ಬೆಂಗಳೂರು : ವಿದ್ಯಾರ್ಥಿಗಳ ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಹೆಸರು/ಪೋಷಕರ ಹೆಸರು, ಜನ್ಮದಿನಾಂಕ, ಜಾತಿ ಇತ್ಯಾದಿ ತಿದ್ದುಪಡಿ ಸಂಬಂದ ರಾಜ್ಯ ಸರ್ಕಾರ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. ಶಾಲಾ ದಾಖಲಾತಿಗಳಲ್ಲಿ ವಿದ್ಯಾರ್ಥಿ ಹೆಸರು/ಪೋಷಕರ ಹೆಸರು, ಜಾತಿ, ಜನ್ಮ ದಿನಾಂಕ ಇತ್ಯಾದಿ ತಿದ್ದುಪಡಿ ಮಾಡುವ ಸಂಬಂಧ, ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾರ್ಗದರ್ಶನವನ್ನು ನೀಡಿ ಅಧಿಕಾರವನ್ನು ಉಲ್ಲೇಖಿತ ಸುತ್ತೋಲೆಗಳಲ್ಲಿ ಜಿಲ್ಲಾ ಉಪನಿರ್ದೇಶಕರಿಗೆ ಪ್ರತ್ಯಾಯೋಜಿಸಿ ಅದರಂತೆ ಕ್ರಮವಹಿಸಲಾಗುತ್ತಿದೆ. ಈ ಪ್ರಕ್ರಿಯೆಯು ವಿಳಂಬವಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ …
Read More »ಬೊಮ್ಮಾಯಿಯವರು ಕಣ್ಣು ಬಿಡಲು ಇನ್ನೆಷ್ಟು ಶಿಕ್ಷಕರ ಹೆಣ ಬೀಳಬೇಕು?: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತಪಸಿ ಗ್ರಾಮದಲ್ಲಿ ಶ್ರೀ ಬಸರಿಶಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. https://www.instagram.com/reel/CpEyv87Dkf5/?igshid=NDk5N2NlZjQ= ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ನಗರಸಭೆ: ₹7.32 ಲಕ್ಷ ಉಳಿತಾಯ ಬಜೆಟ್
ಗೋಕಾಕ: ಇಲ್ಲಿನ ನಗರಸಭೆಯ 2023-24ನೇ ಸಾಲಿನ ₹7.32 ಲಕ್ಷದ ಉಳಿತಾಯದ ಬಜೆಟ್ ಅನ್ನು ಪ್ರಭಾರಿ ಪೌರಾಯುಕ್ತ ಶಿವಾನಂದ ಹಿರೇಮಠ ಅವರು, ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಂಡಿಸಿದರು. ನಗರದ ಸ್ವಚ್ಛತೆಗಾಗಿ 19 ಜನ ಪೌರಕಾರ್ಮಿಕರ ನೇಮಕ ಪ್ರಕ್ರಿಯೆ ನಡೆದಿದ್ದು, ಉಳಿದ ಕಾರ್ಮಿಕರನ್ನು ಹೊರಗುತ್ತಿಗೆ ಹಾಗೂ ನೇರ ಪಾವತಿ ಆಧಾರದ ಮೇಲೆ ಸೇವೆಯನ್ನು ಪಡೆಯುವ ಉದ್ದೇಶಕ್ಕೆ ₹3.84 ಕೋಟಿ ಅವಶ್ಯ ನಿಗದಿ ಮಾಡಿರುವುದಾಗಿ ತಿಳಿಸಿದರು. …
Read More »15ನೇ ವಿಧಾನಸಭೆ ಅಧಿವೇಶನ ಅಂತ್ಯ; ಪರಸ್ಪರ ಶುಭಾಶಯ ಕೋರಿದ ಸದಸ್ಯರು
ಬೆಂಗಳೂರು: 15ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕೊನೆಯ ದಿನವಾದ ವಿಧಾನಸಭೆಯಲ್ಲಿ ವಿದಾಯ ಭಾಷಣದ್ದೇ ಕಾರುಬಾರು. ಕಳೆದ 5 ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ, ಜನತೆಯ ಹಿತಕ್ಕಾಗಿ ತಮ್ಮನ್ನು ತಾವು ಅರ್ಪಣೆ ಮಾಡಿಕೊಂಡು ತನುಮನದಿಂದ ದುಡಿದ ಸಂತೃಪ್ತ, ಸಾರ್ಥಕ ಭಾವನೆಯನ್ನು ಎಲ್ಲ ಸದಸ್ಯರುಗಳು ವ್ಯಕ್ತಪಡಿಸಿ, ಪರಸ್ಪರ ಶುಭಾಶಯ,, ಅಭಿನಂದನೆಗಳ ವಿನಿಮಯ ಮಾಡಿಕೊಂಡರು. ಜತೆಗೆ ಮತ್ತೆ ಚುನಾವಣೆಯಲ್ಲಿ ಗೆದ್ದು ಸದನಕ್ಕೆ ಬರೋಣ ಶುಭ ಹಾರೈಕೆಗಳ ವಿನಿಮುಂವೂ ಸದನದಲ್ಲಿ ಆಯಿತು. 2018ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ …
Read More »ಮದ್ಯಪಾನವನ್ನೇ ಮುಂದಿಟ್ಟುಕೊಂಡು ಸರ್ಕಾರಗಳು ರಾಜಕಾರಣ ಮಾಡುತ್ತಿವೆ! ಮುತಾಲಿಕ್
