Breaking News

ರಾಜಕೀಯ

ರಾಜ್ಯದಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ತಾಪಮಾನ ಹೆಚ್ಚಳ : ಉರಿಬಿಸಿಲಿಗೆ ಜನರು ತತ್ತರ!

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಶಿವರಾತ್ರಿಗೆ ಬಿಸಿಲು ಹೆಚ್ಚಳವಾಗಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ಇದ್ದು, ಮುಂದಿನ ದಿನಗಳಲ್ಲಿ ಇದು ಇನ್ನೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಾಮಾನ್ಯವಾಗಿ ಮಾರ್ಚ್ ಬಳಿಕ ಬಿಸಿಲ ಬೇಗೆ ಹೆಚ್ಚಾಗುತ್ತಿತ್ತು ಆದರೆ, ಫೆಬ್ರವರಿ ಮಧ್ಯಭಾಗದಲ್ಲೇ ತಾಪಮಾನ ಹೆಚ್ಚಾಗುತ್ತಿದೆ. ಏಪ್ರಿಲ್ ಅಥವಾ 3ನೇ ವಾರದಲ್ಲಿ ಹೆಚ್ಚಾಗುತ್ತಿದ್ದ ಉಷ್ಣಾಂಶ ಮಾರ್ಚ್ 3ನೇ ವಾರದಲ್ಲಿ ಅಧಿಕವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. …

Read More »

‘ಕೈ’ ಹಿಡಿದ ಬಿಜೆಪಿ, ಜೆಡಿಎಸ್‌ ಮಾಜಿ ಶಾಸಕರು

ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್. ಕಿರಣ್ ಕುಮಾರ್ , ವಿಧಾನ ಪರಿಷತ್ ಮಾಜಿ ಸದಸ್ಯ, ಜೆಡಿಎಸ್‌ ತ್ಯಜಿಸಿ ಬಿಜೆಪಿ ಸೇರಿದ್ದ ಸಂದೇಶ್ ನಾಗರಾಜ್ ಮತ್ತು ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ನ ಎಚ್. ನಿಂಗಪ್ಪ ಅವರು ಸೋಮವಾರ ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ …

Read More »

ಬಿಜೆಪಿಯಿಂದ ಹಿಂಸಾತ್ಮಕ ರಾಜಕಾರಣ: ಸುರ್ಜೇವಾಲಾ ಆರೋಪ

ಬೆಳಗಾವಿ: ‘ಬಿಜೆಪಿ ನಾಯಕರು ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮೂಲಕ ಕಾಂಗ್ರೆಸ್‌ ನಾಯಕರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಸೋಲಿನ ಭಯದಿಂದ ಹತಾಶರಾಗಿ ಹಿಂಸಾತ್ಮಕ ರಾಜಕಾರಣಕ್ಕೆ ಇಳಿದಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಪಾದಿಸಿದರು.   ಇಲ್ಲಿನ ಕಾಂಗ್ರೆಸ್‌ ಭವನದಲ್ಲಿ ಬೆಳಗಾವಿ ಗ್ರಾಮೀಣ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ‘ಗೃಹಜ್ಯೋತಿ’ ಮತ್ತು ‘ಗೃಹಲಕ್ಷ್ಮಿ’ ಗ್ಯಾರಂಟಿ ಯೋಜನೆಗಳ ಪ್ರಮಾಣಪತ್ರ ವಿತರಣಾ ಅಭಿಯಾನದ ಉದ್ಘಾಟನಾ …

Read More »

ಅಸಾದುದ್ದೀನ್ ಓವೈಸಿಯ ನಿವಾಸದ ಮೇಲೆ ಕಲ್ಲು ತೂರಾಟ

ದೆಹಲಿ: ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಭಾನುವಾರ (ಫೆ.19 ರಂದು) ಸಂಜೆ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಓವೈಸಿ, ನನ್ನ ದಿಲ್ಲಿಯ ನಿವಾಸದ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ. ಇಂಥ ಘಟನೆ ನಡೆಯುತ್ತಿರುವುದು ಇದು ನಾಲ್ಕನೇ ಬಾರಿ ಎಂದಿದ್ದಾರೆ. ದುಷ್ಕರ್ಮಿಗಳ ಗುಂಪೊಂದು …

Read More »

