Breaking News

ರಾಜಕೀಯ

17 ವರ್ಷಗಳ ನಂತರ ನಡೆದಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಸಕಲರಿಗೂ ದೇವಿ ಒಳ್ಳೆದನ್ನು ಮಾಡಲಿ:. ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು.   ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, …

Read More »

ಒಂದೇ ಕುಟುಂಬದ ಮೂವರ ಮೃತದೇಹ ಪತ್ತೆ; ಹೆಂಡತಿ ಮಗನ ಕೊಂದು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಕಾರವಾರ (ಉತ್ತರ ಕನ್ನಡ) : ಒಂದೇ ಕುಟುಂಬದ ಮೂವರ ಮೃತದೇಹ ಕಾರವಾರ ಹಾಗೂ ಗೋವಾ ಬಳಿ ಪತ್ತೆಯಾಗಿದ್ದು, ಹೆಂಡತಿ ಮಗನ‌ನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗೋವಾ ಮೂಲದ ಶ್ಯಾಮ್​ ಪಾಟೀಲ್ (45), ಜ್ಯೋತಿ (38) ಇವರ 12 ವರ್ಷದ ಮಗ ಮೃತಪಟ್ಟವರಾಗಿದ್ದಾರೆ. ಜ್ಯೋತಿ ಹಾಗೂ ಅವರ ಮಗನ ಮೃತದೇಹ ಕಾರವಾರದ ದೇವಭಾಗ ಬೀಚ್ ಬಳಿ ಪತ್ತೆಯಾಗಿವೆ. ಇನ್ನು ಶ್ಯಾಮ್​ ಪಾಟೀಲ್ ಅವರ ಮೃತದೇಹ ಗೋವಾದ ಕುಕ್ಕಳ್ಳಿ ಪಾಡಿಯಲ್ಲಿ …

Read More »

ಗೃಹಜ್ಯೋತಿ, ಗೃಹಲಕ್ಷ್ಮಿ ಹೆಸರಲ್ಲಿ ಜನರಿಗೆ ಮೋಸದ ಆರೋಪ.. ಬಳ್ಳಾರಿಯಲ್ಲಿ ಓರ್ವ ವಶಕ್ಕೆ

ಬಳ್ಳಾರಿ: ರಾಜ್ಯ ಸರ್ಕಾರವು ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಬೆನ್ನಲ್ಲೇ ಗೃಹಲಕ್ಷ್ಮಿ ಯೋಜನೆ ನೆಪ ಮಾಡಿಕೊಂಡು ಅಪ್ಲಿಕೇಶನ್​ ಭರ್ತಿ ಮಾಡುವ ಹೆಸರಿನಲ್ಲಿ ನೂರಾರು ಜನರಿಂದ ಹಣ ಪಡೆದಿದ್ದಾನೆ ಎಂದು ಆರೋಪಿಸಿ, ವ್ಯಕ್ತಿಯೊಬ್ಬನನ್ನು ಜನರೇ ಪೊಲೀಸರಿಗೆ ಹಿಡಿದೊಪ್ಪಿಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ದಿಶಾ ಒನ್​ ಎಂಬ ಖಾಸಗಿ ಏಜೆನ್ಸಿ ಹೆಸರಿನಲ್ಲಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೇರಿದಂತೆ ಇತರ ಗ್ಯಾರಂಟಿ ಯೋಜನೆಗಳ ಫಾರ್ಮ್​ ಭರ್ತಿ …

Read More »

ತಹಶೀಲ್ದಾರ್ ಅಶೋಕ್​ ಮಣ್ಣಿಕೇರಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾದ ಪ್ರಕರಣ ಮಗ್ಗಲು ಬದಲಿಸಿದೆ.

ಬೆಳಗಾವಿ: ಬೆಳಗಾವಿಯ ಉಪವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಅಶೋಕ್​ ಮಣ್ಣಿಕೇರಿ ಅವರು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎನ್ನಲಾದ ಪ್ರಕರಣ ಮಗ್ಗಲು ಬದಲಿಸಿದೆ. ಇದು ಸಹಜ ಸಾವಲ್ಲ ಎಂದು ಅಶೋಕ್ ಅವರ ಸಹೋದರಿಯರು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ, ಸಹೋದರ ಸ್ಯಾಮ್ಯುಯೆಲ್ ವಿರುದ್ಧ ಕೊಲೆ ಆರೋಪ ಹೊರಿಸಿದ್ದಾರೆ. ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಶೋಕ್ ಮಣ್ಣಿಕೇರಿ ಕುಟುಂಬ ವಾಸವಿತ್ತು. ತಡರಾತ್ರಿ ಹೃದಯಾಘಾತವಾಗಿದೆ ಎಂದು ಖಾಸಗಿ ಆಸ್ಪತ್ರೆಗೆ ಅಶೋಕ್​ …

Read More »

ಸಕ್ಕರೆನಾಡಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ.. ಭಯಾನಕ ಕೊಲೆ ಕಂಡು ಬೆಚ್ಚಿಬಿದ್ದ ಮಂಡ್ಯ ಜನರು

