Breaking News

ರಾಜಕೀಯ

ಸಾಧನೆ ಶ್ರಮಿಕರ ಸ್ವತ್ತು ರಾಜ್ಯ ಕ್ರೈಡಲ್ ಎಮ್.ಡಿ. ಮಹಾಂತೇಶ ಹಿರೇಮಠ ಅಭಿಮತ

ವೈಜ್ಞಾನಿಕ ಕೊಡುಗೆಗಳಿಂದ ಜಗತ್ತು ಅಂಗೈಯಲ್ಲಿ ಹಿಡಿಯಲು ಸಾಧ್ಯವಾಗಿದೆ. ಇಂಥಹ ವಿಶೇಷತೆಗಳನ್ನು ಕೊಡಲು ಶ್ರಮ ಅತ್ಯಗತ್ಯ. ಸಾಧನೆಗಳು ಶ್ರಮಿಕರ ಸ್ವತ್ತಾಗಿದೆ ಎಂದು ರಾಜ್ಯ ಕ್ರೈಡಲ್ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಹಿರೇಮಠ ಹೇಳಿದರು. ಅವರು ಶನಿವಾರ ಬೆಂಗಳೂರಿನ ಭೂಸೇನಾ ನಿಗಮದ ಕೇಂದ್ರ ಕಚೇರಿಯಲ್ಲಿ ಅಕ್ಕತಂಗೇರಹಾಳ ಗ್ರಾಮದ ಐ.ಐ.ಎಸ್.ಸ್ಸಿ. ಪಿ.ಎಚ್.ಡಿ ಸಾಧಕ , ಚೇತನ ಉರಬಿನಹಟ್ಟಿ ಅವರಿಂದ ಸನ್ಮಾನಿಸಿ ಸ್ವೀಕರಿಸಿ ಮಾತನಾಡಿದರು. ಜಗತ್ತಿನ ಹೆಸರಾಂತ ತಾಂತ್ರಿಕ ಸಂಸ್ಥೆಗಳಲ್ಲಿ ಅಗ್ರಮಾನ್ಯ ಹೆಸರು ಭಾರತೀಯ ವಿಜ್ಞಾನ ಸಂಸ್ಥೆಗಿದೆ. …

Read More »

ಡಿಒ ಕೈ ಹಿಡಿದು ಚುಂಬಿಸಿದ ಪಂಚಾಯಿತಿ ಸದಸ್ಯ

ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಪಿಡಿಒ ಕೈ ಹಿಡಿದು ಚುಂಬಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ …

Read More »

ಜಮೀನು ವಿವಾದ; ತಮ್ಮನ ಕಾಟಕ್ಕೆ ಬೇಸತ್ತು ಅಣ್ಣ ಆತ್ಮಹತ್ಯೆ

ಬೆಳಗಾವಿ; ಜಮೀನು ವಿಚಾರದಲ್ಲಿ ತಮ್ಮನ ಕಿರುಕುಳ ತಾಳಲಾರದೇ ಅಣ್ಣನೋರ್ವ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಚಗಾಂವ ಗ್ರಾಮದಲ್ಲಿ ನಡೆದಿದೆ. ಶ್ರೀಕಾಂತ್ ಅಪ್ಪಾಜಿ ಜಾಧವ್(56) ಆತ್ಮಹತ್ಯೆ ಮಾಡಿಕೊಂಡವರು. ಮೃತ ಶ್ರೀಕಾಂತ್ ಮತ್ತು ಅವರ ಸಹೋದರ ಮಧುಕರ್ ಜಾಧವ್ ನಡುವೆ ಜಮೀನು ವಿವಾದವಿತ್ತೆನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾಕತಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಧುಕರ್ ಜಾಧವ್ ಮೃತ ಶ್ರೀಕಾಂತ್ ಹಾಗೂ …

Read More »

ಟೈರ್‌ಗೆ ಬೆಂಕಿ ಹಚ್ಚುವ ವೇಳೆ ಮೂವರಿಗೆ ತಗುಲಿತು ಬೆಂಕಿ..!

