Breaking News

ರಾಜಕೀಯ

ಕೌಟುಂಬಿಕ ಕಲಹ.. ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ರಾಯಚೂರು : ಕೌಟುಂಬಿಕ ಕಲಹದಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಮ್ಯಾಗಳಪೇಟೆಯಲ್ಲಿ ನಡೆದಿದೆ. ಮೃತರನ್ನು ಚೌಡಮ್ಮ(26), 4 ಹಾಗೂ 2 ವರ್ಷದ ಕಂದಮ್ಮಗಳು ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಮುದಗಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತಿ ಹುಲಿಗೆಪ್ಪ ಹಾಗೂ ಪತ್ನಿ ಚೌಡಮ್ಮ ಇಬ್ಬರ ಮಧ್ಯೆ ಮನೆಯಲ್ಲಿ ಜಗಳ ನಡೆದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

Read More »

ಬೆಂಗಳೂರಲ್ಲಿ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪುತ್ರ ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ದೊಡ್ಡಯ್ಯ ಎಂಬುವವರ ಪುತ್ರ ಗೌತಮ (29) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಗೌತಮ್ ಮನೆಯಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.‌ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಚಂದ್ರಾಲೇಔಟ್ ಪೊಲೀಸರು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗೌತಮ್​​ಗೆ‌ ಮದುವೆ ಮಾಡಲು ಇತ್ತೀಚೆಗೆ ಪೋಷಕರು ಕನ್ಯೆ ಹುಡುಕುತ್ತಿದ್ದರು. ಇವರ ತಂದೆ ದೊಡ್ಡಯ್ಯ ಕಾಂಗ್ರೆಸ್​​ನಲ್ಲಿ ಗುರುತಿಸಿಕೊಂಡಿದ್ದು, ಅತ್ತಿಗುಪ್ಪೆ ವಾರ್ಡ್​​ನ ಮಾಜಿ ಕಾರ್ಪೋರೇಟರ್ ಆಗಿದ್ದಾರೆ. ಗೌತಮ್ ತಂದೆ ದೊಡ್ಡಣ್ಣ …

Read More »

ವೃತ್ತಿಪರ ಕೋರ್ಸ್​ ಪ್ರವೇಶಕ್ಕೆ 62 ಲಕ್ಷ ಆಪ್ಷನ್ ಎಂಟ್ರಿ: ಪರಿಷ್ಕರಣೆಗೆ ನಾಳೆಯಿಂದ ಅವಕಾಶ

ಬೆಂಗಳೂರು : ನಾನಾ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ರಾಜ್ಯದಲ್ಲಿ ಈಗಾಗಲೇ ಕರ್ನಾಟಕ ಸಾಮಾನ್ಯ ಪರೀಕ್ಷೆ (ಸಿಇಟಿ) ಬರೆದಿರುವ ವಿದ್ಯಾರ್ಥಿಗಳಿಗೆ ಯಾವ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದನ್ನು ಭರ್ತಿ ಮಾಡಿಕೊಳ್ಳಲು ನೀಡಿದ್ದ ಅವಕಾಶ ಮುಕ್ತಾಯವಾಗಿದೆ. ಈವರೆಗೆ 62 ಲಕ್ಷ ಸಂಯೋಜಿತವಾಗಿ ಐಚ್ಛಿಕಗಳನ್ನು ದಾಖಲಿಸಲಾಗಿದೆ. ಆಗಸ್ಟ್ 5ರ ಸಂಜೆಯಿಂದ ಆಗಸ್ಟ್ 8ರವರೆಗೆ ನೀಡಲಾಗಿದ್ದ ಸಂಯೋಜಿತ ಐಚ್ಛಿಕ ದಾಖಲೆ (ಕಂಬೈನ್ಡ್ ಆಪ್ಷನ್ ಎಂಟ್ರಿ) ಮೂಲಕ 1.2 ಲಕ್ಷ ಆಕಾಂಕ್ಷಿಗಳಿಂದ 62 ಲಕ್ಷ ಎಂಟ್ರಿ ದಾಖಲಿಸಿದೆ. ಇದರಲ್ಲಿ …

Read More »

ಕ ಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ನೇಮಕ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ಅವರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿನಿಯಮ 2013ರ ನಿಯಮಿತ ಅನ್ವಯ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 11 ಸದಸ್ಯರನ್ನೊಳಗೊಂಡಂತೆ ಮಂಡಳಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ತೀವ್ರ ಅಸಮಾಧಾನಗೊಂಡಿದ್ದರು. ಈ ಸಂಬಂಧ ಕೆಲ ದಿನಗಳಿಂದ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದರು. …

Read More »

ರಾಜ್ಯಾದ್ಯಂತ ಆಗಸ್ಟ್ 27ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹ ಲಕ್ಷ್ಮೀ ಯೋಜನೆಗೆ ಆಗಸ್ಟ್​ 27ರಂದು ಚಾಲನೆ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …

Read More »

ನಿರ್ಮಾಪಕರ ವಿರುದ್ಧ ಮಾನಹಾನಿ ಆರೋಪ ಕೇಸ್; ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ ನಟ ಸುದೀಪ್

ಬೆಂಗಳೂರು : ಚಿತ್ರ ನಿರ್ಮಾಪಕ ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರ ವಿರುದ್ಧ ಮಾನಹಾನಿ ದಾವೆ ದಾಖಲಿಸಬೇಕು ಹಾಗೂ 10 ಸಾವಿರ ರೂಪಾಯಿ ದಂಡ ಪಾವತಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರಿನ ಸಂಬಂಧ ನಟ ಸುದೀಪ್ ಅವರ ಪ್ರಮಾಣೀಕೃತ ಹೇಳಿಕೆಯನ್ನು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯ ಇಂದು ದಾಖಲಿಸಿಕೊಂಡಿದೆ.   ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರು ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ಮತ್ತು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸುದೀಪ್ …

