ಬೆಂಗಳೂರು: ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 3ರ ವರೆಗೆ ವರ್ಗಾವಣೆ ಅವಧಿಯನ್ನು ಸರ್ಕಾರ ವಿಸ್ತರಿಸಿದೆ. 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮೂರನೇ ಬಾರಿಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು 2023-24ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಜೂನ್ 15ರವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಬಳಿಕ ಜೂನ್ 30ರವರೆಗೆ ಸಾರ್ವತ್ರಿಕ ವರ್ಗಾವಣೆ ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು. ಇದೀಗ ಸಾರ್ವತ್ರಿಕ …
Read More »ಪಿಬಿ ರಸ್ತೆಯ ನೇಕಾರ ನಗರದಲ್ಲಿ ಗುರಿ ಅಡ್ಡಾ ಗೆ ಆಕಸ್ಮಿಕವಾಗಿ ಬೆಂಕಿ
ಪಿಬಿ ರಸ್ತೆಯ ನೇಕಾರ ನಗರದಲ್ಲಿ ಗುರಿ ಅಡ್ಡಾ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದ್ದು, ದೊಡ್ಡ ಅವಘಡ ತಪ್ಪಿದಂತಾಗಿದೆ. ಆಕಸ್ಮಿಕವಾಗಿ ಬೆಂಕಿ ತಗಲಿದ್ದು, ಪಕ್ಕದಲ್ಲಿಯೇ ವಿದ್ಯುತ್ ಹೈಪರ್ ಲೈನ್ ಇದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಅಗ್ನಿ ಅವಘಡದಿಂದಾಗಿ ಕೆಲ ಕಾಲ ಬಿಗುವಿನ ವಾತಾವರಣ ಮನೆಮಾಡಿತ್ತು, ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಮುಂದಾಗಿದ್ದಾರೆಂದು ತಿಳಿದು ಬಂದಿದೆ.
Read More »ಪೆಟ್ರೋಲ್ ಪಂಪಿಗೆ ಆಗಮಿಸಿ, ಸಾವಿರ ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡು, ಪರಾರಿ
ದ್ವಿಚಕ್ರ ವಾಹನ ಸವಾರನು ಪೆಟ್ರೋಲ್ ಪಂಪಿಗೆ ಆಗಮಿಸಿ, ಸಾವಿರ ರೂಪಾಯಿ ಪೆಟ್ರೋಲ್ ಹಾಕಿಸಿಕೊಂಡು, ಪರಾರಿ ಆಗುತ್ತಿರುವ ಘಟನೆಯೊಂದು ಶಿರುಗುಪ್ಪಿ ಗ್ರಾಮದ ಪಂಪುಗಳಲ್ಲಿ ಸಂಭವಿಸುತ್ತಿದ್ದು, ಪಂಪ್ ಕಾರ್ಮಿಕರು ಹೈರಾಣಾಗಿದ್ದಾರೆ. ಶಿರುಗುಪ್ಪಿ ಗ್ರಾಮದಲ್ಲಿ ಸುಮಾರು ಮೂರು