Breaking News

ರಾಜಕೀಯ

ಎಸಿಬಿಗೆ ಭ್ರಷ್ಟಾಚಾರ ಪ್ರಕರಣದ ತನಿಖಾ ವಿಧಾನವೇ ಗೊತ್ತಿಲ್ಲ: ಹೈಕೋರ್ಟ್ ಚಾಟಿ

ಬೆಂಗಳೂರು: ಎಸಿಬಿಗೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹೇಗೆ ಸರಿಯಾಗಿ ತನಿಖೆ ನಡೆಸಬೇಕೆನ್ನುವ ವಿಧಾನವೇ ಸರಿಯಾಗಿ ತಿಳಿದಿಲ್ಲ. ತನಿಖಾ ಪದ್ಧತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮತ್ತೊಮ್ಮೆ ಚಾಟಿ ಬೀಸಿದೆ. ಹೈಕೋರ್ಟ್​​ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎಸಿಬಿಯು ತನಿಖೆಯಲ್ಲಿ ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ತಪ್ಪುಗಳನ್ನು ನೋಡಿಕೊಂಡು ನ್ಯಾಯಾಲಯ ಸುಮ್ಮನೆ ಕೂರಲಾಗದು ಎಂದು ಎಸಿಬಿಯನ್ನು ತರಾಟೆಗೆ ತಗೆದುಕೊಂಡರು. ತಮ್ಮ ಮೇಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಎಸಿಬಿ ಸರಿಯಾಗಿ ತನಿಖೆ …

Read More »

ಹಲ್ಲಿ ಬಿದ್ದಿರುವ ಶಂಕೆ: ಮಧ್ಯಾಹ್ನದ ಬಿಸಿ ಊಟ ಸೇವಿಸಿ ಮಕ್ಕಳು ಅಸ್ವಸ್ಥ

ಕಲಬುರಗಿ: ಹಲ್ಲಿ ಬಿದ್ದಿರುವ ವಿಷ ಆಹಾರ ಸೇವಿಸಿ 30ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮಧ್ಯಾಹ್ನದ ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎನ್ನಲಾಗ್ತಿದೆ. ಅದೇ ಆಹಾರವನ್ನು ಮಕ್ಕಳು ಸೇವಿಸಿದ ಪರಿಣಾಮ‌ ಮಕ್ಕಳು ಅಸ್ವಸ್ಥಗೊಂಡಿದ್ದಾರೆಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಆಹಾರ‌ ಸೇವಿಸಿದ ಸ್ವಲ್ವ ಸಮಯದ ನಂತರ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ. ಆಗ ತಕ್ಷಣ ಅವರನ್ನು ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ …

Read More »

ಬಿಜೆಪಿ ಸಾಧನಾ ಸಮಾವೇಶ ರದ್ದು, ರಾತ್ರಿ 12.25ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿದ: C.M.

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು​ ಹತ್ಯೆಯಾಗಿರುವ ಈ ಸಂದರ್ಭದಲ್ಲಿ ಸಾಧನಾ ಸಮಾವೇಶ ಮಾಡಲು ನನ್ನ ಮನಸಾಕ್ಷಿ ಒಪ್ಪಲಿಲ್ಲ. ಹಾಗಾಗಿ, ‘ಜನೋತ್ಸವ ಕಾರ್ಯಕ್ರಮ’ವನ್ನು ರದ್ದು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರ್.ಟಿ.ನಗರ ನಿವಾಸದಲ್ಲಿ ಸರಿರಾತ್ರಿ 12.25ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಒಂದೆಡೆ ನಮ್ಮ ಯುವ ಕಾರ್ಯಕರ್ತನ ಕೊಲೆಯಾಗಿದೆ. ಇದೇ ವೇಳೆ ನಮ್ಮ ಸರ್ಕಾರಕ್ಕೆ …

Read More »

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಶಾಲಾ ಪ್ರವೇಶಾತಿ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ರಾಜ್ಯ ಶಿಕ್ಷಣ ಇಲಾಖೆಯು ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ಜೂ. 1ಕ್ಕೆ ಅನ್ವಯವಾಗುವಂತೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ಆದೇಶ ಹೊರಡಿಸಿದೆ.   ಆರ್‌ಟಿಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು-2012ರಂತೆ ಶೈಕ್ಷಣಿಕ ವರ್ಷದಲ್ಲಿ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿ ನಿಗದಿಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ. 2016-17ನೇ ಶೈಕ್ಷಣಿಕ …

Read More »

ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನ ಲೇಪಿತ ಮಾಳಿಗೆ ಸೋರಿಕೆ

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪನ ದೇಗುಲದ ಗರ್ಭಗುಡಿಯ ಚಿನ್ನ ಲೇಪಿತ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿರುವುದು ದೃಢಪಟ್ಟಿದೆ. ಜು.16ರಂದು ಮಾಸಿಕ ಪೂಜೆಗೆಂದು ದೇಗುಲದ ಗರ್ಭಗುಡಿ ತೆರೆದಾಗ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಗರ್ಭಗುಡಿಯ ಎಡಭಾಗದ ಮಾಳಿಗೆಯಲ್ಲಿ ಸೋರಿಕೆ ಉಂಟಾಗಿದ್ದು, ಶೀಘ್ರವೇ ಅದನ್ನು ದುರಸ್ಥಿಗೊಳಿಸಲಾಗುವುದು. ಆ.3ರಂದು ದೇಗುಲ ವಾಸ್ತುಶಿಲ್ಪಿಗಳ ತಂಡವು ಪರಿಶೀಲನೆ ನಡೆಸಲಿದೆ. ನಂತರ ದುರಸ್ತಿ ನಡೆಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಅಧ್ಯಕ್ಷ ಕೆ.ಅನಂತಗೋಪನ್‌ ತಿಳಿಸಿದ್ದಾರೆ. ಅಯ್ಯಪ್ಪ ದೇಗುಲದ ಗರ್ಭಗುಡಿಯ ಮಾಳಿಗೆಗೆ ಚಿನ್ನದ ಹೊದಿಕೆಯನ್ನು …

Read More »

ಚಂದ್ರು, ಹರ್ಷ, ಪ್ರವೀಣ, ನಾಳೆ ಇನ್ಯಾರೋ ? ಸಿ.ಟಿ.ರವಿ, ರೇಣುಕಾಚಾರ್ಯ ಬೇಸರ

ಬೆಂಗಳೂರು :ಚಂದ್ರ, ಹರ್ಷ, ಪ್ರವೀಣ ನಾಳೆ ಇನ್ಯಾರೋ ? ಎಂದು ಬಿಜೆಪಿ ಸರಕಾರದ ಕಾರ್ಯ ನಿರ್ವಹಣೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧವೇ ಸಿ.ಟಿ. ರವಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ಜತೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನೂ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇಂಥ ಘಟನೆಗಳಿಂದ ಕಾರ್ಯಕರ್ತರು ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ. ಚಂದ್ರು, ಹರ್ಷ, ಪ್ರವೀಣ್ ನಾಳೆ …

Read More »

ಪ್ರವೀಣ್‌ ಹತ್ಯೆ: ಬೆಳ್ಳಾರೆಯಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಂಗಳವಾರ ನಡೆದಿದ್ದು, ಬುಧವಾರ ಪಾರ್ಥೀವ ಶರೀರ ಮೆರವಣಿಗೆ ವೇಳೆ ಬೆಳ್ಳಾರೆ ಬಸ್‌ ನಿಲ್ದಾಣ ಬಳಿ ಇರುವ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.   ಪ್ರವೀಣ್‌ ಅವರ ಪಾರ್ಥೀವ ಶರೀರ ಮೆರವಣೆಗೆ ವೇಳೆ ಸಾವಿರಾರು ಜನ ಜಮಾಯಿಸಿದ್ದು, ಈ ವೇಳೆ ಕೆಲವರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪರಿಸ್ಥಿತಿ …

Read More »

ಕೊಲೆಗಡುಕ ಶಕ್ತಿಗಳ ಮುಂದೆ ಸರ್ಕಾರ ಮಂಡಿಯೂರಿದೆ: ಎಚ್‌ಡಿಕೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಹತ್ಯೆ ಪ್ರಕರಣಗಳನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.   ‘ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, …

Read More »

ಸ್ಕೂಟಿಗೆ ಲಾರಿ ಡಿಕ್ಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ

ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಹೊಸೂರ್ ವೃತ್ತದ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಹಳೆ ಹುಬ್ಬಳ್ಳಿಯ ಬೀರಬಂದ್ ಗಲ್ಲಿ ನಿವಾಸಿ ಪೈಜಾಲ್ ಧಾರವಾಡ ಎಂದು ಗುರುತಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ಗಂಭೀರ ಗಾಯಗಳಾಗಿ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Read More »

ಬಿಜೆಪಿ ಯುವ ಮುಖಂಡನಿಗೆ ಮಾರಣಾಂತಿಕ ಹಲ್ಲೆ.. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವು

ಸುಳ್ಯ: ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್(32) ಎಂಬವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ‌ ಎಂದು ತಿಳಿದು ಬಂದಿದೆ. ಬಿಜೆಪಿ ಯುವ ನಾಯಕ ಆಗಿರುವ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲೀಕರಾಗಿದ್ದು, ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ನಂತರ ಪ್ರವೀಣ್ ಗಂಭೀರ ಗಾಯಗೊಂಡಿದ್ದರಿಂದ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದರು ಎನ್ನಲಾಗಿದೆ. …

Read More »