ಬಾಗಲಕೋಟೆ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಎರಡನೇ ಮದುವೆಯಾಗಿದ್ದಾರೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಪತ್ನಿ ವೀಣಾ ಕಾಶಪ್ಪನವರ್ ಪ್ರತಿಕ್ರಿಯೆ ನೀಡಿದ್ದಾರೆ. ಹುನಗುಂದ ಕ್ಷೇತ್ರದಲ್ಲಿ ವೈಯಕ್ತಿಕ ವಿಚಾರ ಹರಿದಾಡುತ್ತಿದೆ. ನಾನು ಆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇನೆ. ಸಂಪೂರ್ಣ ಮಾಹಿತಿ ಕಲೆ ಹಾಕಿದ ಮೇಲೆ ಸುದ್ದಿಗೋಷ್ಠಿ ನಡೆಸುತ್ತೇನೆ. ಇದರ ಬಗ್ಗೆ ಸಂಬಂಧಿಸಿದವರನ್ನೇ ಕೇಳಬೇಕು ಎಂದು ಹೇಳಿದ್ದಾರೆ. ವಿಜಯಾನಂದ ಕಾಶಪ್ಪನವರ್ ಹೆಸರು ಪ್ರಸ್ತಾಪಿಸದೆ ಪ್ರತಿಕ್ರಿಯೆ ನೀಡಿ, ಮಾಧ್ಯಮದಲ್ಲಿ ಮಗುವಿನ ಬರ್ತ್ ಸರ್ಟಿಫಿಕೇಟ್ ತೋರಿಸಲಾಗಿದೆ. ಮಾಧ್ಯಮದಲ್ಲಿ …
Read More »ನಿನ್ನೆಯಷ್ಟೇ ಜನ್ಮದಿನ, ಇಂದು ಸಾವು!; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ.
ಬೆಳಗಾವಿ: ಸಮೀಪದ ಹತ್ತರಗಿ ಬಳಿ ಭಾನುವಾರ ರಾತ್ರಿ ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಯಮಕನಮರಡಿ ನಿವಾಸಿ ವಿನಾಯಕ ಸೋಮಶೇಖರ ಹೋರಕೇರಿ (28) ಕೊಲೆಯಾದ ಯುವಕ. ಈತ ಬೈಕ್ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿದರು. ತೀವ್ರ ರಕ್ತಸ್ರಾವದಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆರೋಪಿಗಳು ಪರಾರಿಯಾಗಿದ್ದಾರೆ. ಈ ಯುವಕನ ಶನಿವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಆದರೆ ಇಂದು ದುಷ್ಕರ್ಮಿಗಳ ಮಾರಕಾಸ್ತ್ರಗಳಿಗೆ ಬಲಿಯಾಗಿ …
Read More »ಪಂಚಮಸಾಲಿ 2A ಮೀಸಲಾತಿ ಹೋರಾಟಕ್ಕೆ ಸಚಿವ ಉಮೇಶ್ ಕತ್ತಿ ಬೆಂಬಲ
ಚಿಕ್ಕೋಡಿ: ಪಂಚಮಸಾಲಿ 2A ಮೀಸಲಾತಿ ಹೋರಾಟಕ್ಕೆ ಸಚಿವ ಉಮೇಶ್ ಕತ್ತಿ ಬೆಂಬಲ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರ್ಜುನವಾಡ ಗ್ರಾಮದಲ್ಲಿ ನಡೆದ ಪಂಚಮಸಾಲಿ ಹೋರಾಟದ ಪಾದಯಾತ್ರೆಯಲ್ಲಿ ಭಾಗವಹಿಸಿದ ಸಚಿವರು ಪಂಚಮಸಾಲಿ ಹೋರಾಟಕ್ಕೆ ನನ್ನ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ ಉಮೇಶ್ ಕತ್ತಿ ಬಣಜಿಗ ಸಮುದಾಯಕ್ಕೆ ಸೇರಿದವರಾದರೂ ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ಹೋರಾಟವನ್ನುದ್ದೇಶಿಸಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡಿಸುವ …
Read More »ಸರ್ಕಾರಿ ಇಲಾಖೆಯಲ್ಲಿ ಲಂಚ ಇಲ್ಲದೇ ಕೆಲಸ ನಡೆಯಲ್ಲ; ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ – ಸಿದ್ದು ಆರೋಪ
