ಗೋಕಾಕ: ನಮ್ಮ ದೇಶದ ಮತದಾರರನ್ನು ಸಬಲೀಕರಣ, ಜಾಗೃಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುರ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು. ಬುಧವಾರದಂದು ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ತಾಲೂಕಾಡಳಿತ, ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಆಶ್ರಯದಲ್ಲಿ ಹಮ್ಮಿಕೊಂಡ 13ನೇ ರಾಷ್ಟ್ರೀಯ ಮತದಾರರ …
Read More »ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ ರಡ್ಡಿ ಬಳಗ ಹಮ್ಮಿಕೊಂಡಿದ್ದ ದಾರ್ಶನಿಕ ಕವಿ, ಮಹಾಯೋಗಿ ವೇಮನರ 611ನೇ ಜಯಂತ್ಯುತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜ ಬಾಂಧವರು ಈ ಸಮುದಾಯ …
Read More »ಗೋಕಾಕ : ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ.!
ಗೋಕಾಕ : ಗೋಕಾಕ ತಾಲೂಕಿನ ವಾಲ್ಮೀಕಿ ನಗರದಲ್ಲಿ ಕುಡಿದ ಅಮಲಿನಲ್ಲಿ ಅಣ್ಣ ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕುಡಿದ ಅಮಲಿನಲ್ಲಿ ತಿಲಕ ಎಂಬಾತ ಚೇತನ ಎಂಬ ಯುವಕನನ್ನು ಕೊಲೆ ಮಾಡಿದ್ದಾನೆ. ಗೋಕಾಕ ಫಾಲ್ಸ್ ನ ಸಮೀಪವಿರುವ ವಾಲ್ಮೀಕಿ ನಗರದಲ್ಲಿ ಇಬ್ಬರು ಒಂದೇ ಮನೆಯಲ್ಲಿ ವಾಸವಾಗಿದ್ದರು. ಇಬ್ಬರು ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಗೋಕಾಕ ಗ್ರಾಮೀಣ ಪೊಲೀಸ್ …
Read More »10 ದಿನಗಳಲ್ಲಿ ಸಿದ್ಧಗೊಂಡ ಕರ್ನಾಟಕದ ಸ್ತಬ್ಧಚಿತ್ರ ‘ನಾರಿ ಶಕ್ತಿ’
ನವದೆಹಲಿ: ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಪರವಾಗಿ ಪಾಲ್ಗೊಳ್ಳಲಿರುವ ‘ನಾರಿ ಶಕ್ತಿ ಸ್ತಬ್ಧಚಿತ್ರವು 10 ದಿನಗಳಲ್ಲಿ ಸಂಪೂರ್ಣವಾಗಿ ಸಿದ್ಧಗೊಂಡಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಪಿ.ಎಸ್. ಹರ್ಷ ತಿಳಿಸಿದರು. ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ತ್ರೀ ಸಬಲೀಕರಣವನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರವು ಜನವರಿ 26ರಂದು ರಾಜಧಾನಿಯ ಕರ್ತವ್ಯ ಪಥದಲ್ಲಿ ಸಾಗುವುದರೊಂದಿಗೆ ಕರ್ನಾಟಕದ ಹಿರಿಮೆಯ ಕೀರ್ತಿ ಪತಾಕೆಯನ್ನು ಹಾರಿಸಲಿದೆ. ಇದರೊಂದಿಗೆ ಸತತವಾಗಿ 14 ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ …
