ಬೆಂಗಳೂರು: ಎಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈಗಾಗಲೇ ವಿಳಂಬ ಮಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಈಗ ಸೀಟು ಹಂಚಿಕೆ ಯಲ್ಲಿಯೂ ವಿಳಂಬ ನೀತಿ ಅನುಸರಿಸುವ ಮೂಲಕ ಬಡ ವಿದ್ಯಾರ್ಥಿಗಳ ಸರಕಾರಿ ಕೋಟ ಸೀಟು ದೊರೆಯದಂತೆಯೂ ನಿರಾಸೆ ಮೂಡಿಸಿದೆ. ಸುಮಾರು 10 ದಿನಗಳ ಮೊದಲೇ ಕಾಮೆಡ್-ಕೆ ಸೀಟುಗಳ ಹಂಚಿಕೆ ವೇಳಾಪಟ್ಟಿಯನ್ನು ಕಾಮೆಡ್-ಕೆ ಪ್ರಕಟಿಸಿದ್ದು ಇದಕ್ಕೂ ಮೊದಲೇ ಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಬಹುದಿತ್ತು. ಆದರೂ ಕಾಮೆಡ್-ಕೆ ಬಳಿಕ ಸೀಟು …
Read More »ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ-
ಮೈಸೂರು: ವಿಶ್ವ ವಿಖ್ಯಾತ ದಸರಾ (Mysuru Dasara 2022) ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಜಂಬೂ ಸವಾರಿಯ ಪ್ರಮುಖ ಆಕರ್ಷಣೆ ಗಜ ಪಡೆಯ ಕ್ಯಾಪ್ಟನ್ ಅಭಿಮನ್ಯು (Abhimanyu) ಕೂಡ ಅಂಬಾರಿ ಹೊರಲು ಫಿಟ್ ಆಗಿ ಸಿದ್ಧನಾಗಿದ್ದಾನೆ. ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅಂಬಾರಿ ಹೊತ್ತು ರಾಜಮಾರ್ಗದಲ್ಲಿ ಸಾಗಲು ಗಜಪಡೆ ಸಿದ್ಧವಾಗಿದೆ. ಅರಮನೆ (Mysuru Palace) ಗೆ ಆಗಮಿಸಿದ್ದ ಗಜ ತಂಡದಲ್ಲಿ ಜಂಬೂ ಸವಾರಿಯಲ್ಲಿ ಭಾಗಿಯಾಗುತ್ತಿರೋದು 9 ಆನೆಗಳು ಮಾತ್ರ. ಈ …
Read More »ರಾಮಾಯಣಕ್ಕೆ ಅಪಮಾನ: ‘ಆದಿಪುರುಷ್’ ತಂಡಕ್ಕೆ ಗೃಹ ಸಚಿವ ಎಚ್ಚರಿಕೆ
ಆದಿಪುರುಷ್’ ಟೀಸರ್ ಬಿಡುಗಡೆ ಮಾಡಿದ ಬೆನ್ನಲ್ಲೆ ಚಿತ್ರತಂಡ ತೀವ್ರ ಟ್ರೋಲಿಂಗ್ ಎದುರಿಸುತ್ತಿದೆ. ಕಳಪೆ ಮಟ್ಟದ ವಿಎಫ್‌ಎಕ್ಸ್‌ನಿಂದಾಗಿ ವಿಪರೀತ ಟ್ರೋಲ್ ಆಗಿರುವ ಜೊತೆಗೆ ರಾಮಾಯಣದ ಪಾತ್ರಗಳನ್ನು ತಮಗೆ ತೋಚಿದಂತೆ ಪ್ರೆಸೆಂಟ್ ಮಾಡಿರುವುದು ಸಹ ಆಕ್ರೋಶಕ್ಕೆ ಗುರಿಯಾಗಿದೆ. ಕೆಲವು ಹಿಂದು ಸಂಘಟನೆಗಳು ಸಹ ‘ಆದಿಪುರುಷ್’ ಟೀಸರ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿವೆ. ಇದರ ಬೆನ್ನಲ್ಲೇ ಈಗ ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಸಹ ‘ಆದಿಪುರುಷ್’ ಟೀಸರ್ ಬಗ್ಗೆ ಕಣ್ಣು ಕೆಂಪಗೆ …
Read More »ಮನೆಯಂಗಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ, ನೀರಿನ ಸಂಪಿಗೆ ತಲೆ ಬಡಿದು ಸಾವು
ಸಾವು ಹೇಗೆ ಬರುತ್ತದೆ? ಎಲ್ಲಿಂದ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎನ್ನುವುದಕ್ಕೆ ಕ್ರೂರ ನಿದರ್ಶನ ಈ ಘಟನೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಚೆನ್ನಿಗರಾಯ ಬಡಾವಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯ ಅಂಗಳದಲ್ಲೇ ಬಿದ್ದು ಪ್ರಾಣ ಕಳೆದುಕೊಂಡಿದ್ದಾಳೆ. ಚನ್ನರಾಯಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ.ಎಸ್ಸಿ. ವ್ಯಾಸಂಗ ಮಾಡುತ್ತಿರುವ ಸಿ.ಎನ್. ಚಂದನ ಎಂಬಾಕೆಯೇ ಪ್ರಾಣ ಕಳೆದುಕೊಂಡವಳು. ಈಕೆ ಮನೆಯ ಅಂಗಳದಲ್ಲಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾಳೆ. ಆಕಸ್ಮಿಕವಾಗಿ ಕಾಲು ಜಾರಿ …
Read More »ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ವಿದ್ಯುತ್ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್?
