Breaking News

ರಾಜಕೀಯ

ಕರ್ನಾಟಕ 2nd PUC ಪೂರಕ ಫಲಿತಾಂಶ ಪ್ರಕಟ: ಶೇ 37.8 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು, ಸೆಪ್ಟಂಬರ್ 12: ದ್ವಿತೀಯ ಪರೀಕ್ಷೆಯ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗದೆ. ಶೇ 37.8 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು karresults.nic.in ವೆಬ್ ಸೈಟ್‌ ನಲ್ಲಿ ಫಲಿತಾಂಶವನ್ನು ಪಡೆಯಬಹುದಾಗಿದೆ. ಕರ್ನಾಟಕ 2 ನೇ ಪಿಯುಸಿ ಪೂರಕ ಪರೀಕ್ಷೆಯು ಕಳೆದ ತಿಂಗಳು ಆಗಸ್ಟ್ 12 ರಿಂದ 25ರವರೆಗೆ ನಡೆದಿತ್ತು.185415. ವಿದ್ಯಾರ್ಥಿಗಳು ನೋಂದಣಿ ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿಗಳು 175,905 ವಿದ್ಯಾರ್ಥಿಗಳು. ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 65,233, ಪರೀಕ್ಷೆಯಲ್ಲಿ ಗೈರಾದ ವಿದ್ಯಾರ್ಥಿಗಳ ಸಂಖ್ಯೆ …

Read More »

30 ಐಟಿ, ಬಿಟಿಗೂ ಬಂತು ಕಂಟಕ- ಮುಲಾಜೇ ಇಲ್ಲ. ದೊಡ್ಡವರನ್ನೂ ಬಿಡಲ್ಲ ಎಂದ ಸಿಎಂ

ಬೆಂಗಳೂರು: ಈ ಬಾರಿ ವರುಣದ ರೌದ್ರಾವತಾರಕ್ಕೆ ದೇಶ-ವಿದೇಶಗಳ ಹಲವು ಪ್ರದೇಶಗಳು ನಲುಗಿ ಹೋಗಿವೆ. ಕರ್ನಾಟಕದಲ್ಲಿಯೂ ಈ ಬಾರಿ ಮಳೆ ಸೃಷ್ಟಿಸಿರುವ ಅವಾಂತರ ಅಷ್ಟಿಷ್ಟಲ್ಲ. ಅದರಲ್ಲಿಯೂ ಬೆಂಗಳೂರು ಕೂಡ ಈ ಹಿಂದೆ ಕಾಣದಷ್ಟು ಭೀಕರ ಪರಿಣಾಮವನ್ನು ಈ ಬಾರಿ ಕಂಡಿದೆ. ಇದಕ್ಕೆ ಮೂಲ ಕಾರಣ ಬೆನ್ನತ್ತಿ ಹೋದಾಗ ಸಿಕ್ಕಿದ್ದು, ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಹಲವು ಬಹುಮಹಡಿ ಕಟ್ಟಡ ನಿರ್ಮಾಣವಾದದ್ದು. ಈ ಹಿಂದೆ ಕೂಡ ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿದಂತೆ ಭಾರಿ ಗಲಾಟೆ ನಡೆದಿದ್ದರೂ, ಒತ್ತುವರಿ …

Read More »

ಖಾಲಿ ಕುರ್ಚಿಗಳಿಗೆ ಬಿಜೆಪಿ ನಾಯಕರು ಅಡ್ರೆಸ್ ಮಾಡಿದ್ದಾರೆ: ಬಿಜೆಪಿ ಜನಸ್ಪಂದನೆ ಸಮಾವೇಶಕ್ಕೆ ಎಂಬಿಪಿ ಲೇವಡಿ..!