Read More »ಕೊಲಿಜಿಯಂನಲ್ಲಿ ಸರ್ಕಾರದ ಹಸ್ತಕ್ಷೇಪ ದುರುದ್ದೇಶಪೂರಿತ: ನ್ಯಾ. ಸಂತೋಷ್ ಹೆಗ್ಡೆ
ಮೈಸೂರು: ‘ನ್ಯಾಯಮೂರ್ತಿಗಳ ನೇಮಕಾತಿ ವ್ಯವಸ್ಥೆ ‘ಕೊಲಿಜಿಯಂ’ನಲ್ಲಿ ತನ್ನ ಪ್ರತಿನಿಧಿ ಇರಬೇಕು ಎನ್ನುವ ಕೇಂದ್ರ ಸರ್ಕಾರದ ನಿಲುವಿನಲ್ಲಿ ದುರುದ್ದೇಶವಿದೆ’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಆಕ್ರೋಶ ವ್ಯಕ್ತಪಡಿಸಿದರು. ‘ನ್ಯಾಯಾಂಗವನ್ನು ಹಿಡಿತದಲ್ಲಿಡಲು ಬಯಸುವವರು ಕೊಲಿಜಿಯಂ ಅನ್ನು ವಿರೋಧಿಸುವ ಮೂಲಕವೇ ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಇಂತಹ ಅಪಾಯಕಾರಿ ನಡೆ ಖಂಡನೀಯ’ ಎಂದು ಮಂಗಳವಾರ ಮಾಧ್ಯಮ ಸಂವಾದದಲ್ಲಿ ಪ್ರತಿಪಾದಿಸಿದರು. ‘ನ್ಯಾಯಾಂಗದಲ್ಲೂ ನ್ಯೂನತೆಗಳಿದ್ದು, ಸುಧಾರಣೆಯಾಗಬೇಕು. ಆದರೆ ಹೊರಗಿನವರಿಗೆ ಲಗಾಮು ನೀಡಬೇಕು ಎನ್ನುವ ಸರ್ಕಾರದ ಯೋಜನೆ ನ್ಯಾಯಾಂಗದ …
Read More »ಚಿಕ್ಕೋಡಿ: ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದ ಉಪನೋಂದಣಾಧಿಕಾರಿ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಮೀನು ಖರೀದಿಯ ನೋಂದಣಿ ಮಾಡಿಕೊಡಲು ₹30 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದ ಚಿಕ್ಕೋಡಿ ಉಪನೋಂದಣಾಧಿಕಾರಿ ಜಿ.ಪಿ. ಶಿವರಾಜು, ಮಂಗಳವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾರಾಷ್ಟ್ರದ ಇಚಲಕರಂಜಿಯ ರಾಜು ಲಕ್ಷ್ಮಣ ಪಾಚ್ಚಾಪುರೆ ಎನ್ನುವವರು ಚಿಕ್ಕೋಡಿ ತಾಲ್ಲೂಕಿನ ಡೊಣೆವಾಡ ಗ್ರಾಮದಲ್ಲಿ ಜಮೀನು ಖರೀದಿಸಿದ್ದರು. ನೋಂದಣಿ ಶುಲ್ಕ, ಮುದ್ರಾಂಕ ಶುಲ್ಕವೂ ಸೇರಿದಂತೆ ಎಲ್ಲವನ್ನು ತುಂಬಿದ್ದರು. ಆದರೆ, ಜಮೀನನ್ನು ಅವರ ಹೆಸರಿಗೆ ಮಾಡಿಕೊಡಲು ಉಪನೋಂದಣಾಧಿಕಾರಿ ₹ 30 ಸಾವಿರ ಲಂಚ ಕೇಳಿದ್ದರು. ಈ …
Read More »ಖಾನಾಪುರ: ವೃದ್ಧೆಗೆ ನ್ಯುಮೋನಿಯಾ- ಜಿಲ್ಲಾಸ್ಪತ್ರೆಗೆ ದಾಖಲು
ಖಾನಾಪುರ ತಾಲ್ಲೂಕಿನ ನಾವಗಾ ಹೊರವಲಯದ ಅರಣ್ಯದಲ್ಲಿ ಸೋಮವಾರ ಪತ್ತೆಯಾದ 90 ವರ್ಷದ ವೃದ್ಧೆ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ‘ತೀವ್ರ ನಿತ್ರಾಣಗೊಂಡ ಅಜ್ಜಿ ಸರಿಯಾಗಿ ಮಾತನಾಡುವಷ್ಟು ಚೇತರಿಸಿಕೊಂಡಿಲ್ಲ. ತನ್ನ ಹೆಸರು ಅಂಬವ್ವ ಕಾಟಗಾರಿ, ಊರಿನ ಹೆಸರು ಉಗರಖೋಡ ಎಂದಷ್ಟೇ ಹೇಳಿದ್ದಾರೆ. ಅವರ ಗುರುತು ಪತ್ತೆಗೆ ಯತ್ನ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ‘ನಾಲ್ಕೈದು ದಿನಗಳಿಂದ ಅನ್ನ-ನೀರು ಸೇವಿಸದೇ ಚಳಿಯಲ್ಲಿ ಬಿದ್ದಿದ್ದರಿಂದ ಅಜ್ಜಿ ದೇಹ …
