ಇದೇ ಅಕ್ಟೋಬರ್ 23, 24 ಹಾಗೂ 25ರಂದು ಮೂರು ದಿನಗಳ ಕಾಲ ಕಿತ್ತೂರು ರಾಣಿ ಚನ್ನಮ್ಮಾಜಿ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ವರ್ಷ ವಿಶೇಷವಾಗಿ ಸಿಎಂ ಬೊಮ್ಮಾಯಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಉತ್ಸವಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಮಾಹಿತಿ ನೀಡಿದ್ದಾರೆ. ಹೌದು ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಸೋಲಿನ ರುಚಿ ತೋರಿಸಿದ್ದು ನಮ್ಮ …
Read More »ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ನೇಮಕ: ಬಿಜೆಪಿಗೆ ಒಳಗೊಳಗೆ ತಳಮಳ; ಹಿಂದುಳಿದ ವರ್ಗಗಳ ಮತಗಳ ಕ್ರೋಡೀಕರಣಕ್ಕಾಗಿ ಕಟೀಲ್ ಗೆ ಗೇಟ್ ಪಾಸ್?
ಬಿಜೆಪಿಯ ಹಿರಿಯ ನಾಯಕರ ಆರಂಭಿಕ ವಿಶ್ಲೇಷಣೆಯ ಪ್ರಕಾರ, ದಲಿತರಾದ ಖರ್ಗೆ ಅವರು ಪಕ್ಷದ ಉನ್ನತ ಹಂತವನ್ನು ತಲುಪಿರುವುದರಿಂದ ದಲಿತ ಮತಗಳು, ವಿಶೇಷವಾಗಿ ಪರಿಶಿಷ್ಟ ಜಾತಿಗಳು ಕ್ರೋಢೀಕರಿಸಲ್ಪಟ್ಟು ಕಾಂಗ್ರೆಸ್ ಪರವಾಗಿ ಹೋಗಬಹುದು. ಬೆಂಗಳೂರು: ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಮುಳುಗುತ್ತಿರುವ ದೋಣಿಯ ಕ್ಯಾಪ್ಟನ್ ಮಾತ್ರ ಎಂದು ಬಿಜೆಪಿ ಸಾರ್ವಜನಿಕವಾಗಿ ಪ್ರತಿಕ್ರಿಯಿಸಿದ್ದರೂ ಒಳಗೊಳಗೆ ತಳಮಳ ಆರಂಭವಾಗಿದೆ, …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ
ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಗೋಕಾಕ : ಹಿರೇನಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸ್ಕೌಟ್ಸ್, ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಶಾಲಾ ಸುಧಾರಣಾ ಸಮಿತಿಯವರು ಉಪಸ್ಥಿತರಿದ್ದರು.
Read More »‘ಗೊಂಬೆ ಹೇಳುತೈತೆ’ ಹಾಡು ಕೇಳುತ್ತಾ ದುಃಖ ಉಮ್ಮಳಿಸಿ ಕೈ ಮುಗಿದು ಅಳುತ್ತಾ ಹೊರಟ ಅಶ್ವಿನಿ ಪುನೀತ್ ರಾಜ್‌ಕುಮಾರ್!
