ಮುಂಬೈ: 35 ವರ್ಷದ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿ, ರಸ್ತೆ ಬದಿಗೆ ಎಸೆದು ಹೋದ ಅಮಾನುಷ ಘಟನೆ ಮಹಾರಾಷ್ಟ್ರದ ವಿದರ್ಭ ಪ್ರದೇಶದ ಭಂಡಾರ ಜಿಲ್ಲೆಯಲ್ಲಿ ನಡೆದಿದೆ. ಜುಲೈ 30ರಂದು ಸಂತ್ರಸ್ತ ಮಹಿಳೆ ಕಮರ್‌ಗಾವ್ ಗ್ರಾಮಕ್ಕೆ ಸೋದರನ ಮನೆಗೆ ತೆರಳುತ್ತಿದ್ದರು. ಈ ವೇಳೆ ಸ್ನೇಹಿತನ ಸೋಗಿನಲ್ಲಿ ಬಂದ ವ್ಯಕ್ತಿ ಅತ್ಯಾಚಾರ ಎಸಗಿದ್ದ. ಆ ನಂತರ ಆಗಸ್ಟ್ 1ರಂದು ಕನ್ಹಾಲ್‌ಮೊಹ್ ಪ್ರದೇಶದಲ್ಲಿ ಮತ್ತೊಮ್ಮೆ ಆಗಂತುಕರಿಬ್ಬರು ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ನಡುರಸ್ತೆಯಲ್ಲಿ …
Read More »108 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. 108 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಡೈರಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಆದೇಶ ಹೊರಡಿಸಿದೆ.
Read More »ಕಾಸು ಕೊಟ್ಟರೆ ಪ್ರಾಯೋಗಿಕ ಪರೀಕ್ಷೆ ಪಾಸ್..
ದಾವಣಗೆರೆ: ಪಿಎಸ್‌ಐ ನೇಮಕಾತಿ ಹಗರಣದ ನಂತರ ಭ್ರಷ್ಟಾಚಾರದ ವಾಸನೆ ಇದೀಗ ಐಟಿಐ ಪರೀಕ್ಷೆಗಳತ್ತಲೂ ಹರಡಿದೆ. ಮೂರು ಸಾವಿರ ರೂ. ಕೈಗಿಟ್ಟರೆ ಸಲೀಸಾಗಿ ನಕಲು ಮಾಡಬಹುದು! ಪ್ರಯೋಗಾಲಯದಲ್ಲಿ ಪರೀಕ್ಷಾ ಮೇಲ್ವಿಚಾರಕರ ಎದುರು ಯಂತ್ರಗಳ ದುರಸ್ತಿ ಹಾಗೂ ಜೋಡಣೆ ಮಾಡುವುದು ನಿಯಮ. ಆದರೆ, ಹೊರಗಿನಿಂದ ರೆಡಿ ಮಾಡಿಸಿಕೊಂಡು ಬಂದವರಿಗೂ ಅಂಕಗಳು ಗ್ಯಾರಂಟಿ! ದಾವಣಗೆರೆ ಜಿಲ್ಲೆಯ ಮಾಯಕೊಂಡದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಪರೀಕ್ಷಾ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಐಟಿಐ ಫಿಟ್ಟರ್ ವಿಭಾಗದ ಎರಡನೇ ವರ್ಷದ …
Read More »ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಕೆಪಿಟಿಸಿಎಲ್ ನೀಡಿತು ಶಾಕ್! ಬಟ್ಟೆ ಕಟ್ ಕಟ್
ಕೊಪ್ಪಳ: ರಾಜ್ಯಾದ್ಯಂತ ಇಂದು ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಕೊಪ್ಪಳದಲ್ಲಿ ಪರೀಕ್ಷೆ ಬರೆಯಲು ತುಂಬು ತೋಳಿನ ಅಂಗಿ ಹಾಕಿಕೊಂಡು ಬಂದವರಿಗೆ ಪರೀಕ್ಷಾ ಸಿಬ್ಬಂದಿ ತೋಳು ಕತ್ತರಿಸುವ ಮೂಲಕ ಶಾಕ್ ನೀಡಿದ್ದಾರೆ. ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ಇತರ ನೇಮಕಾತಿ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ಕಟ್ಟಳೆ ವಿಧಿಸಲಾಗಿದೆ. ಇಂದು ನಡೆಯುತ್ತಿರುವ ಪರೀಕ್ಷೆಗೆ ತುಂಬು ತೋಳಿನ ಅಂಗಿ ಹಾಕಿ ಬಂದವರನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿಲ್ಲ. ಬೇರೆ ಶರ್ಟ್ ಧರಿಸಿ ಬರುವಂತೆ …