ಗೃಹಲಕ್ಷ್ಮೀ, ಗೃಹಜ್ಯೋತಿ ಕಾರ್ಯಕ್ರಮದಿಂದ ಬಿಜೆಪಿ ತಲ್ಲಣ: ಸುರ್ಜೇವಾಲಾ

ಬೆಳಗಾವಿ: ಕಾಂಗ್ರೆಸ್‌ನ ಗೃಹಲಕ್ಷ್ಮೀ, ಗೃಹಜ್ಯೋತಿ ಗ್ಯಾರಂಟಿ ಕಾರ್ಯಕ್ರಮವನ್ನು ಕಾಂಗ್ರೆಸ್‌ ಕಾರ್ಯಕರ್ತರು ಮನೆ-ಮನೆಗೂ ಒಯ್ಯುತ್ತಾರೆ. ಪ್ರತಿ ಮನೆಗೂ ತೆರಳಿ ರಿಜಿಸ್ಟ್ರೇಷನ್‌ ಮಾಡುತ್ತಾರೆ. ಎಲ್ಲ ಕ್ಷೇತ್ರದಲ್ಲಿಯೂ ತೆರಳಿ ಕಾರ್ಡ್‌ ವಿತರಿಸುತ್ತೇವೆ. ಗೃಹಲಕ್ಷ್ಮೀ, ಗೃಹಜ್ಯೋತಿ ಕಾರ್ಯಕ್ರಮದಿಂದ ಬಿಜೆಪಿ ತಲ್ಲಣಗೊಂಡಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಹೇಳಿದರು. ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತ ನಾಡಿದ ಅವರು, ಬಿಜೆಪಿ 100 ಕೋಟಿ ರೂ.ಗೆ ಶಾಸಕರನ್ನು ಖರೀದಿ ಮಾಡುತ್ತದೆ. ಕಾಂಗ್ರೆಸ್‌ ಟಿಕೆಟ್‌ ಅರ್ಜಿಗಾಗಿ ಪಾರದರ್ಶಕ ರೀತಿಯಲ್ಲಿ ಎರಡು …

Read More »

ಮದುವೆ ಸಂಭ್ರದಲ್ಲಿ ಮನೆ ಮಾಳಿಗೆಯಿಂದ 100,500 ನೋಟುಗಳನ್ನು ಎಸೆದ ಭೂಪ ; ಆಯ್ದುಕೊಳ್ಳಲು ಮುಗಿಬಿದ್ದ ಜನ

ಇಂದಿನ ದಿನಗಳಲ್ಲಿ ಜನರು ಮೋಜು ,ಮಸ್ತಿಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹೆಸರನ್ನು ಪಡೆಯುವುದಾಕ್ಕಾಗಿ ಏನನ್ನು ಬೇಕಾದರೂ ಮಾಡುತ್ತಾರೆ. ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಯುವಕನೋರ್ವ ಸೋಶಿಯಲ್ ವಿಡಿಯಾದಲ್ಲಿ ಪ್ರಸಿದ್ಧಿ ಪಡೆಯಲೆಂದು 10 ರೂ.ಗಳ ನೋಡುಗಳನ್ನು ಸೇತುವೆ ಮೇಲಿಂದು ಸುರಿದ್ದನು. ಅಂತಹದ್ದೆ ಘಟನೆಯ ವಿಡಿಯೋವೊಂದು ವೈರಲ್ ಆಗ್ತಿದೆ. ಗುಜರಾತಿನ ಮೆಹ್ಸಾನಾದಲ್ಲಿ ಯುವಕಯೋರ್ವ ಮನೆಯ ಮೇಲ್ಛಾವಣಿಯಿಂದ 500 ಮತ್ತು 100 ರೂ.ಗಳ ನೋಟುಗಳನ್ನು ಎಸೆದಿದ್ದು, ಅದನ್ನು ಸಂಗ್ರಹಿಸಲು ಮನೆಯಕೆಳಗೆ ಅಪಾರ ಸಂಖ್ಯೆಯ ಜನರು …

Read More »

ನೀವು ಮಾಡಿದ ಕರ್ಮ ನಿಮ್ಮನ್ನು ಬಿಡಲ್ಲ’ : ಕುತೂಹಲ ಮೂಡಿಸಿದ ಡಿ.ಕೆ ರವಿ ಪತ್ನಿ ಕುಸುಮಾ ಟ್ವೀಟ್

ಬೆಂಗಳೂರು: ರಾಜ್ಯದಲ್ಲಿ ಐಎಎಸ್ ವರ್ಸಸ್ ಸಮರ ತಾರಕಕ್ಕೇರಿದೆ. ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ನಡುವಿನ ಫೈಟ್ ತಾರಕಕ್ಕೇರಿದೆ. ಇದರ ನಡುವೆ ಡಿ.ಕೆ ರವಿ ಪತ್ನಿ ಕುಸುಮಾ ಟ್ವೀಟ್ ಕುತೂಹಲ ಮೂಡಿಸಿದೆ. ಯಾವುದೇ ಕಾರಣಕ್ಕೂ ನೀವು ಮಾಡಿದ ಕರ್ಮ ನಿಮ್ಮನ್ನು ಬಿಡಲ್ಲ. ಬಹಳ ತಡವಾದರೂ, ಬೇಗವಾದರೂ . ಯಾವುದೇ ಕಾರಣಕ್ಕೂ ನೀವು ಮಾಡಿದ ಕರ್ಮ ನಿಮ್ಮನ್ನು ಬಿಡಲ್ಲ ಎಂದು ಟ್ವೀಟ್ ಮಾಡಿದ್ದಾರೆ.     ರಾಜ್ಯದಲ್ಲಿ ಐಎಎಸ್ ವರ್ಸಸ್ ಸಮರ ತಾರಕಕ್ಕೇರಿದೆ. …