ಬೆಂಗಳೂರು: ಇಂಧನ ದರ ಹೊಂದಾಣಿಕೆ ಹಿನ್ನೆಲೆಯಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿದ್ದ ಸರ್ಕಾರ ಪರಿಷ್ಕೃತ ಆದೇಶವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲು ಚಿಂತನೆ ನಡೆಸಿದೆ. ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುವುದು. ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014 ರಲ್ಲಿ ಕಲ್ಲಿದ್ದಲು ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ …
Read More »ಮುಜರಾಯಿ ಇಲಾಖೆ ಅನುದಾನ ನಮ್ಮ ರಾಜ್ಯದ ದೇವಸ್ಥಾನಕ್ಕೆ ನೀಡದೇ ಬೇರೆ ರಾಜ್ಯದ ದೇವಸ್ಥಾನಗಳಿಗೆ ಬಿಡುಗಡೆ: ಮಾಜಿ ಶಾಸಕ ರಾಜು ಕಾಗೆ ಆರೋಪ
ಚಿಕ್ಕೋಡಿ: ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಅನುದಾನವನ್ನು ಬೇರೆ ರಾಜ್ಯಗಳ ದೇವಸ್ಥಾನಕ್ಕೆ ನೀಡುತ್ತಿದ್ದಾರೆ. ಆದ್ರೆ, ನಮ್ಮ ಗ್ರಾಮದ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಮಾಜಿ ಶಾಸಕ ರಾಜು ಕಾಗೆ, ಜೊಲ್ಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಐನಾಪೂರ ಪಟ್ಟಣದಲ್ಲಿ ಮಾತನಾಡಿದ ಅವರು, ಮುಜರಾಯಿ ಇಲಾಖೆಗೆ ಸಂಬಂಧಿಸಿ ಅನುದಾನವನ್ನು ಮಹಾರಾಷ್ಟ್ರ, ಆಂಧ್ರಪ್ರದೇಶ, ಕಾಶಿ ದೇವಸ್ಥಾನಗಳಿಗೆ ನೀಡಲಾಗುತ್ತಿದೆ. ಆದರೆ, ನಮಗೆ ಸರಿಯಾಗಿ ಅನುದಾನ …
Read More »ಪುಂಜಾಲಕಟ್ಟೆ: ಆರೆಸ್ಸೆಸ್ ವಿರುದ್ಧ ಆಕ್ಷೇಪಾರ್ಹ ರಸ್ತೆ ಬರಹ; ತಪ್ಪಿತಸ್ಥರ ಬಂಧನಕ್ಕೆ ಆಗ್ರಹ
ಪುಂಜಾಲಕಟ್ಟೆ: ಆರೆಸ್ಸೆಸ್ ವಿರುದ್ಧ ರಸ್ತೆ ಮೇಲೆ ಆಕ್ಷೇಪಾರ್ಹ ಬರಹ ಬರೆದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನಯನಾಡು ಸಮೀಪದ ಸ್ನೇಹ ಗಿರಿ ಎಂಬಲ್ಲಿ ಮಂಗಳವಾರ ಬೆಳಗ್ಗೆ ಕಂಡು ಬಂದಿದೆ. ಯಾರೋ ಅಪರಿಚಿತರು ರಸ್ತೆಯಲ್ಲಿ ಆರೆಸ್ಸೆಸ್ ವಿರುದ್ಧ ಬಹಿರಂಗ ಬೆದರಿಕೆ ಹಾಕಿದ್ದು, ಚಡ್ಡಿಗಳೇ ಎಚ್ಚರ, ನಾವು ಪಿಎಫ್ ಐ ಮರಳಿ ಬರುತ್ತೇವೆ ಎಂದು ಬರೆದಿದ್ದಾರೆ. ಈ ಬಗ್ಗೆ ಸ್ಥಳೀಯರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿ ತತ್ …
Read More »ರಾಜ್ಯ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಬೃಹತ್ ಸಮಾವೇಶಕ್ಕೆ ಸಿದ್ಧತೆ
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಕೊಡವಿಕೊಂಡು ಸಿದ್ದತೆ ನಡೆಸಲು ಈಗ ರಾಜ್ಯ ಬಿಜೆಪಿ ಘಟಕ ಮುಂದಾಗಿದ್ದು,ಘಟಾನುಘಟಿ ನಾಯಕರುಗಳನ್ನು ಆಹ್ವಾನಿಸಿ ಸಮಾವೇಶ ನಡೆಸಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಕೇಂದ್ರ ಸಚಿವರು ಸೇರಿದಂತೆ ಹಲವು ನಾಯಕರನ್ನು ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ಆಹ್ವಾನಿಸಲಾಗುತ್ತಿದೆ. ಒಂದು ಕಡೆ ಕಾಂಗ್ರೆಸ್ ತನ್ನ ಸಂಘಟನಾತ್ಮಕ …
Read More »ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತ ಸಾಗರ
ಸವದತ್ತಿ: ಜಗನ್ಮಾತೆ ನಿತ್ಯ ಪೂಜಿತೆ ಏಳುಕೊಳ್ಳದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿಯ ಸಡಗರ ಅದ್ದೂರಿಯಿಂದ ವಿಜ್ರಂಭಿಸುತ್ತಿದೆ. 7 ನೇ ದಿನ ರವಿವಾರ ರಾಜ್ಯ ಸೇರಿ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ದೇವಿಯ ದರ್ಶನಾಶೀರ್ವಾದ ಪಡೆದು ಪುನೀತರಾದರು. ಏಳುಕೊಳ್ಳಗಳ ನಾಡಿನಲ್ಲಿ ನೆಲೆ ನಿಂತ ಯಲ್ಲಮ್ಮ ದೇವಿ ದರ್ಶನಕ್ಕೆ ನಿತ್ಯವೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಘಟಸ್ಥಾಪನೆಯ 5 ನೇ ದಿನ ಶುಕ್ರವಾರ ಭಕ್ತರ ಆಗಮನ ಗಣನೀಯವಾಗಿ ಏರಿಕೆ ಕಂಡಿತ್ತು. 7 ನೇ ದಿನ ರವಿವಾರ …
Read More »ಬೋನಸ್ ನೀಡದ್ದಕ್ಕೆ ಗ್ರಾಮ ಪಂಚಾಯಿತಿಗೆ ಚಪ್ಪಲಿ ಹಾರ
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮ ಪಂಚಾಯಿತಿಗೆ ಗಾಂಧಿ ಜಯಂತಿಯಂದೇ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಗಾಂಧಿ ಜಯಂತಿ ಆಚರಣೆ ಮಾಡಿ ಕಚೇರಿಗೆ ಬಾಗಿಲು ಹಾಕಿ ಹೋಗಲಾಗಿತ್ತು. ಸಿಬ್ಬಂದಿ ಮನೆಗೆ ಹೋದ ನಂತರ ಈ ಕೃತ್ಯ ಎಸಗಲಾಗಿದೆ. ಈ ಬಗ್ಗೆ ದೇವನಹಳ್ಳಿ ತಾಲೂಕು ಪಂಚಾಯಿತಿ ಇಒ ವಸಂತ್ ಕುಮಾರ್ ಸೂಚನೆ ಮೇರೆಗೆ ಪಿಡಿಒ ಶಿವರಾಜ್ ವಿಜಯಪುರ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಪ್ರತಿ ವರ್ಷ ದಸರಾ …
Read More »
Laxmi News 24×7