ವಿಧಾನ ಪರಿಷತ್ ಒಂದೇ ಕ್ಷೇತ್ರದಿಂದ ಸತತ ಎಂಟು ಬಾರಿ ಜಯಗಳಿಸುವ ಮೂಲಕ ಬಸವರಾಜ ಹೊರಟ್ಟಿ ಐತಿಹಾಸಿಕ ದಾಖಲೆ ಬರೆದಿದ್ದು, ಅವರ ಸಾಧನೆ ಲಂಡನ್ ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರ್ಪಡೆಯಾಗಿದೆ. ಸಾಮಾನ್ಯ ಶಿಕ್ಷಕರಾಗಿದ್ದ ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸದಸ್ಯರಾಗಿ, ಶಿಕ್ಷಣ ಸಚಿವರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 5 ದಶಕಗಳಿಂದ ಶೈಕ್ಷಣಿಕ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಬಸವರಾಜ …
Read More »‘ವರ್ಷಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅವನು ಮುರುಘಾ ಅಲ್ಲ ಮೃಗ’: ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಆಕ್ರೋಶ
ಚಿತ್ರದುರ್ಗ ಸೆಪ್ಟೆಂಬರ್ 1: ‘ಹಲವು ವರ್ಷಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅವನು ಮುರುಘಾ ಅಲ್ಲ ಮೃಗ’ ಎಂದು ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಆಕ್ರೋಶ ಹೊರಹಾಕಿದ್ದಾರೆ. ಫೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದ್ದು ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಅತ್ಯಾಚಾರದ ಆರೋಪದ ಮೇಲೆ ಒಟ್ಟು ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಇಬ್ಬರ ಬಂಧನವಾಗಿದೆ. ಮೊದಲನೇ ಆರೋಪಿ ಮಠದ …
Read More »ಡಾ. ಅಂಬೇಡ್ಕರ್ ರೂಪದ ಗಣೇಶ ಮೂರ್ತಿಗೆ ವಿರೋಧ
(ಕೊಪ್ಪಳ ಜಿಲ್ಲೆ): ಗಂಗಾವತಿಯ ಅಂಬೇಡ್ಕರ್ ನಗರದಲ್ಲಿ ವಿನಾಯಕ ಸ್ನೇಹವೃಂದ ಯುವಕ ಮಂಡಳಿ ಪ್ರತಿಷ್ಠಾಪಿಸಿರುವ ಡಾ. ಅಂಬೇಡ್ಕರ್ ರೂಪದ ಗಣೇಶ ಮೂರ್ತಿಗೆ ದಲಿತ ಒಕ್ಕೂಟಗಳು ವಿರೋಧ ವ್ಯಕ್ತಪಡಿಸಿವೆ. ಸಂಘಟಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗುರುವಾರ ಪೊಲೀಸ್ ಠಾಣೆ ಮೆಟ್ಟಿಲೇರಿವೆ. ‘ಅಂಬೇಡ್ಕರ್ ಅವರ ರೂಪ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದು ಸರಿಯಲ್ಲ. ಇದರಿಂದ ಅವರ ಘನತೆಗೆ ಧಕ್ಕೆ ಉಂಟಾಗಿದೆ. ಮೂರ್ತಿಯನ್ನು ಕೊನೆಯದಾಗಿ ನೀರಿಗೆ ವಿಸರ್ಜನೆ ಮಾಡಲಾಗುತ್ತದೆ. ಇದು ಸಂವಿಧಾನ ಶಿಲ್ಪಿಗೆ ಮಾಡಿದ …
Read More »ಹಣಕ್ಕಾಗಿ ಸರ್ಕಾರಿ ನೌಕರಳ ಅಪಹರಣ: ನಾಲ್ವರ ಬಂಧನ
