ಬೆಂಗಳೂರು: ರಾಜ್ಯ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ( Education Department ) ಪ್ರಕಟಿಸಿದೆ. ಈ ಬಾರಿ 20 ಪ್ರಾಥಮಿಕ ಹಾಗೂ 11 ಪ್ರೌಢ ಶಾಲಾ ಶಿಕ್ಷಕರನ್ನು ( Primary and High School Teacher ) ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಅಲ್ಲದೇ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದಂತ ಇಬ್ಬರು ಪ್ರಾಂಶುಪಾಲರು ಮತ್ತು 8 ಉಪನ್ಯಾಸಕರಿಗೆ …
Read More »ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ
ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ ಮಾಡಿದ್ದಾರೆ. ಆರೋಪಿಗಳು ಪರಾರಿಯಾಗಿರುವ ಘಟನೆ ಜೋಯ್ಡಾ ತಾಲೂಕಿನ ಉಸೋಡ ಬಳಿ ನಡೆದಿದೆ. ಹೌದು GA 07 C 9384 ನಂಬರಿನ ಸಫಾರಿ ವಾಹನದಲ್ಲಿ ಅಕ್ರಮವಾಗಿ ಸಾಗವಾನಿ ಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. …
Read More »ಈ ಊರಿನ ಜನರೆಲ್ಲ ಯೂಟ್ಯೂಬರ್ಸ್; ಎಲ್ರದ್ದೂ ಒಂದೊಂದು ಚಾನಲ್! ಸರ್ಕಾರಿ ಕೆಲಸವೂ ಬೇಡ್ವಂತೆ
ಯೂಟ್ಯೂಬ್ ಚಾನಲ್ ನಡೆಸ್ತಿರೋರನ್ನು ನೀವು ನೋಡಿರಬಹುದು. ನಿಮ್ಮದೂ ಒಂದು ಯೂಟ್ಯೂಬ್ ಚಾನಲ್ ಇರಬಹುದು! ಚೆನ್ನಾಗಿ ಸ್ಮಾರ್ಟ್ ಆಗಿ ಕೆಲಸ ಮಾಡಿ ನಿಮ್ಮ ಚಾನಲ್ ಸಹ ಕ್ಲಿಕ್ ಆದರೆ ಚೆನ್ನಾಗಿಯೇ ಹಣ ಬರುತ್ತೆ ನಿಜ. ಆದರೆ ಯೂಟ್ಯೂಬ್ ಚಾನಲ್ಗೆಂದೇ ಸರ್ಕಾರಿ ಕೆಲಸವನ್ನೂ (Government Job) ಬಿಡೋರನ್ನು ನೋಡಿದ್ದೀರಾ? ಇಲ್ಲೊಂದು ಊರಿಗೆ ಊರೇ ಯೂಟ್ಯೂಬ್ ವಿಡಿಯೋಸ್ (YouTube Channel) ಮಾಡ್ತಾ ಅದ್ರಲ್ಲಿ ಬರೋ ಹಣದಿಂದಲೇ ಜೀವನ ಮಾಡ್ತಿದೆ! ಇದು ನಂಬಲಿಕ್ಕೆ ಅಸಾಧ್ಯ ಅನಿಸುವಂಥಾ …
Read More »ಮಂಗಳೂರಿನಲ್ಲಿ 3800 ಕೋಟಿ ರೂ. ವಿವಿಧ ಯೋಜನೆಗಳಿಗೆ ಪಿಎಂ ಮೋದಿ ಚಾಲನೆ
ಆಯುμÁ್ಮನ್ ಭಾರತ್ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದೆ. ಸುಮಾರು 4 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ದೊರೆತಿದೆ, ಕರ್ನಾಟಕದಲ್ಲೂ 30 ಲಕ್ಷಕ್ಕೂ ಹೆಚ್ಚು ಬಡವರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ನಂತರ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿಗೆ ಮೈಸೂರು ಪೇಟ ತೊಡಿಸಿ, …
Read More »ಪ್ಲ್ಯಾಸ್ಟಿಕ್ ಚೀಲದಲ್ಲಿ ನವಜಾತ ಶಿಶು ಮರಕ್ಕೆ ನೇತು ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಳಗಾವಿ: ಕಳೆದ ಒಂದು ವಾರದ ಹಿಂದೆ ಪ್ಲಾಸ್ಟಿಕ್ ಕವರ್ನಲ್ಲಿ ಸಿಕ್ಕಿದ್ದ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೋಕ್ಸೋ ಪ್ರಕರಣದಡಿ ಒಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನೆರಸಾ – ಗೌಳಿವಾಡ ಗ್ರಾಮದ ಮಲ್ಲು ಪಿಂಗಳೆ (19) ಬಂಧಿತ ಆರೋಪಿಯಾಗಿದ್ದಾನೆ. ಪ್ರಕರಣದ ಹಿನ್ನೆಲೆ ನೋಡುವುದಾದರೆ, ಕಳೆದ ಆರು ದಿನಗಳ ಹಿಂದೆ (ಆ.25ರಂದು) ಪ್ಲ್ಯಾಸ್ಟಿಕ್ ಚೀಲದಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಲಾಗಿತ್ತು. …
Read More »ಜಾರಕಿಹೊಳಿ ಬ್ರದರ್ಸ ಬಿಟ್ಟು ಯಮಕನಮರಡಿಯಲ್ಲಿ ಕಾರ್ಯಕ್ರಮ ಮಾಡಿದ್ದು ತಪ್ಪು: ಸಂಜಯ್ ಪಾಟೀಲ್
