ಪುಣೆ: ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು ಔಷಧ ಇಲಾಖೆ(ಎಂಇಡಿಡಿ) ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ 2008ರ ಬ್ಯಾಚ್‌ನ ಐಎಎಸ್ ಅಧಿಕಾರಿ ದೌಲತ್ ದೇಸಾಯಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಸುದೀರ್ಘ ಪೋಸ್ಟ್ ಹಾಕಿದ್ದು, ವ್ಯವಸ್ಥೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. MEDDಗೆ ವರ್ಗಾವಣೆಯಾಗುವ ಮೊದಲು ಅವರು ಕೊಲ್ಲಾಪುರದ ಕಲೆಕ್ಟರ್ ಆಗಿದ್ದರು ಮತ್ತು ಪಶ್ಚಿಮ ಮಹಾರಾಷ್ಟ್ರ ಜಿಲ್ಲೆಯನ್ನು ಕಾಡಿದ್ದ 2019 ರ ಪ್ರವಾಹ ಸ್ಥಿತಿಯನ್ನು ನಿಭಾಯಿಸಿದ್ದರು. …
Read More »ಜಮೀರ್ ಅಹ್ಮದ್ ಮನೆ ಮೇಲೆ ACB ರೇಡ್: ಹಾಲಿ ಸಚಿವರಿಗೆ ಶರುವಾಯ್ತು ನಡುಕ
ಬೆಂಗಳೂರು : ಎಸಿಬಿ ಸರ್ಚ್ ವಾರೆಂಟ್ ಪಡೆದು ಮುಂಜಾನೆ 5.50ರ ಸುಮಾರಿಗೆ ಜಮೀರ್ ಮೇಲೆ ದಾಳಿ ನಡೆಸುತ್ತಿದ್ದಾರೆ. ಎಸಿಬಿ ಅಧಿಕಾರಿಗಳು ಸದ್ಯ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ACB ಆದಾಯ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್ ಅಹ್ಮದ್ ಮೇಲೆ ದಾಳಿ ನಡೆಸುತ್ತಿದ್ದಾರೆ. ಇದಲ್ಲದೆ ಜೊತೆಯಲ್ಲಿದ್ದ ಹಾಲಿ ಸಚಿವರಿಗೆ ನಡುಕ ಶುರುವಾಗಿದೆ.ಇಡಿ 20 ವರ್ಷಗಳ ಜಮೀರ್ ಆಸ್ತಿ ರಿಪೋರ್ಟ್ ರೆಡಿ ಮಾಡಿದ್ದು, ರಿಪೋರ್ಟ್ ಆಧಾರದ ಮೇಲೆ ಎಸಿಬಿ ರೇಡ್ ಮಾಡಲಾಗಿದೆ. ಇಡಿ ರಿಪೋರ್ಟ್ ಆಧಾರದ …
Read More »ಮಾನವ ಗುರು’ ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ ‘ಹೆಣ್ಣು – ಮಣ್ಣು” ಶಂಕೆ?
ಬೆಂಗಳೂರು: ಮಾನವ ಗುರು ಎಂದೇ ಟಿವಿ ವಾಹಿನಿಗಳಲ್ಲಿ ಹೆಸರು ಮಾಡಿರುವ ಸರಳ ವಾಸ್ತು ಮುಖ್ಯಸ್ಥ ಚಂದ್ರಶೇಖರ್ ಗುರೂಜಿ ಕೊಲೆ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು, ಈಗ ಈ ವಾಸ್ತು ಗುರುವಿನ ಹಿನ್ನೆಲೆ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಚಂದ್ರಶೇಖರ್ ಗುರುಜಿ ಸೇನೆ ಸೇರಬೇಕೆಂಬ ಉದ್ದೇಶಕ್ಕೆ ಬೆಳಗಾವಿಗೆ ಬಂದು ಪ್ರಯತ್ನ ನಡೆಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ಸಿವಿಲ್ ಎಂಜಿನಿಯರಿಂಗ್ ಹಿನ್ನೆಲೆಯ ಚಂದ್ರಶೇಖರ ಗುರೂಜಿ ಆ ಬಳಿಕ ಮುಂಬಯಿಗೆ …
Read More »ಯಲ್ಲಮ್ಮನಗುಡ್ಡಕ್ಕೆ ಹರಿದುಬರುತ್ತಿದೆ ಭಕ್ತರ ದಂಡು
ಉಗರಗೋಳ: ಸವದತ್ತಿ ತಾಲ್ಲೂಕಿನ ಉಗರಗೋಳದ ಯಲ್ಲಮ್ಮನ ಗುಡ್ಡಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಮೂರು ತಿಂಗಳಲ್ಲಿ ₹ 2.15 ಕೋಟಿ ದೇಣಿಗೆ ಸಂಗ್ರಹವಾಗಿದೆ. ಯಲ್ಲಮ್ಮನ ಗುಡ್ಡದಲ್ಲಿ ಸೋಮವಾರ ಎರಡನೇ ಹಂತದ ಹುಂಡಿ ಎಣಿಕೆ ನಡೆಯಿತು. ₹ 33.44 ಲಕ್ಷ ನಗದು, ₹ 5.11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 62,390 ಮೌಲ್ಯದ ಬೆಳ್ಳಿ ಆಭರಣಗಳು ಸಂಗ್ರಹವಾಗಿವೆ. ಕೊರೂನಾ ನಂತರ ಆದಾಯ ಉತ್ತಮ: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ …
Read More »ಜಮೀರ್ ಫ್ಲ್ಯಾಟ್ನಲ್ಲಿ 24 ಜೀವಂತ ಗುಂಡುಗಳು ಪತ್ತೆ;
ಬೆಂಗಳೂರು (ಜು.07): ಎಸಿಬಿ ಅಧಿಕಾರಿಗಳು ಸಿಲ್ವರ್ ಓಕ್ ಅಪಾರ್ಟ್ಮೆಂಟ್ನ ಫ್ಲ್ಯಾಟ್ ಮೇಲೆ ದಾಳಿ ನಡೆಸಿದ್ಧಾರೆ. ಮಲ್ಯ ರಸ್ತೆಯ UB ಸಿಟಿ ಎದುರಿನ ಫ್ಲ್ಯಾಟ್ (Near UB City Flat) ಮೇಲೆ ರೇಡ್ ನಡೆಸಿದ್ದಾರೆ. ನಾಲ್ಕನೇ ಪ್ಲೋರ್ನ 402ನೇ ಫ್ಲ್ಯಾಟ್ನಲ್ಲಿ ಪರಿಶೀಲನೆ ನಡೆದಿದೆ. ಮನೆ, ಟ್ರಾವೆಲ್ಸ್ ಕಚೇರಿ, ಫ್ಲ್ಯಾಟ್ನಲ್ಲಿ ಅಧಿಕಾರಿಗಳ ಶೋಧ ನಡೆಸಿದ್ದಾರೆ. ಫ್ಲ್ಯಾಟ್ನಲ್ಲಿ 24 ಜೀವಂತ ಗುಂಡು ಪತ್ತೆಯಾಗಿದೆ. ಜಮೀರ್ ಅಹಮ್ಮದ್ (Zameer Ahmed) ಪಿಸ್ತೂಲ್ ಪರವಾನಗಿ ಹೊಂದಿದ್ದಾರೆ. ಹಾಗಾಗಿ ಇದೇ …
Read More »ಗುಡ್ಡ ಕುಸಿತ- ಕರ್ನಾಟಕ, ಗೋವಾ ಸಂಪರ್ಕಿಸುವ ರಸ್ತೆ 5 ಗಂಟೆ ಬಂದ್
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರಕ್ಕೆ ಗೋವಾ ಸಮೀಪದ ಮಾಲಶೇಜ್ ಘಾಟ್‍ನಲ್ಲಿ ಗುಡ್ಡ ಕುಸಿದು, ಕರ್ನಾಟಕ ಸಂಪರ್ಕಿಸುವ ರಸ್ತೆ 5 ಘಂಟೆಗಳ ಕಾಲ ಬಂದ್ ಆಗಿತ್ತು. ಬಳಿಕ ಗೋವಾದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ 5 ಗಂಟೆಗಳ ಕಾರ್ಯಾಚರಣೆ ನಡೆಸಿ ರಸ್ತೆ ಸುಗಮಗೊಳಿಸಿದ್ದಾರೆ. ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ ಮಾಲಶೇಜ್ ಘಾಟ್ ಗೋವಾ ಸಮೀಪದಲ್ಲಿದೆ. ಪಶ್ಚಿಮ ಘಟ್ಟದಲ್ಲಿ ಮಳೆಯ ಆರ್ಭಟಕ್ಕೆ ಮಾಲಶೇಜ್ ಘಾಟ್‍ನಲ್ಲಿ ಗುಡ್ಡ ಕುಸಿತವಾಗಿತ್ತು. ಗುಡ್ಡ ಕುಸಿತದಿಂದ ಕರ್ನಾಟಕ-ಗೋವಾ ಸಂಪರ್ಕಿಸುವ ರಸ್ತೆಯಲ್ಲೂ …
Read More »ಬೆಳಗಾವಿಯಲ್ಲಿ ರುಂಡ ಇಲ್ಲದ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆ
ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದ್ದು, ಮಂಗಳವಾರ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆಯಾಗಿದ್ದಾರೆ. ಸುಮಾರು 30 ವರ್ಷದ ಯುವಕನನ್ನು ಶಿರಚ್ಛೇದ ಮಾಡಿ ಕೊಲೆಗೈದು ರುಂಡ ಬೇರ್ಪಡಿಸಿ ದೇಹವನ್ನು ದುಷ್ಕರ್ಮಿಗಳು ಬಾವಿಯಲ್ಲಿ ಎಸೆದು ಹೋಗಿದ್ದಾರೆ. ಬೆಳಗ್ಗೆ ಹೊಲಕ್ಕೆ ಹೋದ ಗ್ರಾಮಸ್ಥರು ಇದನ್ನು ಕಂಡು ಆತಂಕಗೊಂಡಿದ್ದಾರೆ. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುನೀಲ ಅಷ್ಟೇಕರ ಎಂಬವರ ಹೊಲದ ಬಾವಿಯಲ್ಲಿ ರುಂಡ ಇಲ್ಲದ …
Read More »ಸರ್ಕಾರಿ ಬ್ಯಾಂಕ್ಗಳ 2,044 ಶಾಖೆ ಬಂದ್, 13,000 ನೌಕರರು ಮನೆಗೆ ಕಾರಣ ಏನು ಗೊತ್ತಾ?
