Breaking News

ರಾಜಕೀಯ

ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ

ವಿಜಯಪುರ ಮಹಾನಗರ ‌ಪಾಲಿಕೆ ಚುನಾವಣೆ ಹಿನ್ನೆಲೆ ಬಿಜೆಪಿ ಶಾಸಕರು ಮಹತ್ವದ ಸಭೆ ನಡೆಸಿದರು. ವಿಜಯಪುರ ನಗರದ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್‌.ಎಸ್. ಪಾಟೀಲ ಕೂಚಬಾಳ್ ನೇತೃತ್ವದಲ್ಲಿ ಸಭೆ ನಡೆಯಿತು. ಇನ್ನು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಪಿ. ರಾಜೀವ ಮಹತ್ವದ ಸಭೆ ನಡೆಸಿ ನಾಯಕರ ಅಭಿಪ್ರಾಯ ಸಂಗ್ರಹಿಸಿದರು. ಅಲ್ಲದೇ, ಪಕ್ಷದ ಪದಾಧಿಕಾರಿಗಳು ಹಾಗೂ ಕೆಲವೇ ಕೆಲವು ಮುಖಂಡರು ಮಾತ್ರ ಭಾಗವಹಿಸಿದರು.

Read More »

ದೂಧ್ ಸಾಗರ್ ಪ್ರವಾಸೋದ್ಯಮ ಆರಂಭ ; ಹೆಚ್ಚಿನ ಸಂಖ್ಯೆಯ ಪ್ರವಾಸಿಗರ ಆಗಮನ

ಪಣಜಿ: ಗೋವಾದ ಜಗತ್ಪ್ರಸಿದ್ಧ ದೂಧ್ ಸಾಗರ್ ಪ್ರವಾಸೋದ್ಯಮ ಸೋಮವಾರದಿಂದ ಆರಂಭಗೊಂಡಿದ್ದು, ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು ಸದ್ಯ ಪ್ರತಿದಿನ 150 ಕ್ಕೂ ಜೀಪ್‍ಗಳ ಮೂಲಕ ಪ್ರವಾಸಿಗರು ಜಲಪಾತ ವೀಕ್ಷಣೆಗೆ ತೆರಳುತ್ತಿದ್ದಾರೆ.   ಗೋವಾದ ದೂಧ್ ಸಾಗರ್ ಜಲಪಾತವು ದೇಶ ವಿದೇಶದ ಪ್ರವಾಸಿಗರ ಆಕರ್ಷಣೀಯ ತಾಣವಾಗಿದೆ. ದೂಧಸಾಗರ ಜಲಪಾತ ವೀಕ್ಷಣೆಗೆರ ಗೋವಾದ ಕುಳೆ ಮೂಲಕ ಹೆಚ್ಚಿನ ಮಳೆಯಾಗುವ ಸಂದರ್ಭದಲ್ಲಿ ತೆರಳಲು ಅಸಾಧ್ಯವಾಗಿದೆ. ಇದೀಗ ಮಳೆ ಕಡಿಮೆಯಾಗಿರುವುದರಿಂದ ಜಲಪಾತ ವೀಕ್ಷಣೆಗೆ ತೆರಳಲು ಸಾಧ್ಯವಾಗಿದೆ. …

Read More »

ಸಂತೋಷ್ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ಶನಿವಾರ ಸಲಾಹಳ್ಳಿ ಗ್ರಾಮದ ಬೀರೇಶ್ವರ ದೇವಸ್ಥಾನದಲ್ಲಿ

ಸಾಲಹಳ್ಳಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ಬೀರಪ್ಪ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಇಂದು ಕೈ ಶಕ್ತಿ ಪ್ರದರ್ಶನ; ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ

ಬೆಂಗಳೂರು/ಬಳ್ಳಾರಿ: ರಾಜ್ಯದಲ್ಲಿನ ಜೋಡೋ ಯಾತ್ರೆಯ ಪ್ರಮುಖ ಘಟ್ಟವಾದ ಬಳ್ಳಾರಿ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್‌ನ ಶಕ್ತಿಪ್ರದರ್ಶನಕ್ಕೂ ವೇದಿಕೆ ಸೃಷ್ಟಿಯಾದಂತಾಗಿದೆ. ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಹಾಗೂ ಗಣಿನಾಡಿನಲ್ಲಿ ಶಕ್ತಿ ಪ್ರದರ್ಶನ ಎಂದೇ ಬಿಂಬಿತವಾಗಿರುವ ಸಮಾವೇಶಕ್ಕೆ ಮೂರು ಲಕ್ಷ ಜನರ ಸೇರುವ ನಿರೀಕ್ಷೆಯಿದೆ. ಈ ಮಧ್ಯೆ, ಪ್ರಿಯಾಂಕಾ ಗಾಂಧಿ ಬಳ್ಳಾರಿ ಸಮಾವೇಶಕ್ಕೆ ಬರುವ ಕಾರ್ಯಕ್ರಮ ನಿಗದಿಯಾಗಿತ್ತಾದರೂ ಅ.22 ರಂದು ರಾಯಚೂರಿಗೆ ಬಂದು ಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗಿದೆ. 2010ರ ಜುಲೈನಲ್ಲಿ ಪ್ರತಿಪಕ್ಷ …

