ಆಮ್ ಆದ್ಮಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್‌ರಾವ್ ಜೂ.17 ಹಾಗೂ 18ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಹೌದು ಜೂ.17ರಂದು ಅಥಣಿಯಲ್ಲಿ ಆಮ್ ಆದ್ಮಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿರುವ ಭಾಸ್ಕರ್‌ರಾವ್ ರಾಯಬಾಗ, ಕುಡಚಿ ಹಾಗೂ ಗೋಕಾಕ್‍ನಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇದಾದ ಬಳಿಕ ಜೂ.18ರಂದು ಬೆಳಗಾವಿಯ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಮತಕ್ಷೇತ್ರದ ಆಪ್ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.ನಂತರ ಖಾನಾಪುರ, ಕಿತ್ತೂರು, ಬೈಲಹೊಂಗಲನಲ್ಲಿ ಸಭೆ ನಡೆಸಲಿದ್ದಾರೆ ಎಂದು …
Read More »ಲಕ್ಷ್ಮೀ ಅಕ್ಕಾ ಮನೆಯಲ್ಲಿ ಮೀಸೆ ಮಾವ..!
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ತಮ್ಮ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ಬೆಳಗಾವಿ ಕಾಂಗ್ರೆಸ್‍ನ ಮತ್ತೊಂದು ಪವರ್ ಸೆಂಟರ್ ಆಗಿ ಹೊರ ಹೊಮ್ಮಿದ್ದಾರೆ. ಹೌದು ಯಾವಾಗ ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಅಧ್ಯಕ್ಷರನ್ನಾಗಿ ಮಾಡಿದ್ರೋ ಅವತ್ತಿನಿಂದ ಈವರೆಗೂ ಒಂದಿಲ್ಲೊಂದು ಸಂದರ್ಭಗಲ್ಲಿ ಮೇಲುಗೈ ಸಾಧಿಸುತ್ತಲೇ ಬಂದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಸಧ್ಯ ಎರಡು ಗೆಲುವುಗಳಿಂದ ತಮ್ಮ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಂಡಿದ್ದಾರೆ. ಅದು …
Read More »ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಒಟ್ಟು ಏಳು ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೌದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜೆಡಿಎಸ್ ಸದಸ್ಯ ಟಿ.ಎ ಶರವಣ, ಬಿಜೆಪಿ ಸದಸ್ಯರಾದ ಲಕ್ಷಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್, ಹೇಮಲತಾ, ಕಾಂಗ್ರೆಸ್‍ನ ಸದಸ್ಯರಾದ ನಾಗರಾಜ್, ಅಬ್ದುಲ್ ಜಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‍ನ ಹಂಗಾಮಿ ಸಭಾಪತಿ ರಘುನಾಥ್‍ರಾವ್ ಮಲ್ಕಾಪುರೆ, ವಿಧಾನಸಭೆ ಉಪಾಧ್ಯಕ್ಷ ಆನಂದ್ ಮಾಮನಿ, ಸಚಿವರಾದ …
Read More »ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ
ಹೈದರಾಬಾದ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದೆಹಲಿ, ಹೈದರಾಬಾದ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ಘಟನೆ ನಡೆದಿದೆ. ಇಂದು ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ …
Read More »ರಾಹುಲ್ ಗಾಂಧಿಗೆ ಸಮನ್ಸ್ ರಾಜಕೀಯ ಪ್ರೇರಿತ: ಸತೀಶ್ ಜಾರಕಿಹೊಳಿ ಆರೋಪ
ಗೋಕಾಕ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು. ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …
Read More »ಪ್ರಕಾಶ ಹುಕ್ಕೇರಿ A.C.P. ಗೆ ನಿನ್ನ ಬಾಯಲ್ಲಿ ಇರೋ ಹಲ್ಲು ಮುರಿಯುತ್ತೇವೆ ಎಂದು ಅವಾಜ್
