Breaking News

ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಯಾರು? ಇಲ್ಲಿದೆ ಕುತೂಹಲಕರ ಮಾಹಿತಿ

ಬೆಂಗಳೂರು, ಜನವರಿ 11: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇವೆ. ಈಗಾಗಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸುವಲ್ಲಿ ನಿರತವಾಗಿವೆ. ಜೆಡಿಎಸ್‌ 93 ಅಭ್ಯರ್ಥಿಗಳನ್ನು ಘೋಷಿಸಿದೆ. ಸಂಕ್ರಾಂತಿ ಸಮಯದಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಹೊರತರಲು ಸಿದ್ದತೆ ಮಾಡಿಕೊಂಡಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಫೆಬ್ರವರಿ ಅಂತ್ಯದಲ್ಲಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಬಹುದು. ಆ ಹೊತ್ತಿಗೆ ಕೇಂದ್ರ ಮತ್ತು ರಾಜ್ಯ ಬಜೆಟ್‌ಗಳು ಹೊರಬಂದಿರುತ್ತವೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ …

Read More »

ಗ್ರಾಮಗಳಿಗೆ ಶ್ಮಶಾನ ಜಾಗ: ವರದಿ ಸಲ್ಲಿಸಲು ಸಮಯ ಕೇಳಿದ ಸರ್ಕಾರ

ಬೆಂಗಳೂರು: ರಾಜ್ಯದ ಎಲ್ಲಾ ಗ್ರಾಮಗಳಲ್ಲಿ ಶವ ಸಂಸ್ಕಾರಕ್ಕೆ ಶ್ಮಶಾನ ಜಾಗ ಒದಗಿಸಿರುವ ಬಗ್ಗೆ ಸಮಗ್ರ ವರದಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡುವಂತೆ ಸರ್ಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.   ರಾಜ್ಯದ ಎಲ್ಲಾ ಗ್ರಾಮಗಳು ಮತ್ತು ಪಟ್ಟಣ ಪ್ರದೇಶಗಳಿಗೆ ಶವಸಂಸ್ಕಾರಕ್ಕೆ ಶ್ಮಶಾನ ಜಾಗ ಒದಗಿಸುವಂತೆ 2019ರ ಆಗಸ್ಟ್‌ 20ರಂದು ಹೈಕೋರ್ಟ್‌ ನೀಡಿದ್ದ ಆದೇಶ ಸರ್ಕಾರ ಪಾಲಿಸಿಲ್ಲ ಎಂದು ದೂರಿ ಬೆಂಗಳೂರು ನಿವಾಸಿ ಮಹಮ್ಮದ್‌ ಇಕ್ಬಾಲ್‌ ಎಂಬುವರು ಸಲ್ಲಿಸಿರುವ ಸಿವಿಲ್‌ ನ್ಯಾಯಾಂಗ ನಿಂದನೆ …

Read More »

ಜನಾರ್ದನ ರೆಡ್ಡಿ ಆಸ್ತಿ ಜಪ್ತಿ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್‌

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತವರ ಕುಟುಂಬಕ್ಕೆ ಸೇರಿದ ಹೆಚ್ಚುವರಿ ಆಸ್ತಿಗಳನ್ನು ಜಪ್ತಿ ಮಾಡುವ ಸಂಬಂಧ ಸಿಬಿಐ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸಲು ಸರ್ಕಾರ ಕಾಲಾವಕಾಶ ಕೋರಿದೆ.   ಸಿಬಿಐ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಆಸ್ತಿ ಜಪ್ತಿಗೆ ಅನುಮತಿ ಕೋರಿ ಸಿಬಿಐ ಅರ್ಜಿ ಸಲ್ಲಿಸಿ 5 ತಿಂಗಳಾದರೂ ಮನವಿ ಪರಿಗಣಿಸದಿರಲು …

Read More »

ಸ್ಯಾಂಟ್ರೋ ರವಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ನಿಂದ ಸಿಎಂ ಬೊಮ್ಮಾಯಿ ಪುತ್ರನ ಜೊತೆಗಿನ ವಾಟ್ಸಾಪ್ ಚಾಟ್ ರಿಲೀಸ್

