ಬೆಳಗಾವಿಯಿಂದ 18 ಕಿ.ಮೀ. ದೂರದ ಬೆಳವಟ್ಟಿಯಲ್ಲಿ ರವಿವಾರ ಮುಂಜಾನೆ ಚಿರತೆಯು ಕಾಣಿಸಿಕೊಂಡಿದೆ. ಈ ಚಿರತೆ ಬೆಳಗಾವಿ “ಗಾಲ್ಫ ಕ್ಲಬ್ ಚಿರತೆಯೊ ಅಥವಾ ಇದು ಬೇರೆ ಚಿರತೆಯೊ..? ಎಂಬ ಅನುಮಾನ ಮೂಡಿದೆ. ಹೌದು ಇದೇ ಅಗಸ್ಟ್ 5ರಂದು ಬೆಳಗಾವಿಯ ಜಾಧವ ನಗರದಲ್ಲಿ ಮಟ ಮಟ ಮಧ್ಯಾಹ್ನ 12 ಗಂಟೆಗೆ ಕಾಣಿಸಿಕೊಂಡು ಕಟ್ಟಡ ಕಾರ್ಮಿಕನೊಬ್ಬನ ಮೇಲೆ ದಾಳಿ ಮಾಡಿ ಮಾಯವಾದ ಚಿರತೆಯ ಶೋಧಕ್ಕಾಗಿ ಅರಣ್ಯ ಇಲಾಖೆಯು ನಡೆಸಿದ ಪ್ರಯತ್ನಗಳಿಗೆ ಇನ್ನೂ ಫಲ ಸಿಕ್ಕಿಲ್ಲ. …
Read More »ಸಾಲಭಾದೆ ತಾಳಲಾರದೆ ಯುವಕ ನದಿಗೆ ಹಾರಿ ಆತ್ಮಹತ್ಯೆ
ಸಾಲಭಾದೆ ತಾಳಲಾರದೆ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಯಡೂರಟೇಕ ಗ್ರಾಮದಲ್ಲಿ ನಡೆದಿದೆ. ಕೃಷ್ಣಾ ದುಂಡಪ್ಪಾ ಪಾಟೀಲ (30) ಆತ್ಮಹತ್ಯೆಯನ್ನು ಮಾಡಿಕೊಂಡ ಯುವಕ.ಕುಟುಂಬ ನಿರ್ವಹಣೆಗಾಗಿ ಸಾಲವನ್ನು ಮಾಡಿಕೊಂಡಿದ್ದನು .ಸಾಲವನ್ನು ತೀರಿಸಲಾಗದೆ ಮನನೊಂದು ನದಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾನೆಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ.ಹಳೇ ಯಡೂರ ಗ್ರಾಮದ ಎಸ್.ಸಿ ಕಾಲೋನಿಯ ನದಿತೀರದಲ್ಲಿ ಶವಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಅಂಕಲಿ ಪೊಲೀಸ್ ಠಾಣೆಯ ಪಿಎಸ್ಐ ರೂಪಾಲಿ ಗೂಡೋಡಗಿ ಹೆಡ್ ಕಾನಸ್ಟೇಬಲ್ ಸೂರ್ಯಕಾಂತ …
Read More »ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿರುವುದು ಕೇಳಿ ಸಂತೋಷ ಯತ್ನಾಳ್
ಬೆಂಗಳೂರು : ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿರುವುದು ಕೇಳಿ ಸಂತೋಷ ಆಗಿದೆ, ಅವರಿಗೆ ಅಭಿನಂದನೆಗಳು ಎಂದು ಮಾಜಿ ಕೇಂದ್ರ ಸಚಿವ, ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಬುಧವಾರ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರು ಅನೇಕ ಕೊಡುಗೆ ನೀಡಿದ್ದಾರೆ.ಸಮರ್ಥ ವಾಗಿ ಬಿಜೆಪಿ ಪಕ್ಷವನ್ನ ನಿಭಾಯಿಸಿದ್ದರು.ಯಡಿಯೂರಪ್ಪ ಅವರಿಗೆ ಶುಭಾಶಯಗಳು ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿರೋದಕ್ಕೆ ನಾವು ತಲೆ …
