ಬೆಳಗಾವಿ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ ಮೇಲೆ ಹಿಂಡಲಗಾದಲ್ಲಿ ಶನಿವಾರ ನಡೆದ ಗುಂಡಿನ ದಾಳಿ ಖಂಡಿಸಿ ರಾಜ್ಯಾದ್ಯಂತ ಜ. 8ರಂದು ಶ್ರೀರಾಮಸೇನಾ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುವುದು. ಫೈರಿಂಗ್ ಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಶ್ರೀರಾಮಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ್ ಆಗ್ರಹಿಸಿದರು. ಈ ಬಗ್ಗೆ ವಿಡಿಯೋ ಬಿಡುಗಡೆಗೊಳಿಸಿರುವ ಮುತಾಲಿಕ್, ಹಿಂದೂತ್ವ ಸಂಘಟನೆಯಾದ ಶ್ರೀರಾಮಸೇನೆ ದುಷ್ಕರ್ಮಿಗಳ ಗುಂಡು, ಕತ್ತಿಗೆ, ಬಾಂಬ್, ತಲವಾರ್ ಗೆ ಹೆದರುವುದಿಲ್ಲ. ಇಂಥ ದಾಳಿಗೆ ನಾವು ಹೆದರುವವರಲ್ಲ. ಹಿಂದೂಗಳು ಗಟ್ಟಿಯಾಗಿದ್ದಾರೆ, …
Read More »ದೇಶದಲ್ಲಿ ಸಂವಿಧಾನ ತಿದ್ದುಪಡಿ ಹುನ್ನಾರ; ಡಾ| ರಾಜರತ್ನ ಅಂಬೇಡ್ಕರ್
ಸಂಕೇಶ್ವರ: ಸದ್ಯ ದೇಶದಲ್ಲಿ ಸಂವಿಧಾನ ತಿದ್ದುಪಡಿ, ಮೀಸಲಾತಿ ಕಿತ್ತುಕೋಳ್ಳುವ ಹುನ್ನಾರ ಮನುವಾದಿಗಳು ಮಾಡುತಿದ್ದು, ಇದರ ಬಗ್ಗೆ ದಲಿತರು ಎಚ್ಚರದ ಹೆಜ್ಜೆ ಇಡುವ ಮೂಲಕ ಜಾಗೃತಿ ವಹಿಸಬೇಕಾಗಿದೆ ಎಂದು ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾದ ಅಧ್ಯಕ್ಷ, ಡಾ| ಬಿ.ಆರ್.ಅಂಬೇಡ್ಕರ್ ಮರಿಮೊಮ್ಮಗ ಡಾ| ರಾಜರತ್ನ ಅಂಬೇಡ್ಕರ್ ಹೇಳಿದರು. ಸಂಕೇಶ್ವರದಲ್ಲಿ ಭೀಮಾ-ಕೊರೆಗಾಂವ ವಿಜಯೋತ್ಸವದ 205ನೇ ವರ್ಷಾಚರಣೆ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ ನಿಮಿತ್ತ ಡಾ| ಬಿ.ಆರ್.ಅಂಬೇಡ್ಕರ್ ಜನಜಾಗ್ರತಿ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, …
Read More »1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.
ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …
Read More »ಕ್ಲೀನ್ ಚಿಟ್ ಸಿಕ್ಕ ನಂತರ ಸಾಕ್ಷ್ಯ ಒದಗಿಸಿದ್ದರ ಹಿಂದೆ ಷಡ್ಯಂತ್ರ ಅಡಗಿದೆ: ಕೆಎಸ್ ಈಶ್ವರಪ್ಪ ಅನುಮಾನ
ಶಿವಮೊಗ್ಗ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನಗೆ ಕ್ಲೀನ್ ಚಿಟ್ ಸಿಕ್ಕ ನಂತರ ಈಗ ಸಾಕ್ಷ್ಯ ಒದಗಿಸುತ್ತಾರೆ ಎಂದರೆ ಇದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯಾರೂ ಏನೂ ಕೊಡ್ತಾರೆ, 25 ಸಾವಿರಕ್ಕೂ 50 ಸಾವಿರ ಕೊಡುತ್ತಾರೆ ಅಂದರೆ ಅದಕ್ಕೆಲ್ಲಾ ನಾನು ಪ್ರತಿಕ್ರಿಯಿಸುವುದಿಲ್ಲ ಎನ್ನುತ್ತಲೆ ಸಂತೋಷ್ ಪಾಟೀಲ್ ಕುಟುಂಬದವರು ಈಗ ಸಾಕ್ಷ್ಯ ನೀಡುತ್ತಿರುವುದಕ್ಕೆ ಅಸಮಾಧಾನ ಹೊರ ಹಾಕಿದರು. …
Read More »ಬೆಳಗಾವಿ: ಲಿಂಗಾಯತ ಪಂಚಮಸಾಲಿಗಳಿಗೆ 24 ಗಂಟೆಯೊಳಗೆ 2ಎ ಸ್ಥಾನಮಾನ ನೀಡಿ- ಶಾಸಕ ಬಸನಗೌಡ ಪಾಟೀಲ್
ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 24 ಗಂಟೆಯೊಳಗೆ 2ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಡುವು ನೀಡಿದ್ದಾರೆ. ನಗರದ ಗಾಂಧಿ ಭವನದಲ್ಲಿ ಗುರುವಾರ 2ಡಿ ಪಡೆದಿರುವ ಪಂಚಮಸಾಲಿ ಸಮಾಜಕ್ಕೆ ನ್ಯಾಯವೋ ಅನ್ಯಾಯವೋ ಎಂಬ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, 24 ಗಂಟೆಯೊಳಗೆ ಮೀಸಲಾತಿ ನೀಡದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಮುಖ್ಯಮಂತ್ರಿ ಸ್ಪರ್ಧಿಸಲಿರುವ ಹಾವೇರಿ …
Read More »ಈ ಅಧಿಕಾರಿಯ ಮಾನವೀಯ ಕಾರ್ಯವನ್ನು ಮೆಚ್ಚಲೇ ಬೇಕು…!
ಬೆಳಗಾವಿ :ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರೂ ಯಾರೂ ಅವರ ರಕ್ಷಣೆಗೆ ಮುಂದಾಗಿರಲಿಲ್ಲ. …
Read More »ವಿಧಾನಸೌಧದ ಬಳಿ ಹಣ ಪತ್ತೆ: ಪೊಲೀಸರ ವಿರುದ್ಧ ಆರೋಪಿ ಜಗದೀಶ್ ಪರ ವಕೀಲ ಗರಂ
ಬೆಂಗಳೂರು: ವಿಧಾನಸೌಧ ಬಳಿ ಪಿಡಬ್ಲ್ಯೂಡಿ ಎಂಜಿನಿಯರ್ ಜಗದೀಶ್ ಎಂಬವರಿಂದ 10 ಲಕ್ಷ ರೂಪಾಯಿ ಹಣ ಸಿಕ್ಕಿರುವ ಪ್ರಕರಣ ನಿನ್ನೆ ನಡೆದಿತ್ತು. ಈ ಕುರಿತು ಟ್ವೀಟ್ ಮಾಡಿರುವ ಬಂಧಿತ ಎಂಜಿನಿಯರ್ ಜಗದೀಶ್ ಪರ ವಕೀಲ ರಾಜು ಗಡೇಕರ್, ‘ಡಿಸಿಪಿ ಆಣತಿಯಂತೆ ವಕೀಲರೊಂದಿಗೆ ಠಾಣೆಗೆ ಹಾಜರಾದ ವ್ಯಕ್ತಿಯನ್ನು ಅಕ್ರಮವಾಗಿ ಕೂಡಿ ಹಾಕಿದ್ದು, ನಂತರ ಭೇಟಿ ಮಾಡಲು ಅವಕಾಶ ಕಲ್ಪಿಸಿಲ್ಲ’ ಎಂದು ಆರೋಪಿಸಿದ್ದಾರೆ. ಎಂಜಿನಿಯರ್ ಜಗದೀಶ್ ಬ್ಯಾಗ್ನಲ್ಲಿ ಹಣ ಪತ್ತೆ: ಮಂಡ್ಯದ ಸಹಾಯಕ ಕಾರ್ಯ …
Read More »ಸಿದ್ದರಾಮಯ್ಯ- ರಮೇಶ ಜಾರಕಿಹೊಳಿ ರಹಸ್ಯ ಸಭೆ: ಮೂಲ ಗೂಡಿಗೆ ಮರಳಲಿದ್ದಾರಾ ಪ್ರಭಾವಿ ಮುಖಂಡ?
