Breaking News

ರಾಜಕೀಯ

ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸಂಬಂಧ ಸಿಎಂ ಕಾರಿನ ಮೇಲೆ ದಾಖಲಾದ ಪ್ರಕರಣ ಸಂಬಂಧ ದಂಡ ಪಾವತಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಶೇ.50 ರಷ್ಟು ದಂಡ ಪಾವತಿಗೆ ಸರ್ಕಾರ ರಿಯಾಯಿತಿ ನೀಡಿದ ಹಿನ್ನೆಲೆಯಲ್ಲಿ ಸವಾರರು ದಂಡ ಕಟ್ಟುವಲ್ಲಿ ನಿರತರಾಗಿದ್ದಾರೆ. ಇದುವರೆಗೂ 40 ಕೋಟಿಗಿಂತ ಹೆಚ್ಚು ದಂಡ ಪಾವತಿಸಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಾರಿನ ಮೇಲಿನ ಪ್ರಕರಣಗಳ ಸಂಬಂಧ ಕೂಡ ದಂಡ ಪಾವತಿಯಾಗಿದೆ. ಸಿಎಂ ಕಾರಿನ ಮೇಲೆ 7 ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೋವಾ-ಕ್ರಿಸ್ಟಾ ಕಾರು 2024ರಿಂದ ಈವರೆಗೂ ಏಳು ಸಂಚಾರ ನಿಯಮಗಳ ಉಲ್ಲಂಘಿಸಿವೆ. …

Read More »

*ನಾಳೆ ವಿಜಯಪುರ ಜಿಲ್ಲೆಗೆ ನಾಡದೊರೆ: ಹಲವು ಸಮಸ್ಯೆಗಳಿಗೆ ನೀಡುವವರೇ ಪರಿಹಾರ?*

 ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಬಾಗಿನ ಅರ್ಪಿಸಲಿದ್ದಾರೆ. ಈ ಮಧ್ಯೆ, ಹಲವಾರು ಸಂಘಟನೆಗಳು ವಿವಿಧ ವಿಷಯಗಳ ಕುರಿತು ಮನವಿ ಸಲ್ಲಿಸಲು ಸಿಎಂ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸುತ್ತಿವೆ. ಈ ಕುರಿತುವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯದ ಒಳಹರಿವು ಸ್ಥಿರವಾಗಿ ಮುಂದುವರೆದಿದೆ. ಇದರಿಂದಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. …

Read More »

ತಾಯಿ ಪಿಂಚಣಿ ಹಣಕ್ಕಾಗಿ ಸಹೋದರರ ಜಗಳ; ಅಣ್ಣನ ಕೊಲೆಯಲ್ಲಿ ಅಂತ್ಯ

ಚಿಕ್ಕಬಳ್ಳಾಪುರ: ವೃದ್ಧ ತಾಯಿಗೆ ಬರುತ್ತಿದ್ದ ಪಿಂಚಣಿ ಹಣ ಹಂಚಿಕೆ ವಿಚಾರಕ್ಕೆ ಮೂವರು ಸಹೋದರರ ನಡುವೆ ಜಗಳವಾಗಿದ್ದು, ವಿಕೋಪಕ್ಕೆ ತಿರುಗಿ ಅಣ್ಣನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ನರಸಿಂಹಮೂರ್ತಿ (45) ಕೊಲೆಯಾದ ಸಹೋದರ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮೇಳ್ಯ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊಲೆ ಆರೋಪಿಗಳಾದ ರಾಮಾಂಜಿ (39) ಮತ್ತು ಗಂಗಾಧರಪ್ಪ (39) ಎಂಬವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೌರಿಬಿದನೂರು ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆಯಾದ …

Read More »

