ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …
Read More »ನಾನು ಆಪ್ ಬೆಂಬಲಿಗ ಅಲ್ಲ; ಕಟ್ಟಾ ಬಿಜೆಪಿಗ: ಅಟೋ ಚಾಲಕ ವಿಕ್ರಂ
ಅಹಮದಾಬಾದ್: ಆಮ್ ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಇತರ ಮುಖಂಡರಿಗೆ ಭೋಜನ ಕೂಟ ಏರ್ಪಡಿಸಿದ್ದ ಗುಜರಾತ್‌ನ ಅಟೋ ಚಾಲಕ ವಿಕ್ರಂ ದಂತಾನಿ ಈಗ ತಾವು ಬಿಜೆಪಿಯ ಬೆಂಬಲಿಗ ಎಂದು ಹೇಳಿಕೊಂಡಿದ್ದಾರೆ. “ನನಗೆ ಮತ ಹಾಕಲು ಅವಕಾಶ ಸಿಕ್ಕಿದ ಮೊದಲ ದಿನದಿಂದಲೂ ಬಿಜೆಪಿಯ ಬೆಂಬಲಿಗನೇ ಆಗಿದ್ದೇನೆ’ ಎಂದು ಅವರು ಹೇಳಿಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಟೋ ರಿಕ್ಷಾ ಒಕ್ಕೂಟದ ಸೂಚನೆಯ …
Read More »ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ !:ಸೂರತ್‌ನಲ್ಲಿ 25 ಕೋಟಿ ರೂ. ನಕಲಿ ನೋಟುಗಳ ವಶ
ಸೂರತ್: ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್‌ನಿಂದ 25.80 ಕೋಟಿ ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಚಲನಚಿತ್ರವೊಂದರಲ್ಲಿ ಬಳಸಲು ಮುಂಬೈಗೆ ನಕಲಿ ನೋಟುಗಳನ್ನು ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕಮ್ರೇಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದ ನಕಲಿ ನೋಟುಗಳನ್ನು (ಎಫ್‌ಐಸಿಎನ್) ಸಾಗಿಸುವ ಆಂಬ್ಯುಲೆನ್ಸ್ ಸಾಗಲಿದೆ ಎಂಬ ಸುಳಿವಿನ ಮೇರೆಗೆ ಸ್ಥಳೀಯ ಪೊಲೀಸರು ಚೆಕ್‌ಪೋಸ್ಟ್‌ನಲ್ಲಿ ವಾಹನವನ್ನು ತಡೆದರು ಮತ್ತು ಗುರುವಾರ ಆರು ಬ್ಯಾಗ್‌ಗಳಲ್ಲಿ …
Read More »ಖರ್ಗೆ ಅಧ್ಯಕ್ಷರಾದರೂ ರಿಮೋಟ್ ಕಂಟ್ರೋಲ್‌ನಲ್ಲೇ ಇರಬೇಕು: ಜೋಶಿ
ವಿಜಯಪುರ: ಎಐಸಿಸಿ ಅಧ್ಯಕ್ಷರು ಯಾರೇ ಆದರೂ ರಿಮೋಟ್ ಕಂಟ್ರೋಲ್‌ನಲ್ಲೇ ಕೆಲಸ ಮಾಡಬೇಕು. ಹೀಗಾಗಿ ರಾಜ್ಯದವರಾದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದರೂ ಆ ಸ್ಥಾನಕ್ಕೆ ಅರ್ಥ, ಘನೆತೆಯೇ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದ ಸೈನಿಕ ಶಾಲಾ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಿದರೂ ಯಾವುದೇ …
Read More »ವಿಶ್ವ ಹಿರಿಯ ನಾಗರಿಕರ ದಿನಾಚರಣೆ,6 ಸಾಧಕರು, ಒಂದು ಸಂಸ್ಥೆಗೆ ಪ್ರಶಸ್ತಿ
ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ 6 ಮಂದಿ ಹಿರಿಯ ನಾಗರಿಕರಿಗೆ ಮತ್ತು ಒಂದು ಸಂಸ್ಥೆಗೆ ಶನಿವಾರ (ಅ.1) ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್ ಅವರು, ಶಿಕ್ಷಣ, ಸಾಹಿತ್ಯ, ಕಲೆ, ಸಮಾಜಸೇವೆ, ಕ್ರೀಡೆ ಮತ್ತು ಕಾನೂನು ಸಹಿತ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ …
Read More »ದೇಶಕ್ಕೆ 5ಜಿ ಪ್ರವೇಶ; 4ಜಿ ಗಿಂತ 10 ಪಟ್ಟು ವೇಗ.