ಅರಮನೆ ಮೈದಾನದಲ್ಲಿ ನಡೆದ ‘ಪುನೀತ ಪರ್ವ’ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಗಿದೆ. ಕಾರ್ಯಕ್ರಮದ ಕೊನೆಗೆ ಡಾ. ರಾಜ್‌ಕುಮಾರ್ ಕುಟುಂಬ ಸದಸ್ಯರೆಲ್ಲಾ ಸೇರಿ ‘ಗೊಂಬೆ ಹೇಳುತೈತೆ’ ಹಾಡು ಹಾಡಿದರು. ಗಾಯಕ ವಿಜಯ ಪ್ರಕಾಶ್ ಜೊತೆ ಹಾಡು ಹಾಡುತ್ತಾ ಎಲ್ಲರೂ ಭಾವುಕರಾದರು. ಹಾಡಿನುದ್ದಕ್ಕೂ ಭಾವುಕರಾಗಿ ನಿಂತಿದ್ದ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕೊನೆಗೆ ದುಃಖ ತಾಳಲಾರದೇ ಎಲ್ಲರಿಗೂ ಕೈ ಮುಗಿದು ಅಳುತ್ತಾ ವೇದಿಕೆಯಿಂದ ಹೊರಟುಬಿಟ್ಟರು. ಅಶ್ವಿನಿ ಪುನೀತ್ ರಾಜ್‌ಕುಮಾರ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. …
Read More »ಬೆಳಗಾವಿ: ವಿಷ ಸೇವಿಸಿ ಪತಿ ಆತ್ಮಹತ್ಯೆ, ಮಗು ಕೊಂದು ನೇಣಿಗೆ ಶರಣಾದ ಪತ್ನಿ
ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ, ಪತ್ನಿ ಹಾಗೂ ಪುಟ್ಟ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಹೊಳೆಪ್ಪ ಮಾರುತಿ ಮಸ್ತಿ (25), ಇವರ ಪತ್ನಿ ವಾಸಂತಿ (22) ಹಾಗೂ ಇವರ ಒಂದೂವರೆ ವರ್ಷದ ಮಗು ಮೃತಪಟ್ಟರು. ಮದ್ಯದ ಅಮಲಿನಲ್ಲಿ ಹೊಳೆಪ್ಪ ಗುರುವಾರ ಪತ್ನಿಯೊಂದಿಗೆ ಜಗಳವಾಡಿದ್ದ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸುವ ಉದ್ದೇಶದಿಂದ ವಿಷ ಕುಡಿದಿದ್ದ. ತಕ್ಷಣ ಸ್ನೇಹಿತರು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. …
Read More »ಗಂಧದ ಗುಡಿ ‘ ಮುಂದಿನ ಪೀಳಿಗೆಗೆ ದಂತಕತೆಯಾಗಲಿದೆ:C.M.
ಬೆಂಗಳೂರು: ಅಪ್ಪು ಅವರಂತೆ ಈ ಸಿನೆಮಾ ಮುಂದಿನ ಪೀಳಿಗೆಗೆ ಒಂದು ದಂತಕಥೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಪುನೀತ್ ರಾಜ್ ಕುಮಾರ್ ಅವರ ‘ ಗಂಧದ ಗುಡಿ ‘ ಚಿತ್ರ ಬಿಡುಗಡೆಯ ಪೂರ್ವಭಾವಿಯಾಗಿ ಆಯೋಜಿಸಲಾಗಿದ್ದ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ನಾಡು ಮತ್ತು ಗಂಧದ ಗುಡಿಯನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಅಂತಹ ವಿಚಾರ ದೊಂದಿಗೆ, ಕಾಡು, ನಿಸರ್ಗ, ಪ್ರಾಣಿಗಳನ್ನು ಇಟ್ಟುಕೊಂಡು ಅಪ್ಪು ಮಾಡಿದ …
Read More »ಒಂಬತ್ತು ಜಿಲ್ಲಾಧಿಕಾರಿಗಳ ವರ್ಗಾವಣೆ