ಮಳೆ ಅಬ್ಬರಕ್ಕೆ ನಲುಗಿದ ಅನ್ನದಾತ

ಹಾವೇರಿ: ಭಾರಿ ಮಳೆಯಿಂದ ಜಿಲ್ಲೆಯ ಹಲವೆಡೆ ಬೆಳೆಗಳೆಲ್ಲ ರೋಗಕ್ಕೆ ತುತ್ತಾಗಿದ್ದು, ಬೇಸತ್ತ ರೈತನೋರ್ವ ಹತ್ತಿ ಬೆಳೆಯನ್ನು ಟ್ರ್ಯಾಕ್ಟರ್ ರೂಟರ್​​​ ಹೊಡೆದು ನಾಶ ಮಾಡಿದ್ದಾರೆ. ಈ ವರುಷ ಉತ್ತಮ ಮುಂಗಾರು ಪೂರ್ವ ಮಳೆ ಆಗಿರುವ ಹಿನ್ನೆಲೆಯಲ್ಲಿ, ರೈತರು ಹೆಚ್ಚಿನ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಅಧಿಕ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ಬೆಳೆಗಳು ನಾಶವಾಗಿವೆ. ಗೋವಿನಜೋಳ, ಹತ್ತಿ, ಸೋಯಾಬಿನ್​, ಶೇಂಗಾ ಬೆಳೆಗಳಿಗೆ ಹಲವು ರೋಗಗಳು ಕಾಣಿಸಿಕೊಂಡಿವೆ. ಕೆಂಪುರೋಗ, ಬೂದಿರೋಗ ಸೇರಿದಂತೆ ಹಲವು ರೋಗಗಳಿಂದ ಬೆಳೆಗಳು …

Read More »

ರಾಜ್ಯಾದ್ಯಂತ ಇಂದಿನಿಂದ ಮಳೆ ಅಬ್ಬರ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆ ಅಬ್ಬರ ಕಡಿಮೆಯಾದರೂ, ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್​ 11 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಆಗಲಿರುವ ಜಿಲ್ಲೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, …

Read More »

ಗಣೇಶ ವಿಸರ್ಜನೆಗೆ ಮೂರು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ: ಕಮಿಷನರ್ ಭೂಷಣೆ ಬೋರಸೆ

ಬೆಳಗಾವಿ: ಗಣೇಶನ ವಿಸರ್ಜನೆಗೆ ಸೂಕ್ತ ಬಂದೋಬಸ್ತ್ ಒದಗಿಸಲು ಬೇರೆ ಜಿಲ್ಲೆಯಿಂದ 3 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರು ತಿಳಿಸಿದರು.‌ ತಮ್ಮ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದೆ ಶನಿವಾರ ನಡೆಯಲಿರುವ ಗಣೇಶನ ವಿಸರ್ಜನೆಯ ಭವ್ಯ ಮೆರವಣಿಗೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಗಣೇಶ ವಿಸರ್ಜನೆಗೆ ನಿಯಮಗಳನ್ನು ಪಾಲಿಸಿ ಶಾಂತಿಯುತವಾಗಿ ಸಹಕರಿಸಬೇಕೆಂದು ಎಂದು ಕರೆ ನೀಡಿದರು.‌ ಗಣೇಶ ವಿಸರ್ಜನೆಗೆ …

Read More »

40 ವರ್ಷದಲ್ಲಿ 4ನೇ ಬಾರಿ ಭರ್ತಿಯ ಹಂತಕ್ಕೆ ತಲುಪಿದ ಸೂಪಾ ಜಲಾಶಯ!

ಕಾರವಾರ: ರಾಜ್ಯದ ಎರಡನೇ ಅತಿ ದೊಡ್ಡ ಜಲಾಶಯವಾಗಿರುವ ಜೋಯಿಡಾ ತಾಲೂಕಿನ ಸೂಪಾ ಜಲಾಶಯ ಭರ್ತಿಯ ಹಂತಕ್ಕೆ ತಲುಪಿದೆ. 564 ಮೀಟರ್ ಎತ್ತರದ ಜಲಾಶಯ ನಿರ್ಮಾಣದ ಬಳಿಕ ಈವರೆಗೆ ನಾಲ್ಕು ಬಾರಿ ಮಾತ್ರ ಭರ್ತಿಯಾಗಿದ್ದು, ಈ ಸಲ ಉತ್ತಮ ಮಳೆಯಾದ ಕಾರಣ ಭರ್ತಿಗೆ ಇನ್ನೂ ಕೇವಲ 5 ಮೀಟರ್ ಬೇಕಾಗಿದೆ. ರಾಜ್ಯದಲ್ಲೇ ಅತಿ ಎತ್ತರದ ನೀರು ಸಂಗ್ರಹಣೆ ಸಾಮರ್ಥ್ಯದ ಜಲಾಶಯವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಸೂಪಾ-ಜಲಾಶಯ ಭರ್ತಿ ಹಂತಕ್ಕೆ ತಲುಪಿದೆ. ಈ …

