ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿ ಅನುಷ್ಠಾನದಿಂದ ದಂಡಿನಮಾರ್ಗ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು …
Read More »ವಿಜಯಪುರ ಪಾಲಿಕೆ ಫಲಿತಾಂಶ ಇಡೀ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ: ಬಸನಗೌಡ ಪಾಟೀಲ್ ಯತ್ನಾಳ
ವಿಜಯಪುರ: ವಿಜಯಪುರ ನಗರದಲ್ಲಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಥಳೀಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ (Basanagouda Patil Yatnal) ನಿನ್ನೆ ಪ್ರಕಟಗೊಂಡ ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ (Vijayapura Corporation Result) ವಿಚಾರವಾಗಿ ಮಾತನಾಡಿದ್ದಾರೆ. ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಇಡೀ ಕರ್ನಾಟಕ ವಿಧಾನಸಭಾ ಚುನಾವಣೆ (Assembly Elections 2023) ಮೇಲೆ ಪರಿಣಾಮ ಬೀರುತ್ತದೆ. ರಾಜಕಾರಣದ ವಾತಾವರಣ ಬದಲಾವಣೆಯಾಗುತ್ತಿದೆ. ಎಲ್ಲರ ವಿಶ್ವಾಸ ಪ್ರಧಾನಿ …
Read More »ಬೆಳಗಾವಿ ಕನ್ನಡಿಗರ ಉಸಿರು: ಸಚಿವ ಗೋವಿಂದ ಕಾರಜೋಳ
ಬೆಳಗಾವಿ: ‘ಇತಿಹಾಸದಲ್ಲಿ ‘ವೇಣುಗ್ರಾಮ’ ಎಂದೇ ಹೆಸರಾದ ಬೆಳಗಾವಿಯು ಕನ್ನಡಿಗರ ಉಸಿರು. ಕನ್ನಡಿಗರೇ ಆದ ಕದಂಬರು ಸಮೃದ್ಧ ಸಾಮ್ರಾಜ್ಯ ಕಟ್ಟಿದ್ದೂ ಇದೇ ನೆಲದಲ್ಲಿ. ಕರ್ನಾಟಕ ಏಕೀಕರಣದಲ್ಲೂ ಇಲ್ಲಿನ ಕನ್ನಡಿಗರ ದಿಟ್ಟ ಹೋರಾಟ ಮೈಲಿಗಲ್ಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಬಣ್ಣಿಸಿದರು. ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 67ನೇ ಕರ್ನಾಟಕ ರಾಜ್ಯೋತ್ಸವ ಭಾಷಣ ಮಾಡಿದ ಅವರು, ‘ರಾಜ್ಯದ ಏಕೀಕರಣ ಚಳವಳಿಯಲ್ಲಿ ಜಿಲ್ಲೆಯ ಹಲವಾರು ಮಹನೀಯರು ತ್ಯಾಗ ಮಾಡಿದ್ದಾರೆ. ಬೈಲಹೊಂಗಲದ …
Read More »ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ; ಬಿಗಿ ಪೊಲೀಸ್ ಬಂದೋಬಸ್ತ್
ಒಂದೆಡೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಲಾಗುತ್ತಿದ್ದು, ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಎಂಇಎಸ್ನಿಂದ ಕರಾಳ ದಿನಾಚರಣೆ ಆಚರಿಸುತ್ತಿದೆ. ಈ ಎಲ್ಲ ನಿಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಕಲಬುರಗಿ: ಕನ್ನಡ ಮಾತನಾಡುವ ಪ್ರದೇಶಗಳು ಭೌಗೋಳಿಕವಾಗಿ ಒಂದುಗೂಡಿದ ಹೆಮ್ಮೆಯ ದಿನವಿಂದು. ನಾಡಿನ ಸಮಸ್ತ ಜನರು ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿದ್ದರೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ರಾಜ್ಯಕ್ಕಾಗಿ ಆಗ್ರಹಿಸಲಾಗುತ್ತಿದೆ. ಮಾತ್ರವಲ್ಲದೆ ಇಂದು ಪ್ರತ್ಯೇಕ ರಾಜ್ಯ ಧ್ವಜಾರೋಹಣ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ, ಇನ್ನೊಂದೆಡೆ …
Read More »ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : 67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ಪಟ್ಟಣದ ಕನ್ನಡ ಪರ ಸಂಘಟನೆಗಳಿಗೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದರು. ಮೂಡಲಗಿ ಪಟ್ಟಣದಲ್ಲಿ ನ. 3 ರಂದು ತಾಲೂಕಿನ ಕನ್ನಡ ಪರ ಸಂಘಟನೆಗಳಿಂದ ಈ ಬಾರಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಅದಕ್ಕಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಂಘಟನೆಗಳ ಕಾರ್ಯಕರ್ತರಿಗೆ ಕನ್ನಡ ಬಾವುಟಗಳನ್ನು ವಿತರಿಸಿದರು. …
Read More »ನುಡಿದಂತೆ ನಡೆದ ಹೆಮ್ಮೆಯ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಸೋಮವಾರದಂದು ನೂತನವಾಗಿ ಆರಂಭಗೊಂಡಿರುವ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ ತಿಂಗಳಾಂತ್ಯಕ್ಕೆ ಮೂಡಲಗಿಯಲ್ಲಿ ಕಛೇರಿಯ ಪೂಜೆ ಸಲ್ಲಿಸುವ ಮೂಲಕ ಸಾರ್ವಜನಿಕರು ಹಾಗೂ ರೈತರಿಗೆ ನೀಡಿದ ವಾಗ್ದಾನದಂತೆ ನಡೆದುಕೊಂಡಿರುವದಾಗಿ ಅವರು ಹೇಳಿದರು. …
Read More »ಸ್ವಾಮೀಜಿ ವಿರುದ್ಧ ಸೇಡು ತೀರಿಸಿಕೊಳ್ಳಲು ‘ಹನಿ ಟ್ರ್ಯಾಪ್’ ಗೆ ಮುಂದಾಗಿದ್ದಳಾ ಇಂಜಿನಿಯರಿಂಗ್ ವಿದ್ಯಾರ್ಥಿನಿ ?
ಕಂಚುಗಲ್ ಬಂಡೆ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಮಠದ ಶ್ರೀ ಮೃತ್ಯುಂಜಯ ಸ್ವಾಮೀಜಿ, ತುಮಕೂರಿನ ವಕೀಲ ಮಹಾದೇವಯ್ಯ ಹಾಗೂ ದೊಡ್ಡಬಳ್ಳಾಪುರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ಬಂಧಿತರಾದವರಾಗಿದ್ದಾರೆ. ಕಂಚುಗಲ್ ಬಂಡೆ ಮಠದ ಪೀಠಾಧಿಪತಿ ಆಗಬೇಕೆಂಬ ಹಂಬಲ ಹೊಂದಿದ್ದ ಮೃತ್ಯುಂಜಯ ಸ್ವಾಮೀಜಿ, ವಕೀಲ ಮಹದೇವಯ್ಯ ಅವರೊಂದಿಗೆ ಸೇರಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ ಉರ್ಫ್ ಚಂದು ಎಂಬಾಕೆಯನ್ನು ಬಳಸಿಕೊಂಡು ಹನಿ ಟ್ರ್ಯಾಪ್ ಖೆಡ್ಡಾ ತೋಡಿದ್ದರು …
