Breaking News

ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಇಂದು ಧಾರವಾಡದಲ್ಲಿ ಜಲ ಜೀವನ್ ಮಿಷನ್ ಮತ್ತು ಜಯದೇವ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಇಂದು ಧಾರವಾಡದಲ್ಲಿ ಜಲ ಜೀವನ್ ಮಿಷನ್ ಮತ್ತು ಜಯದೇವ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. “ಪ್ರಧಾನಿ ಅವರು ರಾಜ್ಯಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ಹೆಚ್ಚು ಅಗತ್ಯವಿರುವ ಮೂಲಭೂತ ಮೂಲಸೌಕರ್ಯ ಯೋಜನೆಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿದ್ದಾರೆ. ಇದರ ಫಲವಾಗಿ ಹಲವು ಯೋಜನೆಗಳು ಜನರಿಗೆ ಸಮರ್ಪಣೆಗೆ ಸಿದ್ಧವಾಗಿವೆ’ ಎಂದು ಬೊಮ್ಮಾಯಿ ಹೇಳಿದರು. “ಪ್ರಧಾನಿ ಮೋದಿ ಅವರು ರಾಜ್ಯ ಮತ್ತು ಅಂತರ-ರಾಜ್ಯ ಮೂಲಸೌಕರ್ಯ ಸೌಲಭ್ಯಗಳಿಗೆ ದೊಡ್ಡ …

Read More »

ಮೋದಿಯೇ ದಶಪಥ ಹೆದ್ದಾರಿಯ ರೂವಾರಿ: ಬೊಮ್ಮಾಯಿ

ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಯೋಜನೆಯ ಸಂಪೂರ್ಣ ರೂವಾರಿ ಪ್ರಧಾನಿ ನರೇಂದ್ರ ಮೋದಿ. ಆದರೆ, ವಿರೋಧ ಪಕ್ಷಗಳು ಅನಗತ್ಯವಾಗಿ ಯೋಜನೆಯ ಹೆಸರಿನಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘2008ರಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಈ ಮಾರ್ಗದಲ್ಲಿ ಹೆದ್ದಾರಿ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಯಾವ ಪ್ರಗತಿಯೂ ಆಗಿರಲಿಲ್ಲ. 2014ರಲ್ಲಿ ಕೇಂದ್ರ ಸರ್ಕಾರವು …

Read More »

ಬಿಜೆಪಿ ತೊರೆದು ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದ ಎ. ಮಂಜು

ಬಿಡದಿ (ರಾಮನಗರ): ಮಾಜಿ ಸಚಿವ ಎ. ಮಂಜು ಶನಿವಾರ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಎಚ್‌.ಡಿ. ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಯಾದರು. ಬಿಡದಿಯಲ್ಲಿರುವ ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಮಂಜು ಅವರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮತ್ತಿತರರು ಈ ಸಂದರ್ಭ …

Read More »

EVM ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ , ಅಕ್ರಮ ನಡೆಸಲು ಸಾಧ್ಯವಿಲ್ಲ :ಚುನಾವಣಾ ಆಯುಕ್ತ ರಾಜೀವ್ ಕುಮಾರ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ-EVM ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಅದರಿಂದ ಯಾವುದೇ ಅಕ್ರಮ ನಡೆಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಗುಜರಾತ್ ನಲ್ಲಿ ಬಳಸಿದ ಇವಿಎಂ ಬಲಶಬಾರದು ಎಂಬ ಕಾಂಗ್ರೆಸ್ ಮನವಿಯನ್ನು ತಿರಸ್ಕರಿಸಿದ ಅವರು, ಇವಿಎಂ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ಇವಿಯಂ ನಿಂದ ಯಾವುದೇ ಸಮಸ್ಯೆಯಾಗಿಲ್ಲ. …

Read More »