ಉಡುಪಿ: ರಾಜ್ಯ ಸರ್ಕಾರ ಮದ್ಯಪಾನದ ವಯಸ್ಸನ್ನು 21 ರಿಂದ 18 ವರ್ಷಕ್ಕೆ ಇಳಿಕೆ ಮಾಡಿರುವು ಆಘಾತಕಾರಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮದ್ಯ ಸೇವನೆ ಅಪಾಯಕಾರಿ ಎಂಬುದು ಎಲ್ಲರಿಗೂ ಗೊತ್ತಿದೆ. ದೇಶದಾದ್ಯಂತ ಮದ್ಯಪಾನವನ್ನು ನಿಷೇಧ ಮಾಡಬೇಕೆಂದು ಗಾಂಧೀಜಿ 75 ವರ್ಷದ ಹಿಂದೆಯೇ ಸಲಹೆ ಕೊಟ್ಟಿದ್ದರು. ಆದರೆ ಮದ್ಯಪಾನವನ್ನೇ ಅನುಸರಿಸಿ ಸರಕಾರಗಳು ರಾಜಕಾರಣ ಮಾಡುತ್ತಿವೆ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದರು. ವಿದ್ಯಾರ್ಥಿಗಳು, ಕಾರ್ಮಿಕರು, ರೈತರು ಮಧ್ಯಪಾನಕ್ಕೆ ಬಲಿಯಾಗುತ್ತಿದ್ದಾರೆ. …
Read More »ಪ್ರಜಾಕೀಯ ಪಕ್ಷಕ್ಕೆ ಸಿಕ್ಕಿತು ‘ಆಟೋ ರಿಕ್ಷಾ’ ಚಿಹ್ನೆ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ಈಗಾಗಲೇ ಎಲ್ಲಾ ಪಕ್ಷಗಳು ರಾಜ್ಯದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿವೆ. ಹೊಸ ಹೊಸ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ಧೇಶದಿಂದ ಕ್ಷೇತ್ರದಲ್ಲಿ ನಿರಂತರ ಓಡಾಟ ನಡೆಸುತ್ತಿದ್ದಾರೆ. ಇದೆಲ್ಲದರ ನಡುವೆ ಜನರಿಗೆ ಕುತೂಹಲ ಕೆರಳಿಸಿರುವುದು ನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷ. ಇದೀಗ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಈ ಕುರಿತು ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ತಮ್ಮ ಪಕ್ಷದ ಚಿಹ್ನೆಯನ್ನು ನಟ …
Read More »ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ : ಮಾಜಿ ಸಿಎಂ ಬಿಎಸ್ ವೈ ಘೋಷಣೆ
ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಸಿಸುವ ಮಾತೇ ಇಲ್ಲ ಎಂದು . ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ತರಲು ಪ್ರಯತ್ನಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದು ಹೇಳಿದ್ದಾರೆ. ನಮ್ಮೆಲ್ಲರಿಗೂ ಹೆಚ್.ದೇವೇಗೌಡರೇ ಆದರ್ಶವಾಗಿದ್ದಾರೆ. ಇದು ನನ್ನ …
Read More »SC/ST ಮೀಸಲಾತಿ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್,… ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. …
Read More »ನನ್ನ ಮರ್ಮಾಂಗಕ್ಕೆ ಗುದ್ದುತ್ತಿದ್ದ” ಪ್ರಸಿದ್ಧ ನಿರ್ಮಾಪಕನ ವಿಕೃತ ಮನಸ್ಥಿತಿ ಬಿಚ್ಚಿಟ್ಟ ನಟಿ
ರವಿಚಂದ್ರನ್ – ಶಿವರಾಜ್ ಕುಮಾರ್ ನಟನೆಯ ಕೋದಂಡರಾಮ, ಕಿಚ್ಚ ಸುದೀಪ್ ಅಭಿನಯದ ನಮ್ಮಣ್ಣ ಸೇರಿದಂತೆ ಕನ್ನಡ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದ ನಟಿ ಫ್ಲೋರಾ ಸೈನಿ ಅಲಿಯಾಸ್ ಆಶಾ ಸೈನಿ ಅವರ ವೈಯಕ್ತಿಕ ಜೀವನದ ದುರಂತ ಕಥೆಯಿದು. ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಜೊತೆ ಅನುಭವಿಸಿದ ನರಕಯಾತನೆ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಅವರ ಬಾಯ್‌ಫ್ರೆಂಡ್ ಆಗಿದ್ದ ಪ್ರಸಿದ್ಧ ನಿರ್ಮಾಪಕ ಗೌರಂಗ್ ದೋಷಿ ಅವರ ಜೊತೆ ತಾವು ಅನುಭವಿಸಿದ ಚಿತ್ರಹಿಂಸೆಯನ್ನು ಫ್ಲೋರಾ ಸೈನಿ …
Read More »
Laxmi News 24×7