ಬೆಂಗಳೂರು: ಸ್ಯಾಂಟ್ರೋ ರವಿಯ ಸ್ವೀಟ್ ( Santro Ravi ) ಬ್ರದರ್ ಆಗಿರುವ ಸಿಎಂ ಪುತ್ರ ಮತ್ತು ರವಿಯ ವಾಟ್ಸಾಪ್ ಮೆಸೇಜ್‌ಗಳು ಹಲವು ಪ್ರಶ್ನೆಗಳನ್ನ ಎತ್ತುತ್ತವೆ. ಎಲ್ಲಾ ಬ್ರೋಕರ್‌ಗಳನ್ನು ಮ್ಯಾನೇಜ್ ಮಾಡುವ ಜವಾಬ್ದಾರಿ ಸಿಎಂ ಪುತ್ರನದ್ದೇ? ಸಿಎಂ ಪಾಲಿನ ಕಮಿಷನ್ ವ್ಯವಹಾರ ನೋಡಿಕೊಳ್ಳುವುದು ಪುತ್ರನೇ? ಸ್ವತಃ ಸಿಎಂ ರವಿಯ ರಕ್ಷಣೆಗೆ ನಿಂತಿದ್ದಾರೆಯೇ ಬಿಜೆಪಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಟ್ವಿಟ್ ನಲ್ಲಿ ( Twitter ) …

Read More »

ವಿಧಾನಸಭೆ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ.? ಮಧು ಬಂಗಾರಪ್ಪ ಹೇಳಿಕೆ

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನಾಲಾಯಕ್ ವ್ಯಕ್ತಿ. ಅಭಿವೃದ್ಧಿ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ ಎಂದು ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಟೀಕಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಕೇವಲ ಹಿಂದುತ್ವದಿಂದ ಜನರ ಹೊಟ್ಟೆ ತುಂಬುವುದಿಲ್ಲ. ಕಾಂಗ್ರೆಸ್ ಪಕ್ಷ ಯಾವತ್ತೂ ಭಾವನಾತ್ಮಕವಾಗಿ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ನಟ ಶಿವರಾಜ್ ಕುಮಾರ್ ಅವರಿಗೆ ರಾಜಕೀಯ ಕ್ಷೇತ್ರದಲ್ಲಿ ಒಲವಿಲ್ಲ. ಆದರೆ, ಗೀತಕ್ಕ ಚುನಾವಣೆಯಲ್ಲಿ ನನ್ನ …

Read More »

ಮಗಳನ್ನು ಕೊಂದು ರಾತ್ರೋರಾತ್ರಿ ಸುಟ್ಟು ಹಾಕಿದ ತಂದೆ-ತಾಯಿ

ತಂದೆ ಮತ್ತು ಮಲ ತಾಯಿ ಸೇರಿಕೊಂಡು 17 ವರ್ಷದ ಮಗಳನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಪುರಿ ಜಿಲ್ಲೆಯ ಗೋಪ್​ ಪ್ರದೇಶದಲ್ಲಿ ನಿನ್ನೆ (ಜ.9) ರಾತ್ರಿ ನಡೆದಿದೆ. ಸಾಕ್ಷಿಯನ್ನು ನಾಶ ಮಾಡಲು ಮಗಳ ಶವವನ್ನು ಸುಟ್ಟು ಹಾಕಿರುವುದಾಗಿ ವರದಿಯಾಗಿದೆ.   ಮೃತಳನ್ನು ಸೊನಾಲಿ ಮೊಹರಾಣ ಎಂದು ಗುರುತಿಸಲಾಗಿದೆ. ಹಿರಿಯ ಸಹೋದರಿ ರಂಜಿತಾ ಮೊಹರಾಣ ನೀಡಿದ ದೂರಿನ ಆಧಾರದ ಮೇಲೆ ಗೋಪ್​ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಾಚರಣ …

Read More »

ಧ್ವನಿ ಎತ್ತಿದರೆ ಕಠಿಣ ಕ್ರಮ: ಅಕ್ಕಲಕೋಟೆ ಕನ್ನಡಿಗರಿಗೆ ಮಹಾರಾಷ್ಟ್ರ ಬೆದರಿಕೆ

ಕನ್ನಡಪರ ಘೋಷಣೆ ಕೂಗಿದ ಮಹಾರಾಷ್ಟ್ರದ ಅಕ್ಕಲಕೋಟೆ ತಾಲ್ಲೂಕಿನ 17 ಕನ್ನಡಿಗರಿಗೆ ನೋಟಿಸ್‌ ನೀಡಿರುವ ಸ್ಥಳೀಯ ಪೊಲೀಸರು, ಈ ನಡವಳಿಕೆ ಮುಂದುವರಿಸಿದರೆ ‘ರಾಜ್ಯ ದ್ರೋಹ’ ಆರೋಪ ಹೊರಿಸಿ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ.   ಅಲ್ಲದೆ, ತಾಲ್ಲೂಕಿನ ಉಡಗಿ ಗ್ರಾಮವನ್ನು ಕರ್ನಾಟಕಕ್ಕೆ ಸೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಖಾಸಗಿ ಕನ್ನಡ ಶಾಲೆಯ ಸಿಬ್ಬಂದಿಯನ್ನು ಶಾಲಾಡಳಿತ ಅಮಾನತು ಮಾಡಿದೆ. ಜತ್ತ ತಾಲ್ಲೂಕಿನಲ್ಲಿ ಕನ್ನಡ ಸರ್ಕಾರಿ ಶಾಲೆಯೊಂದರ ಶಿಕ್ಷಕರೊಬ್ಬರಿಗೆ ನೋಟಿಸ್‌ ನೀಡಲಾಗಿದೆ. ಡಿಸೆಂಬರ್‌ನಲ್ಲಿ ಗಡಿ …

