Breaking News

ರಾಜಕೀಯ

ಗೊಬ್ಬರ ಕೇಳಿದ್ದಕ್ಕೆ ಕೇಂದ್ರ ಸಚಿವ ಖೂಬಾ ತರಾಟೆ

ಔರಾದ್/ ಬೀದರ್‌: ಗೊಬ್ಬರ ಕಳುಹಿಸುವಂತೆ ದೂರವಾಣಿ ಕರೆ ಮಾಡಿದ ಔರಾದ್ ತಾಲ್ಲೂಕಿನ ಹೆಡಗಾಪುರ ಗ್ರಾಮದ ವ್ಯಕ್ತಿಯೊಬ್ಬರನ್ನು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅವರು ತರಾಟೆಗೆ ತೆಗೆದುಕೊಂಡಿರುವ ಮೊಬೈಲ್‌ ಸಂಭಾಷಣೆಯ ರೆಕಾರ್ಡಿಂಗ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.   ಸಚಿವ ಖೂಬಾ ಅವರಿಗೆ, ಕುಶಾಲ ಪಾಟೀಲ ಎಂಬುವರು ಕರೆ ಮಾಡಿ, ‘ನಮ್ಮ ಊರಲ್ಲಿ ಗೊಬ್ಬರ ಸಿಗುತ್ತಿಲ್ಲ. ಜನ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಹೀಗಾದರೆ ನಿಮಗೆ ಮುಂದೆ ಚುನಾವಣೆಯಲ್ಲಿ ತೊಂದರೆಯಾಗುತ್ತದೆ’ ಎಂದು ಹೇಳಿದ್ದಾರೆ. …

Read More »

ಜ್ಞಾನಭಾಸ್ಕರ ಸ್ವಾಮೀಜಿ ಶಂಕಾಸ್ಪದ ಸಾವು

ಹಿರಿಯೂರು: ನಗರದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನದ ಗುರುಗಳಾದ ಜ್ಞಾನಭಾಸ್ಕರ ಸ್ವಾಮೀಜಿ (75) ಗುರುವಾರ ಬೆಳಿಗ್ಗೆ ಚಿಟುಗು ಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿನ ನಿವಾಸದಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ.   ಬೆಳಿಗ್ಗೆ ಸ್ನಾನಗೃಹದಲ್ಲಿ ಅವರ ಮೃತದೇಹ ಕಂಡುಬಂದಿದೆ. ಸ್ನಾನಕ್ಕೆ ನೀರು ಕಾಯಿಸಿಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರಬಹುದೇ ಅಥವಾ ಸಾವಿಗೆ ಬೇರೆ ಕಾರಣ ಇರಬಹುದೇಎಂಬ ಶಂಕೆ ಭಕ್ತರಲ್ಲಿದೆ. ನಗರಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶ್ವಕರ್ಮ ಸಮಾಜದ ಒಕ್ಕೂಟದಲ್ಲಿನ 63 ಗುರುಗಳ ಪೈಕಿ ಈ ಇವರು ಒಬ್ಬರು. …

Read More »

ರಾಜಕುಮಾರ’ನ ನಿವಾಸ ತೊರೆದ ಗನ್‌ಮ್ಯಾನ್ ಚಲಪತಿ ಯಾರಿಗೂ ಗನ್‌ಮ್ಯಾನ್ ಗಲ್ಲ

ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಎಲ್ಲಿಗೆ ಹೋದರೂ ಅಲ್ಲಿ ಅವರ ಗನ್‌ಮ್ಯಾನ್ ಚಲಪತಿ ಇದ್ದೇ ಇರುತ್ತಿದ್ದರು. ಕನ್ನಡ ಚಿತ್ರರಂಗಕ್ಕೆ, ಅಪ್ಪು ಅಭಿಮಾನಿಗಳಿಗೆ ಚಲಪತಿ ಹೆಸರು ಹೊಸದೇನು ಅಲ್ಲ. ಸದಾ ಪವರ್‌ಸ್ಟಾರ್‌ ಹಿಂದೆ ನಿಂತಿರುತ್ತಿರುದ್ದ ಆಜಾನುಬಾಹು ವ್ಯಕ್ತಿ. ಅಪ್ಪು ವ್ಯಕ್ತಿತ್ವದಂತೆಯೇ ಗನ್‌ಮ್ಯಾನ್ ಚಲಪತಿ ವ್ಯಕ್ತಿತ್ವವೂ ಮಾರ್ಪಾಡಾಗಿತ್ತು. ಪುನೀತ್‌ ರಾಜ್‌ಕುಮಾರ್ ಅಗಲಿದ ದಿನದಿಂದ ಚಲಪತಿ ಕೂಡ ನೋವಿನಲ್ಲಿಯೇ ಕಾಲಕಳೆಯುತ್ತಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ನೆನಪನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಚಲಪತಿ ದಿಢೀರನೇ …