ಬಿಜೆಪಿ ಜನಸ್ಪಂದನೆ ಸಮಾವೇಶದಲ್ಲಿ ಲಕ್ಷಾಂತರ ಜನ ಎಂದು ಖಾಲಿ ಕುರ್ಚಿಗಳಿಗೆ ಕೇಂದ್ರ ಸಚಿವೆ ಸ್ಮøತಿ ಇರಾನಿ, ಮಾಜಿ ಸಿಎಂ ಬಿಎಸ್‍ವೈ, ಸಿಎಂ ಬೊಮ್ಮಾಯಿ ಅಡ್ರೆಸ್ ಮಾಡಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಬಿಜೆಪಿ ಜನಸ್ಪಂದನೆ ಸಮಾವೇಶದಲ್ಲಿ ಖಾಲಿ ಕುರ್ಚಿ ಇರುವ ವಿಡಿಯೋ ನನ್ನ ಬಳಿ ಇವೆ. ನಿಮ್ಮ ಕಡೆಗೆ ವಿಡಿಯೋ ಇಲ್ಲಾ ಅಂದ್ರೆ ಹೇಳಿ ನಾನು …

Read More »

ರೈಲ್ವೆ ಪದೋನ್ನತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಗಂಭೀರ ಆರೋಪ…!

ನೇಮಕಾತಿ ಅಕ್ರಮದ ವಾಸನೆ ಎಲ್ಲೆಡೆಯೂ ಹರಡುತ್ತಿದೆ. ರಾಜ್ಯ ಸರ್ಕಾರದ ಬಹುತೇಕ ಹುದ್ದೆಗಳಲ್ಲಿ ಅಕ್ರಮ ನಡೆದಿದ್ದು, ತನಿಖೆ ಕೂಡ ನಡೆಯುತ್ತಿರುವ ಬೆನ್ನಲ್ಲೇ ಈಗ ರೈಲ್ವೆ ಇಲಾಖೆಯಲ್ಲೊಂದು ಗಂಭೀರ ಆರೋಪ ಕೇಳಿ ಬಂದಿದೆ. ಹೀಗೆ ರೈಲ್ವೆ ಪರೀಕ್ಷೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ರೈಲ್ವೆ ಸಿಬ್ಬಂದಿ. ಮರು ಪರೀಕ್ಷೆಗೆ ಒತ್ತಾಯಿಸುತ್ತಿರುವ ಅಭ್ಯರ್ಥಿಗಳು. ದೊಡ್ಡಮಟ್ಟದ ಅಕ್ರಮ ನಡೆದಿದೆ ಎಂದು ಅಸಮಾಧಾನಗೊಂಡ ಸಿಬ್ಬಂದಿ. ಇದೆಲ್ಲದಕ್ಕೂ ಸಾಕ್ಷಿಯಾಗಿದ್ದು ಹುಬ್ಬಳ್ಳಿ ರೈಲ್ವೆ ವ್ಯವಸ್ಥಾಪಕ ನಿರ್ದೇಶಕರ ಕಚೇರಿ. ಹೌದು.. ರೈಲ್ವೆಯ ಗೂಡ್ಸ್ …

Read More »

ಮಹಿಳೆಯರ ಕೊರಳಲ್ಲಿನ ಆಭರಣ,, ಎಮ್ಮೆ, ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳರನ್ನ ಹಾರೂಗೇರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ

ಕೆಲವೊಮ್ಮೆ ಮಹಿಳೆಯರ ಕೊರಳಲ್ಲಿನ ಆಭರಣ, ಮತ್ತೆ ಕೆಲವೊಮ್ಮೆ ಎಮ್ಮೆ ಹೀಗೆ ವಿಭಿನ್ನ ರೀತಿಯಲ್ಲಿ ಕಳ್ಳತನ ಮಾಡುತ್ತಿದ್ದ ಐನಾತಿ ಕಳ್ಳರನ್ನು ಬಂಧಿಸುವಲ್ಲಿ ಹಾರೂಗೇರಿ ಪೊಲೀಸ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾಗೂಗೇರಿ ಪೊಲೀಸರು ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಒಟ್ಟಾರೆ 4 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆಪ್ಟೆಂಬರ್ 9 ರಂದು ಹಾರೂಗೇರಿಯ ವಡಕಿ ತೋಟದಲ್ಲಿ ಬೈಕ್ ಮೇಲೆ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಹಾರೂಗೇರಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ …

Read More »

