Breaking News

ರಾಜಕೀಯ

ರಾಷ್ಟ್ರಪತಿ ಪದಗ್ರಹಣ ಸಮಾರಂಭದಲ್ಲಿ ಖರ್ಗೆಗೆ ಅಪಮಾನವಾಗಿಲ್ಲ: ಜೋಶಿ

ನವದೆಹಲಿ, ಜುಲೈ 25: ”ರಾಷ್ಟ್ರಪತಿ ಪದಗ್ರಹಣ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಅಪಮಾನ ಮಾಡಿ, ಅಗೌರವ ತೋರಲಾಗಿದೆ” ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ತಿರುಗೇಟು ನೀಡಿದ್ದಾರೆ.   Respecting the position and seniority of @kharge ji, he was offered to be seated in the first row …

Read More »

ಜುಲೈ 28ಕ್ಕೆ ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ‘ವಿಕ್ರಾಂತ್‌ ರೋಣ’:

ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ಬಿಡುಗಡೆ ಹೊಸ್ತಿಲಲ್ಲಿದೆ. ಜುಲೈ 28ಕ್ಕೆ ವಿಶ್ವದಾದ್ಯಂತದ 3,200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ ಎಂದು ಚಿತ್ರದ ನಿರ್ಮಾಪಕ ಜಾಕ್‌ ಮಂಜು ಮಾಹಿತಿ ನೀಡಿದ್ದಾರೆ.   ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಸದ್ಯ 390 ಚಿತ್ರಮಂದಿರಗಳು ಬುಕ್‌ ಆಗಿವೆ. ಜುಲೈ 28ರ ವೇಳೆಗೆ 400-425 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ವಿಶ್ವದಾದ್ಯಂತ 3,200 ಚಿತ್ರಮಂದಿರಗಳಲ್ಲಿ ವಿಕ್ರಾಂತ್‌ ರೋಣ ತೆರೆಕಾಣಲಿದ್ದು, ಹಿಂದಿಯಲ್ಲೇ …

Read More »

ಜುಲೈ 30ರಂದು ಸಿಇಟಿ ಫಲಿತಾಂಶ

ಇತ್ತೀಚೆಗಷ್ಟೇ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಜುಲೈ 30ರಂದು ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಸಂಜೆಯೊಳಗೆ ಅಂಕಗಳನ್ನು ವೆಬ್‌ ಸೈಟ್‌ ಗೆ ಅಪ್‌ ಲೋಡ್‌ ಮಾಡುವಂತೆ ಸೂಚಿಸಿದ್ದಾರೆ.   ಜೂನ್ ತಿಂಗಳಲ್ಲಿ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ ಸಂಬಂಧಿಸಿ ಪರೀಕ್ಷೆ ನಡೆದಿತ್ತು. ಈ ಬಾರಿ ೧೨ನೇ ತರಗತಿ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿತ್ತು.

Read More »

ಕಲ್ಯಾಣ ಕರ್ನಾಟಕದ ಕಾಂಗ್ರೆಸ್‌ ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿಯು ಮಿಷನ್‌ 150 ಮಂತ್ರ ಜಪಿಸುತ್ತಿದ್ದು, ಅದನ್ನು ಸಾಕಾರಗೊಳಿಸಲು ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳ ಮೇಲೆ ಕಣ್ಣು ಹಾಕಿದೆ. ರಾಜ್ಯದಲ್ಲಿ ಕಿತ್ತೂರು ಕರ್ನಾಟಕ, ಕರಾವಳಿ ಹಾಗೂ ಮಧ್ಯ ಕರ್ನಾಟಕ, ಮಲೆನಾಡು ಭಾಗದಲ್ಲಿ ಪ್ರಬಲವಾಗಿರುವ ಬಿಜೆಪಿಗೆ ಹಳೆ ಮೈಸೂರು ಹಾಗೂ ಕಲ್ಯಾಣ ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂಬುದು ಈಚೆಗೆ ನಡೆದ ಚಿಂತನ ಸಭೆಯಲ್ಲಿ ಚರ್ಚೆಯಾಗಿದೆ.   ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳೇ ಗುರಿ: ಕಲ್ಯಾಣ ಕರ್ನಾಟಕ …

