Breaking News

ರಾಜಕೀಯ

ಸಾವರ್ಕರ್ ಮೆರವಣಿಗೆ ಮಾಡಿದರೆ ನಾವು ಕಿತ್ತೂರು ಚೆನ್ನಮ್ಮ ಯಾತ್ರೆ ಮಾಡ್ತೇವೆ :ಎಂ.ಬಿ.ಪಾಟೀಲ

ವಿಜಯಪುರ : ಬಿಜೆಪಿ ನಾಯಕರು ವಿವಾದಿತ ಸಾವರ್ಕರ್ ಮೆರವಣಿಗೆ, ಗಣೇಶ ಉತ್ಸವದಲ್ಲಿ ಭಾವಚಿತ್ರ ವಿತರಿಸಿದರೆ, ನಾವು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕನ್ನಡ ನಾಡಿನ ಪ್ರಾಮಾಣಿಕ ಹೋರಾಟಗಾರರಾದ ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಸುರಪುರದ ವೆಂಕಟಪ್ಪ ನಾಯಕರಂತ ದೇಶಪ್ರೇಮಿ ವೀರ ಹೋರಾಟಗಾರರ ರಥಯಾತ್ರೆ ನಡೆಸುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ತಿರುಗೇಟು ನೀಡಲು ಮುಂದಾಗಿದ್ದಾರೆ.   ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಅವರು ವಿವಾದಿತ ಸಾವರ್ಕರ್ ಯಾತ್ರೆಗೆ …

Read More »

ತಾಯಿಯೊಬ್ಬಳು ಪ್ಲಾಸ್ಟಿಕ್‌ ಕವರ್​ನಲ್ಲಿ ಗಂಡು ಮಗುವನ್ನಿಟ್ಟು ಮರಕ್ಕೆ ನೇತು ಹಾಕಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಕಂಡು ಬಂದಿದೆ.

ಬೆಳಗಾವಿ: ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ‌ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್​ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ …

Read More »

ಗೋಕಾಕ್ ತಾಲೂಕಾ ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆ

ಗೋಕಾಕ್ ತಾಲೂಕಾ ಮಟ್ಟದ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೌದು ಗೋಕಾಕ್‍ನಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಖೋಖೋ ಸ್ಪರ್ಧೆಯಲ್ಲಿ ಮದವಾಲ್ ಪ್ರೌಢಶಾಲೆ ವಿದ್ಯಾರ್ಥಿಗಳು ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅದೇ ರೀತಿ ಗ್ರಾಮದ ಎಲ್ಲಾ ದೇವಾಲಯಗಳಿಗೆ ಹೋಗಿ ನಮಸ್ಕರಿಸಿ, ನಂತರ ಸಮವಸ್ತ್ರಳನ್ನು ನೀಡಿದ ಅನ್ನಪೂರ್ಣಾ ಅನಿಲ ನಿರ್ವಾಣಿ ಅವರ ಮನೆಗೆ ಯುವಕರು ತೆರಳಿ ಅವರ ಆಶೀರ್ವಾದ ಪಡೆದುಕೊಂಡರು.

Read More »

ಬೆಳಗಾವಿಯ 12 ಪೌರಕಾರ್ಮಿಕರಿಗೆ ಮನೆ ವಿತರಿಸಿದ್ದೇವೆ: ಎಂ.ಶಿವಣ್ಣ ಕೋಟೆ

ಖಾಯಂ ಪೌರಕಾರ್ಮಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ಸಿಗುತ್ತಿವೆ. ಆದರೆ ನೇರಪಾವತಿ ಅವರಿಗೆ ಜಾಗ, ಮನೆಗಳು ಸಿಗುತ್ತಿಲ್ಲ. ಹೀಗಾಗಿ ಅವರಿಗೂ ಎಲ್ಲೆಲ್ಲಿ ಅವಕಾಶ ಇದೆ, ಅಲ್ಲಿ ಸೌಲಭ್ಯಗಳನ್ನು ನೀಡುವ ಕೆಲಸ ಮಾಡಲಾಗುವುದು ಎಂದು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ನಿನ್ನೆ ಮಧ್ಯಾಹ್ನ 4 ಗಂಟೆ ಸುಮಾರಿಗೆ ಸುವರ್ಣವಿಧಾನಸೌಧಲ್ಲಿ ಬೆಳಗಾವಿ ಜಿಲ್ಲೆಯಲ್ಲಿ …

Read More »

ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಬೆಳಗಾವಿ ಬಾರ್ ಆಸೋಸಿಯೇಷನ್ ಒತ್ತಾಯ

ರಾಜ್ಯದ ಎರಡನೇ ರಾಜಧಾನಿ ಎಂದು ಕರೆಯಿಸಿಕೊಳ್ಳುವ ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಬೆಳಗಾವಿ ಬಾರ್ ಆಸೋಸಿಯೇಷನ್ ಒತ್ತಾಯಿಸಿದೆ. ಗುರುವಾರದಂದು ಬೆಳಗಾವಿ ಬಾರ್ ಆಸೋಸಿಯೇಷನ್‍ನ ಅಧ್ಯಕ್ಷ ಪ್ರಭು ಯತ್ನಟ್ಟಿ ಅವರ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಬಾರ್ ಅಸೋಸಿಯೇಷನ್‍ನ ಸದಸ್ಯರು ಪ್ರತಿಭಟನೆಯನ್ನು ನಡೆಸಿದರು. ಬೆಳಗಾವಿಯಲ್ಲಿಯೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಮೂಲಕ ಮನವಿವನ್ನು ಸಲ್ಲಿಸಿದರು.ಬೆಳಗಾವಿ ಬಾರ್ ಆಸೋಸಿಯೇಷನ್‍ನ ಅಧ್ಯಕ್ಷ ಪ್ರಭು …

Read More »

ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಬೆಂಗಳೂರು : ಬಿಪಿಎಲ್ ಕಾರ್ಡ್ ಗೆ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಉಮೇಶ್ ಕತ್ತಿ ಸಿಹಿಸುದ್ದಿ ನೀಡಿದದು, ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.   ವಿಧಾನಸೌಧದಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಚಿವ ಉಮೇಶ್ ಕತ್ತಿ, ಬಿಪಿಎಲ್ ಕಾರ್ಡ್ ಗೆ 1.5 ಲಕ್ಷ ಹೊಸ ಅರ್ಜಿ ಸ್ವೀಕರಿಸಲಾಗಿದೆ. ಹೊಸ ಕಾರ್ಡುದಾರರಿಗೆ ಪಡಿತರ ವಿತರಿಸಿದಲ್ಲಿ ಸರ್ಕಾರಕ್ಕೆ ಆಗುವ ಹೆಚ್ಚುವರಿ ಹೊರೆ ಬಗ್ಗೆ ಚರ್ಚೆಯಾಗಿದೆ. ಹೊಸ …

Read More »

ಕೆಪಿಎಟಿಸಿಎಲ್‌ ಪರೀಕ್ಷೆ ಅಕ್ರಮ: ಮತ್ತೆ ಮೂವರ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ದರ್ಜೆ ಸಹಾಯಕ ಹುದ್ದೆ ಲಿಖೀತ ಪರೀಕ್ಷೆ ವೇಳೆ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿ ಸಲಾಗಿದ್ದು, ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಹುಕ್ಕೇರಿಯ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿರುವ ಕಮತನೂರ ಗ್ರಾಮದ ಆದೇಶ ಈರಪ್ಪ ನಾಗನೂರಿ (26), ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಮಡಿವಾಳಪ್ಪ ಬಾಳಪ್ಪ ತೋರನಗಟ್ಟಿ (36) ಹಾಗೂ ಹೊಸಕೋಟಿ ಗ್ರಾಮದ ಶಂಕರ ಕಲ್ಲಪ್ಪ ಉಣಕಲ್‌ (30) ಎನ್ನುವವರನ್ನು ಬಂ ಧಿಸಲಾಗಿದೆ.   ಬಂಧಿತರಿಂದ ಒಂದು …

Read More »