ನವದೆಹಲಿ: ಭಾರತೀಯ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಹಿಂದಿನ ವರ್ಷಕ್ಕೆ ಹೋಲಿಸಿದರೆ 2022 ರಲ್ಲಿ 2,044 ಶಾಖೆಗಳು ಮತ್ತು ಸುಮಾರು 13,000 ಉದ್ಯೋಗಿಗಳನ್ನು ಕಡಿತಗೊಳಿಸಿವೆ ಎಂದು ಪ್ರಮುಖ ಬ್ಯಾಂಕ್ ನೌಕರರ ಒಕ್ಕೂಟ ಭಾನುವಾರ ತಿಳಿಸಿದೆ. ಮತ್ತೊಂದೆಡೆ, 2021 ಕ್ಕೆ ಹೋಲಿಸಿದರೆ 2022 ರಲ್ಲಿ ಖಾಸಗಿ ಬ್ಯಾಂಕುಗಳ ಶಾಖೆಗಳ ಸಂಖ್ಯೆ 4,023 ರಿಂದ 34,342 ಕ್ಕೆ ಏರಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ತಿಳಿಸಿದೆ. ಖಾಸಗಿ ಬ್ಯಾಂಕುಗಳು 2021 …
Read More »ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿ ವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ಸತ್ಕರಿಸುವ ಕಾರ್ಯಕ್ರಮ
ಕೆ ಎಲ್ ಇ ಸಂಸ್ಥೆಯ ಜೆ ಎನ್ ಎಮ್ ಸಿ ಆಡಿಟೋರಿಯಂ ನಲ್ಲಿ ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿಯ ವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ಸತ್ಕರಿಸುವ ಕಾರ್ಯಕ್ರಮ ಕೋವಿಡ್-19 ಸಮಯದಲ್ಲಿ ತಮ್ಮ ಜೀವದ ಹಂಗನ್ನೇ ತೊರೆದು ಕೊರೋನಾ ಸೋಂಕಿತರನ್ನು ರಕ್ಷಿಸಿ, ಅವರ ಸೇವೆಯಲ್ಲಿ ನಿರತರಾದ ಎಲ್ಲ ವಾರಿಯರ್ಸ್ ಗಳ ಸೇವೆಗಳನ್ನು ಪರಿಗಣಿಸಿ, ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿ ವತಿಯಿಂದ ಸತ್ಕರಿಸಲಾಯಿತು. ನಂತರ ಬಾಹು ಕದಂ ಹಾಗೂ ಭರತ್ ಗಣೇಶಪುರೆ ಇವರ …
Read More »ವಿವಾಹ ನೋಂದಣಿ ವೆಬ್‌ಸೈಟ್ ಮೂಲಕ ಮೋಸ: ಖತರ್ನಾಕ್ ವ್ಯಕ್ತಿ ಬಂಧಿಸಿದ ಪೊಲೀಸರು
ರಾಮನಗರ: ವಿವಾಹ ನೋಂದಣಿ ವೆಬ್‌ಸೈಟ್‌ನಲ್ಲಿ ಬೇರೆ ಯುವಕರ ಫೋಟೊ ಹಾಕಿ, ಮದುವೆ ಮಾಡಿಸುವುದಾಗಿ ಸಾರ್ವಜನಿಕರಿಗೆ ನಂಬಿಸಿ ಹಣ ಲಪಟಾಯಿಸುತ್ತಿದ್ದ ನವೀನ್ ವೈ ಸಿಂಗ್ ಎಂಬುವನನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಮಾತನಾಡಿ, ಕಳೆದ ಮಾರ್ಚ್ ತಿಂಗಳಿನಲ್ಲಿ ದೀಪಾ ಎಂಬುವವರು ರಾಮನಗರದ ಸಿಇಎನ್ ಕ್ರೈಂ ಠಾಣೆಯಲ್ಲಿ ನವೀನ್ ವೈ ಸಿಂಗ್ ಎಂಬುವವನ ವಿರುದ್ಧ ದೂರು ದಾಖಲು ಮಾಡಿದ್ದರು ಎಂದು ಹೇಳಿದರು. ನವೀನ್ ವಾಟ್ಸ್ಆ್ಯಪ್ …
Read More »
Laxmi News 24×7