Read More »

ಬೆಳಗಾವಿ ಸೇರಿ ರಾಜ್ಯಾದ್ಯಂತ 80 ಕಡೆಗಳಲ್ಲಿ ಬೇಳಂ ಬೆಳಗ್ಗೆ ಎಸಿಬಿ ದಾಳಿ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಸರ್ಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್​ ನೀಡಿದೆ. ರಾಜ್ಯಾದ್ಯಂತ 80 ಕಡೆಗಳಲ್ಲಿ 300 ಅಧಿಕಾರಿಗಳ ತಂಡ 21 ಭ್ರಷ್ಟ ಅಧಿಕಾರಿಗಳ ಮನೆಯ ಮೇಲೆ ದಾಳಿ ಮಾಡಿದ್ದು, ಬಿಸಿ ಮುಟ್ಟಿಸಿದೆ.   ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಇಂದು ಬೆಳಗ್ಗೆ ಆರು ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಸಂಬಂಧ ದಾಳಿ ನಡೆದಿದ್ದು, …

Read More »

ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ, ಯಡಿಯೂರಪ್ಪ ಸಹ ಜೈಲಿಗೆ ಹೋಗ್ತಾರೆ: ಯತ್ನಾಳ್

ಹಾವೇರಿ: ಕಾಂಗ್ರೆಸ್‍ನವರು ಮಾತ್ರವಲ್ಲ ಬಿಜೆಪಿಯ ಯಡಿಯೂರಪ್ಪ ಮತ್ತು ಅವರ ಮಗ ವಿಜಯೇಂದ್ರ ಜೈಲಿಗೆ ಹೋಗುವ ಸಮಯ ಬರುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.     ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ ಮತ್ತು ಯಡಿಯೂರಪ್ಪ ಸಹ ಜೈಲಿಗೆ ಹೋಗುತ್ತಾರೆ. …

Read More »

ಇಡಿ ವಿಚಾರಣೆ ಮುಗಿಯುತ್ತಿದ್ದಂತೆ ‘ಹನುಮ’ನ ದರ್ಶನಕ್ಕೆ ‘ರಾಹುಲ್‌’ ಆಗಮನ

ಕೊಪ್ಪಳ : ಸಧ್ಯ ಇಡಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ತಮ್ಮ ಸಹೋದರಿ ಪ್ರೀಯಾಂಕ ವಾದ್ರಾ ಜೊತೆಗೆ ಸಧ್ಯದಲ್ಲೇ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಹೌದು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಭೇಟಿಗೆ ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ ಕಾತರರಾಗಿದ್ದಾರೆ ಎಂಬ ಚರ್ಚೆ ನಡೆದಿದ್ದು, ಈ ಮೂಲಕ ಸರ್ವ ಧರ್ಮ, ಸಮುದಾಯಗಳನ್ನ ಏಕಭಾವದಿಂದ ಕಾಂಗ್ರೆಸ್ ನೋಡುತ್ತದೆ ಎಂಬ ಸಂದೇಶ ಸಾರಲು‌ ಮುಂದಾಗಿದ್ದಾರೆ …

Read More »