ವಿಜಯಪುರ: ಹಣದ ಆಸೆಗಾಗಿ ಸರ್ಕಾರಿ ಉದ್ಯೋಗಿನಿಯನ್ನು ಅಪಹರಣ ಮಾಡಿ 5 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಜಿಲ್ಲೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಜುಮ್ಮನಗೋಳ, ಶಿವಾಜಿ ಉಪ್ಪಾರ, ಆಕಾಶ ವೀರಕರ, ಆದರ್ಶ ಕೊಟ್ಯಾಳ ಬಂಧಿತ ಆರೋಪಿಗಳು. ಇಂಡಿ ಪಟ್ಟಣದಲ್ಲಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುವ ವಿಜಯಪುರ ನಗರ ನಿವಾಸಿ ಲಕ್ಷ್ಮೀ ಜಗದೀಶ ಸೊನ್ನದ ಎಂಬ ನೌಕರಳು ಅಪಹರಣಕ್ಕೊಳಗಾದವರು. ಆ.22 ರಂದು ಕೆಲಸ ಮುಗಿಸಿ ವಿಜಯಪುರ ನಗರಕ್ಕೆ …
Read More »ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ
ಚಿತ್ರದುರ್ಗ: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ ರಾತ್ರಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ವಿವರ: ಗುರುವಾರ ತಡರಾತ್ರಿ ಪೊಲೀಸರು ಶ್ರೀಗಳನ್ನು ಬಂಧಿಸಿದ್ದು, ಕಾನೂನು ಪ್ರಕಾರ ವೈದ್ಯಕೀಯ ಪರೀಕ್ಷೆ ನಡೆಸಿದರು. ಇದಾದ ಬಳಿಕ ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ಶ್ರೀಗಳನ್ನು ಹದಿನಾಲ್ಕು ದಿನಗಳ ಕಾಲ …
Read More »ಗಣಪನಿಗೂ ಬಂತು ಆಧಾರ್ ಕಾರ್ಡ್!: ಇದರಲ್ಲಿದೆ ವಿನಾಯಕನ ಜನ್ಮ ದಿನಾಂಕ, ವಿಳಾಸ!
ಜಾರ್ಖಂಡ್: ವಿಘ್ನ ನಿವಾರಕನ ಮೂರ್ತಿಯನ್ನು ಒಂದೊಂದು ಪ್ರದೇಶದಲ್ಲಿ ವಿಭಿನ್ನ ವಿನ್ಯಾಸದೊಂದಿಗೆ ರಚಿಸಿ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ಜಾರ್ಖಂಡ್‌ನ ಜೆಮ್‌ಶೇಡ್‌ಪುರದಲ್ಲಿ ಜನರು ಗಣೇಶನಿಗೆ ದೊಡ್ಡ ಗಾತ್ರದ ಆಧಾರ್ ಕಾರ್ಡ್ ಅನ್ನು ಸಿದ್ದಪಡಿಸಿ ಗಮನ ಸೆಳೆದಿದ್ದಾರೆ. ಈ ಆಧಾರ್ ಕಾರ್ಡ್‌ನಲ್ಲಿರುವ ಬಾರ್‌ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ ಗಣೇಶನ ಚಿತ್ರಗಳ ಗೂಗಲ್ ಲಿಂಕ್ ಪರದೆಯ ಮೇಲೆ ತೆರೆಯುತ್ತದೆ. ಅದರಲ್ಲಿ ನಮೂದಿಸಲಾದ ವಿಳಾಸವು ಶ್ರೀ ಗಣೇಶ್ S/o ಮಹಾದೇವ್, ಕೈಲಾಶ್ ಪರ್ವತದ ತುದಿ, ಮಾನಸರೋವರ, ಕೈಲಾಸ …
Read More »ಹಣಕ್ಕಾಗಿ ಸರ್ಕಾರಿ ನೌಕರಳ ಅಪಹರಣ: ನಾಲ್ವರ ಬಂಧನ
ವಿಜಯಪುರ: ಹಣದ ಆಸೆಗಾಗಿ ಸರ್ಕಾರಿ ಉದ್ಯೋಗಿನಿಯನ್ನು ಅಪಹರಣ ಮಾಡಿ 5 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಜಿಲ್ಲೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಜುಮ್ಮನಗೋಳ, ಶಿವಾಜಿ ಉಪ್ಪಾರ, ಆಕಾಶ ವೀರಕರ, ಆದರ್ಶ ಕೊಟ್ಯಾಳ ಬಂಧಿತ ಆರೋಪಿಗಳು. ಇಂಡಿ ಪಟ್ಟಣದಲ್ಲಿ ಸರ್ಕಾರಿ ಇಲಾಖೆಯಲ್ಲಿ ಕೆಲಸ ಮಾಡುವ ವಿಜಯಪುರ ನಗರ ನಿವಾಸಿ ಲಕ್ಷ್ಮೀ ಜಗದೀಶ ಸೊನ್ನದ ಎಂಬ ನೌಕರಳು ಅಪಹರಣಕ್ಕೊಳಗಾದವರು. ಆ.22 ರಂದು ಕೆಲಸ ಮುಗಿಸಿ ವಿಜಯಪುರ ನಗರಕ್ಕೆ …
Read More »ಪೊಲೀಸ್ ಪೇದೆ ಹುದ್ದೆಗೆ ಜೆಒಸಿ, ಐಟಿಐನವರೂ ಅರ್ಜಿ ಸಲ್ಲಿಸಬಹುದು!