ಮಂಡ್ಯ: ಜಿಲ್ಲೆಯಲ್ಲಿ ಜನರು ಬೆಚ್ಚಿ ಬೀಳುವಂತಹ ಭಯಾನಕ ಕೊಲೆ ಪ್ರಕರಣ ಇಂದು ನಡೆದಿದೆ. ರೌಡಿಶೀಟರ್ ಒಬ್ಬನನ್ನು ಸ್ನೇಹಿತರೇ ಕತ್ತು ಕತ್ತರಿಸಿ ಕೊಲೆ ಮಾಡಿರುವಂತಹ ಭೀಕರ ಘಟನೆ ಶ್ರೀರಂಗಪಟ್ಟಣದ ಬಳಿ ನಡೆದಿದೆ.   ಸ್ನೇಹಿತರು ಪಾರ್ಟಿ ಮಾಡುವ ವೇಳೆಯಲ್ಲಿ ಗಲಾಟೆ: ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆಯ ಕೆಆರ್​ಎಸ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದಂತಹ ಸುಧೀರ್ (35) ಎಂಬಾತನನ್ನು ಭಯಾನಕವಾಗಿ ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಸುಧೀರ್ ಹಾಗೂ ಸ್ನೇಹಿತರೊಂದಿಗೆ ಇಂದು ಎಣ್ಣೆ ಪಾರ್ಟಿ …

Read More »

ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: ಇಬ್ಬರು ಸಾವು, 4 ಮಂದಿಗೆ ಗಾಯ.

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಬಸ್ ಚಾಲಕ 50 ವರ್ಷದ ಸದಾನಂದ ಬೆಳಗಾವಿ ಮತ್ತು ಪ್ರಯಾಣಿಕ ರಾಹುಲ್​ (22) ಮೃತರಾಗಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಮೀರಜ್​ಗೆ ಹೋಗುತ್ತಿದ್ದ ಸಂದರ್ಭದಲ್ಲಿ ನಸುಕಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ರಸ್ತೆ …

Read More »

ಯುವತಿಯ ವಿಚಾರಕ್ಕೆ ಸಂಬಂಧಿಸಿದಂತೆ ಮಾರಾಮಾರಿ, 7 ಜನರ ಬಂಧನ

ಬೆಂಗಳೂರು : ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವತಿ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಈಗ ಈ ಪ್ರಕರಣ ಅನ್ನಪೂರ್ಣೇಶ್ವರಿ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆ.   ಜೂನಿಯರ್ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರ ಬೀಸಿದ್ದ 7 ಜನ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಾಹಸ್ ಗೌಡ, ಜೀವನ್, ಅಭಿಷೇಕ್, ರವಿಕುಮಾರ್, ಚಂದನ್, ಗೌತಮ್ ಹಾಗೂ ಸೂರ್ಯ ಎಂದು ಗುರುತಿಸಲಾಗಿದೆ. ಇದೇ ತಿಂಗಳ 5ರಂದು ನಾಗರಭಾವಿಯ ಖಾಸಗಿ‌ …

Read More »

65 ಲೀಟರ್ ಸಾರಾಯಿ ಜಪ್ತಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್

ಖಾನಾಪೂರ ತಾಲೂಕಿನ ಅಶೋಕನಗರದ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿದ ಖಾನಾಪೂರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ಮತ್ತು ಪಿಎಸ್ಐ ಗಿರೀಶ್.ಎಂ ಅವರು ದಾಳಿ ನಡೆಸಿ ಸುಮಾರು 65 ಲೀಟರ್ ಸಾರಾಯಿ ಜಪ್ತಿ ಪಡೆಸಿಕೊಂಡಿದ್ದು,ಕಾಡಪ್ಪಾ ಬಸಪ್ಪಾ ಉಪ್ಪಾಶಿ ಅಶೋಕನಗರದ ಇತನು ಈ ಅಕ್ರಮ ಮಾಡುತ್ತಿರುವುದು ಕಂಡು ಬಂದಿದೆ.ಖಾನಾಪೂರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More »

ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ: ಬೊಮ್ಮಾಯಿ

ಬೆಂಗಳೂರು: ಇವರು ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರದ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್​ನವರು ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆ.ಜಿ ಅಕ್ಕಿ ಮಾತ್ರ ಬರುತ್ತದೆ …

Read More »

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಮಂಗಳೂರು: ಮನೆಗೆ ನುಗ್ಗಿ ಒಂಟಿ ಮಹಿಳೆಯನ್ನು ಅತ್ಯಾಚಾರ ಮಾಡಿ, ಹತ್ಯೆ ನಡೆಸಿರುವ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಮಂಜೇಶ್ವರ ನಿವಾಸಿ ಮೊಹಮ್ಮದ್‌ ಅಶ್ರಫ್‌ (33) ಶಿಕ್ಷೆಗೊಳಗಾದ ಅಪರಾಧಿ. ಮೊಹಮ್ಮದ್‌ ಅಶ್ರಫ್‌ ಕೂಲಿ ಕೆಲಸ ಮಾಡಿಕೊಂಡಿದ್ದು, ವಿವಾಹವಾಗಿ ಇಬ್ಬರು ಮಕ್ಕಳಿದ್ದಾರೆ. ಈತ ಬಾಳೆಪುಣಿ ಗ್ರಾಮದ ಬೆಳ್ಕೆರಿಯಲ್ಲಿರುವ ಸಂತ್ರಸ್ತ ಮಹಿಳೆಯ ಸಹೋದರನ ಮನೆಗೆ ತೋಟದ ಕೆಲಸಕ್ಕೆ ಹೋಗಿದ್ದ. …

Read More »