Read More »ಹಿರೇಬಾಗೇವಾಡಿ: ಟ್ರ್ಯಾಕ್ಟರ್‌ಗೆ ಟಿಪ್ಪರ್ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು
ಹಿರೇಬಾಗೇವಾಡಿ (ಬೆಳಗಾವಿ ತಾ): ಸಮೀಪದ ಸುವರ್ಣ ವಿಧಾನಸೌಧದ ಬಳಿ ಬುಧವಾರ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ರಸ್ತೆಯಲ್ಲಿ ಟ್ರ್ಯಾಕ್ಟರಿಗೆ ಟಿಪ್ಪರ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತಾಲ್ಲೂಕಿನ ಹಲಗಾ ಗ್ರಾಮದ ಸಂತೋಷ ಮಹಾವೀರ ಹುಡೇದ (23) ಮೃತಪಟ್ಟವರು. ಸುವರ್ಣ ವಿಧಾನಸೌಧದ ಎದುರಿನ ಕಮಕಾರಟ್ಟಿ ರಸ್ತೆಯಲ್ಲಿ ಖಡಿ ತರಲು ಟ್ರ್ಯಾಕ್ಟರ್ ಹೊರಟಿತ್ತು. ಖಡಿ ತುಂಬಿಕೊಂಡು ಬಂದ ಟಿಪ್ಪರ್ ವಾಹನ ಟ್ರ್ಯಾಕ್ಟರನ್ನು ಹಿಂದಿಕ್ಕುವ ಭರದಲ್ಲಿ ಎರಡೂ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿತು. …
Read More »ಚುನಾವಣೆ ನಡೆಯುವುದು ಧಮ್, ತಾಕತ್ ಮೇಲಲ್ಲ ಅಭಿವೃದ್ಧಿ ಮೇಲೆ: ಬಿಸಿ ಪಾಟೀಲ್
ಹಾವೇರಿ: ಇಂದು ಹಿರೇಕೇರೂರು ಕ್ಷೇತ್ರದಲ್ಲಿ 461 ಕೋಟಿ ರೂಪಾಯಿ ಕಾಮಗಾರಿಗಳಿಗೆ ಚಾಲನೆ ಕೊಡ್ತಿದ್ದೇವೆ. 38 ಕೋಟಿ ರೂಪಾಯಿ ಮಡ್ಲೂರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡುತ್ತಾ ಇದ್ದೇವೆ. ಇದರಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗುತ್ತಿದ್ದಾರೆ ಎಂದು ಸಚಿವ ಬಿಸಿ ಪಾಟೀಲ್ ಹೇಳಿದರು. ಹಿರೇಕೇರೂರಿನಲ್ಲಿ ಮಾತನಾಡಿದ ಅವರು, 2018 ರಲ್ಲಿ ಚುನಾಯಿತರಾಗಿ ನಾನು ಹಿರೇಕೇರೂರು ತಾಲೂಕಿಗೆ 1000 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ. ತಾಲೂಕಿಗೆ 6 ನೀರಾವರಿ ಯೋಜನೆ ತಂದಿದ್ದೇನೆ. ತಾಲೂಕಿನಲ್ಲಿ ಎಲ್ಲಾ ಕೆರೆಗಳು …
Read More »ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
*ವಡೇರಹಟ್ಟಿ (ಮೂಡಲಗಿ)-* ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಅರಭಾವಿ ಬಿಜೆಪಿ ಮಂಡಲದಿಂದ ವಿಜಯ ಸಂಕಲ್ಪ ಅಭಿಯಾನದ ನಿಮಿತ್ಯ ಹಮ್ಮಿಕೊಂಡಿದ್ದ ಮತಗಟ್ಟೆ ಶಕ್ತಿಕೇಂದ್ರ, ಪೇಜ್ …
Read More »
Laxmi News 24×7