ಹಾಸನ: ಇಂದು ಯಾವುದೇ ಸರ್ಕಾರಿ ಇಲಾಖೆಯ ಕಚೇರಿಗಳಿಗೆ ಹೋದರೂ ಲಂಚವಿಲ್ಲದೇ ಕೆಲಸ ನಡೆಯೋದಿಲ್ಲ. ಹೀಗಿದ್ದೂ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಅರಸೀಕೆರೆ ತಾಲ್ಲೂಕಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ. ಕೆಂಪಣ್ಣ ಅವರು ಪತ್ರ ಬರೆದು ಒಂದು ವರ್ಷ ಆಯ್ತು. ಇವತ್ತಿನವರೆಗೂ ಪ್ರಧಾನಿ ಕ್ರಮ ತೆಗೆದುಕೊಂಡಿಲ್ಲ. ಈ ಹಿಂದೆಯೂ ನಾ ಕಾವೂಂಗ್, ನಾ ಕಾನೇದೊಂಗಾ ಅಂತ ಪ್ರಧಾನಮಂತ್ರಿ ಹೇಳಿದ್ರು. …
Read More »ಸಂಕೇಶ್ವರ ಹೊರ ವಲಯದ ಹೈವೇ ಬಳಿ ಬಾವಿಯಲ್ಲಿ ಶವ ಪತ್ತೆ
ಸಂಕೇಶ್ವರ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬೈ ಪಾಸ್ ರಸ್ತೆಯ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ರವಿವಾರ ಬೆಳಿಗ್ಗೆ ವರದಿಯಾಗಿದೆ. ಸಂಕೇಶ್ವರ ನಗರದ ಹೊರ ವಲಯದಲ್ಲಿ ಹಾಯ್ದು ಹೋಗಿರುವ ಪುನಾ ಬೆಂಗಳೂರು ರಾಷ್ಟ್ರೀಯ ಬೈಪಾಸ್ ರಸ್ತೆಯಲ್ಲಿ ಇರುವ ಡಾ. ಸಚೀನ ಪಾಟೀಲ ಅವರ ಜಮೀನಿನಲ್ಲಿರುವ ಬಾವಿಯಲ್ಲಿ ವ್ಯಕ್ತಿಯೊರ್ವರ ಮೃತದೇಹವು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಈ ವ್ಯಕ್ತಿಯು ಮೂಲತಃ ನಿಪ್ಪಾಣಿ ಪಟ್ಟಣದವನು ಎಂದು ತಿಳಿದು ಬಂದಿದೆ. …
Read More »ಮಹಿಳೆಯ ಜೊತೆ ದುರ್ನಡತೆ: ಶಾಸಕ ಲಿಂಬಾವಳಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಯ ವಿರುದ್ಧ ಬಳಸಿರುವ ಪದ ಹಾಗೂ ಅವರ ದುರ್ನಡತೆ ಬಿಜೆಪಿಯ ಹೀನಾಯ ಸಂಸ್ಕೃತಿಯನ್ನು ಎತ್ತಿ ತೋರುತ್ತದೆ. ಮಹಿಳೆಯ ಮೇಲೆ ದೌರ್ಜನ್ಯ ಹಾಗೂ ಅತ್ಯಂತ ಕೆಟ್ಟ ಪದ ಬಳಸಿರುವ ಅರವಿಂದ್ ಲಿಂಬಾವಳಿ ಕೂಡಲೇ ಮಹಿಳೆಯ ಬಳಿ ಕ್ಷಮೆ ಕೇಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಭಾನುವಾರ ಕಾಂಗ್ರೆಸ್ ಕಚೇರಿಯಲ್ಲಿ ನಗರ ಪ್ರಚಾರ ಸಮಿತಿಯಿಂದ ಪ್ರತಿಭಟನೆ ನಡೆಸಿ ಹಾಗೂ ಪ್ರತಿಕೃತಿ ದಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ …
Read More »ಸಿಇಟಿ ಗೊಂದಲಕ್ಕೆ ತೆರೆ; ಪುನರಾವರ್ತಿತ ವಿದ್ಯಾರ್ಥಿಗಳಿಗೆ ಹೈಕೋರ್ಟ್ ಸಿಹಿ
ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ಗೊಂದಲಕ್ಕೆ ತೆರೆ ಎಳೆದಿರುವ ಹೈಕೋರ್ಟ್, 2022ನೇ ಸಾಲಿನ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ದಿಂದ ಅವಕಾಶ ವಂಚಿತರಾಗುವ ಆತಂಕದಲ್ಲಿದ್ದ 2020-21ನೇ ಸಾಲಿನ ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳ ಪರ ತೀರ್ಪು ನೀಡಿದೆ. 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ವೃತ್ತಿಪರ ಕೋರ್ಸ್‌ಗಳ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಲಾಗದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2022 ಜು. 30ರಂದು ಹೊರ ಡಿಸಿದ್ದ ಟಿಪ್ಪಣಿಯನ್ನು ಹೈಕೋರ್ಟ್ ರದ್ದು …
Read More »ಪುರುಷತ್ವ ಪರೀಕ್ಷೆಯಿಂದ ಸಂಕಷ್ಟಕ್ಕೆ ಸಿಲುಕಿದ್ರಾ ಮುರುಘಾ ಸ್ವಾಮೀಜಿ.? ಬಯಲಾಗುತ್ತಾ ಅಸಲಿ ಸತ್ಯ.?