ರಾಜ್ಯದಲ್ಲಿ ಶಾಂತಿಯುತ ಮಾತದಾನವಾಗುವ ವಿಶ್ವಾಸವಿದೆ ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆ ಕೇಂದ್ರ ಸ್ಥಾಪಿಸಲಾಗುತ್ತಿದೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಚುನಾವಣೆ ಪೂರ್ವ ಸಿದ್ಧತೆ ಬಗ್ಗೆ ಸಭೆ ನಡೆಸಿದರು. ರಾಜ್ಯದಲ್ಲಿ ಶಾಂತಿಯುತ ಮಾತದಾನವಾಗುವ ವಿಶ್ವಾಸವಿದೆ ಎಂದರು. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣೆ ತಯಾರಿ ಬಗ್ಗೆ ಮಾಹಿತಿ ನೀಡಿದರು. ಮೇ 24ಕ್ಕೆ 15ನೇ ಈ ಸರ್ಕಾರದ ಅವಧಿ ಮುಗಿಯಲಿದೆ. ಸಾರ್ವತ್ರಿಕ ಚುನಾವಣೆಯ ಕುರಿತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾಧಿಕಾರಿಗಳು, …

Read More »

ರಾಜ್ಯಕ್ಕೆ ಆಗಮಿಸಿದ ಚುನಾವಣಾ ಆಯೋಗ ಅಧಿಕಾರಿಗಳ ತಂಡ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಿದ್ಧತೆ ಪರಿಶೀಲಿಸಲು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ನಗರಕ್ಕೆ ಆಗಮಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ವಿಕಾಸಸೌಧದಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್‌ ಕುಮಾರ್‌ ಮೀನಾ ಅವರೊಂದಿಗೆ ಸಭೆ ನಡೆಸಿದೆ.   ತಂಡವು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಸಲಿದ್ದು, ಅಭಿಪ್ರಾಯಗಳನ್ನು ಆಲಿಸಲಿದೆ. ಚುನಾವಣಾ ಆಯುಕ್ತರಾದ ಅನೂಪ್‌ ಚಂದ್ರ ಪಾಂಡೆ, ಅರುಣ್‌ ಗೋಯಲ್‌ ಇದ್ದರು.

Read More »

ರೆಡ್ಡಿ ಅಕ್ರಮ ಹಣ ಗಳಿಕೆ: ವಿದೇಶಿ ಹೂಡಿಕೆ ಮಾಹಿತಿ ಸಂಗ್ರಹಕ್ಕೆ ಕೋರ್ಟ್ ಅಸ್ತು

ಬೆಂಗಳೂರು: ‘ಕಬ್ಬಿಣದ ಅದಿರನ್ನು ಅಕ್ರಮವಾಗಿ ಮಾರಾಟ ಮಾಡುವ ಮೂಲಕ ಗಳಿಸಿದ್ದ ಹಣವನ್ನು ವಿದೇಶಗಳಲ್ಲಿ ಇರಿಸಿದ್ದಾರೆ’ ಎಂಬ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ದಾಖಲೆಗಳನ್ನು ಪಡೆಯಲು ನೆರವಾಗುವಂತೆ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಗಳಿಂದ ಮಾಹಿತಿ ಸಂಗ್ರಹಕ್ಕಾಗಿ ಸಿಬಿಐ ಸಲ್ಲಿಸಿದ್ದ ಕೋರಿಕೆಯನ್ನು ವಿಶೇಷ ನ್ಯಾಯಾಲಯ ಮಾನ್ಯ ಮಾಡಿದೆ.   ಸಿಬಿಐ ಈ ಕುರಿತು ಸಲ್ಲಿಸಿದ್ದ ಮನವಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಇ.ಚಂದ್ರಕಲಾ ಪುರಸ್ಕರಿಸಿದ್ದಾರೆ. ಸ್ವಿಟ್ಜರ್‌ಲೆಂಡ್‌, ಸಿಂಗಪುರ, …

Read More »

