Breaking News

ರಾಜಕೀಯ

ಮನನೊಂದು ನೇಣು ಬಿಗಿದುಕೊಂಡ 13ರ ಬಾಲಕಿ!

ಕೊಡಗು: ಒಂದು ವಾರದಿಂದ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. 13 ವರ್ಷದ ವೈಷ್ಣವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.     ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದ ಜಿತೇಂದ್ರ-ಅಕ್ಷತ ದಂಪತಿ ಪುತ್ರಿ ವೈಷ್ಣವಿ ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಾಂಗ ಮಾಡುತಿದ್ದಳು. ಕಳೆದ ಒಂದು ವಾರದಿಂದ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದಳು. ವಿದ್ಯಾರ್ಥಿನಿ ವೈಷ್ಣವಿ ಶನಿವಾರ ಸಂಜೆ ಮನೆಯಲ್ಲಿ ನೇಣುಬಿಗಿದುಕೊಂಡು …

Read More »

78 ಯೋಜನೆಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಏಕಗವಾಕ್ಷಿ ಸಮಿತಿಯಿಂದ ಅನುಮೋದನೆ; ಸೃಷ್ಟಿಯಾಗಲಿವೆ 13,917 ಉದ್ಯೋಗಗಳು!

ಬೆಂಗಳೂರು: ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ಏಕಗವಾಕ್ಷಿ ಸಮಿತಿ, ಬಂಡವಾಳ ಹೂಡಿಕೆ ಮತ್ತು ಉದ್ಯೋಗಾವಾಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 78 ಯೋಜನೆಗಳ 5298.69 ಕೋಟಿ ರೂ. ಬಂಡವಾಳ ಹೂಡಿಕೆಗೆ ಇಂದು (ಮಾ.19) ಅನುಮೋದನೆ ನೀಡಿದೆ. ಒಟ್ಟು 78 ಯೋಜನೆಗಳಿಂದ 5298.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಇದರ ಪರಿಣಾಮವಾಗಿ, 13917 ಜನರಿಗೆ ಉದ್ಯೋಗಗಳು ಲಭಿಸಲಿವೆ. ಅನುಮೋದನೆ …

Read More »

ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿಗೆ ಈಗ ಚಿನ್ನದ ಬೆಲೆ

ಹಾವೇರಿ/ ವೀರೇಶ ಚೌಕಿಮಠ ಬ್ಯಾಡಗಿ ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿಗೆ ಈಗ ಚಿನ್ನದ ಬೆಲೆ ಬಂದಿದೆ. ಪ್ರತಿ ಕ್ವಿಂಟಾಲ್ ಬ್ಯಾಡಗಿ ಕಡ್ಡಿ (ಕೆಡಿಎಲ್) ಮತ್ತು ಡಬ್ಬಿ ತಳಿಗೆ 60ರಿಂದ 65 ಸಾವಿರ ರೂ.ಗೆ ಏರಿಕೆಯಾಗಿದೆ. ಆದರೆ, ಅತಿವೃಷ್ಟಿ ಮತ್ತು ಅಕಾಲಿಕ ಮಳೆಯಿಂದಾಗಿ ಮೆಣಸಿನಕಾಯಿ ಇಳುವರಿ ಕಡಿಮೆಯಾಗುತ್ತಿದ್ದು, ಇದರ ಪರಿಣಾಮ ವಾರದಿಂದ ವಾರಕ್ಕೆ ದರ ಏರುತ್ತಲೇ ಇದೆ. ಈ ಬೆಳವಣಿಗೆಯಿಂದ ಗ್ರಾಹಕರು ಸೇರಿ ರೈತರಲ್ಲೂ ಆತಂಕ ಸೃಷ್ಟಿಯಾಗಿದೆ. ವಿಶ್ವದಲ್ಲೇ ಮೆಣಸಿನಕಾಯಿ ಮಾರುಕಟ್ಟೆಗೆ …

Read More »

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕಣಬರಗಿ ಚೆಕ್ ಪೋಸ್ಟ್ ನಲ್ಲಿ 1.77 ಲಕ್ಷ ರೂಪಾಯಿ ಹಣ ಜಪ್ತಿ

