ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಶೀಘ್ರದಲ್ಲೇ ಮನ್ದೀಪ್ ರಾಯ್ ಅವರ ಹೆಲ್ತ್ ಅಪ್ಡೇಟ್ ಸಿಗಲಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು …
Read More »ರಾಜೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡ ಆಕರ್ಷಕ ರೂಪಕ ವಾಹನಗಳಿಗೆ ಪ್ರಶಸ್ತಿ
ಬಹು ಸಂಸ್ಕೃತಿಯ ನಮ್ಮ ದೇಶದ ಪ್ರಾದೇಶಿಕ ಭಾಷೆಗಳ ರಕ್ಷಣೆಯ ದೃಷ್ಟಿಯಿಂದ ಭಾಷವಾರು ರಾಜ್ಯಗಳನ್ನಾಗಿ ವಿಭಾಗಿಸಲಾಗಿದೆ. ಆ ನಿಟ್ಟಿನಲ್ಲಿ ಎರಡು ಸಾವಿರಕ್ಕಿಂತ ಹೆಚ್ಚಿನ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಬಳಸಿ, ಉಳಿಸಬೇಕಾಗಿದೆ” ಎಂದು ಹಿರಿಯ ಸಾಹಿತಿ ಪ್ರಾ. ಬಿ. ಎಸ್. ಗವಿಮಠ ಅಭಿಪ್ರಾಯ ಪಟ್ಟರು. ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ, ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ ಹಾಗೂ ನೃಪತುಂಗ ಯುವಕ ಮಂಡಳ ಇವರ ಸಂಯುಕ್ತ ಆಶ್ರಯದಲ್ಲಿ ನಗರದ …
Read More »ಪಾಶ್ಚಾಪೂರ ಹತ್ತಿರದ 141 ಮಾನವ ಗೇಟ ಬಂದ್ ಮಾಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ
ಹುಕ್ಕೇರಿ ತಾಲೂಕಿನ ಕರಗುಪ್ಪಿ, ಯಲ್ಲಾಪೂರ, ಗ್ರಾಮಸ್ಥರು ಪಾಶ್ಚಾಪೂರ ಹತ್ತಿರದ 141 ಮಾನವ ಗೇಟ ಬಂದ್ ಮಾಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಘಟಪ್ರಭಾ ರೈಲು ಮಾರ್ಗ ಅಗಲಿಕರಣ ಮತ್ತು ಸುಧಾರಣೆ ಕಾರ್ಯ ಜರಗುತ್ತಿದೆ ಮಾರ್ಗ ಮದ್ಯ ಕಳಪೆ ಹಲವಾರು ದಶಕಗಳಿಂದ ಪಾಶ್ಚಾಪೂರ ಹತ್ತಿರದ ಕರಗುಪ್ಪಿ, ಯಲ್ಲಾಪೂರ ಗ್ರಾಮಸ್ಥರು ಮಾನವ ಗೇಟ ಮುಖಾಂತರ ಚಲಿಸಿ ತಮ್ಮ ಜಮಿನುಗಳಿಗೆ ಹೋಗಿ ಕೃಷಿ ಕಾರ್ಯ ಮತ್ತು ಕಬ್ಬು ಸಾಗಿಸುತ್ತಾರೆ. ಆದರೆ ಈಗ ಮಾನವ …
Read More »ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರೋ ಸಾಹಸ ಮಾಡಿದರೇ ನಮ್ಮ ಅಧಿಕಾರಿಗಳು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆಂದು ಸಿಎಂ
ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರೋದು ಬೇಡಾ ಎಂದು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳ ಮೂಲಕ ಮಹಾರಾಷ್ಟ್ರದ ಕಾರ್ಯದರ್ಶಿಗಳಿಗೆ ಲಿಖಿತ ರೂಪದಲ್ಲಿ ತಿಳಿಸಲಾಗಿದೆ. ಅದಾಗ್ಯೂ ಅವರು ಬೆಳಗಾವಿಗೆ ಬರೋ ಸಾಹಸ ಮಾಡಿದರೇ ನಮ್ಮ ಅಧಿಕಾರಿಗಳು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರೋ ವಾತಾವರಣದಲ್ಲಿ ಬೆಳಗಾವಿಗೆ ಸಚಿವರು ಬರೋದು ಬೇಡಾ, ಇಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಆಗುತ್ತೆ. ಹೀಗಾಗಿ …
Read More »ಒಂದೇ ಹುಡುಗನನ್ನು ಮದುವೆಯಾದ ಅವಳಿ ಸಹೋದರಿಯರು!