ಬಾವಿಗೆ ಬೀಳುತ್ತಿದ್ದ ಸಾರಿಗೆ ಬಸ್ ಜಸ್ಟ್ ಮಿಸ್

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಇನ್ನೇನು ಆಳ ಬಾವಿಗೆ ಬೀಳಬೇಕು ಅನ್ನುಷ್ಟರಲ್ಲಿ ಆಪದ್ಬಾಂಧವನಾಗಿ ಬಂದ ಬೇವಿನ ಮರ, 70 ಜನರ ಪ್ರಾಣ ಉಳಿಸಿದೆ. ಇಂಡಿಯಿಂದ ವಿಜಯಪುರಕ್ಕೆ ಗುರುವಾರ ಇಂಡಿ ಡಿಪೋದ ಸಾರಿಗೆ ಬಸ್ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ನಾಗಠಾಣ ಮತ್ತು ಅಲಿಯಾಬಾದ್ ನಡುವಿನ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಬದಿಯ ತಗ್ಗು ಪದೇಶಕ್ಕೆ ನುಗ್ಗಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಮರದ ಮುಂದೆಯೇ ಆಳ ಬಾವಿ ಇದೆ. ಬೇವಿನ ಮರ …

Read More »

ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆನುಗ್ಗಿದ ನೀರು

ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಸವದತ್ತಿಯ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆ ನೀರು ನುಗ್ಗಿದ್ದು ದೇವಿಯ ದರ್ಶನವನ್ನು ಪಡೆಯಲು ಭಕ್ತರು ಪರದಾಡುವ ಪ್ರಸಂಗ ನಿರ್ಮಾಣವಾಗಿತ್ತು. ಹೌದು ಇಂದು ಗುರುವಾರ ಮಧ್ಯಾಹ್ನದ ವೇಳೆಗೆ ಸವದತ್ತಿಯಲ್ಲಿ ಸುರಿದ ಧಾರಾಕಾರ ಮಳಿಯಿಂದಾಗಿ ಸವದತ್ತಿ ಅಧಿದೇವತೆ ರೇಣುಕಾ ಯಲ್ಲಮ್ಮಾ ದೇವಸ್ಥಾನದ ವರಾಂಡಾಕ್ಕೆ ನೀರು ನುಗ್ಗಿದೆ. ಪರಿಣಾಮವಾಗಿ ದೇವಿಯ ದರ್ಶನಕ್ಕೆ ಬಂದಿದ್ದ ಭಕ್ತರು ದೇವಿಯ ದರ್ಶನವನ್ನು ಪಡೆಯಲು ಪರದಾಡಬೇಕಾಯಿತು. ಏಕಾಏಕಿಯಾಗಿ ಮಳೆ ರಭಸವಾಗಿ ಬೀಳಲಾರಂಭಿಸಿದ್ದರಿಂದ ಭಕ್ತರು ಓಡಿ …

Read More »

ರಾಹುಲ್​ ಪರ ಟ್ವೀಟ್​ ಮಾಡಿ ಸಂಕಷ್ಟಕ್ಕೆ ಸಿಲುಕಿದ ನಟಿ ರಮ್ಯಾ:

ಬೆಂಗಳೂರು: ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಸಹಸ್ರಾರು ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತ ಸಂಸದ ರಾಹುಲ್​ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆಯೇ, ನಟಿ, ಮಾಜಿ ಸಂಸದೆ ರಮ್ಯಾ ಮತ್ತೆ ರಾಹುಲ್​ ಗಾಂಧಿ ಪರ ಬ್ಯಾಟಿಂಗ್​ ಬೀಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ರಾಹುಲ್​ ಗಾಂಧಿಯವರ ವಿರುದ್ಧ ವಿನಾಕಾರಣ ಸುಳ್ಳು ಆಪಾದನೆ ಹೊರಿಸಲಾಗಿದೆ …

Read More »

ರಾಜಭವನ ಮುತ್ತಿಗೆಗೆ ಹೊರಟಿದ್ದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು : ನ್ಯಾಷನಲ್‌ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಕೇಂದ್ರದ‌ ಬಿಜೆಪಿ ಸರ್ಕಾರವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ರಾಜಭವನ ಮುತ್ತಿಗೆಗೆ ಹೊರಟಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.   ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ಮೆರವಣಿಗೆಯಲ್ಲಿ ಹೊರಟಿದ್ದ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ವೃತ್ತದಲ್ಲಿ ಪೊಲೀಸರು ತಡೆದರು. ವಿಧಾನಸಭೆ …

Read More »