Read More »

ಗಲಭೆ ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ನಿರ್ಮಿಸುವ ವಂಚಕರನ್ನು ಬಂಧಿಸಿ; ನಳಿನ್ ಕುಮಾರ್ ಕಟೀಲ್

ಹಾವೇರಿ: ರಟ್ಟೀಹಳ್ಳಿಯಲ್ಲಿ ಆರ್​ಎಸ್​ಎಸ್​ ಪ್ರಾಥಮಿಕ ಶಿಕ್ಷಾ ವರ್ಗ ನಡೆಯುತ್ತಿದೆ. ಇದು ಬಾರಿ ರಾಷ್ಟ್ರಭಕ್ತಿಯ ಬಗ್ಗೆ ಜಾಗೃತಿ ಮೂಡಿಸೋ ವ್ಯಕ್ತಿ ನಿರ್ಮಾಣದ ಶಿಬಿರ. ಅ.11 ರಾತ್ರಿ 5 ಜನ ಆರ್​ಎಸ್​ಎಸ್ ಕಾರ್ಯಕರ್ತರು ಪಥಸಂಚಲನದ ಮಾರ್ಗ ವೀಕ್ಷಣೆಗೆ ಹೋಗಿದ್ದರು. ಈ ವೇಳೆ ಅನ್ಯಕೋಮಿನ ಗೂಂಡಾಗಳು ಹಲ್ಲೆ ಮಾಡಿದ್ದರು. ಹಲ್ಲೆಯನ್ನು ನಾನು ತೀವ್ರವಾಗಿ ಖಂಡಿಸ್ತೇನೆ. ಇದೊಂದು ದುರದೃಷ್ಟಕರ ಘಟನೆಯಾಗಿದ್ದು, ಸಹಿಸಲು ಅಸಾಧ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಕಾರ್ಯಕರ್ತರ ಮೇಲೆ ವಿನಾಕಾರಣ …

Read More »

ಶಾಲೆ ಬಳಿ ಗೂಡು ಕಟ್ಟಿದ್ದ ಹೆಜ್ಜೇನು; 50ಕ್ಕೂ ಹೆಚ್ಚು ಮಕ್ಕಳನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ದಾವಣಗೆರೆ: ಶಾಲೆಯೊಂದರ ಪ್ರವೇಶ ದ್ವಾರದಲ್ಲೇ ಹೆಜ್ಜೇನು ಗೂಡು ಕಟ್ಟಿದ್ದು, ಶಾಲೆಯ 50ಕ್ಕೂ ಹೆಚ್ಚು ಮಕ್ಕಳನ್ನು ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ್ದಾರೆ. ದಾವಣಗೆರೆಯಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಹರಿಹರ ತಾಲೂಕು ಕೊಂಡಜ್ಜಿಯಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಯ ಪ್ರವೇಶ ದ್ವಾರದಲ್ಲಿ ಗುರುವಾರ ಸಂಜೆ ಹೆಜ್ಜೇನುಗಳು ಗೂಡು ಕಟ್ಟಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆತಂಕಕ್ಕೆ ಒಳಗಾದರು. ಈ ಬಗ್ಗೆ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ದಾವಣಗೆರೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 50ಕ್ಕೂ …

Read More »