ಹಾವೇರಿ; ಟೈರ್‌ಗೆ ಬೆಂಕಿ ಹಚ್ಚುವ ವೇಳೆ ಪ್ಯಾಂಟ್‌ಗೆ ಬೆಂಕಿ ತಗುಲಿ ಮೂವರು ಪ್ರತಿಭಟನಾಕಾರರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಮೂವರು ಮಂದಿಯ ಪ್ಯಾಂಟ್‍ಗೆ ಬೆಂಕಿ ಕಿಡಿ ತಗುಲಿದ ಘಟನೆ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ನಡೆದಿದೆ. ಹಾವೇರಿಯಲ್ಲಿ ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ …

Read More »

ಜೈಲಿನಿಂದ ಬಿಡುಗಡೆಯಾಗುತ್ತಲೇ ʼಶಾಕಿಂಗ್‌ʼ ಸಂಗತಿ ಹೇಳಿದ ನಟಿ ಚಿತಾಳೆ

ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಅವಹೇಳನಾಕಾರಿ ಪದ್ಯ ಬರೆದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮರಾಠಿ ನಟಿ ಕೇಟಕಿ ಚಿತಾಳೆ, ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ತನಗೆ ಕಿರುಕುಳ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಮನೆಯಲ್ಲಿದ್ದಾಗ ನನ್ನನ್ನು ಕಾನೂನುಬಾಹಿರವಾಗಿ ವಶಕ್ಕೆ ತೆಗೆದುಕೊಂಡ ಪೊಲೀಸರು ಯಾವುದೇ ಬಂಧನ ವಾರಂಟ್ ಮತ್ತು ನೊಟೀಸ್ ನೀಡದೇ ನನ್ನನ್ನು ಜೈಲಿಗೆ ಹಾಕಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ನಾನು ಸತ್ಯವನ್ನೇ …

Read More »

ಡಿಕೆಶಿ ಬುಡ ಅಲ್ಲಾಡಿಸಲು ತ್ರಿಶೂಲವ್ಯೂಹ! ‘ವಿಶ್ವನಾಥ್’ ಅಸ್ತ್ರ ಬಳಕೆಗೆ ಅಶ್ವಥ್ ನಾರಾಯಣ, ಸಿಪಿವೈ, ಜಾರಕಿಹೊಳಿ ರಣತಂತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ರ ರಾಜಕೀಯ ಬುಡ ಅಲ್ಲಾಡಿಸಲು ಬಿಜೆಪಿ ಭಾರಿ ರಣತಂತ್ರ ರೂಪಿಸಿದೆ. ಡಿಕೆಶಿಯ ಬದ್ಧವೈರಿಗಳಾದ ಅಶ್ವಥ್ ನಾರಾಯಣ, ಸಿ.ಪಿ.ಯೋಗೇಶ್ವರ್ ಮತ್ತು ರಮೇಶ್ ಜಾರಕಿಹೊಳಿ ಅವರು ಡಿಕೆಶಿ ಮಣಿಸಲು ತ್ರಿಶೂಲವ್ಯೂಹ ರಚನೆ ಮಾಡಿದ್ದಾರೆ.   ಸರ್ಕಾರ ಇರುವ ಸಂದರ್ಭದಲ್ಲಿ ಹಲವು ಬಿಜೆಪಿ ನಾಯಕರಿಗೆ ಖೆಡ್ಡಾ ತೋಡಲು ಸಿದ್ಧತೆ ನಡೆಸಿದ್ದ ಡಿಕೆಶಿಗೆ, ಇದೀಗ ಅವರ ಬದ್ಧವೈರಿಗಳು ‘ವಿಶ್ವನಾಥ್’ ಎಂಬ ಅಸ್ತ್ರವನ್ನ ಹೂಡುತ್ತಿದ್ದಾರೆ. ಈ ಹಿಂದೆ ಚುನಾವಣೆಯಲ್ಲಿ ಡಿಕೆಶಿ ವಿರುದ್ಧ ಅತ್ಯಂತ ಕಡಿಮೆ …

Read More »

ಬೆಳಗಾವಿ: ಮಲಗಿರುವ ರೀತಿಯಲ್ಲಿ ವ್ಯಕ್ತಿಯ ಅಸ್ತಿಪಂಜರ ಪತ್ತೆ!