ಬೆಂಗಳೂರು, : ರಾಜ್ಯ ರಾಜಕಾರಣವು ಹೊಸದೊಂದು ಸಂಚಲನಕ್ಕೆ ಅಣಿಯಾಗುತ್ತಿದೆ ಎಂಬ ಮಾತುಗಳು ಓಡಾಡುತ್ತಿವೆ. ಬೆಳಗಾವಿಯ ಪ್ರಭಾವಿ ರಾಜಕಾರಣಿ ರಮೇಶ ಜಾರಕಿಹೊಳಿ ತಮ್ಮ ಗುರು ಸಿದ್ದರಾಮಯ್ಯನವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು. ಆದರೆ, ಅವರಿಬ್ಬರ ನಡುವೆ ನಡೆದ ಮಾತುಕತೆಗಳೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮೂಲದ ಪ್ರಕಾರ, ರಮೇಶ ಜಾರಕಿಹೊಳಿ ಅವರು ಬಿಜೆಪಿಯ ನಾಯಕರೊಂದಿಗೆ ಮುನಿಸಿಕೊಂಡಿದ್ದಾರೆ. ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗ ತಮಗೆ ಸಚಿವ ಸ್ಥಾನ ನೀಡಬೇಕೆಂದು …
Read More »2D ಮೀಸಲಾತಿ ತಿರಸ್ಕಾರ: ಸಿಎಂ ಬೊಮ್ಮಾಯಿಗೆ 24 ಗಂಟೆಗಳ ಅಂತಿಮ ಗಡುವು ನೀಡಿದ ಯತ್ನಾಳ್
ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರ ನೀಡಿರುವ 2D ಮೀಸಲಾತಿಯನ್ನು ತಿರಸ್ಕರಿಸಿರುವ ಪಂಚಮಸಾಲಿ ಸಮುದಾಯದ ನಾಯಕರು ತಮಗೆ 2A ಮೀಸಲಾತಿಯೇ ಬೇಕು ಎಂದು ಮತ್ತೊಮ್ಮೆ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆ ಗುರುವಾರ ನಡೆದ ಸಮುದಾಯದ ನಾಯಕರ ಮಹತ್ವದ ಸಭೆ ನಡೆಸಿ ಚರ್ಚಿಸಿದರು. 2ಅ ಮೀಸಲಾತಿ ನೀಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್, ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ‘ಬಸವರಾಜ ಬೊಮ್ಮಾಯಿಯವರು ಸಿಎಂ ಆದಾಗಿನಿಂದ ಈವರೆಗೂ ಹಾದಿ ತಪ್ಪಿಸುವ …
Read More »ಕುಷ್ಟಗಿಯಲ್ಲೊಬ್ಬ ಎಣ್ಣೇ ಮೇಸ್ಟ್ರು: ಶಾಲೆಗೆ ಚಕ್ಕರ್. ಬಾರ್ ಗೆ ಹಾಜರ್
ಕುಷ್ಟಗಿ: ಶಿಕ್ಷಕನೋರ್ವ ಶಾಲೆಗೆ ಗೈರಾಗಿ ಕಂಠ ಪೂರ್ತಿ ಕುಡಿದು, ಎಣ್ಣೆ ಮತ್ತಿನಲ್ಲಿ ತೂರಾಡಿಕೊಂಡು ಹೋಗುವಾಗ ಬಿದ್ದು ತಲೆಗೆ ಗಾಯ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲೂಕಿನ ಚಿಕ್ಕನಂದಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸೇವೆಯಲ್ಲಿರುವ ಕೃಷ್ಣೇಗೌಡ ಎಂದು ಗುರುತಿಸಲಾಗಿದೆ. ಈ ಶಿಕ್ಷಕ ಮೂಲತಃ ಹಾಸನ ಜಿಲ್ಲೆಯವರಾಗಿದ್ದು, ಪರಸ್ಪರ ವರ್ಗವಣೆ ಮೇರೆಗೆ ಚಿಕ್ಕನಂದಿಹಾಳ ಶಾಲೆಗೆ ಕಳೆದ ಒಂದು ವರ್ಷದಿಂದ ಶಿಕ್ಷಕ ಸೇವೆಯಲ್ಲಿರುವ ಶಿಕ್ಷಕನ ಕುಡಿತದ ದುರ್ವರ್ತನೆಗೆ ನಾಗರೀಕ ಸಮಾಜ ತಲೆತೆಗ್ಗಿಸುವಂತಾಗಿದೆ. ಬುಧವಾರ ಕುಷ್ಟಗಿ …
Read More »
Laxmi News 24×7