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಐಟಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಅವಳಿ ಸಹೋದರಿಯರು ಒಂದೇ ವ್ಯಕ್ತಿಯನ್ನು ಮದುವೆ ಆಗಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಮಲ್ಶಿರಸ್ ತಾಲೂಕಿನ ಅಕ್ಲುಜ್ ಎಂಬ ಗ್ರಾಮದಲ್ಲಿ ಶುಕ್ರವಾರ ಶಾಸ್ತ್ರೋಕ್ತವಾಗಿ ಮದುವೆ ನೆರವೇರಿಸಲಾಗಿದೆ. ಈ ವಿವಾದಾತ್ಮಕ ಮದುವೆಗೆ ಯುವಕ ಮತ್ತು ಅವಳಿ ಸಹೋದರಿಯರ ಕುಟುಂಬವೂ ಒಪ್ಪಿಕೊಂಡಿದೆ. ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಮದುವೆಯ ಕಾನೂನುಬದ್ಧತೆ ಮತ್ತು ನೈತಿಕತೆಯನ್ನು ನೆಟ್ಟಿಗರು ಪ್ರಶ್ನೆ …
Read More »ಗುಜರಾತ್ ವಿಧಾನಸಭಾ ಚುನಾವಣೆ: ಇಂದು ಬೆಳಗ್ಗೆ 8 ಗಂಟೆಯಿಂದ 2ನೇ ಹಂತದ ಮತದಾನ
ಗುಜರಾತ್ : ಇಂದು ಗುಜರಾತ್ ವಿಧಾನಸಭಾ ಚುನಾವಣೆ(Gujarat Assembly polls)ಯ 2ನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಗುಜರಾತ್‌ನ ಅಹಮದಾಬಾದ್, ಗಾಂಧಿನಗರ, ಮೆಹಸಾನಾ, ಪಟಾನ್, ಬನಸ್ಕಾಂತ, ಸಬರ್ಕಾಂತ, ಅರಾವಳಿ, ಮಹಿಸಾಗರ, ಪಂಚಮಹಲ್, ದಾಹೋದ್, ವಡೋದರಾ, ಆನಂದ್, ಖೇಡಾ ಮತ್ತು ಛೋಟಾ ಉದಯ್‌ಪುರ ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 833 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಲ್ಲಿ …
Read More »ಚುನಾವಣೆ ಸಮೀಪಿಸುತ್ತಿದ್ದಂತೆ ‘ಬಿಜೆಪಿ ರೌಡಿ ಮೋರ್ಚಾ’ ವೆಬ್ ಸೈಟ್ ಓಪನ್…!?
ಬೆಂಗಳೂರು: ಕೆಲ ರೌಡಿಗಳು ಬಿಜೆಪಿ ಸೇರುತ್ತಾರೆ ಎಂಬ ವಿಷಯ ರಾಜಕೀಯ ವಲಯದಲ್ಲಿ ಇತ್ತೀಚೆಗೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರೌಡಿ ಮೋರ್ಚಾ ಹೆಸರಿನ ವೆಬ್ ಸೈಟ್ ಆರಂಭವಾಗಿದೆ. ಅನಾಮಿಕರುಈ ವೆಬ್ ಸೈಟ್ ಆರಂಭಿಸಿದ್ದು, ರೌಡಿಗಳಾದ ಸೈಲೆಂಟ್ ಸುನೀಲ್, ವಿಲ್ಸನ್ ಗಾರ್ಡನ್ ನಾಗ, ಫೈಟರ್ ರವಿ ಹಾಗೂ ಬೆತ್ತನಗೆರೆ ಶಂಕರ ಸೇರಿದಂತೆ ಹಲವರ ಹೆಸರು ಬಿಜೆಪಿಯಿಂದ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳು ಹಾಗೂ ಅವರ …
Read More »ಮೀಸಲಾತಿ: ಕೇಂದ್ರದಿಂದ ಒಪ್ಪಿಗೆ ಸಿಗುವವರೆಗೂ ಹೋರಾಟ: ಪ್ರಸನ್ನಾನಂದ ಸ್ವಾಮೀಜಿ
ಚನ್ನಗಿರಿ: ಎಸ್‌ಸಿ, ಎಸ್‌ಟಿ ಮೀಸಲಾತಿ ಸಂಬಂಧ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು. ‘ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಶೇ 17 ಹಾಗೂ ಪಂಗಡದವರಿಗೆ ಶೇ 7 ಮೀಸಲಾತಿ ನೀಡಿರುವುದು ಸ್ವಾಗತಾರ್ಹ. ಆದರೆ ಇಷ್ಟಕ್ಕೆ ವಿಜಯೋತ್ಸವ ಆಚರಣೆ ಮಾಡಲು ಆಗುವುದಿಲ್ಲ. ಸದ್ಯ ಸರ್ಕಾರ ಕೇವಲ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಆಗುವವರಿಗೆ ಮಾತ್ರ ಮೀಸಲಾತಿಯನ್ನು ಕಲ್ಪಿಸುತ್ತಿದೆ. ಆದರೆ …
Read More »ಬಾಕಿ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಎಲ್.ಕೆ.ಅತೀಕ್
ಬೆಳಗಾವಿ: ಪ್ರಸಕ್ತ ಆರ್ಥಿಕ ವರ್ಷದ ಅಂತಿಮ ಘಟ್ಟದಲ್ಲಿರುವುದರಿಂದ ಪ್ರತಿಯೊಂದು ಇಲಾಖೆಗಳು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ಅನುದಾನ ಮರಳಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15ನೇ ಹಣಕಾಸು ಯೋಜನೆಯಡಿ …
Read More »ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿಯೇ ಸಿ.ಎಂ: ಇಬ್ರಾಹಿಂ
ಹುಬ್ಬಳ್ಳಿ: ಜೆಡಿಎಸ್ ಅಧಿಕಾರಕ್ಕೆ ಬಂದರೆ ಎಚ್.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ. ಪಂಚರತ್ನ ಯಾತ್ರೆ ಮೂಲಕ ರಾಜ್ಯದ ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಲು ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಸಂಪೂರ್ಣ ಬಹುಮತ ಬಂದರೆ ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಚುನಾವಣಾ ಆಮಿಷ ಕೋರ್ಟ್‌ಗೆ ಮೊರೆ: ಚುನಾವಣಾ …
Read More »
Laxmi News 24×7