ಬೆಂಗಳೂರು: ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲರನ್ನೂ ಮೂರ್ಖರನ್ನಾಗಿಸುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿ ಎಲ್ಲರಿಗೂ ಸಮಾನವಾಗಿ ಸಿಗಬೇಕು. ಅದು ಬಿಟ್ಟು ಒಬ್ಬರದು ಕಿತ್ತು ಮತ್ತೊಬ್ಬರಿಗೆ ಕೊಡುವುದಲ್ಲ ಎಂದು ಟೀಕಿಸಿದರು. ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸುತ್ತೇವೆಂದು ಆಸೆ ತೋರಿಸಿದ್ದರು. ಏನಾಯಿತು? ಬಂಜಾರ ಸಮುದಾಯದ ಆಕ್ರೋಶ ನೋಡಿದ್ದೇವಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಬಿಜೆಪಿಯವರು ಮಾಡಿರುವ ಎಲ್ಲ ತಪ್ಪು ಸರಿ ಮಾಡುತ್ತದೆ. ಎಲ್ಲರಿಗೂ ನ್ಯಾಯ …
Read More »ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ದ್ರೋಹ: ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡದೆ ಮೋದಿ ಸರಕಾರ ಕರ್ನಾಟಕಕ್ಕೆ ದ್ರೋಹ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಬೊಮ್ಮಾಯಿ ನೇತೃತ್ವದ ರಾಜ್ಯ ಮತ್ತು ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರಕಾರಗಳು ಕಳೆದ 6 ತಿಂಗಳಲ್ಲಿ ನೂರಾರು ಕೋಟಿ ರೂ. ಜಾಹೀರಾತು ಬಿಡುಗಡೆ ಮಾಡಿವೆ. ಡಬಲ್ ಎಂಜಿನ್ ಸರ್ಕಾರ ಬಂದರೆ ಕರ್ನಾಟಕ ಸ್ವರ್ಗ ಆಗುತ್ತದೆ ಎಂದು ನಂಬಿಸಲು ಭಾಷಣಗಳು ಮತ್ತು …
Read More »ಬಿಜೆಪಿ & ಆ ಪಕ್ಷದ ನಾಯಕರಿಗೆ ರಾಮಾಯಣವೂ ಗೊತ್ತಿಲ್ಲ. ರಾಮನ ಬಗ್ಗೆ ಪ್ರೀತಿಯೂ ಇಲ್ಲ:: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಬಿಜೆಪಿ ಮತ್ತು ಆ ಪಕ್ಷದ ನಾಯಕರಿಗೆ ರಾಮಾಯಣವೂ ಗೊತ್ತಿಲ್ಲ. ರಾಮನ ಬಗ್ಗೆ ಪ್ರೀತಿಯೂ ಇಲ್ಲ. ಅವರಲ್ಲಿರುವುದು ಚುನಾವಣೆಗಾಗಿ ಕೇವಲ ತೋರಿಕೆಯ ಪ್ರೀತಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಬೆಳಗಾದರೆ ರಾಮನ ಬಗ್ಗೆ ಮಾತನಾಡುವ ಬಿಜೆಪಿ ಶಾಸಕರಲ್ಲಿ ಎಷ್ಟು ಜನ ರಾಮಾಯಣ ಓದಿದ್ದಾರೆ? ಎಷ್ಟು ಜನ ವಿಷ್ಣುಪುರಾಣ ಪಠಿಸಿದ್ದಾರೆ ತೋರಿಸಲಿ. ಅಂತಹವರು ಯಾರೂ ಸಿಗುವುದಿಲ್ಲ. ಅವರಿಗೆ ರಾಮನ ಬಗ್ಗೆ ಪ್ರೀತಿ, …
Read More »ನ್ಯಾಯಯುತ ಚುನಾವಣೆ ನಡೆಯುವುದು ಅನುಮಾನ ಎಂದ ಸಿದ್ದರಾಮಯ್ಯ
ಬೆಂಗಳೂರು: ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿವೆ. ಇದು ಕಳವಳಕಾರಿ ಸಂಗತಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸರ್ಕಾರದಲ್ಲಿ ನ್ಯಾಯಯುತವಾಗಿ ಚುನಾವಣೆ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಲಿ ಎಂದು ಆಗ್ರಹಿಸಿದ್ದಾರೆ. ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ …
Read More »ಐದು ಬಾರಿಯ ಚಾಂಪಿಯನ್ ವಿರುದ್ಧ ಆರ್ಸಿಬಿ ಭರ್ಜರಿ ಜಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಐಪಿಎಲ್-16ರ ಆರಂಭದಲ್ಲೇ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮೂರು ವರ್ಷಗಳ ಬಳಿಕ ಆರ್ಸಿಬಿ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯವಾಡಿದ್ದು, ಈ ಸ್ಟೇಡಿಯಮ್ಗೂ ಗೆಲುವು ಮರುಕಳಿಸಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ (82*ರನ್, 49 ಎಸೆತ, 6 ಬೌಂಡರಿ, 5 ಸಿಕ್ಸರ್) ಮತ್ತು ನಾಯಕ ಫಾಫ್ ಡು ಪ್ಲೆಸಿಸ್ (73 ರನ್, 43 …
Read More »ಬೈಲಹೊಂಗಲ ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ
ಬೆಳಗಾವಿ: ಜಿಲ್ಲೆಯ ಕಾಂಗ್ರೆಸ್ ಮುಖಂಡರಿಗೆ ಸೇರಿದ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪಟ್ಟಣದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಸೊಸೈಟಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಕಾಂಗ್ರೆಸ್ ಮುಖಂಡ ವಿ.ಎಸ್ ಸಾಧುನವರ ಒಡೆತನದ ಸೊಸೈಟಿ ಲಾಕರ್ ಗಳಲ್ಲಿ ಯಾರೆಲ್ಲ ಚಿನ್ನ, ಹಣ ಇಟ್ಟಿದ್ದಾರೆ ಎಂದು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ನಿನ್ನೆ ರಾತ್ರಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ 2018ರ ಲೋಕಸಭೆ ಚುನಾವಣೆಯಲ್ಲಿ ವಿ.ಎಸ್. ಸಾಧುನವರ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.