ನಾಲಿಗೆ ಕಟ್ ಮಾಡುತ್ತೇನೆ ಹುಷಾರ್ ಎಂಬುದಾಗಿ ಈಶ್ವರಪ್ಪಗೆ  ಬೆದರಿಕೆ ಪತ್ರ

ಶಿವಮೊಗ್ಗ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ   ಇಂದು ಬೆದರಿಕೆ ಪತ್ರವೊಂದುಬಂದಿದೆ. ಆ ಪತ್ರದಲ್ಲಿ ನಾಲಿಗೆ ಕಟ್ ಮಾಡುತ್ತೇನೆ ಹುಷಾರ್ ಎಂಬುದಾಗಿ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಅವರು ಪೊಲೀಸರಿಗೆ ಸೂಕ್ತ ತನಿಖೆ ನಡೆಸಿ, ಬೆದರಿಕೆ ಹಾಕಿದ ಆರೋಪಿಯನ್ನು ಬಂಧಿಸುವಂತೆ ದೂರು ನೀಡಿದ್ದಾರೆ.   ಶಾಸಕ ಕೆ.ಎಸ್ ಈಶ್ವರಪ್ಪ ಅವರ ಶಿವಮೊಗ್ಗ ನಗರದಲ್ಲಿನ ಮಲ್ಲೇಶ್ವರದ ನಿವಾಸಕ್ಕೆ ಅನಾಮದೇಯ ಬೆದರಿಕೆ ಪತ್ರವೊಂದು ಬಂದಿದೆ. ಆ ಪತ್ರದಲ್ಲಿ ಸ್ವತಂತ್ರ್ಯ ಸೇನಾನಿಯಾದ ನಮ್ಮ ಸಮಾಜದ …

Read More »

ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ಅಂಕಿತ

ನವದೆಹಲಿ: ಕರ್ನಾಟಕದ ಅಪರಾಧ ವಿಧೇಯಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಅಪರಾಧ ಪ್ರಕರಣಗಳಲ್ಲಿ ಆರೋಪಿ ತಪ್ಪಿಸಿಕೊಂಡಿದ್ದರೂ, ವಿದ್ಯುನ್ಮಾನ ಸಾಧನಗಳನ್ನು ಬಳಸಿ, ಸಾಕ್ಷಿಗಳ ಹೇಳಿಕೆಗಳನ್ನು ಆಡಿಯೋ ಮತ್ತು ವಿಡಿಯೋ ಮಾರ್ಗವಾಗಿಯೂ ಪಡೆದುಕೊಳ್ಳಬಹುದು.   ಈ ವೇಳೆ ಆರೋಪಿ ಪರ ವಕೀಲರು ಹಾಜರಿದ್ದರೆ ಸಾಕು. ಹಾಗೆಯೇ ಆರೋಪಿಯ ಗೈರಿನಲ್ಲೇ ವಿಚಾರಣೆ ನಡೆಸಿ, ಶಿಕ್ಷೆಯನ್ನೂ ಪ್ರಕಟಿಸಬಹುದು. ಈ ಕುರಿತ ಕರ್ನಾಟಕದ ತಿದ್ದುಪಡಿ ಮಸೂದೆ “ದ ಕೋಡ್‌ ಆಫ್ ಕ್ರಿಮಿನಲ್‌ ಪ್ರೊಸೀಜರ್‌-2021’ಯನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಲಾಗಿತ್ತು. …

Read More »

ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗುವುದು  ಎಂದು ಬಸವರಾಜ ಬೊಮ್ಮಾಯಿ

ಬೆಂಗಳೂರು : ಪತ್ರಕರ್ತರ ಮಾಸಾಶನ ಹೆಚ್ಚಿಸಲಾಗುವುದು  ಎಂದು  ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಬುಧವಾರ ಪ್ರೆಸ್ ಕ್ಲಬ್ ಬೆಂಗಳೂರು, ಇಲ್ಲಿ ಆಯೋಜಿಸಲಾಗಿದ್ದ ಬ್ಯುಸಿನೆಸ್ ಐಕಾನ್  ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರ ಹಲವಾರು ಬೇಡಿಕೆಗಳಿವೆ.  ಪತ್ರಕರರಿಗೆ  ಸಾಮಾಜಿಕವಾಗಿ, ಆರ್ಥಿಕವಾಗಿ ಭದ್ರತೆಯ ಅವಶ್ಯಕತೆ ಇದೆ. ನಿವೃತ್ತ  ಪತ್ರಕರ್ತರಿಗೆ ಮಾಸಾಶನ ನೀಡುವ   ಸಮಿತಿ ರಚಿಸಲು ನಾಳೆಯೇ ಆದೇಶ ಹೊರಡಿಸಲಾಗುವದು. ಅದಕ್ಕಿರುವ  ನಿಯಮಗಳನ್ನು ಸರಳೀಕರಣಗೊಳಿಸಲಾಗುವುದು ಎಂದು ತಿಳಿಸಿದರು. ವಿಧಾನಸಭೆಯ ಹತ್ತಿರವೇ ಪ್ರೆಸ್ ಕ್ಲಬ್ ಇದೆ. …

Read More »