Read More »ನ.8ರಂದು ಖಗ್ರಾಸ ಚಂದ್ರಗ್ರಹಣ; ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರ
ದೀಪಾವಳಿಯ ಸಮಯದಲ್ಲೇ ಪಾರ್ಶ್ವ ಸೂರ್ಯಗ್ರಹಣವನ್ನು ಕಂಡ ಜಗತ್ತು ಈಗ ಮತ್ತೊಂದು ಗ್ರಹಣಕ್ಕೆ ಸಜ್ಜಾಗುತ್ತಿದೆ. ನ.8ರಂದು ಖಗ್ರಾಸ ಚಂದ್ರಗ್ರಹಣ ಉಂಟಾಗಲಿದ್ದು, ಕೋಲ್ಕತ್ತಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರಿಸಲಿದೆ. ಅಲ್ಲದೇ ಪಾಕಿಸ್ತಾನ, ಅಫ್ಘಾನಿಸ್ತಾನ, ರಷ್ಯಾ, ಅಮೆರಿಕ, ಆಸ್ಟ್ರೇಲಿಯಾ, ಉತ್ತರ ಅಟ್ಲಾಂಟಿಕ್ ಸಮುದ್ರ, ಪೆಸಿಫಿಕ್ ಸಮುದ್ರ ಪ್ರದೇಶದಿಂದಲೂ ಈ ಖಗೋಳ ವಿಸ್ಮಯವನ್ನು ವೀಕ್ಷಿಸಬಹುದು ಎಂದು ಖಗೋಳವಿಜ್ಞಾನಿಗಳು ತಿಳಿಸಿದ್ದಾರೆ. ನ.8ರಂದು ಮಧ್ಯಾಹ್ನ 2.39ಕ್ಕೆ ಭಾಗಶಃ ಚಂದ್ರಗ್ರಹಣ ಆರಂಭವಾಗಲಿದ್ದು, 3.46ರ ವೇಳೆಗೆ ಅದು …
Read More »2023 ರಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ: ಸಿಎಂ ಬೊಮ್ಮಾಯಿ
ಕಲಬುರಗಿ: ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಲಿದ್ದೇವೆ. ಸಮಾವೇಶದಲ್ಲಿ ಪಾಲ್ಗೊಂಡ ಜನಸಾಗರ ನೋಡಿ ಆನೆ ಬಲ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಒಬಿಸಿ ವಿರಾಟ ಸಮಾವೇಶದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಸಂಕಲ್ಪ ನಮ್ಮದು. 1,500 ಕೋಟಿ ಅನುದಾನವನ್ನು 3 ಸಾವಿರ ಕೋಟಿಗೆ ಈಗಾಗಲೇ ಹೆಚ್ಚಿಸಿದ್ದು, ಮುಂದಿನ ವರ್ಷ ಅದನ್ನು 5 ಸಾವಿರ ಕೋಟಿ ರೂ.ಗೆ …
Read More »ದಾವಣಗೆರೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದ್ದೇವೆ: ಯಡಿಯೂರಪ್ಪ
ಕಲಬುರಗಿ: ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬರುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ದಾವಣಗೆರೆ ಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ಮಾಡಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದರು. ಬಿಜೆಪಿ ಹಿಂದುಳಿದ ವರ್ಗಗಳ ವಿರಾಟ್ ಸಮಾವೇಶ ಉದ್ದೇಶಿಸಿ ಮಾತನಾಡಿ, ದಾವಣಗೆರೆ ಯಲ್ಲಿ ಶಕ್ತಿ ಪ್ರದರ್ಶನ ಜತೆಗೇ ಮೈಸೂರಿನಿಂದ ರಥಯಾತ್ರೆ ಶುರು ಮಾಡುತ್ತೇವೆ. ಎಲ್ಲ ಕಡೆ ತಿರುಗಾಡಿ ಪಕ್ಷ ಬಲಪಡಿಸಲಾಗುವುದು. ಹೀಗಾಗಿ ಹಿಂದುಳಿದ ವರ್ಗದವರು ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಬಲಪಡಿಸಬೇಕೆಂದರು. ದೇಶದಲ್ಲಿ …
Read More »
Laxmi News 24×7