ನಿಗಮ ಮಂಡಳಿ ಅಧ್ಯಕ್ಷರಾದ ಹಿನ್ನೆಲೆ ಮಾರುತಿ ಅಷ್ಟಗಿ ಅವರಿಗೆ ಯಮಕನಮರಡಿಯಲ್ಲಿ ಅವರ ಕಾರ್ಯಕರ್ತರು ಅಭಿನಂದನಾ ಸಮಾರಂಭ ಮಾಡಿದ್ದರು. ಅದಕ್ಕೆ ನಾವು ಪಕ್ಷದ ಶಿಷ್ಟಾಚಾರ ಹಾಕಲು ಬರುವುದಿಲ್ಲ. ಆದರೆ ಜಾರಕಿಹೊಳಿ ಬ್ರದರ್ಸ ಬಿಟ್ಟು ಕಾರ್ಯಕ್ರಮ ಮಾಡಿದ್ದು ತಪ್ಪು ಎನ್ನುವ ಮೂಲಕ ತಮ್ಮದೇ ಪಕ್ಷದ ಮುಖಂಡರ ವಿರುದ್ಧ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಎಂ.ಕೆ.ಹುಬ್ಬಳ್ಳಿಯಲ್ಲಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ …
Read More »ಮುರಘಾ ಶ್ರೀ ಬಂಧನ ಕಾಯ್ದೆ ಪ್ರಕಾರ ಸರ್ಕಾರ ಏನು ಕ್ರಮ ತಗೆದುಕೊಳ್ಳಬೇಕೋ ತಗೆದುಕೊಳ್ಳುತ್ತಿದ್ದಾರೆ: ಪ್ರಭಾಕರ್ ಕೋರೆ
ಮುರಘಾ ಶ್ರೀಗಳ ಬಂಧನ ಈಗ ಸರಕಾರದ ಮುಂದಿದೆ. ಸರಕಾರ ಕಾಯ್ದೆ ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ತೆಗೆದುಕೊಳ್ಳುತ್ತೆ. ತಪ್ಪು ಮಾಡಿದವರ ಮೇಲೆ ಕ್ರಮ ಆಗೇ ಆಗುತ್ತೆ ಎಂದು ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ಹೇಳಿದ್ದಾರೆ. ಪೆÇೀಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳ ಬಂಧನ ವಿಚಾರ ಕುರಿತಂತೆ ಎಂಕೆ ಹುಬ್ಬಳ್ಳಿ ಪಟ್ಟಣದಲ್ಲಿ ಮೊದಲು ಪ್ರತಿಕ್ರಿಯಿಸಲು ಕೆಎಲ್‍ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ ನಿರಾಕರಿಸಿದ್ದರು. ಮಹಾಂತೇಶ ಕವಟಗಿಮಠ ಪ್ರತಿಕ್ರಿಯಿಸುತ್ತಾರೆ ಎಂದು ಕವಟಗಿಮಠರತ್ತ ಬೊಟ್ಟು …
Read More »ಮಂಗಳೂರಿನಲ್ಲಿಂದು ‘ನಮೋ’ ಹವಾ: ಪ್ರಧಾನಿ ಮೋದಿಯವರ ಕಾರ್ಯಕ್ರಮದ ಸಂಪೂರ್ಣ ವಿವರ ಹೀಗಿದೆ.
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರು ಭೇಟಿ ನೀಡಲಿದ್ದಾರೆ. ಕೊಚ್ಚಿನ್ನಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮಧ್ಯಾಹ್ನ 12.55ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.20ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಪಣಂಬೂರುನಲ್ಲಿರುವ ಎನ್.ಎಂ.ಪಿ.ಎ ಹೆಲಿಪ್ಯಾಡ್ಗೆ ಬರಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ …
Read More »ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು 2022ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಸೆ.30ರ ವರೆಗೆ ಅರ್ಜಿ ಸಲ್ಲಿಸಬಹುದು. ಇಲಾಖೆಯ ವೆಬ್‌ಸೈಟ್ schooleducation.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರೀಕ್ಷಾ ದಿನಾಂಕದ ಬಗ್ಗೆ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ. ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ. ಆದರೆ, ಶಾಲಾ ಶಿಕ್ಷಣ ಮತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಅವರು ಇತ್ತೀಚೆಗೆ …
Read More »ಮುರುಘಾ ಶ್ರೀ ಬಂಧನ – ನಿರಂತರ ಹೋರಾಟಕ್ಕಿದು ಸಣ್ಣ ಜಯವಷ್ಟೇ : ಪರಶುರಾಂ
ಮೈಸೂರು : ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ಸಂಚಾಲಕರಾದ ಪರಶುರಾಂ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇಲ್ಲಿ ಇಬ್ಬರು ವಿದ್ಯಾರ್ಥಿನಿಯರಷ್ಟೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿಲ್ಲ, ಬದಲಾಗಿ ಆ ಮಠದ ವಸತಿ ನಿಲಯದಲ್ಲಿನ ಹಲವಾರು ವಿದ್ಯಾರ್ಥಿನಿಯರು ಈ ಕಿರುಕುಳಕ್ಕೆ ಒಳಗಾಗಿದ್ದಾರೆ ಅವರು ಸಾಕಷ್ಟು ನೊಂದಿದ್ದಾರೆ. ಪ್ರಕರಣವು ಮತ್ತಷ್ಟು ಸಮಗ್ರ ತನಿಖೆಗೆ ಒಳಪಡಬೇಕು. …
Read More »
Laxmi News 24×7