ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದ್ದು ಪ್ರಚಾರದ ಭರಾಟೆಯಲ್ಲಿ ವಿವಾದಾತ್ಮಕ ಮಾತುಗಳ ಹೊರಬರುತ್ತಿವೆ. ನಿನ್ನೆಯಷ್ಟೆ ಪ್ರಧಾನಿ ಮೋದಿ ಅವರನ್ನ ವಿಷಸರ್ಪ ಎಂದಿದ್ದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದರು. ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಮಾತುಗಳನ್ನಾಡಿದ್ದಾರೆ. ಕೊಪ್ಪಳದಲ್ಲಿ ಇಂದು ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಹುಚ್ಚ ಎಂದು ಹೇಳಿಕೆ …
Read More »ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಪ್ರತಾಪ್ ಸಿಂಹ ನಿಷ್ಪಕ್ಷಪಾತ ಚುನಾವಣೆಗೆ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಸಿದ್ದರಾಮನ ಹುಂಡಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಸಂಸದ ಪ್ರತಾಪ್ ಸಿಂಹ ಪತ್ರಿಕಾಗೋಷ್ಠಿ.. ಮೈಸೂರು: ವರುಣಾದಲ್ಲಿ ಈ ಬಾರಿ ಸಿದ್ದರಾಮಯ್ಯನವರಿಗೆ ಸೋಲಿನ ಭಯ ಕಾಣಿಸಿಕೊಂಡಿದೆ. ಹಾಗಾಗಿ ಅವರ ಕಾರ್ಯಕರ್ತರಿಂದ ಸೋಮಣ್ಣ ಪ್ರಚಾರ ಮಾಡುವ ಕಡೆ ತೊಂದರೆ ಆಗುತ್ತಿದೆ. ಚುನಾವಣಾ ಆಯೋಗ ವರುಣಾದಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಪ್ರತಾಪ್ …
Read More »ಮೋದಿಯವರ ರೋಡ್ ಶೋ: ಇದೇ 30ರಂದು ದಸರಾ ಜಂಬೂ ಸವಾರಿ ಸಾಗುವ ರಾಜಪಥದಲ್ಲಿ ನಡೆಸಲಿದ್ದಾರೆ ಎಂದು ಶಾಸಕ ಎಸ್ ಎ.ರಾಮದಾಸ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ತಿಳಿಸಿದ್ದಾರೆ
ಎಪ್ರಿಲ್ 30 ರಂದು ಮೈಸೂರಿಗೆ ನರೇಂದ್ರ ಮೋದಿಯವರು ಆಗಮಿಸಲಿದ್ದು ರೋಡ್ ಶೋ ನಡೆಸಲಿದ್ದಾರೆಂದು ಶಾಸಕ ರಾಮದಾಸ್ ತಿಳಿಸಿದ್ಧಾರೆ.ಮೈಸೂರು : ಪ್ರಧಾನಿ ನರೇಂದ್ರ ಮೋದಿಯವರು ದಸರಾ ಜಂಬೂ ಸವಾರಿ ಸಾಗುವ ರಾಜಪಥದಲ್ಲಿ ನಾಲ್ಕು ಕಿಲೋಮೀಟರ್ ದೂರದ ರೋಡ್ ಶೋವನ್ನು ಬಿಜೆಪಿ ಅಭ್ಯರ್ಥಿಗಳ ಪರ ಏಪ್ರಿಲ್ 30 ರಂದು ನಡೆಸಲಿದ್ದಾರೆ ಎಂದು ಶಾಸಕ ಎಸ್ ಎ.ರಾಮದಾಸ್ ತಿಳಿಸಿದ್ದಾರೆ. ಮೈಸೂರಿನ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ರಾಮದಾಸ್ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಬಗ್ಗೆ …
Read More »ದಾಸರಹಳ್ಳಿ ಪಿ.ಎನ್ ಕೃಷ್ಣಮೂರ್ತಿ ಹಾಗು ಮುಖಂಡರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು
ದಾಸರಹಳ್ಳಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪಿ.ಎನ್ ಕೃಷ್ಣಮೂರ್ತಿ ಹಾಗು ಕೊರಟಗೆರೆ ಕಾಂಗ್ರೆಸ್ ಮುಖಂಡರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.ಬೆಂಗಳೂರು: ಟಿಕೆಟ್ ವಂಚಿತರಿಂದ ಪಕ್ಷಾಂತರ ಪರ್ವ ಮುಂದುವರೆದಿದ್ದು, ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಹಾಗೂ ದಾಸರಹಳ್ಳಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪಿ.ಎನ್ ಕೃಷ್ಣಮೂರ್ತಿ ಹಾಗು ಕೊರಟಗೆರೆ ಕಾಂಗ್ರೆಸ್ ಮುಖಂಡರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಳೆದ ಸಲ ದಾಸರಹಳ್ಳಿ …
Read More »ಮಹಾಲಕ್ಷ್ಮಿ ದೇವಸ್ಥಾನದ ಪ್ರವೇಶಿಸುವ ಮೊದಲು ನಾನಿನ್ನು ಕೈ ತೊಳೆದಿಲ್ಲ ದೇವಸ್ಥಾನದ ಒಳಗೆ ಬರಬಹುದೇ ಎಂದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಮಹಾಲಕ್ಷ್ಮಿ ದೇವಸ್ಥಾನದ ಒಳಗೆ ಪ್ರವೇಶಿಸುವ ಮೊದಲು ನಾನಿನ್ನು ಕೈ ತೊಳೆದಿಲ್ಲ ದೇವಸ್ಥಾನದ ಒಳಗೆ ಬರಬಹುದೇ ಎಂದು ಪ್ರಶ್ನಿಸಿದ್ದಾರೆ. ಉಡುಪಿ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಉಡುಪಿ ಭೇಟಿಯ ವೇಳೆ ಅಚ್ಚರಿಯ ಘಟನೆ ಒಂದು ನಡೆಯಿತು. ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಸಂವಾದ ನಡೆಸಿದ ರಾಹುಲ್ ಗಾಂಧಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ದೊಡ್ಡ ಗಾತ್ರದ ಅಂಜಲ್ ಮೀನೊಂದನ್ನು ಗಿಫ್ಟಾಗಿ ಕೊಟ್ಟಿತು. ಈ ಮೀನನ್ನು ಎತ್ತಿ ಖುಷಿ ಪಟ್ಟ …
Read More »ಅಥಣಿಗೆ ಲಕ್ಷ್ಮಣ ಸವದಿ ಅನಿವಾರ್ಯ ಪಂಚಮಸಾಲಿ ಸಮಾಜದ ಸಭೆ
ಅಥಣಿ ಮತಕ್ಷೇತ್ರದ ವಿವಿಧ ಗ್ರಾಮಗಳ ಪಂಚಮಸಾಲಿ ಸಮಾಜದ ಮುಖಂಡರ ಸಭೆಯನ್ನು ಅಥಣಿಯ ಶಿವಣಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು ಈ ವೇಳೆ ದಿಲ್ಲಿಗೆ ಮೋದಿ ಅಥಣಿಗೆ ಸವದಿ ಘೋಷಣೆ ಹಾಕಿದ ಪಂಚಮಸಾಲಿ ಮುಖಂಡರು. ಈ ವೇಳೆ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ2023 ಚುನಾವಣೆ ಈಗ ಘೋಷಣೆ ಆಗಿದೆ. ಅಥಣಿ ಮತಕ್ಷೇತ್ರದ ಪಂಚಮಸಾಲಿ ಸಮಾಜದ ಸಭೆಗೆ ನನನ್ನು ಕರೆದಿದ್ದರು. ಮೂರನೆ ತಾರೀಖು ಈ ಸಭೆ ನಿಗದಿಯಾಗಿತ್ತು. …
Read More »ಮೋದಿ ಬಂದ ನಂತರ ಇಡೀ ವಾತಾವರಣವೇ ಬದಲಾಗಲಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ
ಧಾರವಾಡ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ 12 ರ್‍ಯಾಲಿಗಳನ್ನು ನಡೆಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ಧಾರವಾಡದ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆದ ಬಿಜೆಪಿ ಅಭ್ಯರ್ಥಿ ಅರವಿಂದ ಬೆಲ್ಲದ ಪರ ಪ್ರಚಾರ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮೋದಿ ಬಂದ ಬಳಿಕ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ವಾತಾವರಣ ಬದಲಾಗಲಿದೆ. ಹೀಗಾಗಿ ಕಾಂಗ್ರೆಸ್‌ನವರು ಮೈಕೈ ಪರಚಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ನಿಂದ ಯಾವುದೇ ಅಸ್ತ್ರ ಪ್ರಯೋಗ …