ಮೈಸೂರು: ನಿರುದ್ಯೋಗಿ ಯುವಜನರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇಷ್ಟು ದಿನ ಪೊಲೀಸ್ ಪೇದೆ ನೇಮಕಾತಿಗೆ ಕೇವಲ ಪಿಯುಸಿ ಪಾಸಾದವರು ಮಾತ್ರ ಅರ್ಜಿ ಸಲ್ಲಿಸಬಹುದಿತ್ತು. ಈಗ ಸರ್ಕಾರ ನಿಯಮಕ್ಕೆ ತಿದ್ದುಪಡಿ ತಂದಿದ್ದು, ಇನ್ನು ಮುಂದೆ ಡಿಪ್ಲೊಮಾ, ಜೆಒಸಿ ಮತ್ತು ಐಟಿಐ ಪಾಸಾದವರೂ ಅರ್ಜಿ ಸಲ್ಲಿಸಬಹುದಾಗಿದೆ. ಈ ಅಭ್ಯರ್ಥಿಗಳು ಕಡ್ಡಾಯವಾಗಿ ಒಂದು ಭಾಷೆ ಅಥವಾ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು ಎಂದು ಡಿಜಿಪಿ ಕಮಲ್ ಪಂತ್ ಆದೇಶಿಸಿದ್ದಾರೆ
Read More »ಮುರುಘಾ ಶ್ರೀ’ಗಳಿಗೆ ಪೊಲೀಸರಿಂದ ‘ಲುಕ್ ಔಟ್ ನೋಟಿಸ್’ ಜಾರಿ |
ಚಿತ್ರದುರ್ಗ: ಬಾಲಕಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ( POSCO ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇದೀಗ ಪೊಲೀಸರು ಮುರುಘಾಶ್ರೀಗಳಿಗೆ ಲುಕ್ ಔಟ್ ನೋಟಿಸ್ ( Lookout Notice ) ಜಾರಿಗೊಳಿಸಿದ್ದಾರೆ. ಈ ಸಂಬಂಧ ಮುರುಘಾ ಶ್ರೀಗಳಿಗೆ ಪೋಕ್ಸೋ ಕಾಯ್ದೆಯಡಿ ದಾಖಲಾದಂತ ಪ್ರಕರಣ ಸಂಬಂಧ ಡಿವೈಎಸ್ಪಿ ಅನಿಲ್ ಅವರು, ಲುಕ್ ಔಟ್ ನೋಟಿಸ್ ಅನ್ನು …
Read More »ಮುರುಘಾ ಶ್ರೀ ವಿರುದ್ಧದ ಕೇಸ್ ಸಿಬಿಐಗೆ ವಹಿಸಿ: ಬೆಳಗಾವಿಯಲ್ಲಿ ರಾಜ್ಯ ಉಪ್ಪಾರ ಮಹಾಸಭಾ ಆಗ್ರಹ
ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಕೇಸ್‍ನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರು ಹಾಗೂ ಇನ್ನಿತರರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಅಲ್ಲದೇ ಇಬ್ಬರು ಅಪ್ರಾಪ್ತ ಬಾಲಕಿಯರಲ್ಲಿ …
Read More »
Laxmi News 24×7