ಗೆದ್ದ ಹುಮ್ಮಸ್ಸಿನಲ್ಲಿ ಪೆÇಲೀಸರಿಗೆ ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಅವಾಜ್ ಹಾಕಿರುವ ಘಟನೆ ನಡೆದಿದೆ. ಕಾನೂನು ಪಾಲಿಸಲು ಮುಂದಾದ ಎಸಿಪಿಗೆ ಏ ನಿನ್ನ ಬಾಯಲ್ಲಿ ಇರೋ ಹಲ್ಲು ಮುರಿಯುತ್ತೇವೆ ಎಂದು ಅವಾಜ್ ಹಾಕುವ ಮೂಲಕ ಪ್ರಕಾಶ ಹುಕ್ಕೇರಿ ಉದ್ಧಟತನ ಮೆರೆದಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಜೇತ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿಗೆ ಅವಾಜ್ ಹಾಕಿದ್ದಾರೆ. ಪ್ರಮಾಣ ಪತ್ರ ಸ್ವೀಕಾರ ಮಾಡಲು ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, …
Read More »ಕರ್ತವ್ಯ ನಿರತ ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಗದಗ: ಕರ್ತವ್ಯ ನಿರತ ಪೊಲೀಸ್ ಪೇದೆಯೋರ್ವ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲಾಡಳಿತ ಭವನದ ಖಜಾನೆ ಕಚೇರಿನಲ್ಲಿ ನಡೆದಿದೆ. ಡಿ.ಆರ್ ಪೊಲೀಸ್ ಪೇದೆ ಕಿರಣ್ ಕೊಪ್ಪದ ಮೃತ ವ್ಯಕ್ತಿ. ಕಿರಣ್ ಕೊಪ್ಪದ ಕರ್ತವ್ಯ ನಿರತ ವೇಳೆ ಕುತ್ತಿಗೆಗೆ ಗುಂಡಿ ಹಾರಿಸಿಕೊಂಡಿದ್ದಾನೆ. ಇದಕ್ಕೆ ಕೌಟುಂಬಿಕ ಕಲಹವೇ ಕಾರಣ ಎನ್ನಲಾಗುತ್ತಿದೆ. ಆದರೆ ಮೃತ ಪೇದೆ ತಂದೆ, ಕಿರಣ್ ಅವರು ಇತ್ತೀಚಿಗೆ ಅದ್ಯಾಕೋ ಮಾನಸಿಕ ಖಿನ್ನತೆಗೊಳಗಾಗಿದ್ದ ಎಂದು ಹೇಳಿದ್ದಾರೆ. ಸೆಕೆಂಡ್ ಶಿಫ್ಟ್ ಮುಗಿಸಿಕೊಂಡು …
Read More »ಎಂಜಿನಿಯರಿಂಗ್ ಕೋರ್ಸ್ ಶೇ 10ರಷ್ಟು ಶುಲ್ಕ ಹೆಚ್ಚಳ?
ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶ ಶುಲ್ಕವು ಈ ವರ್ಷದಿಂದ ಹೆಚ್ಚಳವಾಗುವ ಸಾಧ್ಯತೆಯಿದೆ. ಶುಲ್ಕ ಹೆಚ್ಚಳ ಸಂಬಂಧ ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಅನುದಾನರಹಿತ ಖಾಸಗಿ ಎಂಜಿನಿಯ ರಿಂಗ್ ಕಾಲೇಜು ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಭಂಡಾರಿ ಪ್ರತಿಕ್ರಿಯಿಸಿ, ‘ಶೇ 15ರಷ್ಟು ಶುಲ್ಕ ಹೆಚ್ಚಿಸುವಂತೆ ಕಳೆದ ವರ್ಷವೇ ಮನವಿ ಸಲ್ಲಿಸಿದ್ದೆವು. ಆದರೆ, ಕೋವಿಡ್ ಕಾರಣಕ್ಕೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರಿಸಲಾಗಿತ್ತು. ಈ ಶೈಕ್ಷಣಿಕ ಸಾಲಿನಿಂದ ಶೇ 10ರಷ್ಟು …
Read More »ಕಾಂಗ್ರೆಸ್‌ನಿಂದ ಇಂದು ರಾಜಭವನ ಮುತ್ತಿಗೆ
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ನಿರಂತರವಾಗಿ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮ ದ್ವೇಷದ ರಾಜಕೀಯ ಎಂದು ಆರೋಪಿಸಿರುವ ಕಾಂಗ್ರೆಸ್, ಅದನ್ನು ವಿರೋಧಿಸಿ ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಪ್ರಕಟಿಸಿದೆ. ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಬಿಜೆಪಿ ಸರ್ಕಾರವು ಸಾಂವಿಧಾನಿಕ ಸಂಸ್ಥೆಗಳು ಮತ್ತು …
Read More »ಸಿಎಂ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದರೆ, ಜನ ಅವರ ಸರಕಾರ ನೋಡಿ ಕಣ್ಣೀರಿಡುತ್ತಿದ್ದಾರೆ
ಮೊನ್ನೆಯಷ್ಟೇ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಆ ಸಿನಿಮಾದ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ತಮ್ಮ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು. ಚಾರ್ಲಿ ಸಿನಿಮಾ ನೋಡಿ ಅತ್ತ ಬೊಮ್ಮಾಯಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್ ವ್ಯಂಗ್ಯವಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ಕಣ್ಣೀರಿಟ್ಟ ವಿಡಿಯೋ …
Read More »
Laxmi News 24×7