Breaking News

ರಾಜಕೀಯ

ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ಚಿತ್ರದುರ್ಗ‌: ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ, ರಘುರಾಮ ರೆಡ್ಡಿ ಹಾಗೂ ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ವಿರುದ್ಧ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರ ಮತದಾನ ಪ್ರಕ್ರಿಯೆ ಮುಕ್ತಾಯವಾಗುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪಾರೆಡ್ಡಿ ಕಾರಿನಲ್ಲಿ ಮತದಾನ ಕೇಂದ್ರದ ಕಾಂಪೌಂಡ್ ಒಳಗೆ ಬಂದಿದ್ದರು. ಇದಕ್ಕೆ ಕಾಂಗ್ರೆಸ್​ ಅಭ್ಯರ್ಥಿ ವೀರೇಂದ್ರ ಪಪ್ಪಿ ಆಕ್ಷೇಪಿಸಿದ್ದರು. ಈ ಸಂಬಂಧ …

Read More »

ಬಾವಮೈದುನನ್ನು ಕೊಲೆಗೈದ ಬಾವ.!

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದುನರ ನಡುವಿನ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ.     ಮೃತರು ಜಮಾಲ್ ಎಂದು ತಿಳಿದುಬಂದಿದೆ. ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ. ಸದ್ಯ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಬ್ಬರ ಮನೆಗಳು ಅಕ್ಕಪಕ್ಕದಲ್ಲಿದ್ದು ಸಣ್ಣ ಮಕ್ಕಳೊಳಗಿನ ವೈಮನಸ್ಸಿನ ವಿಚಾರವಾಗಿ ಇಂದು ಬೆಳಗ್ಗೆ ಜಮಾಲ್ ಮತ್ತು ಸುಹೈಬ್ ನಡುವೆ …

Read More »

ಬೆಳಗಾವಿಯಲ್ಲಿ ಇಂದು ಮುಂಜಾನೆ ಸುರಿದ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಬೆಳಗಾವಿ: ಇಂದು ಬೆಳಗಿನ ಜಾವ ಸುರಿದ ಧಾರಾಕಾರ ಮಳೆಯಿಂದಾಗಿ ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕುರುಳಿ, ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಘಟನೆ ತಾಲೂಕಿನ ಕುರಿಹಾಳ ಗ್ರಾಮದಲ್ಲಿ ನಡೆದಿದೆ. ವೀರಭದ್ರೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ನೆರಳಿನ‌ ವ್ಯವಸ್ಥೆ ಕಲ್ಪಿಸಲು ನಿರ್ಮಿಸಿದ್ದ ತಗಡಿನ ಶೆಡ್ ಕೂಡ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಳಗಾವಿ ನಗರ ಸೇರಿ ಜಿಲ್ಲೆ ವಿವಿಧೆಡೆ ಬೆಳಗ್ಗೆಯಿಂದ ತುಂತುರು ಮಳೆ ಸುರಿಯುತ್ತಿದೆ. ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಮುರಿದು …

Read More »

ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಳ್ಳುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಳ್ಳುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ ಚುನಾವಣೆ ಕಣಕ್ಕಿಳಿದಿರುವ ಕುಮಾರಸ್ವಾಮಿ ಅವರ ಆರೋಗ್ಯ ಕೈಕೊಟ್ಟಿದ್ದು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯಲಿರುವ ಅವರ ಅಲ್ಲಿ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ. ಕಳೆದ ಮೂರು ತಿಂಗಳುಗಳಿಂದ ಚುನಾವಣೆ ಪ್ರಚಾರ ಕಾರ್ಯದಲ್ಲಿ ಎಡೆಬಿಡದೆ ನಿರತರಾಗಿದ್ದ ಕುಮಾರಸ್ವಾಮಿ ಅವರು ಅನಾರೋಗ್ಯದಿಂದಾಗಿ 20 ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಅಲ್ಲಿಂದಲೇ …

Read More »