Read More »

ಸ್ಯಾಂಟ್ರೊ ರವಿ ಬಂಧನಕ್ಕೆ ತಂಡ ರಚನೆ, ಲುಕ್ ಔಟ್ ನೋಟಿಸ್ ಜಾರಿ:ಅಲೋಕ್ ಕುಮಾರ್

ಮೈಸೂರು: ತಲೆ ಮರೆಸಿಕೊಂಡಿರುವ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿ ಬಂಧನಕ್ಕೆ ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು. ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ರವಿ ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರವಿ ವಿರುದ್ದ ಮೈಸೂರು ನಗರದ ವಿಜಯನಗರ ಠಾಣೆಯಲ್ಲಿ ಅತ್ಯಾಚಾರ ಮತ್ತು ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ …

Read More »

ರಾಜ್ಯದಲ್ಲಿ ಆಲಿಬಾಬಾ, 40 ಕಳ್ಳರ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಆಲಿಬಾಬಾ ಮತ್ತು 40 ಕಳ್ಳರ ಸರ್ಕಾರ ಅಧಿಕಾರದಲ್ಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಸವರಾಜ ಬೊಮ್ಮಾಯಿ ರಾಜ್ಯ ಕಂಡ ಭ್ರಷ್ಟ ಮುಖ್ಯಮಂತ್ರಿಯಷ್ಟೇ ಅಲ್ಲ, ಅತ್ಯಂತ ದುರ್ಬಲ ಮುಖ್ಯಮಂತ್ರಿ. ಇವರಿಂದ ರಾಜ್ಯದ ಘನತೆಗೆ ಕಳಂಕ ಬಂದಿದೆ ಎಂದು ದೂರಿದರು. ಬಿಜೆಪಿ ಸರ್ಕಾರ ಅನೈತಿಕ ಮಾರ್ಗದ ಮೂಲಕ ರಚನೆಯಾದ ಸರ್ಕಾರ. 2018ರಲ್ಲಿ ಇವರಿಗೆ ಜನ ಪೂರ್ಣ ಪ್ರಮಾಣದಲ್ಲಿ ಆಶೀರ್ವಾದ ಮಾಡಿರಲಿಲ್ಲ, 104 ಸ್ಥಾನಗಳಲ್ಲಿ …

Read More »

ಅತಿಥಿಗೃಹ ಶುಲ್ಕ ಏರಿಕೆ; ಟಿಟಿಡಿ ವಿರುದ್ಧ ಆಕ್ಷೇಪ

ಹೈದರಾಬಾದ್‌: ತಿರುಪತಿ ತಿರುಮಲ ದೇಗುಲಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿರುವ ನಡುವೆಯೇ, ದೇವಸ್ಥಾನ ಮಂಡಳಿ ದೇಗುಲದ ಅತಿಥಿಗೃಹ ಹಾಗೂ ಕಾಟೇಜ್‌ಗಳ ಶುಲ್ಕ ಏರಿಕೆ ಮಾಡಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತವಾಗಿದೆ. 750ರೂ. ಶುಲ್ಕವಿದ್ದ ನಾರಾಯಣ ಗಿರಿಯಲ್ಲಿರುವ ಅತಿಥಿಗೃಹಗಳಿಗೆ ಇನ್ನು ಮುಂದೆ 1,700 ರೂ. ಪಾವತಿಸಬೇಕಿದ್ದು, ಕಾಟೇಜ್‌ ಶುಲ್ಕ 2 ಸಾವಿರ ರೂ.ಗಳಿಗೆ ಟಿಟಿಡಿ ಏರಿಕೆ ಮಾಡಿದೆ. ತಿರುಪತಿ ಅತಿ ಹೆಚ್ಚು ಭಕ್ತಾದಿಗಳು ಭೇಟಿ ನೀಡುವ ಧಾರ್ಮಿಕ ಕ್ಷೇತ್ರವಾಗಿದ್ದು, ಶುಲ್ಕ ಹೆಚ್ಚಳ ಭಕ್ತರಿಗೆ …

Read More »