ಬೆಂಗಳೂರು : ಮೈಸೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಒಳಗೊಂಡಂತೆ ಒಂಬತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಟಿ.ಕೆ. ಅನಿಲ್‌ಕುಮಾರ್-ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ, ಭೂಮಿ). ಎನ್.ವಿ. ಪ್ರಸಾದ್-ಕಾರ್ಯದರ್ಶಿ, ಕಾರ್ಮಿಕ ಇಲಾಖೆ. ಎನ್. ಜಯರಾಮ್-ಕಾರ್ಯದರ್ಶಿ, ಕಂದಾಯ ಇಲಾಖೆ. ಬಗಾದಿ ಗೌತಮ್- ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ. ಪಿ.ಐ. ಶ್ರೀವಿದ್ಯಾ- ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಇ-ಆಡಳಿತ. ಡಿ.ಎಸ್. ರಮೇಶ್-ಜಿಲ್ಲಾಧಿಕಾರಿ, ಚಾಮರಾಜನಗರ. ಎಚ್.ಎನ್. ಗೋಪಾಲಕೃಷ್ಣ- ಜಿಲ್ಲಾಧಿಕಾರಿ, …
Read More »ಬಡ ಪೋಷಕರ ಜೇಬಿಗೆ ಸರ್ಕಾರದ ಕತ್ತರಿ: ಸಿದ್ದರಾಮಯ್ಯ
ಬೆಂಗಳೂರು: ಕಮಿಷನ್ ಹೆಸರಿನಲ್ಲಿ ರಾಜ್ಯದ ಖಜಾನೆ ಲೂಟಿ ಮಾಡಿದ ಬಿಜೆಪಿ ಸರ್ಕಾರ, ಈಗ ದೇಣಿಗೆ ನೆಪದಲ್ಲಿ ಬಡ ಮಕ್ಕಳ ಪೋಷಕರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಪೋಷಕರಿಂದ ಶಾಲಾಭಿವೃದ್ಧಿಗೆ ದೇಣಿಗೆ ಸಂಗ್ರಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವ ಕುರಿತು ಟ್ವಿಟರ್‌ನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿರುವ ಅವರು, ‘ಸರ್ಕಾರಿ ಶಾಲೆಯ ಬಡ ಮಕ್ಕಳ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟ …
Read More »ಕಾರ್ಮಿಕ ಕಾರ್ಡ ಬಸ್‍ಪಾಸ್‍ಗಾಗಿವಿತರಣೆ ವಿಳಂಬ ,ಕಾರ್ಮಿಕ ಇಲಾಖೆಗೆ ಮುತ್ತಿಗೆ ಹಾಕಿದ ಕಾರ್ಮಿಕರು
ಕಾರ್ಮಿಕ ಕಾರ್ಡ ವಿತರಣೆ ಮಾಡಲು ವಿಳಂಬ ಹಾಗೂ ಕಾರ್ಮಿಕ ಕಾರ್ಡ ಇದ್ದವರಿಗೆ ಸರ್ಕಾರದ ಸೌಲಭ್ಯಗಳು ದೊರಕದ ಹಿನ್ನೆಲೆ ಬೆಳಗಾವಿಯಲ್ಲಿ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಹೌದು ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಕಟ್ಟಡ ಕಾರ್ಮಿಕರು ಶುಕ್ರವಾರ ಬೆಳಗಾವಿಯ ಕಾರ್ಮಿಕ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಾರ್ಮಿಕರ ಕಾರ್ಡಗಾಗಿ ಅರ್ಜಿ ಹಾಕಿದ್ರೂ ಬೇಗನೇ ಕಾರ್ಡಗಳು ಸಿಗುತ್ತಿಲ್ಲ. ಇನ್ನು ಕಾರ್ಡಗಳು ಇದ್ದವರಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಮುಟ್ಟುತ್ತಿಲ್ಲ. ಶಿಕ್ಷಣ ಸೌಲಭ್ಯ, …
Read More »ಹುಕ್ಕೇರಿ ಪಂಚಮಸಾಲಿ ಸಮಾವೇಶ ವಿಜಯಾನಂದ ಕಾಶಪ್ಪನವರ ಹಾಗೂ ಪೃಥ್ವಿ ಕತ್ತಿ ವಾಗ್ವಾದ
ಮುಂದಿನ ಬಾರಿ ಹುಕ್ಕೇರಿ ಮತ ಕ್ಷೇತ್ರದಲ್ಲಿ ಪಂಚಮಸಾಲಿಗಳನ್ನೆ ಗೆಲ್ಲಿಸಿ ಎಂದು ಕರೆ ನೀಡಿದ ಕಾಂಗ್ರೆಸ್ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‍ಗೆ ಮಾಜಿ ಸಂಸದ ರಮೇಶ ಕತ್ತಿ ಪುತ್ರ ಪೃಥ್ವಿ ಕತ್ತಿ ಕೇಳಗೆ ಬಾ ಎಂದು ಸವಾಲು ಹಾಕಿರುವ ಘಟನೆ ನಡೆದಿದೆ. ಹೌದು ಹುಕ್ಕೇರಿ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ವೇದಿಕೆ …
Read More »
Laxmi News 24×7