Read More ». ರಾಜ್ ಕುಮಾರ್ ಅವರ ಕುಟುಂಬಸ್ಥರು ಭೇಟಿ ಮಾಡಿ ಸಿಎಂ ಬೊಮ್ಮಾಯಿ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವರನಟ ಡಾ. ರಾಜ್ ಕುಮಾರ್ ಅವರ ಕುಟುಂಬಸ್ಥರು ಭೇಟಿ ಮಾಡಿ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಮತ್ತು ಪಾರ್ವತಮ್ಮ ರಾಜ್ ಕುಮಾರ್ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ. ಸಿಎಂ ಅಧಿಕೃತ ನಿವಾಸ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿದ ರಾಜ್ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿಪುನೀತ್ …
Read More »ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸ
ಬೆಂಗಳೂರು: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಭಾರತೀಯ ಜನತಾ ಪಾರ್ಟಿ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ಅವರನ್ನು ನೇಮಕ ಮಾಡುವ ಮೂಲಕ ಪಕ್ಷ ಅವರಿಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ …
Read More »ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್ ಸುನೀಲ ಪಾಟೀಲ
ಬೆಳಗಾವಿ:ವಿದ್ಯಾರ್ಥಿಗಳ ಉಜ್ವಲ ಬದುಕು ಮತ್ತು ಭವಿಷ್ಯವನ್ನು ರೂಪಿಸುವ ಎಸ್ಸೆಸ್ಸೆಲ್ಸಿ ಎಂಬ ಪ್ರಮುಖ ಘಟ್ಟ ದಾಟಬೇಕಾದರೆ ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್ ಸುನೀಲ ಪಾಟೀಲ ಅಭಿಪ್ರಾಯಪಟ್ಟರು. ನಗರದ ವಂಟಮೂರಿ ಕಾಲೋನಿ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಉದಯವಾಣಿ ಶಿಕ್ಷಣ ಮಾರ್ಗದರ್ಶಿ ವಿತರಿಸಿ ಅವರು ಮಾತನಾಡಿದರು. ನಿಮ್ಮ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಎಂಬ ತಳಪಾಯವನ್ನು ಗಟ್ಟಿಗೊಳಿಸಿಕೊಳ್ಳಬೇಕು. ಆಗ ಮುಂದಿನ ಎಲ್ಲ ಸ್ಪರ್ಧೆ, ಸವಾಲುಗಳನ್ನು ಸಮರ್ಥವಾಗಿ ಎದುರಿಸಿ …
Read More »ರೈಲು ಅಪಘಾತ 53 ಮಂದಿ ಗಾಯ
ಮಹಾರಾಷ್ಟ್ರ: ರಾಯ್‌ಪುರದಿಂದ ನಾಗ್ಪುರ ಮಾರ್ಗವಾಗಿ ಹೋಗುತ್ತಿದ್ದ ಭಗತ್ ಕಿ ಕೋಠಿ ರೈಲು ಗೊಂದಿಯಾ ನಗರದ ಬಳಿ ಅಪಘಾತಕ್ಕೀಡಾಗಿದ್ದು, 53 ಮಂದಿ ಗಾಯಗೊಂಡಿದ್ದಾರೆ. ಭಗತ್ ಕಿ ಕೋಠಿ ರೈಲು ಮುಂಭಾಗದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಕೆಲವು ಕೋಚ್‌ಗಳು ಹಳಿ ತಪ್ಪಿವೆ. ಘಟನೆಯಿಂದ 53 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಜಿಲ್ಲಾಸ್ಪತ್ರೆ ಹಾಗು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Read More »ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಂಧಿಯಾಗಿರುವ ಐಪಿಎಸ್ ಅಧಿಕಾರಿ, ಜಾಮೀನು ನಿರಾಕರಿಸಿದ ಸೆಷನ್ಸ್ ನ್ಯಾಯಾಲಯ
