ಪಣಜಿ: ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ಗೋವಾದ ಅಸ್ಮಿತೆಯನ್ನು ಕಾಪಾಡಲು ಮತ್ತು ಅದನ್ನು ಎಲ್ಲಾ ರೀತಿಯಲ್ಲೂ ರಕ್ಷಿಸಲು, ದೇಶದ ಪರಿಣಿತ ಕಾನೂನು ತಜ್ಞರು ಮತ್ತು ಪರಿಸರವಾದಿಗಳ ಸಹಾಯದಿಂದ ಸುಪ್ರೀಂ ಕೋರ್ಟ್‍ನಲ್ಲಿ ಗೋವಾದ ಪರವನ್ನು ಬಲವಾಗಿ ಮಂಡಿಸಲಾಗುವುದು. ಇನ್ನೆರಡು ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದ ನಿಯೋಗ ಭೇಟಿ ಮಾಡಲಿದೆ. ಮಹದಾಯಿ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ತಮ್ಮ ನಿಲುವನ್ನು …
Read More »ಆರೋಗ್ಯದಲ್ಲಿ ಏರುಪೇರು: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಹುಲ್ ಹಾಗೂ ಪ್ರಿಯಾಂಕಾ ಯಾತ್ರೆ ಮೊಟಕುಗೊಳಿಸಿ ದೆಹಲಿಗೆ ಮರಳಿದ್ದಾರೆ ಎನ್ನಲಾಗಿದೆ. ಬುಧವಾರ ಮುಂಜಾನೆ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಪುತ್ರಿ ಪ್ರಿಯಾಂಕಾ ಗಾಂಧಿ ಜೊತೆಗಿದ್ದಾರೆ ಎನ್ನಲಾಗಿದೆ.
Read More »ಲಾಡ್ಜ್ ಒಂದರಲ್ಲಿ ವ್ಯಕ್ತಿಯೊಬ್ಬ ಕುತ್ತಿಗೆಗೆ ಬೇಡ ಶೀಟ್ ಕಟ್ಟಿಕೊಂಡು ನೇಣಿಗೆ ಶರಣಾದ
ಲಾಡ್ಜ್ ಒಂದರಲ್ಲಿ ವ್ಯಕ್ತಿಯೊಬ್ಬ ಕುತ್ತಿಗೆಗೆ ಬೇಡ ಶೀಟ್ ಕಟ್ಟಿಕೊಂಡು ನೇಣಿಗೆ ಶರಣಾದ ಘಟನೆ ಚನ್ನಮ್ಮಾ ವೃತ್ತದ ಹತ್ತಿರ ಇರುವ ಸಂಗಮ ಲಾಡ್ಜ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಕಲಘಟಗಿ ತಾಲುಕಿನ ಕಂಪ್ಲಿಕೊಪ್ಪ ಗ್ರಾಮದ ನಿವಾಸಿ ಸಂತೋಷ ಯಲ್ಲಪ್ಪ ಹರಿಜನ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಡ್ರೈವರ್ ಆಗಿದ್ದು ಡಿಸೆಂಬರ್ 19 ರಂದು ಸಂಗಮ ಲಾಡ್ಜನಲ್ಲಿ 302 ಕೊಠಡಿ ಬುಕ್ಕ ಮಾಡಿದ್ದು ತಿಳಿದು ಬಂದಿದೆ. ಇನ್ನು ಇತನ ಮೇಲೆ ನವನಗರ ಪೊಲೀಸ್ …
Read More »ಡಬಲ್ ಎಂಜಿನ್ ಸರ್ಕಾರ ತೆಗೆಯದಿದ್ದರೆ ಸಂಕಷ್ಟ: ಬಡಗಲಪುರ ನಾಗೇಂದ್ರ
ಬಾಗಲಕೋಟೆ: ‘ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಎಂಜಿನ್ ಸರ್ಕಾರ ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಾಗಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿ, ಉಸಿರಾಡಿಸಲೂ ಕಷ್ಟವಾಗಬಹುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು. ಜನಾಂದೋಲನಗಳ ಮಹಾಮೈತ್ರಿ ಕರ್ನಾಟಕ, ಸಿಟಿಜನ್ ಫಾರ್ ಡೆಮೊಕ್ರಸಿ, ಜನತಂತ್ರ ಪಯೋಗ ಶಾಲೆ ಹಾಗೂ ಸಂಯುಕ್ತ ಹೋರಾಟ ಮುಖಂಡರು ಸೇರಿಕೊಂಡು ಜಿಲ್ಲೆಯ ಕೂಡಲಸಂಗಮದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಸಮಾಜ ಪರಿವರ್ತನ ಸತ್ಯಾಗ್ರಹ …
Read More »ಪ್ರದೀಪ್ ಆತ್ಮಹತ್ಯೆ: ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ
ಬೆಂಗಳೂರು: ಗುತ್ತಿಗೆದಾರ ಪ್ರದೀಪ್ ಆತ್ಮಹತ್ಯೆ ಪ್ರಕರಣ ಸಂಬಂಧ, ಬಿಜೆಪಿ ಶಾಸಕ ಅರವಿಂದ ಲಿಂಬಾವಳಿಯನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಲಿಂಬಾವಳಿ ವಿರುದ್ಧ ಇನ್ನೂ ಯಾಕೆ ತನಿಖೆ ಆರಂಭವಾಗಿಲ್ಲ ಎಂದು ಪ್ರಶ್ನೆ ಮಾಡಿದೆ. ಈ ಪ್ರಕರಣದಲ್ಲಿ ಹೆಚ್ಚಿನ ಅವ್ಯವಹಾರ ನಡೆದಿರುವ ಸಂಭವವಿದೆ ಎಂದು ಹೇಳಿರುವ ಕಾಂಗ್ರೆಸ್, #ArrestLimbavali ಎನ್ನುವ ಹ್ಯಾಷ್ ಟ್ಯಾಗ್ ಬಳಕೆ ಮಾಡಿ ವಾಗ್ದಾಳಿ ನಡೆಸಿದೆ. ‘ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಬಿಜೆಪಿ …
Read More »ಸಾಹಿತ್ಯ ಸಮ್ಮೇಳನ: ಪಾರ್ಕಿಂಗ್‌ಗೆ ಕ್ಯೂ ಆರ್ ಕೋಡ್ ಸ್ಕ್ಯಾನ್ ವ್ಯವಸ್ಥೆ
ಹಾವೇರಿ: ನಗರದಲ್ಲಿ ಜನವರಿ 6 ರಿಂದ 8ರವರೆಗೆ ಮೂರು ದಿನಗಳ ಕಾಲ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನಲೆಯಲ್ಲಿ ಸುಗಮ ಸಂಚಾರಕ್ಕಾಗಿ ಜ.6 ರಿಂದ ಜ.8ರವರೆಗೆ ದೈನಂದಿನ ಸಂಚಾರ ಮಾರ್ಗವನ್ನು ತಾತ್ಕಾಲಿಕವಾಗಿ ಬದಲಾವಣೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ. ದಾವಣಗೆರೆ ಮಾರ್ಗವಾಗಿ ಬರುವ ವಾಹನಗಳು ತೋಟದ ಯಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಕೆಳ ಸೇತುವೆ ಸರ್ವಿಸ್ ರಸ್ತೆ ಮುಖಾಂತರ ಹಳೇ ಪಿಬಿ …
Read More »ಕೆಪಿಟಿಸಿಎಲ್ 505 ಹುದ್ದೆ: 501 ಅಭ್ಯರ್ಥಿಗಳಷ್ಟೆ ಅರ್ಹರು!
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್), ಬೆಸ್ಕಾಂ, ಸೆಸ್ಕ್, ಹೆಸ್ಕಾಂ, ಮೆಸ್ಕಾಂ ಮತ್ತು ಜೆಸ್ಕಾಂಗಳ ಆಡಳಿತ ವ್ಯಾಪ್ತಿಯ ಕಚೇರಿಗಳಲ್ಲಿ ಖಾಲಿ ಇರುವ 1,492 ವಿವಿಧ ಹುದ್ದೆಗಳ ನೇಮಕಾತಿಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆಗೆ ನಿಗದಿಪಡಿಸಿದ ಅಂಕಗಳಿಸಿದ ಅಭ್ಯರ್ಥಿಗಳ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಂಗಳವಾರ ಪ್ರಕಟಿಸಿದೆ. ಆದರೆ, ಸಹಾಯಕ ಎಂಜಿನಿಯರ್ (ವಿದ್ಯುತ್) 505 ಹುದ್ದೆಗಳಿಗೆ (ಉಳಿಕೆ ವೃಂದದ 393, ಬ್ಯಾಕ್‌ಲಾಗ್ 6 , …
Read More »‘ಕೈ’ ಟಿಕೆಟ್: ಡಿಕೆಶಿ ಇಂದು ದೆಹಲಿಗೆ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸುಮಾರು 150 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಸಂಕ್ರಾಂತಿ (ಜ.14) ಕಳೆಯುತ್ತಿದ್ದಂತೆ ಘೋಷಿಸಲು ತಯಾರಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ವರಿಷ್ಠರ ಜೊತೆ ಸಮಾಲೋಚಿಸಲು ಬುಧವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ‘ಬುಧವಾರ ಬೆಳಿಗ್ಗೆ ತುರುವೇಕೆರೆಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬಳಿಕ ದೆಹಲಿಗೆ ತೆರಳಲಿದ್ದಾರೆ. ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು …
Read More »ಶಾಲಾ ಪಠ್ಯದಲ್ಲಿ ಸಿದ್ಧೇಶ್ವರ ಸ್ವಾಮೀಜಿ ಜೀವನಗಾಥೆ: ಸಿ.ಎಂ ಬೊಮ್ಮಾಯಿ
ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ‘ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಟ್ವೀಟ್ ಮಾಡಿದ್ದಾರೆ.
Read More »ನನ್ನಂತೆ ರಾಜಕೀಯಕ್ಕೆ ಕುಟುಂಬದವರನ್ನು ಕರೆತರದಿರಲು ನಿಮ್ಮಿಂದ ಸಾಧ್ಯವೇ?: ಎಚ್ಡಿಕೆಗೆ ಪ್ರಹ್ಲಾದ್ ಜೋಶಿ ಸವಾಲು
ಗದಗ, ಜ.3: ‘ನಾನು ರಾಜಕೀಯಕ್ಕೆ ಬಂದು 25 ವರ್ಷವಾಯಿತು. ನಾನು ನನ್ನ ಕುಟುಂಬದಿಂದ ಯಾರನ್ನೂ ರಾಜಕೀಯಕ್ಕೆ ಕರೆ ತರುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳುತ್ತೇನೆ. ಅದರಂತೆಯೇ ಕುಮಾರಸ್ವಾಮಿ ಅವರು ಹೇಳಲಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಯಾರ ಗುಂಡಿ ಯಾರು ತೋಡಿದ್ದಾರೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಜೆಡಿಎಸ್ ಅಂತ ಬಂದಾಗ ಕುಮಾರಸ್ವಾಮಿ, ದೇವೇಗೌಡ್ರು, ರೇವಣ್ಣ, …
Read More »
Laxmi News 24×7