Read More »

ಬಸ್ ಗಳ ಮುಖಾಮುಖಿ ಡಿಕ್ಕಿ; ಎಂಟು ಮಂದಿ ಸಾವು

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬಾರಾಬಂಕಿಯ ಪೂರ್ವಂಚಲ ಎಕ್ಸ್ ಪ್ರೆಸ್ ವೇ ನಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.   ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿದ ವೇಳೆ ಮತ್ತೊಂದು ಬಸ್ಸಿಗೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ. …

Read More »

ಇನ್ಮುಂದೆ ಪಿಡಿಓಗಳ ‘ಡಿಜಿಟಲ್ ಸಹಿ’ ಇಲ್ಲದ ಯಾವುದೇ ಪ್ರಮಾಣಪತ್ರಗಳು ಅಮಾನ್ಯ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಜಿಟಲ್ ಕ್ರಾಂತಿ ಉಂಟುಮಾಡುವ ಸಲುವಾಗಿ ಅನೇಕ ಇಲಾಖೆಯನ್ನು ಡಿಜಿಟಲೀಕರಣ ಮಾಡಲಾಗಿದೆ. ಇದೀಗ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳನ್ನು ಇದೇ ಮಾದರಿಯಲ್ಲಿ ಮಾಡಿದೆ. ಹೀಗಾಗಿ ಪಿಡಿಓಗಳ ಡಿಜಿಟಲ್ ಸಹಿ ಇಲ್ಲದ ಯಾವುದೇ ಪ್ರಮಾಣ ಪತ್ರಗಳು ಇನ್ಮುಂದೆ ಅಮಾನಲ್ಯ ಎಂಬುದಾಗಿ ಸರ್ಕಾರ ಆದೇಶ ಹೊರಡಿಸಿದೆ.     ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಆಡಳಿತದಲ್ಲಿ ಪಾರದರ್ಶಕತೆ ತರೋ ನಿಟ್ಟಿನಲ್ಲಿ ನಾಗರೀಕ ಸೇವೆಗಳನ್ನು …

Read More »

BSY ಹೇಳಿದಾಕ್ಷಣ ಸ್ಪರ್ಧೆ ಸುಗಮವಲ್ಲ: ಸಿ.ಟಿ. ರವಿ; ನನಗೂ ರಾಜಕೀಯ ಗೊತ್ತು: ವಿಜಯೇಂದ್ರ

ಬೆಂಗಳೂರು: ಶಿಕಾರಿಪುರದಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಬಿ.ವೈ. ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ನಂತರ ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ ಅವರು, ವಿಜಯೇಂದ್ರ ಸ್ಪರ್ಧೆ ನಿರ್ಧಾರವನ್ನು ಪಕ್ಷದ ವರಿಷ್ಠರು ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.   ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧಿಸುವ ಬಗ್ಗೆ ಯಡಿಯೂರಪ್ಪ ಘೋಷಣೆ ಮಾಡಿರುವುದು ಸಲಹೆ ಅಷ್ಟೇ. ಯಾರಿಗೆ …

Read More »

ಪಂಜಾಬ್: ಹುತಾತ್ಮ ಯೋಧನ ಕುಟುಂಬಕ್ಕೆ 1 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿದ ಪಂಜಾಬ್ ಸಿಎಂ