Read More »ಬಿಗ್‌ಬಾಸ್ ಕನ್ನಡ OTTಗೆ ಚಾಲನೆ: ಇಲ್ಲಿದೆ 16 ಸ್ಪರ್ಧಿಗಳ ಪಟ್ಟಿ
ಬೆಂಗಳೂರು: ಬಿಗ್‌ಬಾಸ್ ಕನ್ನಡ ಮೊದಲ ಒಟಿಟಿ ಆವೃತ್ತಿಗೆ ಅದ್ದೂರಿ ಚಾಲನೆ ಸಿಕ್ಕಿದೆ. ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ ಸೇರಿ 16 ಮಂದಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ, ಸೀಸನ್ 9ಕ್ಕೂ ಮುನ್ನ ಪ್ರೇಕ್ಷಕರಿಗೆ ಒಟಿಟಿ ಆವೃತ್ತಿ ಮನರಂಜನೆಯ ಬುತ್ತಿ ಹೊತ್ತು ತರಲಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಎಂದಿನಂತೆ ತಮ್ಮ ವಿಶಿಷ್ಟ ಶೈಲಿಯ ಮೂಲಕ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಬಿಗ್‌ಬಾಸ್ ಒಟಿಟಿ ಸ್ಪರ್ಧಿಗಳು ಯಾರ್ಯಾರು? 1 ಆರ್ಯ ವರ್ಧನ್ ಗುರೂಜಿ …
Read More »ಭಾರತದ ನೂತನ ಉಪರಾಷ್ಟ್ರಪತಿಯಾಗಿ ‘ಜಗದೀಪ್ ಧನಕರ್’ ಆಯ್ಕೆ
ನವದೆಹಲಿ : ಭಾರತದ ನೂತನ ಉಪರಾಷ್ಟ್ರಪತಿಯಾಗಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಧನಕರ್, ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೆಟ್ ಆಳ್ವಾ ಅವ್ರನ್ನ ಮಣಿಸಿ, ಉಪರಾಷ್ಟ್ರಪತಿ ಗದ್ದುಗೆ ಏರಿದ್ದಾರೆ. ಅಂದ್ಹಾಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್ ಶ್ರೀಮತಿ ಆಳ್ವಾ ಅವ್ರ ಹೆಸರನ್ನ ನಿರ್ಧರಿಸುವಾಗ ಸಮಾಲೋಚನೆಗಳ ಕೊರತೆಯಿದೆ ಎಂದು ಆರೋಪಿಸಿ, ಮತದಾನದಿಂದ ದೂರ ಉಳಿದಿತ್ತು. ಈ ಮೂಲಕ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿರುಕುಗಳು …
Read More »ಗದಗ: ಹೊಟ್ಟೆಯೊಳಗೆ ಬೆಳೆದ ಬೃಹತ್ ಗಡ್ಡೆ, ವೃದ್ಧನ ನರಕಯಾತನೆ
ಗದಗ : ವೃದ್ಧರೊಬ್ಬರ ಹೊಟ್ಟೆಯಲ್ಲಿ ಗಡ್ಡೆ ಬೆಳೆದು ಅವರು ನಡೆಯಲಾರದ ಪರಿಸ್ಥಿತಿಯಲ್ಲಿದ್ದಾರೆ. ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಬುಲ್ಡೋಜರ್ ನಗರ ನಿವಾಸಿ ಹನುಮಂತಪ್ಪ (69) ತಮ್ಮ ಹೊಟ್ಟೆಯಲ್ಲಿರುವ ಈ ಗಡ್ಡೆಯಿಂದಾಗಿ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಅಲೆಮಾರಿ ಜನಾಂಗದವರಾದ ಇವರು ಕಳೆದ ಹಲವು ವರ್ಷಗಳಿಂದ ಈ ರೋಗಕ್ಕೆ ತುತ್ತಾಗಿದ್ದಾರೆ. ಗಡ್ಡೆ ದೊಡ್ಡದಾಗಿ ಹೊಟ್ಟೆಯೊಳಗಿನಿಂದ ಜೋತು ಬಿದ್ದಿದೆ. ಯಾವುದೇ ನೋವು ಇಲ್ಲದಿದ್ದರೂ ಓಡಾಡಲು ಇವರಿಗೆ ಕಷ್ಟವಾಗುತ್ತಿದೆ. ಸದ್ಯ ಪತ್ನಿಯೇ ಇವರಿಗೆ ಆಧಾರ. ದುಡಿದು ಸಾಕಲು …