ಬೆಳಗಾವಿ: ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡವು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1.77 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದೆ. ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣಾ ಸಂದರ್ಭದಲ್ಲಿ ನಗದು ಪತ್ತೆಯಾಗಿರುತ್ತದೆ. ಸದರಿ ಹಣವನ್ನು ಜಿಲ್ಲಾ ಖಜಾನೆಯಲ್ಲಿ ಜಮೆ ಮಾಡಲಾಗಿದ್ದು, ಪಂಚಾಯತ ಮುಖ್ಯ ಕಾರ್ಯನಿರ್ವಾಹಕರು ಅಧ್ಯಕ್ಷರಾಗಿರುವ ತ್ರಿಸದಸ್ಯ ಸಮಿತಿಗೆ ಪ್ರಕರಣವನ್ನು ವರ್ಗಾಯಿಸಲಾಗಿರುತ್ತದೆ. ಚುನಾವಣಾಧಿಕಾರಿ ಅಕ್ರಮ್ ಇಂಫಾಲ್, ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ, ಎಫ.ಎಸ್.ಟಿ. …

Read More »

ಯುವಕ್ರಾಂತಿ ರ್ಯಾಲಿಯಲ್ಲಿ ಯುವಕರಿಗೆ ಯೋಜನೆ ಘೋಷಣೆ, ಯುವಕರಿಗೆ ಬಲತುಂಬಲು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪಣ

ಬೆಳಗಾವಿ: ” ಭರವಸೆಗಳನ್ನು ನೀಡಿ, ಯುವಕರಿಗೆ ಉದ್ಯೋಗ ನೀಡದ ಬಿಜೆಪಿ ಸರ್ಕಾರವನ್ನು ಬುಡಸಮೇತ ಕಿತ್ತೆಸೆಯಲು ಯುವಜನತೆ ಮುಂದಾಗಬೇಕು ಎಂದು  ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ ಸಿಂಗ್‌ ಸುರ್ಜೇವಾಲಾ ಕರೆ ನೀಡಿದರು. ಇಲ್ಲಿನ ಸಿಪಿಎಡ್‌ ವೈದಾನದಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ರಾಜ್ಯದ ಸರ್ಕಾರ ನೀಡಿದ ಪೊಳ್ಳು ಭರವಸೆಯಿಂದ ಯುವಕರು ಉತ್ಸಾಹ ಕಳೆದುಕೊಂಡಿದ್ದಾರೆ. ಯುವಕರಿಗೆ ಬಲತುಂಬಲೆಂದೇ  ರಾಹುಲ್ ಗಾಂಧಿ ಅವರು ಪಣತೊಟ್ಟಿದ್ದು, ಬೆಳಗಾವಿಯಿಂದ  ಯುವಕಾಂತ್ರಿ ರ್ಯಾಲಿ ಮಾಡುವ ಮೂಲಕ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ ಎಂದರು. …

Read More »

ಫಕೀರನ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕುತ್ತಿದ್ದ ಖದೀಮರು ಅಂದರ್; !

ಹೊಸಕೋಟೆ: ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖತರ್ನಾಕ್​ಕಳ್ಳರು ಫಕೀರರ ವೇಷ ಹಾಗೂ ಪಾಲಿಶ್ ಮಾಡುವ ನೆಪದಲ್ಲಿ ಮನೆಗಳಿಗೆ ಬಂದು ಕನ್ನ ಹಾಕುತ್ತಿದ್ದವನ್ನು ಬಂಧಿಸಿದ್ದಾರೆ. ಈ ಮೂರು ಜನ ಅಂತರ್​​ರಾಜ್ಯ ಕುಖ್ಯಾತ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ ಒಟ್ಟು 32 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರನ್ನು ಆರೋಪಿಗಳನ್ನು ಸೈಯದ್ ಆಲಿ, ಭರತ್ ಕುಮಾರ್, ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಖದೀಮರು ಫಕೀರನ ವೇಶ ಹಾಕಿಕೊಂಡು …

Read More »

ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡ ಸೈಲೆಂಟ್​ ಸುನೀಲ.