Read More »ಕಾಂಗ್ರೆಸ್ ನಾಯಕರು ಹೀಗೆಲ್ಲ ಮಾತನಾಡಿಯೇ, ʼದೇಶದಲ್ಲಿ ಪಕ್ಷ ದಿವಾಳಿʼಯಾಗಿದೆ : ಶಾಸಕ ಯತ್ನಾಳ್
ಬೆಳಗಾವಿ : ಚುನಾವಣಾ ಹೊಸ್ತಿಲಿನಲ್ಲಿ ʻಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆʼ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಯತ್ನಾಳ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ನಾಯಕರು ಹೀಗೆಲ್ಲ ಮಾತನಾಡಿ ದೇಶದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗ್ತಿದೆ. ಈ ಹಿಂದೆ ಪ್ರಧಾನಿ ಮೋದಿ ಮೋದಿ ಬಗ್ಗೆ ಮಾತಾಡಿ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ …
Read More »ಲಂಚ ಸ್ವೀಕರಿಸುತ್ತಿದ್ದ ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಬೆಂಗಳೂರು : ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬಿಬಿಎಂಪಿ ಆರೋಗ್ಯಾಧಿಕಾರಿ(BBMP Health Officer) ಲೋಕಾಯುಕ್ತ ಬಲೆ( Lokayukta Raid)ಗೆ ಬಿದ್ದಿದ್ದಾರೆ. ವಿಧಾನ ಸಭೆ ಚುನಾವಣೆ ಹೊಸ್ತಿಲಿನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ಸಿ.ವಿ ರಾಮನ್ ನಗರದ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಬಿಬಿಎಂಪಿ ಆರೋಗ್ಯಾಧಿಕಾರಿ ವಿ.ಶಿವೇಗೌಡ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ. ಸೊಳ್ಳೆ ನಿಯಂತ್ರಕ್ಕಾಗಿ ಶ್ರೀನಿವಾಸ್ ಎಂಬುವರು ಗುತ್ತಿಗೆ ಪಡೆದಿದ್ದರು. ಇದಕ್ಕಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ 80 ಸಾವಿರ …
Read More »ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಮಹಿಳೆಯರಿಗೆ ಸಾರಿಗೆ ಬಸ್ ಪ್ರಯಾಣ ಉಚಿತ: 5ನೇ ಗ್ಯಾರಂಟಿ
ಮಂಗಳೂರು: ಸಾರ್ವಜನಿಕ ಬಸ್ ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ. ಇದು ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಯೋಜನೆಯಾಗಿದ್ದು, ಈ ಐದೂ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಇಂದು ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದಂತ ಅವರು, ಮೊದಿ ಅವರೇ, ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಹೇಳಿದ್ದೀರಿ. ಈ ಸಂದರ್ಭದಲ್ಲಿ …
Read More »
Laxmi News 24×7