ಪೆಟ್ರೋಲ್ ಪಂಪ್‌ಗಳಿದ್ದು, ಉಗಾರ್ ರಸ್ತೆಯಲ್ಲಿರುವ ಪೆಟ್ರೋಲ್ ಪಂಪಿನಲ್ಲಿ ಸತತ ಮೂರನೇ ಬಾರಿಗೆ ಇಂಥದೊಂದು ಘಟನೆ ಸಂಭವಿಸಿದೆ. ಇದಲ್ಲದೆ ಜುಗೂಳ ರಸ್ತೆಯಲ್ಲಿರುವ ಪಂಪ್‌ನಲ್ಲಿಯೂ ಸಹ ಇಂಥದೇ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ . ಈ ಕುರಿತು …
Read More »ಎರಡನೇ ಆಷಾಢ ಶುಕ್ರವಾರ: ಸಿಂಹವಾಹಿನಿ ಅಲಂಕಾರದಲ್ಲಿ ಚಾಮುಂಡೇಶ್ವರಿ ದೇವಿ, ದರ್ಶನಕ್ಕೆ ಭಕ್ತರ ದಂಡು
ಮೈಸೂರು : ಇಂದು ಎರಡನೇ ಆಷಾಢ ಶುಕ್ರವಾರವಾದ ಪ್ರಯುಕ್ತ ನಾಡ ಅಧಿದೇವತೆ ಚಾಮುಂಡಿ ತಾಯಿಯ ಮೂಲ ಮೂರ್ತಿಗೆ ವಿಶೇಷ ಸಿಂಹವಾಹಿನಿ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆಯಿಂದಲೇ ನಾಡಿನ ವಿವಿಧ ಕಡೆಗಳಿಂದ ಆಗಮಿಸಿದ ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಆಷಾಢ ಶುಕ್ರವಾರದ ನಿಮಿತ್ತ ದೇವಸ್ಥಾನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಭಕ್ತರು ಅನುಕೂಲಕ್ಕಾಗಿ ನಗರದ …
Read More »ಬೇರೆಯವರಿಗೆ ಹೊರೆಯಾಗಬಾರದೆಂದು 15 ವರ್ಷದ ಹಿಂದೆಯೇ ಸಮಾಧಿ ಮಾಡಿಕೊಟ್ಟುಕೊಂಡಿದ್ದ ಅಜ್ಜ…
ಕಲಬುರಗಿ: ತನ್ನ ಸಾವಿನ ಬಳಿಕ ಯಾರಿಗೂ ಹೊರೆಯಾಗಬಾರದೆಂಬ ಉದ್ದೇಶದಿಂದ ಹಾವು ಕಚ್ಚಿದಾಗ ಸಾವಿಗೂ ಮುನ್ನ ಅಜ್ಜಿಯೊಬ್ಬಳು ತನ್ನ ಕೊರಳಲ್ಲಿನ ತಾಳಿ ಬಿಚ್ಚಿಕೊಟ್ಟು ಅಂತ್ಯ ಸಂಸ್ಕಾರಕ್ಕೆ ಬಳಕೆ ಮಾಡಿಕೊಳ್ಳುವಂತೆ ಹೇಳಿದ್ದ ಸುದ್ದಿಯೊಂದು ವರದಿಯಾಗಿತ್ತು. ಇದೀಗ ಅದೇ ರೀತಿಯ ಮತ್ತೊಂದು ಸುದ್ದಿ ಜನರ ಗಮನ ಸೆಳೆಯುತ್ತಿದೆ. ತೀರಿಕೊಂಡ ಬಳಿಕ ಯಾರಿಗೂ ಹೊರೆ ಆಗೋದು ಬೇಡ ಅಂತ ಅಜ್ಜನೋರ್ವ ಬರೋಬ್ಬರಿ 15 ವರ್ಷಗಳ ಹಿಂದೆಯೇ ಗುಂಡಿ ತೆಗೆದಿದ್ದು, ಈಗ ಅವರನ್ನು ಅದೇ ಗುಂಡಿಯಲ್ಲಿ ಸಮಾಧಿ ಮಾಡಲಾಗಿದೆ. …
Read More »30 ವರ್ಷಗಳ ಬಳಿಕ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಕೈ ಕೊಟ್ಟಿದೆ.