ಮೋದಿಯನ್ನು ನರಹಂತಕ ಎಂದರೆ ಸಿದ್ದರಾಮಯ್ಯ ನಾಲಿಗೆ ಸೀಳುತ್ತೇವೆ: ಈಶ್ವರಪ್ಪ

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ‘ಪ್ರಧಾನಿ ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ನರಹಂತಕ ಎಂದು ಕರೆದರೆ ಸಿದ್ದರಾಮಯ್ಯ ಅವರ ನಾಲಿಗೆ ಸೀಳುತ್ತೇವೆ’ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು. ಇಲ್ಲಿ ಶುಕ್ರವಾರ ರಾತ್ರಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿ, ‘ಮೊಟ್ಟೆಯಲ್ಲಿ ಹೊಡೆಸಿಕೊಂಡ ಸಿದ್ದರಾಮಯ್ಯ ಕೊಡಗಿಗೆ ಮತ್ತೊಮ್ಮೆ ಬರುವುದಾಗಿ ಸವಾಲೆಸೆದಿದ್ದರು. ಆದರೆ ಬರಲಿಲ್ಲ. ಬಂದರೆ ಕೋಳಿಮೊಟ್ಟೆಯಲ್ಲಿ ಹೊಡೆಯಬಾರದು, ಬದಲಿಗೆ ಬಿಜೆಪಿಗೇ ಮತ ಹಾಕಬೇಕು’ ಎಂದರು

Read More »

ನವ ಕರ್ನಾಟಕ ಶೃಂಗ | ಕೃಷಿ ಉತ್ಪನ್ನ ಮೌಲ್ಯವರ್ಧನೆ ಮಾಡಿ: ಡಾ.ಪಿ.ಎಲ್.ಪಾಟೀಲ

ಹುಬ್ಬಳ್ಳಿ: ‘ಕೃಷಿ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಿ, ಆಕರ್ಷಕ ಬ್ರ್ಯಾಂಡ್ ಮೂಲಕ ಮಾರಾಟ ಮಾಡಿದರೆ ರೈತರ ಆದಾಯ ಹತ್ತಾರುಪಟ್ಟು ಹೆಚ್ಚುತ್ತದೆ’ ಎಂದು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್. ಪಾಟೀಲ ಹೇಳಿದರು.   ‘ರೈತರು ಮತ್ತು ನೀರಾವರಿ ಅಭಿವೃದ್ಧಿ’ ಕುರಿತು ಮಾತನಾಡಿದ ಅವರು, ‘ಹಸಿರು ಕ್ರಾಂತಿ ಆದ ನಂತರ ಕೃಷಿ ಉತ್ಪಾದನೆ ಹತ್ತು ಪಟ್ಟು ಹೆಚ್ಚಾಗಿದೆ. ಆದರೆ, ರೈತರ ಆದಾಯ ಮಾತ್ರ ಏರಿಕೆ ಆಗಿಲ್ಲ. ರೈತರ ಆದಾಯ ದ್ವಿಗುಣಗೊಳಿಸಬೇಕು ಎಂಬುದು ಪ್ರಧಾನಿ ನರೇಂದ್ರ …

Read More »

ಅಪಘಾತ- ವಾಹನಕ್ಕೆ ವಿಮೆ ಇರದಿದ್ದರೆ ಪರಿಹಾರ ಮಾಲೀಕರ ಹೆಗಲಿಗೆ: ಹೈಕೋರ್ಟ್

ಬೆಂಗಳೂರು: ‘ಅಪಘಾತ ನಡೆದ ಸಂದರ್ಭದಲ್ಲಿ ಘಟನೆಗೆ ಕಾರಣವಾದ ವಾಹನಕ್ಕೆ ವಿಮೆ ನವೀಕರಣವಾಗಿಲ್ಲ ಎಂದಾದರೆ ನಷ್ಟಕ್ಕೆ ಒಳಗಾದವರಿಗೆ‌ ಮಾಲೀಕರೇ ಪರಿಹಾರ ನೀಡಬೇಕು’ ಎಂದು ಹೈಕೋರ್ಟ್ ಆದೇಶಿಸಿದೆ. ‘ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ವಾಹನದ ಮಾಲೀಕರೇ ಪರಿಹಾರ ನೀಡಬೇಕು’ ಎಂಬ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ಈ ಆದೇಶ ನೀಡಿದೆ. ‘ಅಪಘಾತ ನಡೆಯುವ ಮುನ್ನವೇ ವಿಮೆ ನವೀಕರಣವಾಗಿದ್ದರೂ, ಅದು …

Read More »