Read More »ಬೆಳಗಾವಿಯಲ್ಲಿ 10ರಿಂದ 12 ಸೀಟು ಗೆಲುವು ನಿಶ್ಚಿತ; ಸತೀಶ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್‌ನ 1ನೇ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು, 2ನೇ ಪಟ್ಟಿಯನ್ನು ಏ. 10ರೊಳಗೆ ಬಿಡುಗಡೆಗೊಳಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 12 ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲುವ ಗುರಿ ಇಟ್ಟುಕೊಂಡಿದ್ದೇವೆ. 10ರಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಮೂರು ಕ್ಷೇತ್ರದಲ್ಲಿ ಗೊಂದಲ ಇದೆ. ಅದನ್ನು ಶೀಘ್ರ ಇತ್ಯರ್ಥ ಪಡಿಸಲಾಗುವುದು. ಮೊದಲನೇ ಹಂತದಲ್ಲಿ ಹಾಲಿ, ಮಾಜಿ ಶಾಸಕರೂ ಇದ್ದಾರೆ. ರಾಯಬಾಗ, …
Read More »ಅತ್ತ ಮಾಡಾಳ್ಗೆ 14 ದಿನಗಳ ನ್ಯಾಯಾಂಗ ಬಂಧನ; ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ, ಭಾರಿ ಚರ್ಚೆ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅತ್ತ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದು, ಇತ್ತ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿರುಸಿನ ಚರ್ಚೆ ನಡೆಯುತ್ತಿದೆ. 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊರವಲಯದ ರೆಸಾರ್ಟೊಂದರಲ್ಲಿ ಇಂದು ಜಿಲ್ಲಾವಾರು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಘಟಾನುಘಟಿ ನಾಯಕರ ಸಮ್ಮುಖದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ 16 ಜಿಲ್ಲೆಗಳ ಜಿಲ್ಲಾ ಸಮಿತಿ ಸದಸ್ಯರು ಭಾಗಿಯಾಗಿದ್ದಾರೆ. ಸಿಎಂ …
Read More »ವಿಧಾನಸಭಾ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ JDS ಶಾಸಕ ಕೆ.ಎಂ. ಶಿವಲಿಂಗೆ ಗೌಡ
ಶಿರಸಿ: ಚುನಾವಣೆ ಘೋಷಣೆಯಾದ ಬಳಿಕ ಪಕ್ಷಾಂತರ ಹೆಚ್ಚಾಗಿದೆ. ಜೆಡಿಎಸ್‌ನ ಶಾಸಕ ಕೆ. ಎಂ. ಶಿವಲಿಂಗೆ ಗೌಡ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಶಿರಸಿಯ ಗೃಹ ಕಚೇರಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೆ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅರಸೀಕರೆಯಲ್ಲಿ ಕಳೆದ ತಿಂಗಳು ಜೆಡಿಎಸ್ ಪಕ್ಷದ ಬೃಹತ್ ಸಮಾವೇಶ ನಡೆದಿತ್ತು. ಪಕ್ಷದ ಚಟುವಟಿಕೆಗಳಿಂದ ದೂರ ಇದ್ದ ಅರಸೀಕರೆಯ …
Read More »ಬಸ್ ನಿಲ್ದಾಣಕ್ಕೆ ಅವರೇ ಹೋಗಿ ಸರ್ಕಾರಿ ಕಾರು ಕೊಟ್ಟು ಬಂದ್ರು; ಡಾ. ಕೇಲಗಾರ ಕಾರ್ಯಕ್ಕೆ ಸಿಬ್ಬಂದಿ ಶ್ಲಾಘನೆ
ರಾಣೆಬೆನ್ನೂರ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಎನ್‌ಡಬ್ಲೂೃಕೆಎಸ್‌ಆರ್‌ಟಿಸಿ ಅಧ್ಯಕ್ಷ ಡಾ. ಬಸವರಾಜ ಕೇಲಗಾರ ತಮಗೆ ನೀಡಿದ ಸರ್ಕಾರದ ಕಾರನ್ನು ತಾವೇ ಸ್ವತಃ ಬಸ್ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಿ ಸರಿಯಾಗಿ ಬೆಳಗ್ಗೆ 11.30ಕ್ಕೆ ಅಧಿಕಾರಿಗಳಿಗೆ ಹಸ್ತಾಂತರ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಡಾ. ಬಸವರಾಜ ಕೇಲಗಾರ ಅವರನ್ನು ಆರಂಭದಲ್ಲಿ ಎನ್‌ಡಬ್ಲೂೃಕೆಎಸ್‌ಆರ್‌ಟಿಸಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಕಳೆದ ಎರಡ್ಮೂರು ತಿಂಗಳ ಹಿಂದೆ ಅಧ್ಯಕ್ಷರನ್ನಾಗಿ …
Read More »
Laxmi News 24×7