ನಿವೃತ್ತ ಯೋಧರಿಗೆ ಕೃಷಿ ಕಾಯಕ: ಜವಾನ್ ಕಿಸಾನ್ ಯೋಜನೆ

ಬೆಂಗಳೂರುದೇಶದ ಗಡಿ ಭಾಗಗಳಲ್ಲಿ ಬಂದೂಕು ಹಿಡಿದು ಕಾವಲು ಕಾಯುವ ಸೈನಿಕರನ್ನು ಅವರ ಸೇವಾ ನಿವೃತ್ತಿ ನಂತರ ಕೃಷಿಯತ್ತ ಸೆಳೆಯಲು ಕೇಂದ್ರ ಸರ್ಕಾರ ‘ಜವಾನ್ ಕಿಸಾನ್’ ಯೋಜನೆ ಜಾರಿಗೆ ನಿರ್ಧರಿಸಿದೆ. ಈಗ ಕೃಷಿಯಿಂದ ವಿಮುಖವಾಗುವವರ ಸಂಖ್ಯೆ ಹೆಚ್ಚುತ್ತಿದೆ. ಕೃಷಿ ಲಾಭದಾಯಕ ಅಲ್ಲ ಎಂಬ ಕಾರಣಕ್ಕೆ ಹಳ್ಳಿಯ ರೈತರು ಪಟ್ಟಣ ಸೇರಿ ಬೇರೆ ಉದ್ಯೋಗ ನಡೆಸುತ್ತಿದ್ದಾರೆ. ಇಂತಹ ಬೆಳವಣಿಗೆ ಮಧ್ಯೆಯೇ ನಿವೃತ್ತ ಸೈನಿಕರನ್ನು ಕೃಷಿ ಉದ್ಯಮದಾರರನ್ನಾಗಿಸಲು ವಿನೂತನ ಪ್ರಯತ್ನಕ್ಕೆ ರಕ್ಷಣಾ ಇಲಾಖೆ ಮುಂದಾಗಿದೆ. …

Read More »

ಶಿಕ್ಷಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ಶಾಲೆಗಳಿಗೆ ಅ. 31 ರವರೆಗೂ ದಸರಾ ರಜೆ ವಿಸ್ತರಣೆ.?

ಬೆಂಗಳೂರು : ನಾಡಹಬ್ಬ ದಸರಾ ಹಿನ್ನೆಲೆ ರಾಜ್ಯದ ಶಾಲೆಗಳಿಗೆ ಅ.16 ರವರೆಗೆ ದಸರಾ ರಜೆ ನೀಡಲಾಗಿದೆ.ಇದೀಗ ದಸರಾ ರಜೆಯನ್ನು ಅ. 31ರವರೆಗೆ ವಿಸ್ತರಣೆ ಮಾಡುವಂತೆ ಸರ್ಕಾರಕ್ಕೆ ಭಾರೀ ಒತ್ತಡಗಳು ಬರುತ್ತಿದೆ .   ಬೇಸಿಗೆ ರಜೆಯಲ್ಲಿ 15 ದಿನ ಹಾಗೂ ದಸರಾ ರಜೆಯಲ್ಲಿ 17 ದಿನ ಸೇರಿ ಒಟ್ಟು 37 ದ ದಿನಗಳ ರಜೆಯನ್ನು ಕಡಿತಗೊಳಿಸಲಾಗಿದ್ದು, ಈ ವಿಚಾರ ಪೋಷಕರು ಹಾಗೂ ಶಿಕ್ಷಕರಅಸಮಾಧಾನಕ್ಕೆ ಕಾರಣವಾಗಿತ್ತು. ಇದೀಗ ಕೆಲ ಬಿಜೆಪಿ ಶಾಸಕರು …

Read More »

ಅಂಚೆ ಇಲಾಖೆ: 399ರೂ.ಗೆ 10 ಲಕ್ಷ ರೂ. ಅಪಘಾತ ವಿಮೆ, ಖಾತೆ ತೆರೆಯಲು ಈ ಮಾಹಿತಿ ತಿಳಿಯಿರಿ

ಬೆಂಗಳೂರು, ಅಕ್ಟೋಬರ್ 14: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ …

Read More »

ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ: ಬೊಮ್ಮಾಯಿ, ಬಿಎಸ್‌ವೈಗೆ ನಿಯೋಗದ ಮನವಿ

ಚಿತ್ರದುರ್ಗ: ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಶಿವಮೂರ್ತಿ ಮುರುಘಾ ಶರಣರು ಬಂಧನದಲ್ಲಿರುವುದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ನೂತನ ಪೀಠಾಧ್ಯಕ್ಷರ ನೇಮಕಕ್ಕೆ ಮುಂದಾಗಬೇಕು ಎಂದು ವೀರಶೈವ ಲಿಂಗಾಯತ ಸಮಾಜದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.   ಮಾಜಿ ಸಚಿವ ಎಚ್‌.ಏಕಾಂತಯ್ಯ, ವಿಧಾನಪರಿಷತ್‌ ಸದಸ್ಯ ಕೆ.ಎಸ್‌.ನವೀನ್ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಜನರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿದೆ. ಶಾಸಕ …

Read More »