Read More »

ದೇವಾಲಯ ಸುತ್ತ 200 ಮೀಟರ್ ಮಾಂಸಾಹಾರ ಸೇವನೆ ನಿಷೇಧ: ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್

ಬೆಂಗಳೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದ ಹೊನ್ನೇಶ್ವರಸ್ವಾಮಿ ದೇವಸ್ಥಾನದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ನಿಷೇಧಿಸಿ ಪೊಲೀಸರು ಹೊರಡಿಸಿರುವ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಸಂಬಂಧ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ದೇವಸ್ಥಾನದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ನಿಷೇಧಿಸಿ ಬಡವನಹಳ್ಳಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು 2024ರ ಜುಲೈ 13ರಂದು ಹೊರಡಿಸಿರುವ ನೋಟಿಸ್ ಪ್ರಶ್ನಿಸಿ ಹೊನ್ನೇಶ್ವರಸ್ವಾಮಿ ದೇವಸ್ಥಾನ …

Read More »

ಅಕ್ರಮ ಬೆಟ್ಟಿಂಗ್​​ ಪ್ರಕರಣ: ಶಾಸಕ ಕೆ. ಸಿ. ವೀರೇಂದ್ರ ಇ.ಡಿ. ಕಸ್ಟಡಿ ಅವಧಿ ಸೆ.8ರ ವರೆಗೆ ವಿಸ್ತರಣೆ

ಬೆಂಗಳೂರು: ಆನ್​ಲೈನ್ ಹಾಗೂ ಆಫ್​ಲೈನ್ ಮುಖಾಂತರ ಅಕ್ರಮವಾಗಿ ಬೆಟ್ಟಿಂಗ್ ನಡೆಸಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ. ಸಿ. ವೀರೇಂದ್ರ (ಪಪ್ಪಿ) ಅವರ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಇಂದು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೆ ಹಾಜರುಪಡಿಸಲಾಯಿತು. ಇದಕ್ಕೂ ಮುನ್ನ ಆರೋಪಿಯನ್ನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಬಳಿಕ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯವು ವೀರೇಂದ್ರ ಅವರನ್ನು …

Read More »

ರಾಯಬಾಗ : ನಮ್ಮ ಮಕ್ಕಳು ಸರ್ಕಾರಿ ಶಾಲೆಗೆ ಹೋಗಿ ಚನ್ನಾಗಿ ಓದಲಿ ಎಂಬುದು ತಂದೆ ತಾಯಿ ಕನಸು ಆಗಿರುತ್ತೆ

ರಾಯಬಾಗ : ನಮ್ಮ ಮಕ್ಕಳು ಸರ್ಕಾರಿ ಶಾಲೆಗೆ ಹೋಗಿ ಚನ್ನಾಗಿ ಓದಲಿ ಎಂಬುದು ತಂದೆ ತಾಯಿ ಕನಸು ಆಗಿರುತ್ತೆ.. ಆದರೆ ರಾಯಬಾಗ ತಾಲೂಕಿನ ಹಾರೂಗೇರಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಶಾಲೆಯಲ್ಲಿ ಮುಖ್ಯ ಶಿಕ್ಷಕಿ ಎರಡು ಜನ ಶಾಲಾ ಮಕ್ಕಳನ್ನು ಸತತವಾಗಿ ಎರಡು ಗಂಟೆಗಳ ಕಾಲ ಗುಂಡಿ ಆಗಿಯುವ ಕೆಲಸ ಮಾಡಿಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ… ಸತತವಾಗಿ ಎರಡು ಗಂಟೆಗಳ ಕಾಲ ಶಾಲಾ ಮಕ್ಕಳ ಕೈಯಲ್ಲಿ ಆಯುಧಗಳನ್ನು …

Read More »