ಐಎಎಸ್ ಅಧಿಕಾರಿ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಜೆಡಿಎಸ್ ಶಾಸಕ

ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರ ಜಟಾಪಟಿ ಮುಂದುವರೆದಿದ್ದು, ಇದೀಗ ಶಾಸಕರು ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.   ಶಾಸಕ ಸಾ.ರಾ.ಮಹೇಶ್ ಭೂ ಅಕ್ರಮ ಮಾಡಿದ್ದಾರೆ. ಎಂಬ ರೋಹಿಣಿ ಸಿಂಧೂರಿ ಅವರ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾಸಕರು, ನಾನು ಯಾವುದೇ ಭೂ ಕಬಳಿಕೆ ಮಾಡಿಲ್ಲ. ಆದರೂ ರೋಹಿಣಿ ಸಿಂಧೂರಿ ನನ್ನ ವಿರುದ್ಧ ಆರೋಪ ಮಾಡಿದ್ದಲ್ಲದೇ …

Read More »

ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕವಾಗಿ ವಾಗ್ದಾಳಿ ನಡೆಸಿದ ಸಿ.ಟಿ.ರವಿ

ಬೆಂಗಳೂರು: ಸಿ.ಟಿ.ರವಿ ಲೂಟಿ ರವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡುವ ಬರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.   ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಕರೆಯುತ್ತಾರೆ. ಹಾಗಂತ ನಾನು ಹೇಳುತ್ತಿಲ್ಲ. ಜನ ಹೇಳುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಇವರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? …

Read More »

ಮೇಲ್ಮನೇಲಿ ಬಿಜೆಪಿಗೆ ಪೂರ್ಣ ಬಹುಮತ : ಬಸವರಾಜ ಹೊರಟ್ಟಿ ಮತ್ತೆ ಸಭಾಪತಿ?

ಬೆಂಗಳೂರು : ಜೆಡಿಎಸ್ ತೊರೆದು ಬಿಜೆಪಿಯಿಂದ ವಿಧಾನಪರಿಷತ್ ಗೆ ಪುನರಾಯ್ಕೆಯಾಗಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮತ್ತೆ ಸಭಾಪತಿ ಸ್ಥಾನ ನೀಡುವ ಸಾಧ್ಯತೆ ಇದೆ.   ಜೆಡಿಎಸ್ ಸದಸ್ಯರಾಗಿದ್ದ ಬಸವರಾಜ ಹೊರಟ್ಟಿ ಅವರು ಸಭಾಪತಿ ಮತ್ತು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರು. ಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದು, ಇದಕ್ಕೆ ಬಿಜೆಪಿ ಕೂಡ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಸದಸ್ಯರಾಗಿ ಆಯ್ಕೆಯಾಗಿರುವ …

Read More »

ಬೆಳಗ್ಗೆ 11ಕ್ಕೆ ‘2nd puc ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ

ಬೆಂಗಳೂರು : ಸೆಪ್ಟಂಬರ್‌ 12ರಂದು (ನಾಳೆ )ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಸಚಿವರು, ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ’ ಎಂದಿದ್ದಾರೆ. ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022: ಪರಿಶೀಲಿಸುವುದು ಹೇಗೆ? …

Read More »

ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ: ಜೈಲಾ ಅಥವಾ ಆಸ್ಪತ್ರೆ ಇಂದು ನಿರ್ಧಾರ!

ಚಿತ್ರದುರ್ಗ: ಪೋಕ್ಸೋ ಕೇಸ್​ನಲ್ಲಿ ಮುರುಘಾಶ್ರೀಗಳು ಜೈಲು ಸೇರಿದ್ದು, ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​​ನಲ್ಲಿ ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆ ಬಳಿಕ ಮುರುಘಾಶ್ರೀಗೆ ಬೇಲಾ, ಜೈಲಾ, ಆಸ್ಪತ್ರೆನಾ? ಇಂದು ನಿರ್ಧಾರವಾಗಲಿದೆ. ಸೆ.14ರವರೆಗೆ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕರೊನರಿ ಎಂಜೋಗ್ರಾಮ ಪರೀಕ್ಷೆ, ಚಿಕಿತ್ಸೆ ಬಗ್ಗೆಯೂ ವಿಚಾರಣೆ ನಡೆಯಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲು ಮುರುಘಾಶ್ರೀ ಪರ ವಕೀಲರು ಮನವಿ ಮಾಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು …

Read More »