Read More »

ಮಾರಕಾಸ್ತ್ರಗಳಿಂದಹಾಡಹಗಲೇಯುವಕನ ಕೊಚ್ಚಿ ಕೊಲೆ

ಹುಬ್ಬಳ್ಳಿ: ಯುವಕನೋರ್ವನನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳ ಗುಂಪೊಂದು ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಹುಬ್ಬಳ್ಳಿಯ ನೇಕಾರ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಸಂತೋಷ ಕಾಲೋನಿಯಲ್ಲಿ ಜನತೆಯೇ ಬೆಚ್ಚಿ ಬೀಳುವಂತ ಘಟನೆ ನಡೆದಿದೆ. ಇಂದು ಆಟೋದಲ್ಲಿ ಬಂದಂತ ನಾಲ್ಕೈದು ದುಷ್ಕರ್ಮಿಗಳ ಗುಂಪೊಂದು ನಾಗರಾಜ ಚಲವಾದಿ ಎಂಬ ಯುವಕನ ಕಣ್ಣಿಗೆ ಕಾರದ ಪುಡಿಯನ್ನು ಎರಚಿದ್ದಾರೆ. ಈ ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಇನ್ನೂ ನಾಗರಾಜ ಚಲವಾದಿ ಜೊತೆಗೆ ಇದ್ದಂತ ಸ್ನೇಹಿತರ …

Read More »

ಫೆ.24 ರಿಂದ ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ’ ಉತ್ಸವ

ಕಲಬುರಗಿ : ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಯಿಂದ ಹಿರಿಯ ಹಾಗೂ ಯುವ ಚಿತ್ರಕಲಾವಿದರಿಂದ ಇದೇ ಫೆಬ್ರವರಿ 24 ಹಾಗೂ 25 ರಂದು ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನದ ಮೊದಲ ಮಹಡಿಯಲ್ಲಿ ಚಿತ್ರಕಲಾ ಶಿಬಿರ ಹಾಗೂ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಂದು ಕಲ್ಯಾಣ ಕರ್ನಾಟಕ ಉತ್ಸವದ ಚಿತ್ರಕಲೆ, ನೃತ್ಯ, ಪ್ರಬಂಧ, ಶಿಬಿರ/ ಪ್ರದರ್ಶನ ಸಮಿತಿಯ ಅಧ್ಯಕ್ಷರಾಗಿರುವ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ …

Read More »

ಸರ್ಕಾರಿ ನೌಕರರು ಯೂಟ್ಯೂಬ್ ಚಾನಲ್ ಆರಂಭಿಸುವಂತಿಲ್ಲ: ಸರ್ಕಾರ ಆದೇಶ

ತಿರುವನಂತಪುರಂ: ಸರ್ಕಾರಿ ನೌಕರರು ಯೂಟ್ಯೂಬ್ ಚಾನೆಲ್ ಆರಂಭಿಸುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ಸರ್ಕಾರಿ ನೌಕರರು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಮಯ ಕಳೆಯುವುದನ್ನು ಮೊಟಕುಗೊಳಿಸುವ ಗುರಿಯನ್ನು ಹೊಂದಿದೆ. ಚಂದಾದಾರರ ಸಂಖ್ಯೆಯು ನಿರ್ದಿಷ್ಟ ಮಿತಿಯನ್ನು ದಾಟಿದರೆ, ಚಾನಲ್ ಅನ್ನು ಹೊಂದಿರುವ ವ್ಯಕ್ತಿಯು ವೀಡಿಯೊಗಳನ್ನು ಪೋಸ್ಟ್ ಮಾಡುವ ಮೂಲಕ ಆದಾಯವನ್ನು ಗಳಿಸಬಹುದು. ಸರ್ಕಾರಿ ನೌಕರರು ಸೇರಿದಂತೆ ಅನೇಕರಿಗೆ ಇದು ಹೆಚ್ಚುವರಿ ಆದಾಯದ ಮೂಲವಾಗಿದೆ. ಆದರೆ, ಇದು ಕೇರಳ ಸರ್ಕಾರಿ …

Read More »