ಅ.1ರಿಂದ ಭಾರತದಲ್ಲಿ 5ಜಿ ಸೇವೆ ಆರಂಭವಾಗುತ್ತಿದೆ. ದೇಶದಲ್ಲಿ ಡಿಜಿಟಲ್ ರೂಪಾಂತರ ಮತ್ತು ಸಂಪರ್ಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ 5ಜಿ ಸೇವೆ ಸಹಕಾರಿಯಾಗಿದೆ. ಈಗಾಗಲೇ 5ಜಿ ಸ್ಮಾರ್ಟ್ ಮೊಬೈಲ್ ಪೋನ್ ಹೊಂದಿರುವ ದೇಶದ 100 ಮಿಲಿಯನ್ ಜನರು 5ಜಿ ಸೇವೆಯ ಲಭ್ಯತೆಗಾಗಿ ಕಾಯುತ್ತಿದ್ದಾರೆ. 5ಜಿ ಸೇವೆಯಿಂದ ಇಂಟರ್ನೆಟ್ ವೇಗ ಹೆಚ್ಚುವ ಜತೆಗೆ ಹಲವಾರು ಉಪಯೋಗಗಳ ಬಗ್ಗೆ ವಿಸ್ತೃತ ಮಾಹಿತಿ ಇಲ್ಲಿದೆ. 4ಜಿ ಗಿಂತ 10 ಪಟ್ಟು ವೇಗ: ಪ್ರಸ್ತುತ 4ಜಿ …
Read More »ರಾಜ್ಯದಾದ್ಯಂತ ವೀರಜ್ಯೋತಿ ಯಾತ್ರೆ; ಅ.2ರಂದು ಬೆಂಗಳೂರಿನಲ್ಲಿ ಸಿ.ಎಂ ಚಾಲನೆ
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಈ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಆಚರಿಸಲಾಗುತ್ತದೆ. ರಾಜ್ಯ ಸರ್ಕಾರ ₹2 ಕೋಟಿ ಅನುದಾನ ಮಂಜೂರು ಮಾಡಿದ್ದು, ಅ.23, 24 ಹಾಗೂ 25ರಂದು ಮೂರು ದಿನ ವೈಭವ ಮರುಕಳಿಸಲಿದೆ ಎಂದು ಶಾಸಕ ಮಹಾಂತೇಶ ದೊಡ್ಡಗೌಡ್ರ ತಿಳಿಸಿದರು. ಪಟ್ಟಣದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ವೀರಜ್ಯೋತಿಯಾತ್ರೆಗೆ ಮುಖ್ಯಮಂತ್ರಿ …
Read More »ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ನೆರೆ ಸಂತ್ರಸ್ತರು
ಬೆಳಗಾವಿ: ಅತಿವೃಷ್ಠಿಯಿಂದ ಹಾನಿಯಾದ ಮನೆಗಳ ಸಮೀಕ್ಷೆ ಅಸಮರ್ಪವಾಗಿದ್ದು, ಪರಿಹಾರ ವಿತರಣೆ ವೇಳೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ನೆರೆ ಸಂತ್ರಸ್ತರು ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅತಿವೃಷ್ಠಿಗೆ ಮೂಡಲಗಿ ತಾಲೂಕಿನಲ್ಲಿ ಸಾಕಷ್ಟು ಮನೆಗಳಿಗೆ ಹಾನಿ ಆಗಿದೆ. ಘಟಪ್ರಭಾ ನದಿ ಪಾತ್ರದಲ್ಲಿರುವ ಜನರು ಮೂರು ವರ್ಷಗಳಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರವಾಹಕ್ಕೆ ತುತ್ತಾದ ಮನೆಗಳ ಸಮೀಕ್ಷೆ ವೇಳೆ ತಾರತಮ್ಯ ಆರೋಪದ …
Read More »ಬೆಳ್ಳಂ ಬೆಳಿಗ್ಗೆ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಹುಮನಾಬಾದ: ಬೀದರ ಜಿಲ್ಲೆಯ ಹುಮನಾಬಾದ ಪಟ್ಟಣದ ಹೊರವಲಯದ ಆರ್.ಟಿ.ಓ. ಕಚೇರಿ ಮೇಲೆ ಸೆ.30ರ ಶುಕ್ರವಾರ ಬೆಳ್ಳಂ ಬೆಳಿಗ್ಗೆ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಹಣ ವಸೂಲಿ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 65ರ ಮೋಳಕೆರಾ ಗ್ರಾಮದ ಹತ್ತಿರದ ಚೆಕ್ ಪೋಸ್ಟ್ ನಲ್ಲಿ ದಾಳಿ ನಡೆದಿದೆ. ವಾಹನಗಳಿಂದ ಸಂಗ್ರಹಿಸುವ ತೆರಿಗೆ ಹಣಕ್ಕೂ ಕಚೇರಿಯಲ್ಲಿ ಸಂಗ್ರಹವಾದ ಹಣಕ್ಕೂ ವ್ಯತ್ಯಾಸ ಇರುವುದು …
Read More »ಹಬ್ಬದ ಸಂದರ್ಭವೆಂದು ದರ ಏರಿಸಿದರೆ ಪರ್ಮಿಟ್ ರದ್ದು; ಸಾರಿಗೆ ಸಂಸ್ಥೆಗಳಿಗೆ ರಾಮುಲು ಎಚ್ಚರಿಕೆ
ಬೆಂಗಳೂರು: ದಸರಾ ಸಂದರ್ಭದಲ್ಲಿ ಬೆಂಗಳೂರಿನಿಂದ ಬೇರೆ ಬೇರೆ ಊರುಗಳಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರಿಗೆ ಅಧಿಕ ದರ ವಿಧಿಸುವ ಖಾಸಗಿ ಸಾರಿಗೆ ಸಂಸ್ಥೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಈಗ ಸಾರಿಗೆ ಇಲಾಖೆ ಮುಂದಾಗಿದೆ. ಈ ಬಗ್ಗೆ ಅಧಿಕೃತ ಟ್ವೀಟ್ ಮಾಡಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಕೀಳುವ ಸಾರಿಗೆ ಸಂಸ್ಥೆಗಳ ಪರ್ಮಿಟ್ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ …
Read More »
Laxmi News 24×7