ಪಂಜಾಬ್: ಹುತಾತ್ಮ ಯೋಧರ ಕುಟುಂಬಗಳಿಗೆ ನೆರವು ನೀಡುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂಡೋ-ಚೀನಾ ಗಡಿಯಲ್ಲಿ ರಾಷ್ಟ್ರ ಸೇವೆಯಲ್ಲಿ ಹುತಾತ್ಮರಾದ ಯೋಧ ಕುಲದೀಪ್ ಸಿಂಗ್ ಅವರ ಕುಟುಂಬಕ್ಕೆ ಶುಕ್ರವಾರ 1 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿದರು.   “ಭಾರತೀಯ ಸೇನೆಯ 21 ಸಿಖ್ ರೆಜಿಮೆಂಟ್ ನ ಕುಲದೀಪ್ ಸಿಂಗ್ ಅವರು ದೇಶದ ಗಡಿಗಳನ್ನು ರಕ್ಷಿಸುವಾಗ ತಮ್ಮ ಜೀವ ತ್ಯಾಗ ಮಾಡಿದ್ದಾರೆ ಮತ್ತು ಪಂಜಾಬ್ ಸರ್ಕಾರವು ಈ …

Read More »

ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

ರಾಯಚೂರು: ಜಿಲ್ಲೆಯಲ್ಲಿ ಕಾಲೇಜಿಗೆ ತೆರಳಿದ್ದಂತ ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಪೋಷಕರು ಮಕ್ಕಳು ನಾಪತ್ತೆಯಾಗಿರೋದ್ರಿಂದ ಆತಂಕಗೊಂಡಿದ್ದಾರೆ.   ರಾಯಚೂರು ಜಿಲ್ಲೆಯ ಸ್ಟೇಷನ್ ರಸ್ತೆಯಲ್ಲಿರುವಂತ ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದಂತ ನಾಲ್ವರು ವಿದ್ಯಾರ್ಥಿನಿಯರು, ಕಾಲೇಜಿಗೆ ಹೋಗಿ ಬರೋದಾಗಿ ತೆರಳಿದ್ದರು. ಹೀಗೆ ತೆರಳಿದ್ದಂತ ನಾಲ್ವರು ವಿದ್ಯಾರ್ಥಿನಿಯರು ಮನೆಗೆ ವಾಪಾಸ್ ಆಗಿಲ್ಲ ಎಂಬುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.   ವಿದ್ಯಾರ್ಥಿನಿಯರ ಪೋಷಕರು ನೀಡಿದಂತ ದೂರನಿಂದಾಗಿ ಸದರಬಜಾರ್ ಠಾಣೆಯ ಪೊಲೀಸರು …

Read More »

ಬುರ್ಖಾ ಧರಿಸಿ ಆಲಮಟ್ಟಿ ಜಲಾಶಯಕ್ಕೆ ನುಗ್ಗಲು ಯತ್ನ: ಹಾಸನ ಮೂಲದ ಯುವಕ ಪೊಲೀಸ್ ವಶಕ್ಕೆ

ಆಲಮಟ್ಟಿ (ವಿಜಯಪುರ): ಸೋಮವಾರ ಬೆಳ್ಳಂಬೆಳಿಗ್ಗೆ ಮಹಿಳೆಯರ ವೇಷದಲ್ಲಿದ್ದ ಶಂಕಿತ ಯುವಕ ಆಲಮಟ್ಟಿ ಬಳಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನುಗ್ಗಲು ಯತ್ನಿಸಿ ಪೊಲೀಸರ ಅತಿಥಿಯಾಗಿರುವ ಘಟನೆ ಜರುಗಿದೆ. ನಸುಕಿನಲ್ಲಿ ಆಲಮಟ್ಟಿ ಪರಿಸರದಲ್ಲಿ ಕಾಣಿಸಿಕೊಂಡ ಯುವಕ ಬುರ್ಖಾ ಧರಿಸಿ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯ ಪ್ರವೇಶಕ್ಕೆ ಮುಂದಾಗಿದ್ದಾನೆ. ಈ ವೇಳೆ ಜಲಾಶಯದ ಪ್ರವೇಶ ದ್ವಾರದಲ್ಲಿ ಭದ್ರತೆಗೆ ಇದ್ದ ಪೊಲೀಸರು ಇಷ್ಟು ಬೇಗ ಜಲಾಶಯ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಈ ವೇಳೆ ನಡೆದ …

Read More »