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದ್ದು, ಸೋಮವಾರ ನ್ಯಾಯಾಲಯದ ಮುಂದೆ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಸ್ವಾಮೀಜಿಯನ್ನು ಬಂಧಿಸಿದ ಕೂಡಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಂದರ್ಭದಲ್ಲಿ ಸಾಮಾನ್ಯ ಪರೀಕ್ಷೆಗಳನ್ನು ಮಾಡಲಾಗಿತ್ತು. ಶುಕ್ರವಾರ ಪುರುಷತ್ವ ಪರೀಕ್ಷೆ ನಡೆಸಬೇಕಿತ್ತು. ಕಾರಣಾಂತರದಿಂದ ಸಾಧ್ಯವಾಗಿರಲಿಲ್ಲ. ಶನಿವಾರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಸ್ವಾಮೀಜಿ ಪುರುಷತ್ವ ಪರೀಕ್ಷೆ ಮಾಡಲಾಗಿದ್ದು, ಉಳಿದಂತೆ ವಿಚಾರಣೆ ಮುಂದುವರೆದಿದೆ. …
Read More »ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಿಸಲು ಆಗ್ರಹ
ರಾಯಚೂರು: ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಬೇಕು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಖೀಲ ಭಾರತ ನಿರುದ್ಯೋಗ ಯುವಜನರ ಹೋರಾಟ ಸಮಿತಿ ಸದಸ್ಯರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಒಂದೆಡೆ ಪದವೀಧರರು ಡಿಗ್ರಿಗಳನ್ನು ಪಡೆದು ಸಣ್ಣ ಪುಟ್ಟ ಕೆಲಸ ಮಾಡುವ ಪರಿಸ್ಥಿತಿ ಇದೆ. ಅಲ್ಲದೇ, ಕೋವಿಡ್ -19 ಪರಿಸ್ಥಿತಿಯಲ್ಲಿ, ಉದ್ಯೋಗ ಕಳೆದುಕೊಂಡು ಯುವಕರು ಕಂಗಾಲಾಗಿದ್ದಾರೆ. ಆದರೆ, ಸರ್ಕಾರಿ …
Read More »ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ : ಲೈಂಗಿಕ ದೌರ್ಜನ್ಯ ಮೆಡಿಕಲ್ ಟೆಸ್ಟ್ ರಿಪೋರ್ಟ್ ಬಹಿರಂಗ
ಚಿತ್ರದುರ್ಗ : ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ ಎದುರಾಗಿದ್ದು, ಲೈಂಗಿಕ ದೌರ್ಜನ್ಯ ಮೆಡಿಕಲ್ ಟೆಸ್ಟ್ ರಿಪೋರ್ಟ್ ಬಹಿರಂಗವಾಗಿದೆ. ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಿನ್ನೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಪೊಲೀಸರು ಜಿಲ್ಲಾಸ್ಪತ್ರೆಯಲ್ಲಿ ಶ್ರೀಗಳನ್ನು ವೈದ್ಯಕೀಯ ಟೆಸ್ಟ್ …
Read More »
Laxmi News 24×7