Read More »ಬಿಜೆಪಿ ಶಾಸಕರಿಗೆ ಗೌನ್ ಉಡುಗೊರೆ- ಶಾಸಕ ಸತೀಶ್ ಜಾರಕಿಹೊಳಿ
ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆಯದ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಮೇಯರ್, ಉಪಮೇರ್ ಆಗಿರುವ ಸ್ಥಳೀಯ ಬಿಜೆಪಿ ಶಾಸಕರಿಗೆ ಆ.9 ರಂದು ಕಾಂಗ್ರೆಸ್ ನಿಂದ ಗೌನ್ ಉಡುಗರೆ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. : ಇಂದು ಶನಿವಾರ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ರವರು, ವಿಧಾನ ಸಭೆಯ ಚುನಾವಣೆ ಮುಗಿಯುವವರೆಗೂ ಮೇಯರ್, ಉಪಮೇಯರ್ ಆಯ್ಕೆಯಾಗುವುದಿಲ್ಲ. ಈಗಾಗಲೇ ಅನಧಿಕೃತವಾಗಿ ಬೆಳಗಾವಿಯ …
Read More »ಬ್ಲೇಡ್ನಿಂದ ಶಸ್ತ್ರಚಿಕಿತ್ಸೆ ನಡೆಸಿದ ನಕಲಿ ವೈದ್ಯನ ಬಂದನ
ಬಾಗಲಕೋಟೆ: ಗರ್ಭ ಧರಿಸಿದ್ದ ಎಮ್ಮೆಗೆ ನಕಲಿ ವೈದ್ಯನೊಬ್ಬ ಬ್ಲೇಡ್ನಿಂದ ಶಸ್ತ್ರಚಿಕಿತ್ಸೆ ನಡೆಸಿದ್ದು, ತೀವ್ರ ರಕ್ತಸ್ರಾವವಾಗಿ ಎಮ್ಮೆ ಮತ್ತು ಕರು ಮೃತಪಟ್ಟ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ನಕಲಿ ವೈದ್ಯನ ಹೆಸರು ಶಿವಾನಂದ ಮಲ್ಲಪ್ಪ ರುದ್ರಪ್ಪನವರ. ಈತ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮಳಲಿ ಗ್ರಾಮದವ. ಮುಧೋಳ ತಾಲೂಕಿನ ಕನಸಗೇರಿ ಗ್ರಾಮದ ಹನುಮಂತ ಬಾಳಪ್ಪ ಪೂಜೇರಿ ಅವರಿಗೆ ಸೇರಿದ ಎಮ್ಮೆ ಗರ್ಭ ಧರಿಸಿ ಹಲವು ತಿಂಗಳಾಗಿತ್ತು. ಅನಾರೋಗ್ಯ ಕಾರಣ ಮಾಲೀಕರು ಪಶು …
Read More »ಬಿಜೆಪಿಯವರಿಗೇನು ಗೊತ್ತು ನನ್ನ ಹುಟ್ಟಿದ ದಿನ, ನನ್ನ ಡೇಟ್ ಆಫ್ ಬರ್ತ್ ನನ್ನಪ್ಪ-ಅವ್ವನಿಗೆ ಗೊತ್ತು: ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ: ಸಿದ್ದರಾಮಯ್ಯನವರಿಗೆ 75 ವರ್ಷ ಆಗಿಲ್ಲ, ರಾಜಕೀಯಕ್ಕೆ ಬೇಕಾಗಿ ಸಿದ್ದರಾಮೋತ್ಸವವನ್ನು ಆಚರಿಸಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ, ಅವರಿಗೇನು ಗೊತ್ತು ನನ್ನ ಡೇಟ್ ಆಫ್ ಬರ್ತ್, ನನ್ನ ಹುಟ್ಟಿದ ದಿನ ನನ್ನ ಅವ್ವನಿಗೆ, ನಮ್ಮ ಅಪ್ಪನಿಗೆ ಗೊತ್ತು ಎಂದು ಪ್ರತಿಕ್ರಿಯಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿಂದು ಮಾತನಾಡಿದ ಅವರು, ಸಿದ್ದರಾಮೋತ್ಸವ ಇಷ್ಟೊಂದು ಯಶಸ್ವಿಯಾಯಿತಲ್ಲ, ಆ ಕಾರಣಕ್ಕೆ ಹೊಟ್ಟೆ ಉರಿಯಿಂದ ಬಿಜೆಪಿಯವರು ಹೀಗೆ ಹೇಳುತ್ತಿದ್ದಾರೆ. ಬಿಜೆಪಿಯವರಿಗೆ ಹೇಳಲು ಯಾವುದೇ ವಿಚಾರಗಳಿಲ್ಲ, ಅವರ ಮಾತುಗಳಿಗೆ ಕಿಮ್ಮತ್ತಿಲ್ಲ ಎಂದು …
Read More »
Laxmi News 24×7