ಹೊಸಪೇಟೆ (ವಿಜಯನಗರ): ‘ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿ ಬಲಿ (ಕುರ್ಬಾನಿ) ನಿಷೇಧಿಸಲಾಗಿದೆ’ ಎಂದು ನಗರಸಭೆ ಪೌರಾಯುಕ್ತ ಮನೋಹರ್ ತಿಳಿಸಿದ್ದಾರೆ. ‘ಜು. 10ರಂದು ಬಕ್ರೀದ್ ಹಬ್ಬ ಆಚರಿಸಲಾಗುತ್ತಿದ್ದು, ಹಬ್ಬದ ದಿನದಿಂದ ಮೂರು ದಿನಗಳ ವರೆಗೆ ಪ್ರಾಣಿ ಬಲಿ ನೀಡಲಾಗುತ್ತದೆ. ಜಿಲ್ಲಾಡಳಿತ ಹಾಗೂ ಸ್ಥಳೀಯ ಆಡಳಿತಗಳು ನಿಗದಿಪಡಿಸಿದ ಸ್ಥಳಗಳಲ್ಲಿ ಅದನ್ನು ಮಾಡತಕ್ಕದ್ದು. ರಸ್ತೆ, ಶಾಲಾ-ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಮಾಡುವಂತಿಲ್ಲ’ ಎಂದು ಶನಿವಾರ ತಿಳಿಸಿದ್ದಾರೆ. ‘ಎಲ್ಲರೂ …
Read More »ಜ್ಯೋತಿಷಿಗಳಿಗೆ ಇದು ಸಂಕಷ್ಟಕಾಲ. ಐದು ದಿನಗಳ ಹಿಂದೆ ಚಂದ್ರಶೇಖರ ಗುರೂಜಿ ಹತ್ಯೆ. ಇವತ್ತು ಪ್ರಮೋದ್ ಗುರೂಜಿ ದರೋಡೆ..
ಜ್ಯೋತಿಷಿಗಳಿಗೆ ಇದು ಸಂಕಷ್ಟಕಾಲ. ಐದು ದಿನಗಳ ಹಿಂದೆ ಚಂದ್ರಶೇಖರ ಗುರೂಜಿ ಹತ್ಯೆ. ಇವತ್ತು ಪ್ರಮೋದ್ ಗುರೂಜಿ ದರೋಡೆ.. ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆ ರಾಬರಿ. ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು, ಹಲ್ಲೆ ನಡೆಸಿ ದರೋಡೆ.ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಜ್ಯೋತಿಷಿ ಪ್ರಮೋದ್ ಮನೆಯಲ್ಲಿ ದರೋಡೆ. 400 ಗ್ರಾಂ ಚಿನ್ನಾಭರಣ,350 ಗ್ರಾಂ ಬೆಳ್ಳಿ,5 ಲಕ್ಷ ನಗದು ಎಗರಿಸಿ ಎಸ್ಕೇಪ್. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.ಮೂವರು ಅಪರಿಚಿತ ವ್ಯಕ್ತಿಗಳಿಂದ ಪ್ರಮೋದ್ ಎಂಬುವರ …
Read More »ಬಕ್ರೀದ್: 30 ಲಕ್ಷಕ್ಕೆ ಮಾರಾಟವಾದ ಅಪರೂಪ ತಳಿಯ ಮೇಕೆ!
ಬಕ್ರೀದ್ ಹಬ್ಬದ ಪ್ರಯುಕ್ತ ಕುರಿ-ಮೇಕೆಗಳ ಮಾರಾಟ ದೇಶಾದ್ಯಂತ ಭರ್ಜರಿಯಾಗಿ ನಡೆದಿದ್ದು, ಉತ್ತರ ಪ್ರದೇಶದ ಮೀನಾ ಬಜಾರ್ ನಲ್ಲಿ ಅಪರೂಪದ ತಳಿಯ ಮೇಕೆಗಳು ದಾಖಲೆ ಮೊತ್ತಕ್ಕೆ ಮಾರಾಟವಾಗಿ ಸುದ್ದಿ ಮಾಡಿವೆ. ದೆಹಲಿಯ ಪ್ರಸಿದ್ದ ಮಾರುಕಟ್ಟೆ ಸ್ಥಳವಾದ ಮೀನಾ ಬಜಾರ್ ನಲ್ಲಿ ಅಪರೂಪದ ತಳಿಯ ಒಂದು ಮೇಕೆ 30 ಲಕ್ಷಕ್ಕೆ ಮಾರಾಟವಾಗಿ ದಾಖಲೆ ಬರೆದಿದೆ. ಎರಡು ಮೇಕೆಗಳು ತಮ್ಮ ಹೆಸರಿನಿಂದಲೇ ತಲಾ 15 ಲಕ್ಷ ರೂ.ಗೆ ಮಾರಾಟವಾಗಿ ಗಮನ ಸೆಳೆದಿವೆ. ೩೫ ವರ್ಷ …
Read More »ಭಾರಿ ಮಳೆ ಹಿನ್ನೆಲೆ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಕಲಬುರಗಿ: ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಗೆ ಶಿಥಿಲಗೊಂಡಿದ್ದ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡ ಘಟನೆ ಚಿತ್ತಾಪೂರ ಪಟ್ಟಣದಲ್ಲಿ ನಡೆದಿದೆ. ಆರೀಫಾ ಬೇಗಂ (60) ಮೃತ ವೃದ್ಧೆ. ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ …
Read More »ಬೈಕ್ ಹಿಡಿದು ಪೊಲೀಸ್ ಠಾಣೆಗೆ ತಂದು ವಿಮೆ ಮಾಡಿದ್ದಕ್ಕೆ ಸವಾರನೊಬ್ಬ ಪೊಲೀಸರ ಮುಂದೆಯೇ ಕಣ್ಣೀರಿಟ್ಟ
ರಾಯಚೂರು: ಜಿಲ್ಲಾ ಪೊಲೀಸರು ವಿಮೆ ಮಾಡಿಸದೆ ಓಡಿಸುತ್ತಿರುವ ಬೈಕ್ ಹಾಗೂ ಇತರ ವಾಹನಗಳನ್ನು ಹಿಡಿದು ವಿಮೆ ಮಾಡಿಸುತ್ತಿದ್ದಾರೆ. ವಿಮೆ ಇಲ್ಲದ್ದಕ್ಕೆ ಬೈಕ್ ಹಿಡಿದು ಪೊಲೀಸ್ ಠಾಣೆಗೆ ತಂದು ವಿಮೆ ಮಾಡಿದ್ದಕ್ಕೆ ಸವಾರನೊಬ್ಬ ಪೊಲೀಸರ ಮುಂದೆಯೇ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಪೊಲೀಸರು ವಾಹನಗಳ ವಿಮೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈವರೆಗೆ 400ಕ್ಕೂ ಹೆಚ್ಚು ಬೈಕ್‍ಗಳನ್ನು ಜಪ್ತಿ ಮಾಡಿರುವ ಪೊಲೀಸರು ಎಲ್ಲಾ ಬೈಕ್‌ಗಳಿಗೂ ವಿಮೆ ಮಾಡಿಸಿದ್ದಾರೆ. ನಗರದ ಎಸ್‍ಪಿ ಕಚೇರಿ …