ಬೆಳಗಾವಿ: ಮನೆಯಲ್ಲಿ ಮಲಗಿಕೊಂಡಿರುವ ರೀತಿಯಲ್ಲಿ ಸಾವನ್ನಪ್ಪಿದ ಮನುಷ್ಯನ ಅಸ್ತಿಪಂಜರ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಶಿವಾಪೂರ ಗ್ರಾಮದ ಮನೆಯೊಂದರಲ್ಲಿ ನಡೆದಿದೆ. ಮೃತರನ್ನು ಶಿವಾಪೂರ ಗ್ರಾಮದ ಪ್ರಕಾಶ ತವನಪ್ಪ ಮುರಗುಂಡಿ ಮತ್ತು ಅಂದಾಜು 8 ರಿಂದ 9 ತಿಂಗಳ ಹಿಂದೆ ಸಾವಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬುದ್ಧಿಮಾಂದ್ಯನಾಗಿದ್ದ ಆತ ಮನೆಯಲ್ಲಿ ತಾನೊಬ್ಬನೇ ವಾಸ ಮಾಡುತ್ತಿದ್ದ. ಹಳೇ ಕಟ್ಟಡದಲ್ಲಿ ಏಕಾಂಗಿ ಜೀವನ ನಡೆಸುತ್ತಿದ್ದ ಆತ ಪದವೀಧರನಾಗಿದ್ದ. ಮನೆಯ ಒಳಗೆ ಕೀಲಿ …

Read More »

ಸರ್ಕಾರಿ ಮತ್ತು  ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ  50ಕ್ಕೂ ಹೆಚ್ಚು ಜನರು ಗಾಯ

ಶಿವಮೊಗ್ಗ: ಸರ್ಕಾರಿ (KSRTC) ಮತ್ತು  ಖಾಸಗಿ ಬಸ್ ( Privet Bus ) ನಡುವೆ ಅಪಘಾತ ( Accident ) ಸಂಭವಿಸಿ  50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ( Injured ) ಘಟನೆ ಶಿವಮೊಗ್ಗ ( Shivamogga ) ತಾಲೂಕಿನ ತೋಟದಕೆರೆ ಬಳಿ ನಡೆದಿದೆ. ಗಾಯಾಳುಗಳನ್ನು ಮೆಗ್ಗಾನ್ (Meggan Hospital) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಬಸ್ ಚಾಲಕ ಶ್ರೀಧರ್‌ ಸ್ಥಿತಿ ಗಂಭೀರವಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ. ಖಾಸಗಿ ಬಸ್ ಕೆಕೆಬಿ ಶಿವಮೊಗ್ಗದಿಂದ ಶೃಂಗೇರಿ ಹೊರಟಿತ್ತು. …

Read More »

ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ :

ಬೆಂಗಳೂರು: ಮುಂಗಾರು ಮಳೆ ಆರಂಭಟ ರಾಜ್ಯಾಧ್ಯಂತ ಜೋರಾಗಿದೆ. ಕರಾವಳಿ ಭಾಗದ ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ( Heavy Rain ) ಜನ ಜೀವನವೇ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ರಾಜ್ಯಾಧ್ಯಂತ ಜುಲೈ.5ರವರೆಗೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಜುಲೈ 5 ರವರೆಗೆ …

Read More »

ಬೆಳಗಾವಿ | ಮುನ್ನೆಚ್ಚರಿಕೆ ಇಲ್ಲದೆ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ: ಆಯೋಜಕರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ, ಜು.1: ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಜೂ.29ರಂದು ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ ನಡೆದಿದ್ದು, ಇದರ ವಿಡಿಯೋಗಳು ಜು.1ರಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಈ ಹಿನ್ನೆಲೆಯಲ್ಲಿ ಆಯೋಜಕರ ವಿರುದ್ಧ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚಮಕೇರಿ ಗ್ರಾಮದ ರಸ್ತೆಯಲ್ಲಿ ಬೀರಲಿಂಗೇಶ್ವರ ಜಾತ್ರೆ ಪ್ರಯುಕ್ತ ಬುಧವಾರ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅಪಾಯವನ್ನೂ ಲೆಕ್ಕಿಸದೆ ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಪೆÇಲೀಸರು ಗ್ರಾಮಕ್ಕೆ …

Read More »