Read More »

ಮಗಳನ್ನು ಮದುವೆ ಮಾಡಿಕೊಡದ್ದಕ್ಕೆ 850 ಅಡಿಕೆ ಗಿಡ ಕಡಿದು ಹಾಕಿದ ಯುವಕ’- ಪೊಲೀಸರಿಗೆ ದೂರು ನೀಡಿದ ವ್ಯಕ್ತಿ

ಮೈಸೂರು: ಮಗಳನ್ನು ಮದುವೆ ಮಾಡಿಕೊಡಲು ಒಪ್ಪದ ತಂದೆಯ ನಿರ್ಧಾರದಿಂದ ಕೋಪಗೊಂಡ ಯುವಕನೊಬ್ಬ, ಯುವತಿಯ ತಂದೆಗೆ ಸೇರಿದ ಫಸಲಿಗೆ ಬಂದಿದ್ದ 850ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಮನಬಂದಂತೆ ಕತ್ತರಿಸಿ ಹಾಕಿರುವ ಆರೋಪ ಪ್ರಕರಣ ಹುಣಸೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಈ ಸಂಬಂಧ ಯುವತಿಯ ತಂದೆ ಆರೋಪಿಯ ವಿರುದ್ಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಹುಣಸೂರು ತಾಲೂಕಿನ ಕಡೆಮನುಗನಹಳ್ಳಿ ಎಂಬ ಗ್ರಾಮದಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ. ಕಡೆಮನುಗನಹಳ್ಳಿ …

Read More »

ತುಂಗಭದ್ರಾ ತೀರದ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ: ಸಿಬ್ಬಂದಿ ಮೇಲೆಯೇ ಹಲ್ಲೆ – ದೂರು ದಾಖಲು

ರಾಯಚೂರು : ಜಿಲ್ಲೆಯ ಮಾನವಿ ತಾಲೂಕಿನ ಚಿಕಲಪರ್ವಿ ಗ್ರಾಮ ಸೇರಿದಂತೆ ವಿವಿಧೆಡೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಟಿಪ್ಪರ್ ಹಾಗೂ ಜೆಸಿಬಿ ಜಪ್ತಿ ಮಾಡಿಕೊಂಡಿದ್ದಾರೆ. ಈ ವೇಳೆ ಆರು ಜನರ ತಂಡವೊಂದು ರಕ್ಷಣಾ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದು, ಅಧಿಕಾರಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮಾಜಿ ಸೈನಿಕ ಹಾಗೂ ಖನಿಜಾ ರಕ್ಷಣಾ ಪಡೆಯ ಸಿಬ್ಬಂದಿ ನೀಲಪ್ಪ ಹಲ್ಲೆಗೊಳಗಾದವರು. ಕಬ್ಬಿಣದ ರಾಡ್​​ನಿಂದ ಹಲ್ಲೆ ಮಾಡಲಾಗಿದ್ದು, …

Read More »

ಬೆಂಗಳೂರಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ: ಕ್ಯಾಬ್ ಚಾಲಕ ಪೊಲೀಸ್​ ವಶಕ್ಕೆ

ಬೆಂಗಳೂರು: ಮಹಿಳೆಗೆ ನಿಂದಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು ಬೆಳ್ಳಂದೂರು ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪತ್ನಿಯ ಮೇಲೆ ಹಲ್ಲೆ ಮಾಡಿರುವುದಾಗಿ ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಕ್ಯಾಬ್ ಚಾಲಕ ಬಸವರಾಜ್​ ಎಂಬಾತನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೆಳ್ಳಂದೂರಿ‌ನ ಬೋಗನಹಳ್ಳಿಯ ಅಪಾರ್ಟ್​​ಮೆಂಟ್​​​ನಲ್ಲಿ ಮಹಿಳೆಯ ಕುಟುಂಬ ವಾಸವಾಗಿದೆ. ಮಗನ ಚಿಕಿತ್ಸೆ ಸಲುವಾಗಿ ಬುಧವಾರ ಬೋಗನಹಳ್ಳಿಯಿಂದ ಮಣಿಪಾಲ್ ಆಸ್ಪತ್ರೆಗೆ ತೆರಳಲು ಮಹಿಳೆಯು ಕ್ಯಾಬ್ ಬುಕ್ …

Read More »

ಮನೆ ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆಗೆ ಚಾಕು‌ವಿನಿಂದ ಇರಿದ ಬಾಡಿಗೆದಾರ..

ಬೆಂಗಳೂರು: ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮುನೇಶ್ವರ ನಗರದ ನಿವಾಸಿ ಶ್ರೀದೇವಿ ತೀವ್ರ ಹಲ್ಲೆಗೊಳಗಾಗಿದ್ದು, ಈಕೆ ನೀಡಿದ ದೂರಿನ ಮೇರೆಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಜೀರ್, ಈತನ ಪುತ್ರ ಸದ್ದಾಂ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ‌. ಮುನೇಶ್ವರ ನಗರದಲ್ಲಿ‌ ಕಳೆದ 16 ವರ್ಷಗಳಿಂದ ಶ್ರೀದೇವಿ ವಾಸವಾಗಿದ್ದಳು.‌ ಈಕೆ ಉಳಿದುಕೊಂಡಿದ್ದ ಕಟ್ಟಡದಲ್ಲಿ ನಜೀರ್ ವಾಸವಾಗಿದ್ದ. …

Read More »