Read More »ಮಂಗಳೂರಿನಲ್ಲಿ ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರುತ್ತಿದ್ದ 12 ವಿದ್ಯಾರ್ಥಿಗಳ ಬಂಧನ
ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ. ಆರೋಪಿಗಳ ಪೈಕಿ 9 ಮಂದಿ ವಿದ್ಯಾರ್ಥಿಗಳು ಯೇನೆಪೋಯ …
Read More »2-3 ದಿನ ಭಾರಿ ಮಳೆ; ಮುನ್ಸೂಚನೆ ನೀಡಿದ ಸಿಎಂ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಹಾನಿ ಕುರಿತಾಗಿ ನಿನ್ನೆ ಅಧಿಕಾರಿಗಳ ಜತೆ ಸಭೆ ನಡೆಸಿ ಮುಂಜಾಗೃತಾ ಕ್ರಮ ಹಾಗೂ ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಇಂದು ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಇನ್ನೂ 2-3 ದಿನಗಳ ಕಾಲ ಹಲವೆಡೆ ಮಳೆಯಾಗಲಿದೆ. ಅದಕ್ಕೆ ಅನುಗುಣವಾಗಿ …
Read More »ಬಿಎಸ್‌ವೈರಿಂದ ಬೊಮ್ಮಾಯಿವರೆಗೆ; 2023ರ ಚುನಾವಣೆ ಕತೆ ಏನು..?
ಬೆಂಗಳೂರು; ಇದೇ ತಿಂಗಳ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊ೦ಡಿದ್ದರು. ಬೆಂಗಳೂರಿನಲ್ಲಿ ಹಲವು ಯೋಜನೆಗಳನ್ನು ಉದ್ಘಾಟನೆ ಮಾಡಿದರು. ನಂತರ ಅವರು ಮೈಸೂರು ಅರಮನೆಯ ಆವರಣದಲ್ಲಿ ನಡೆದ ವಿಶ್ವಯೋಗಾ ದಿನಾಚರಣೆಯಲ್ಲಿ ಪಾಲ್ಗೊಂಡರು. ಮೋದಿಯವರು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ರಾಜ್ಯಪಾಲರು, ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಸೇರಿ ಹಲವು ನಾಯಕರು ಮೋದಿಯವರನ್ನು ಬರಮಾಡಿಕೊಂಡರು. ಈ ವೇಲೆ ಪ್ರಧಾನಿ ಮೋದಿಯವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅತ್ಯಂತ ಆತ್ಮೀಯತೆಯಿಂದ …
Read More »ಹಿಗ್ಗಿದ ಕೃಷ್ಣೆಯ ಒಡಲು: ಮತ್ತೆ ನೆರೆ ಭೀತಿ
ಬೆಳಗಾವಿ: ಜಿಲ್ಲೆಯ ಗಡಿ ಭಾಗ ಮತ್ತು ನೆರೆಯ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ನದಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಘಟಪ್ರಭಾ ನದಿಗೆ 10 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇದರಿಂದ ಜಿಲ್ಲೆಯ ಪ್ರಮುಖ ಜಲಾಶಯವಾಗಿರುವ ಹಿಡಕಲ್ ಜಲಾಶಯಮಟ್ಟದಲ್ಲಿ ಒಂದೇ ದಿನ ಮೂರು ಅಡಿಗಳಷ್ಟು ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2093 ಅಡಿಗಳಷ್ಟು ನೀರು ಸಂಗ್ರಹವಾಗಿದೆ. …
Read More »ಕರ್ನಾಟಕ ಸರ್ಕಾರದಿಂದ ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಸಹಾಯವಾಣಿ
ಬೆಂಗಳೂರು: ಶುಕ್ರವಾರ ಸಂಜೆ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಅಮರನಾಥ ಯಾತ್ರೆಗೆ ತೆರಳಿರುವ ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಿ. 080-1070, 22340676, ಇಮೇಲ್: incomedmkar@gmail.com ಮೇಘಸ್ಫೋಟದಿಂದ ಉಂಟಾದ ಭಾರೀ ಪ್ರಮಾಣದ ಪ್ರವಾಹ …
Read More »
Laxmi News 24×7