ಚಿಕ್ಕಮಗಳೂರು: 30 ವರ್ಷಗಳ ಬಳಿಕ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಕೈ ಕೊಟ್ಟಿದೆ. ಪ್ರತಿ ವರ್ಷ ಸುರಿಯುತ್ತಿದ್ದ ವಾಡಿಕೆ ಮಳೆಯೂ ಆಗದೆ ಮಲೆನಾಡು ಸೇರಿದಂತೆ ಬಯಲುಸೀಮೆ ಭಾಗದಲ್ಲಿ ಬರದ ವಾತಾವರಣ ಸೃಷ್ಟಿಯಾಗುವ ಆತಂಕ ಮೂಡಿದೆ. ಚಿಕ್ಕಮಗಳೂರು ಜಿಲ್ಲೆಯ ಮೇಲೆ ಮುನಿಸಿಕೊಂಡಿರುವ ವರುಣ ದೇವನಿಗಾಗಿ ಜನತೆ ದೇವರ ಮೊರೆ ಹೋಗುತ್ತಿದ್ದಾರೆ. ಹೌದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುನಿಸಿಕೊಂಡಿರುವ ವರುಣನಿಗಾಗಿ ಮಲೆನಾಡಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದ್ದು, 3 ದಶಕದ ಬಳಿಕ ಕಾಫಿನಾಡಿನಲ್ಲಿ ಬರದ ಆತಂಕ ಮನೆ ಮಾಡಿದೆ. …
Read More »ಮೀಸಲಾತಿಯ ಕೊಡುಗೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ಕೊಡುಗೆ ಶೂನ್ಯ: ಚೇತನ್ ಅಹಿಂಸಾ
ಕಲಬುರಗಿ: ಧಾರ್ಮಿಕ ಗಲಭೆಗೆ ಕಾರಣವಾಗುತ್ತಿದ್ದ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ನಿರ್ಧಾರ ಒಳ್ಳೆಯದು. ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆದು ಒಬ್ಬರ ಆಹಾರ ಸಂಸ್ಕೃತಿಯನ್ನು ರಕ್ಷಿಸಿದಂತೆ ಆಗಲಿದೆ ಎಂದು ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಪರಿಚ್ಛೇದ 25ರ ಅಡಿ ಮತಾಂತರಗೊಳ್ಳುವುದು ಕಾನೂನು ಬದ್ಧವಾಗಿದೆ. ಅದು ಧಾರ್ಮಿಕ ಹಕ್ಕೂ ಆಗಿದೆ. ಆದಾಗ್ಯೂ, ಬಲವಂತದಿಂದ ಮತಾಂತರ ಮಾಡುವುದು ತಪ್ಪು. ತಮಗಿಷ್ಟ ಬಂದಂತಹ ಧರ್ಮವನ್ನು …
Read More »ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ
ಶಿವಮೊಗ್ಗ: ತಡರಾತ್ರಿ ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶವಾದ ಬ್ಯಾಕೋಡು ಸಮೀಪದ ಎಸ್.ಎಸ್.ಬೋಗ್ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮರಾಠಿ ಗ್ರಾಮದ ಗಣೇಶ್ (47) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಸುಮಾರು 3 ಗಂಟೆಗೆ ಘಟನೆ ನಡೆದಿದೆ. ಗಣೇಶ್ ತಮ್ಮ ಗುಡಿಸಲಿನಲ್ಲಿ ಮಲಗಿದ್ದರು. ಈ ವೇಳೆ ನುಗ್ಗಿದ ಹುಲಿ ದಾಳಿ ನಡೆಸಿದೆ. ಇದರಿಂದಾಗಿ ಗಣೇಶ್ ಅವರ ಬಲಗೈಗೆ ಗಂಭೀರ ಸ್ವರೂಪದ …
Read More »ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ’: ಬೆಳಗಾವಿ ಉತ್ತರ ವಲಯ ನೂತನ ಐಜಿಪಿ ವಿಕಾಸ್ ಕುಮಾರ್ ಅಧಿಕಾರ ಸ್ವೀಕಾರ
ಬೆಳಗಾವಿ: ಮರಳು ಮಾಫಿಯಾ ಸೇರಿದಂತೆ ಇನ್ನಿತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣಕ್ಕೆ ಕ್ರಮ ವಹಿಸುವುದು ಸೇರಿದಂತೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ ನೀಡಲಾಗುವುದು ಎಂದು ಉತ್ತರ ವಲಯ ನೂತನ ಐಜಿಪಿ ವಿಕಾಶಕುಮಾರ್ ವಿಕಾಸ್ ಹೇಳಿದರು. ಬೆಳಗಾವಿಯ ಐಜಿಪಿ ಕಚೇರಿಯಲ್ಲಿ ಇಂದು ಉತ್ತರ ವಲಯ ನೂತನ ಐಜಿಪಿ ಆಗಿ ಅವರು ಅಧಿಕಾರ ಸ್ವೀಕರಿಸಿದರು. ನೂತನ ಐಜಿಪಿಯನ್ನು ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ಆತ್ಮೀಯವಾಗಿ ಬರಮಾಡಿಕೊಂಡರು. ಇದಕ್ಕೂ ಮೊದಲು ಜಿಲ್ಲಾ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. …
Read More »17 ವರ್ಷಗಳ ನಂತರ ನಡೆದಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಸಕಲರಿಗೂ ದೇವಿ ಒಳ್ಳೆದನ್ನು ಮಾಡಲಿ:. ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು. ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, …
Read More »
Laxmi News 24×7