ಬೆಂಗಳೂರು: ಬಿಜೆಪಿಗೆ ಸೈಲೆಂಟ್​ ಸುನೀಲ ಸೇರುತ್ತಾರಾ ಇಲ್ಲವಾ ಎನ್ನುವ ಪ್ರಶ್ನೆ ಹಲವು ದಿನಗಳಿಂದ ಕಾಡುತ್ತಿತ್ತು. ಇದೀಗ ಬಿಜೆಪಿಗೆ ಸೈಲೆಂಟ್​ ಸುನೀಲ ಅಧಿಕೃತವಾಗಿ ಸೇರ್ಪಡೆಯಾಗಿದ್ದು ಹಲವು ದಿನಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಹಿಂದೆ ಸೈಲೆಂಟ್ ಸುನೀಲ ರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ಬಿಜೆಪಿ ಹೇಳಿತ್ತು. ಆದರೆ ಈಗ ಬಿಜೆಪಿಗೆ ಸೇರಿಸಿಕೊಳ್ಳುವ ಮೂಲಕ ಪ್ರತಿಪಕ್ಷಗಳಿಗೆ ಆಹಾರವಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ರೌಡಿ ಮೋರ್ಚಾ ಎಂದಿತ್ತು. ಸೈಲೆಂಟ್ ಸುನೀಲ ಪಕ್ಷ …

Read More »

ಶ್ರೀಗಂಧದ ಕಟ್ಟಿಗೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಪೊಲೀಸರು

ಬೆಳಗಾವಿ: ಖಾನಾಪುರ ತಾಲೂಕಿನ ಕಸಬಾ ನಂದಗಡ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶ್ರೀಗಂಧದ ಕಟ್ಟಿಗೆಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಶ್ರೀಗಂಧದ ಕಟ್ಟಿಗೆ ವಶಪಡಿಸಿಕೊಂಡಿದ್ದಾರೆ. ಆನಂದ ಮಾರುತಿ ರಾಮಣ್ಣವರ (25) ಬಂಧಿತ ಆರೋಪಿ. ಈತ ಶ್ರೀಗಂಧದ ಗಿಡವನ್ನು ಕಡಿದು ಅದರ ತುಂಡುಗಳನ್ನು ಸರ್ಕಾರದ ಯಾವುದೇ ಪಾಸ್, ಪರ್ಮಿಟ್, ಲೈಸನ್ಸ್ ಯಾವುದೂ ಇಲ್ಲದೆ ತನ್ನ ವಶದಲ್ಲಿ ಇಟ್ಟುಕೊಂಡು ಕಾನೂನು ಬಾಹಿರವಾಗಿ ಸಾಗಿಸುವ ಯತ್ನದಲ್ಲಿದ್ದ.

Read More »

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಯುವಕನೊಬ್ಬ ಆಜಾನ್ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಜಾನ್ ಬಗ್ಗೆ ನೀದಿದ್ದ ಹೇಳಿಕೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಈ ವೇಳೆ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿಂತು ಆಜಾನ್ ಕೂಗಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. ಯುವಕ ಆಜಾನ್ ಕೂಗುತಿದ್ದಂತೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ …

Read More »

ನಾಳೆ ಇಡೀ ದಿನ ಆಟೋ ಸೇವೆ ಬಂದ್ ಆಗುವ ಸಾಧ್ಯತೆ?

ಬೆಂಗಳೂರು ಆಟೊರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಬೆಂಗಳೂರಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್‌ 20ರಂದು ಆಟೋ ಸಂಚಾರ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ. ಇದರಿಂದ ನಾಳೆ ಸೋಮವಾರ ಇಡೀ ದಿನ ಸಾರ್ವಜನಿಕರಿಗೆ ಆಟೋ ಸೇವೆ ಸಿಗುವುದು ಅನುಮಾನ ಮೂಡಿಸಿದೆ.   ಭಾನುವಾರ ಸಂಜೆ ವೇಳೆಗೆ ಸಿಎಂ ಬೈಕ್ ಟ್ಯಾಕ್ಸಿ ಸೇವೆ ರದ್ದು ಮಾಡದಿದ್ದರೇ ಸೋಮವಾರ ಆಟೋ ಸೇವೆ ಬಂದ್ ಮಾಡುವುದು ನಿಶ್ಚಿತ ಎಂದು ಒಕ್ಕೂಟ ಎಚ್ಚರಿಸಿದೆ. ‘ಸಾರಿಗೆ ಇಲಾಖೆ ಮತ್ತು …

Read More »