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಐಪಿಎಸ್ ಅಧಿಕಾರಿಯಾದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಮೃತ್ ಪಾಲ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ. ಅಮೃತ್ ಪಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 51ನೇ ಹೆಚ್ಚುವರಿ ನಗರ ಮತ್ತು ಸೆಷನ್ಸ್ ಕೋರ್ಟ್ನ ನ್ಯಾಯಾಧೀಶ ಯಶವಂತ ಕುಮಾರ್ ಅವರು ಮಂಗಳವಾರ ತೀರ್ಪು ನೀಡಿ ಜಾಮೀನು ಅರ್ಜಿ ವಜಾಗೊಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ಪಾಲ್ ಅವರು ಪಿಎಸ್‌ಐ …
Read More »ಸ್ವಾತಂತ್ರ್ಯೋತ್ಸವದ ದಿನ ಜೇಬಿನಲ್ಲಿ ಚಾಕು ಯಾಕಿತ್ತು?, ಧ್ವಜ ಇರಬೇಕಿತ್ತು: ಪ್ರಮೋದ ಮುತಾಲಿಕ್
ಧಾರವಾಡ: ಶಿವಮೊಗ್ಗದಲ್ಲಿ ಸೋಮವಾರ ನಡೆದ ಗಲಾಟೆ ಆಕಸ್ಮಿಕವಾದದ್ದಲ್ಲ. ಮುಂಬರುವ ಗಣೇಶ ಮೆರವಣಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪೂರ್ವನಿಯೋಜಿತವಾಗಿ ಈ ಕೃತ್ಯ ನಡೆದಿದೆ ಎಂದು ಪ್ರಮೋದ ಮುತಾಲಿಕ್ ದೂರಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 40 ವರ್ಷದಿಂದ ಹಿಂದೂ ಮಹಾಸಭಾದ ಗಣೇಶ ಮೆರವಣಿಗೆ ಆಗುತ್ತದೆ. ಈ ಹಿಂದೆ ಗಣೇಶ ಮೆರವಣಿಗೆ ಮಸೀದಿ ಮುಂದೆ ಹೋಗಬಾರದೆಂದು ಗಲಾಟೆ ಮಾಡಿದ್ದರು. ಆಗಿನಿಂದಲೇ ಸಂಘರ್ಷ ಆರಂಭವಾಗಿದೆ ಎಂದರು. ಸಾವರ್ಕರ್ ಓರ್ವ ಪ್ರಖರ ಹಿಂದೂವಾದಿ ಮತ್ತು ರಾಷ್ಟ್ರೀಯವಾದಿ. ಅವರನ್ನು ವಿರೋಧಿಸುವುದು …
Read More »ಸಿದ್ದರಾಮಯ್ಯ ವೋಟಿಗಾಗಿ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ: ಆರಗ ಜ್ಞಾನೇಂದ್ರ
ಶಿವಮೊಗ್ಗ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ವೋಟಿಗಾಗಿ ಓಲೈಕೆ ಮಾಡಿ ವಿ.ಡಿ. ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸಾವರ್ಕರ್ ಅವರು ಬ್ರಿಟಿಷರ ಬೂಟು ನೆಕ್ಕಿದ್ರು ಎಂಬ ಹೇಳಿಕೆ ಒಂದು ಸಮುದಾಯವನ್ನು ಎತ್ತಿಕಟ್ಟಿದೆ. ಚುನಾವಣಾ ವರ್ಷ ಆಗಿರುವುದರಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸಾವರ್ಕರ್ ಓರ್ವ ಸ್ವಾತಂತ್ರ್ಯ ಹೋರಾಟಗಾರ, 13 ವರ್ಷ ಅವರು ಕರಿನೀರಿನ ಶಿಕ್ಷೆ ಅನುಭವಿಸಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ವೀರ ಸಾವರ್ಕರ್ …
Read More »
Laxmi News 24×7