು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸಿಎಂಗೆ ಸವಾಲೆಸೆದಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಧ್ಯಮದರೊಂದಿಗೆ ಅವರು ಮಾತನಾಡಿದರು. ಕಾವೇರಿ, ಬರ ವಿಚಾರ ಡೈವರ್ಟ್ ಮಾಡಲು ಮೂರು ಡಿಸಿಎಂ ಹುದ್ದೆಯ ಚರ್ಚೆ ಬಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ …
Read More »ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು 16 ಶಾಸಕರ ಅನರ್ಹತೆ ಅರ್ಜಿಯನ್ನು ಎರಡು ವಾರದಲ್ಲಿ ಇತ್ಯರ್ಥಪಡಿಸಿ ಎಂದು ಸುಪ್ರೀಂಕೋರ್ಟ್ ಸ್ಪೀಕರ್ಗೆ ಸೂಚಿಸಿದೆ.
ನವದೆಹಲಿ: ಶಿವಸೇನೆಯಿಂದ ಬಂಡೆದ್ದಿರುವ ಮಹಾರಾಷ್ಟ್ರದ ಈಗಿನ ಸಿಎಂ ಏಕನಾಥ್ ಶಿಂಧೆ ಮತ್ತು ಅವರ ಬಣದ 16 ಶಾಸಕರ ವಿರುದ್ಧದ ಅನರ್ಹತೆ ಅರ್ಜಿಯನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ವಿಚಾರಣೆ ನಡೆಸಿ, ಎರಡು ವಾರದೊಳಗೆ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್ ಸ್ಪೀಕರ್ಗೆ ಸೂಚಿಸಿದೆ. ಶಿವಸೇನೆ ಬಂಡಾಯ ಶಾಸಕರ ಅನರ್ಹತೆ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಪಕ್ಷ ವಿರೋಧಿ …
Read More »ಸದ್ಯ ಬಿಜೆಪಿ ಜೊತೆ ಯಾವುದೇ ಮೈತ್ರಿ ಇಲ್ಲ: ಎಐಎಡಿಎಂಕೆ
ಚೆನ್ನೈ(ತಮಿಳುನಾಡು) : ಲೋಕಸಭೆ ಚುನಾವಣೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ಭರದ ಸಿದ್ಧತೆ ನಡೆಸುತ್ತಿವೆ. ಈ ನಡುವೆ ವಿವಿಧ ಪಕ್ಷಗಳ ಮೈತ್ರಿ ಬಗ್ಗೆಯೂ ಸುದ್ದಿಗಳು ಹರದಾಡುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿಯ ಮಿತ್ರ ಪಕ್ಷ ಎಐಎಡಿಎಂಕೆ(ಅಲ್ ಇಂಡಿಯಾ ದ್ರಾವಿಡ ಮುನ್ನೇತ್ರ ಕಳಗಂ) ಭಾರತೀಯ ಜನತಾ ಪಕ್ಷದೊಂದಿಗೆ ಸದ್ಯ ಯಾವುದೇ ಮೈತ್ರಿ ಇಲ್ಲ ಎಂದು ಹೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಎಡಿಎಂಕೆ ನಾಯಕ ಡಿ. ಜಯಕುಮಾರ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ …
Read More »
Laxmi News 24×7