ಗಾಲಿ ಜನಾರ್ದನ ರೆಡ್ಡಿ ವಿರುದ್ಧ FIR ದಾಖಲ

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ FIR ದಾಖಲಿಸಲಾಗಿದೆ. ರಾಜ್ಯ ವಿಧಾನಸಭೆಗೆ ಬುಧವಾರ ನಡೆದ ಚುನಾವಣೆಯ ಮತದಾನದ ವೇಳೆ ಜನಾರ್ದನ ರೆಡ್ಡಿಯವರು ಮತಗಟ್ಟೆ ಬಳಿ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ಅವರ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಂಗಾವತಿ ಕ್ಷೇತ್ರದ ಲಕ್ಷ್ಮೀ ಕ್ಯಾಂಪ್ ನ ನಿಷೇಧಿತ ಪ್ರದೇಶದಲ್ಲಿ ಜನಾರ್ದನ ರೆಡ್ಡಿ ಅವರು ನೀತಿ ಸಂಹಿತೆ ಉಲ್ಲಂಘಿಸಿ ತಮ್ಮ …

Read More »

ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ತಡರಾತ್ರಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅಡ್ಮಿಟ್ ಅಗಿದ್ದಾರೆ. ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.

Read More »

ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದ B.S.Y.

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಯಾವುದೇ ಸಂಶಯವಿಲ್ಲ, ನನಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ನಮಗೆ ಕರ್ನಾಟಕದ ಜನರ ನಾಡಿಮಿಡಿತದ ಬಗ್ಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರಲಿದೆ, ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದರು.

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ದಕ್ಷಿನ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು,ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ …

Read More »

ರಾಜ್ಯದ ಎಲ್ಲಾ 224 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನ ಮುಕ್ತಾಯ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಅವಧಿ ಅಂತ್ಯವಾಗಿದ್ದು, ರಾಜ್ಯದಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ಪ್ರಕರಿಯೆ ನಡೆದಿದೆ. ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದ್ದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆವರೆಗೆ ನಡೆದಿದ್ದು, ರಾಜ್ಯದ ಎಲ್ಲಾ 224 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನ ಮುಕ್ತಾಯವಾಗಿದೆ. ಸಂಜೆ 5ಗಂಟೆಯವರೆಗೆ ರಾಜಧಾನಿ ಬೆಂಗಳೂರಿನಲ್ಲಿ ಶೇ.50.91ರಷ್ಟು ಮತದಾನವಾಗಿದ್ದು, ಬೆಂಗಳೂರಿನ ಜನತೆ ಮತದಾನಕ್ಕೆ ನಿರಾಸಕ್ತಿ ತೋರಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಶೇ.66.37ರಷ್ಟು ಮತದಾನವಾಗಿದೆ. ಉತ್ತರ ಕನ್ನಡ ಶೇ.68.1ರಷ್ಟು ಮತದಾನ, ರಾಮನಗರದಲ್ಲಿ ಶೇ.78.28ರಷ್ಟು …

Read More »

ವಿಧಾನಸಭೆ ಚುನಾವಣೆ ಮತದಾನ ಭರದಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇಕಡಾ 37.25 ರಷ್ಟು ಮತದಾನ ಆಗಿದೆ.

ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ಭರದಿಂದ ಸಾಗಿದ್ದು, ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗೆ ತೆರಳುತ್ತಿದ್ಧಾರೆ. ಮಧ್ಯಾಹ್ನ 1 ಗಂಟೆಯವರೆಗೆ ಮತದಾರರು ಹಕ್ಕು ಚಲಾಯಿಸಿದ ಆಯಾ ಜಿಲ್ಲೆಗಳ ವಿವರ ಇಲ್ಲಿದೆ ನೋಡಿ.. 1 ಬಿಬಿಎಂಪಿ ಸೆಂಟ್ರಲ್​ 19.30% 29.41% 2 ಬಿಬಿಎಂಪಿ ಉತ್ತರ 18.34% 29.90% 3 ಬಿಬಿಎಂಪಿ ದಕ್ಷಿಣ 19.18% 30.68% 4 ಬಾಗಲಕೋಟೆ 23.44% 40.87% 5 ಬೆಂಗಳೂರು ಗ್ರಾಮಾಂತರ 20.23% 4016% 6 ಬೆಂಗಳೂರು ನಗರ 17.72% …

Read More »